Sign In

By signing in or creating an account, you agree with Associated Broadcasting Company's Terms & Conditions and Privacy Policy.

Mysore Dasara 2023: ಮೈಸೂರು ದಸರಾಗೆ ರಸ್ತೆಗಿಳಿಯಲಿವೆ 300 ಹೆಚ್ಚುವರಿ ಕೆಎಸ್​ಆರ್​ಟಿಸಿ ಬಸ್​​ಗಳು

ಶಕ್ತಿ ಯೋಜನೆ ಜಾರಿಯಲ್ಲಿರುವುದರಿಂದ ಮತ್ತು ಹಿಂದಿನ ವರ್ಷಗಳಿಗಿಂತ ಬಸ್​ಗಳು ಹೆಚ್ಚು ರಷ್ ಆಗಿರುವುದರಿಂದ, ಮೈಸೂರು ವಿಭಾಗವು ಮಂಡ್ಯ ಮತ್ತು ಚಾಮರಾಜನಗರದ ಜೊತೆಗೆ ಹಾಸನ ಮತ್ತು ಚಿಕ್ಕಮಗಳೂರು ಮುಂತಾದ ನೆರೆಯ ಜಿಲ್ಲೆಗಳ ಕೆಎಸ್‌ಆರ್‌ಟಿಸಿ ವಿಭಾಗಗಳೊಂದಿಗೆ ಸಮಾಲೋಚನೆ ನಡೆಸುತ್ತಿದೆ ಎಂದು ಹೇಳಲಾಗಿದೆ.

Mysore Dasara 2023: ಮೈಸೂರು ದಸರಾಗೆ ರಸ್ತೆಗಿಳಿಯಲಿವೆ 300 ಹೆಚ್ಚುವರಿ ಕೆಎಸ್​ಆರ್​ಟಿಸಿ ಬಸ್​​ಗಳು
ಕೆಎಸ್​ಆರ್​ಟಿಸಿ ಬಸ್​​ಗಳು
Follow us
Ganapathi Sharma
|

Updated on: Aug 18, 2023 | 9:58 PM

ಮೈಸೂರು, ಆಗಸ್ಟ್ 18: ರಾಜ್ಯ ಸರ್ಕಾರದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ‘ಶಕ್ತಿ ಯೋಜನೆ’ಯ (Shakti Scheme) ಪರಿಣಾಮ ನಾಡಹಬ್ಬ ದಸರಾ (Mysuru Dasara 2023) ಸಂದರ್ಭದಲ್ಲಿ ಸರ್ಕಾರಿ ಬಸ್​ಗಳಲ್ಲಿ ಜನಸಂಚಾರ ಹೆಚ್ಚಳವಾಗಬಹುದೆಂದು ನಿರೀಕ್ಷಿಸಲಾಗಿದೆ. ಮೈಸೂರು ದಸರಾ ವೀಕ್ಷಣೆಗೆ ಬರುವ ಮಹಿಳೆಯರ ಸಂಖ್ಯೆಯಲ್ಲಿಯೂ ಗಣನೀಯ ಹೆಚ್ಚಳ ನಿರೀಕ್ಷಿಸಲಾಗಿದೆ. ಹೀಗಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(KSRTC) ಮೈಸೂರು ವಿಭಾಗವು 300 ಹೆಚ್ಚುವರಿ ಬಸ್‌ಗಳನ್ನು ಕೋರಿದೆ ಎಂದು ವರದಿಯಾಗಿದೆ. ಈ ಹಿಂದೆ ಮೈಸೂರು ವಿಭಾಗವು ಮಂಡ್ಯ ಮತ್ತು ಚಾಮರಾಜನಗರ ಕೆಎಸ್‌ಆರ್‌ಟಿಸಿ ವಿಭಾಗಗಳ ಬೆಂಬಲದೊಂದಿಗೆ, ಮೈಸೂರು ದಸರಾ ಸಂದರ್ಭದಲ್ಲಿ ಪ್ರಯಾಣಿಕರ ದಟ್ಟಣೆಯನ್ನು ಪೂರೈಸಲು ಬಸ್​​ಗಳ ಸಂಖ್ಯೆಯನ್ನು ಹೆಚ್ಚಿಸುತ್ತಿತ್ತು. ಆದರೆ ಈ ವರ್ಷ ಶಕ್ತಿ ಯೋಜನೆ ಜಾರಿಯಲ್ಲಿರುವುದರಿಂದ ಮತ್ತು ಹಿಂದಿನ ವರ್ಷಗಳಿಗಿಂತ ಬಸ್​ಗಳು ಹೆಚ್ಚು ರಷ್ ಆಗಿರುವುದರಿಂದ, ಮೈಸೂರು ವಿಭಾಗವು ಮಂಡ್ಯ ಮತ್ತು ಚಾಮರಾಜನಗರದ ಜೊತೆಗೆ ಹಾಸನ ಮತ್ತು ಚಿಕ್ಕಮಗಳೂರು ಮುಂತಾದ ನೆರೆಯ ಜಿಲ್ಲೆಗಳ ಕೆಎಸ್‌ಆರ್‌ಟಿಸಿ ವಿಭಾಗಗಳೊಂದಿಗೆ ಸಮಾಲೋಚನೆ ನಡೆಸುತ್ತಿದೆ ಎಂದು ಹೇಳಲಾಗಿದೆ.

ಶ್ರಾವಣ ಮಾಸದ ಆರಂಭದೊಂದಿಗೆ, ಅಕ್ಟೋಬರ್‌ನಲ್ಲಿ ದಸರಾ ನಂತರ ಹಬ್ಬಗಳು ಮತ್ತು ಮದುವೆ ಸೀಸನ್‌ಗಳು ಆರಂಭವಾಗಲಿದೆ. ಇದರೊಂದಿಗೆ ಪ್ರಯಾಣಿಕರ ದಟ್ಟಣೆ ಹೆಚ್ಚಾಗಲಿದೆ.

ದಸರಾಕ್ಕೆ ಇನ್ನೂ ಸಮಯ ಇರುವುದರಿಂದ ಕೆಎಸ್‌ಆರ್‌ಟಿಸಿ ಕೇಂದ್ರ ಕಚೇರಿಯು ಹೆಚ್ಚುವರಿ 300 ಬಸ್‌ಗಳನ್ನು ಬಿಡುವ ಬಗ್ಗೆ ಯಾವುದೇ ನಿರ್ದೇಶನಗಳನ್ನು ನೀಡಿಲ್ಲ. ಆದಾಗ್ಯೂ, ಮೈಸೂರು ವಿಭಾಗವು ದಸರಾ ಸಂದರ್ಭದ ಪ್ರಯಾಣಿಕರ ದಟ್ಟಣೆ ನಿಭಾಯಿಸಲು ಬಸ್​ಗಳ ಸಂಖ್ಯೆ ಹೆಚ್ಚಿಸಲು ನೆರೆಯ ವಿಭಾಗಗಳೊಂದಿಗೆ ಮಾತುಕತೆ ನಡೆಸುತ್ತಿದೆ ಎಂದು ಕೆಎಸ್‌ಆರ್‌ಟಿಸಿ ಮೈಸೂರು ವಿಭಾಗೀಯ ನಿಯಂತ್ರಕ ಜಿ. ಶ್ರೀನಿವಾಸ್ ಸ್ಥಳೀಯ ಮಾಧ್ಯಮವೊಂದಕ್ಕೆ ತಿಳಿಸಿದ್ದಾರೆ.

ಕಳೆದ ಮೈಸೂರು ವಿಭಾಗವು ಮಂಡ್ಯ ಮತ್ತು ಚಾಮರಾಜನಗರ ವಿಭಾಗಗಳಿಂದ 240 ಹೆಚ್ಚುವರಿ ಬಸ್‌ಗಳನ್ನು ನಿಯೋಜಿಸಿತ್ತು. ಆದರೆ ಈ ವರ್ಷ, ಶಕ್ತಿ ಯೋಜನೆಗೆ ಚಾಲನೆ ನೀಡುವುದರಿಂದ, ಹೆಚ್ಚಿನ ಜನದಟ್ಟಣೆ ಇರುತ್ತದೆ ಮತ್ತು ಆದ್ದರಿಂದ ವಿಭಾಗಕ್ಕೆ ಹೆಚ್ಚಿನ ಸಂಖ್ಯೆಯ ಬಸ್​ಗಳ ಅಗತ್ಯವಿದೆ ಎಂದು ಅವರು ಹೇಳಿದ್ದಾರೆ.

ಮೈಸೂರು ವಿಭಾಗವು ತನ್ನ ಎಲ್ಲಾ ಒಂಬತ್ತು ಡಿಪೋಗಳನ್ನು ಒಟ್ಟುಗೂಡಿಸಿ, ಪ್ರತಿದಿನ ಸುಮಾರು 1,000 ಟ್ರಿಪ್​ಗಳನ್ನು ನಿರ್ವಹಿಸುತ್ತದೆ. ಅದರಲ್ಲಿ ಐಷಾರಾಮಿ ಮತ್ತು ಪ್ರೀಮಿಯಂ ಸೇವೆಗಳು ಸೇರಿದಂತೆ ಬೆಂಗಳೂರಿಗೆ ಬರೋಬ್ಬರಿ 300 ಟ್ರಿಪ್‌ಗಳಿವೆ. ದಸರಾ ಸಂದರ್ಭದಲ್ಲಿ ಈ ಟ್ರಿಪ್​ಗಳ ಸಂಖ್ಯೆ ಖಂಡಿತವಾಗಿಯೂ ಹೆಚ್ಚಾಗಲಿದ್ದು, ವಿಪರೀತ ನಿರೀಕ್ಷೆಯೊಂದಿಗೆ ವಿಭಾಗವು ಸಿದ್ಧತೆಗಳನ್ನು ಪ್ರಾರಂಭಿಸಿದೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಏಷ್ಯಾದ ಅತ್ಯುತ್ತಮ ಉದ್ಯೋಗದಾತ ಬ್ರ್ಯಾಂಡ್ ಪ್ರಶಸ್ತಿ ಮುಡಿಗೇರಿಸಿಕೊಂಡ ಕೆಎಸ್ಆರ್​​​ಟಿಸಿ

ಶಕ್ತಿ ಯೋಜನೆ ಜಾರಿಗೊಂಡ ಬಳಿಲ, ನಗರದೊಳಗಿನ ಮಾರ್ಗಗಳಲ್ಲಿ ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ಹೆಚ್ಚಾಗಿದೆ. ನಗರದೊಳಗೆ ಕಾರ್ಯಾಚರಣೆಗಳಿಗೆ ಹೆಚ್ಚುತ್ತಿರುವ ಬೇಡಿಕೆಯನ್ನು ಪೂರೈಸಲು ವಿಭಾಗಕ್ಕೆ ಹೆಚ್ಚುವರಿ ಬಸ್‌ಗಳ ಅಗತ್ಯವಿದೆ ಎಂದು ಅವರು ಹೇಳಿದ್ದಾರೆ.

ಮಹಿಳೆಯರಿಗೆ ಉಚಿತ ಬಸ್​ ಪ್ರಯಾಣದ ಅವಕಾಶ ನೀಡುವ ಶಕ್ತಿ ಯೋಜನೆಗೆ ರಾಜ್ಯ ಸರ್ಕಾರ ಜೂನ್​ 11ರಂದು ಚಾಲನೆ ನೀಡಿತ್ತು. ಆ ನಂತರ ಸರ್ಕಾರಿ ಬಸ್​ಗಳಲ್ಲಿ ಪ್ರಯಾಣಿಸುವ ಮಹಿಳೆಯರ ಸಂಖ್ಯೆಯಲ್ಲಿ ಗಣನೀಯ ಹೆಚ್ಚಳವಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು  ಇಲ್ಲಿ ಕ್ಲಿಕ್ ಮಾಡಿ

ನಿವೇದಿತಾ ಕಥೆ ಕೇಳಿ ಗಟ್ಟಿ ಮನಸ್ಸಿನ ವ್ಯಕ್ತಿಗಳ ಕಣ್ಣಲ್ಲೂ ಬಂತು ನೀರು
ನಿವೇದಿತಾ ಕಥೆ ಕೇಳಿ ಗಟ್ಟಿ ಮನಸ್ಸಿನ ವ್ಯಕ್ತಿಗಳ ಕಣ್ಣಲ್ಲೂ ಬಂತು ನೀರು
ಶಿವನಿಗೆ ಪೂಜಾ ಸಮಯದಲ್ಲಿ ಇಡಬಾರದ ವಸ್ತು ಯಾವುದು ಗೊತ್ತಾ?
ಶಿವನಿಗೆ ಪೂಜಾ ಸಮಯದಲ್ಲಿ ಇಡಬಾರದ ವಸ್ತು ಯಾವುದು ಗೊತ್ತಾ?
Daily Horoscope: ಸೂರ್ಯ ಮೀನ ರಾಶಿಗೆ, ಚಂದ್ರ ಮಿಥುನ ರಾಶಿಯಲ್ಲಿ ಸಂಚಾರ
Daily Horoscope: ಸೂರ್ಯ ಮೀನ ರಾಶಿಗೆ, ಚಂದ್ರ ಮಿಥುನ ರಾಶಿಯಲ್ಲಿ ಸಂಚಾರ
ಕಾರ್ ಮಂಚದ ಮೇಲೆ ಮಲಗಿ ಯುವಕನ ಸವಾರಿ; ಇದೆಂಥಾ ಶೋಕಿ ಎಂದ ನೆಟ್ಟಿಗರು
ಕಾರ್ ಮಂಚದ ಮೇಲೆ ಮಲಗಿ ಯುವಕನ ಸವಾರಿ; ಇದೆಂಥಾ ಶೋಕಿ ಎಂದ ನೆಟ್ಟಿಗರು
IAF ಪೈಲಟ್ ಸಿದ್ಧಾರ್ಥ್ ಯಾದವ್ ಶವದೆದುರು ಬಿಕ್ಕಿ ಬಿಕ್ಕಿ ಅತ್ತ ಭಾವಿ ಪತ್ನಿ
IAF ಪೈಲಟ್ ಸಿದ್ಧಾರ್ಥ್ ಯಾದವ್ ಶವದೆದುರು ಬಿಕ್ಕಿ ಬಿಕ್ಕಿ ಅತ್ತ ಭಾವಿ ಪತ್ನಿ
50 ಸಾವಿರ ರೂಪಾಯಿ ನೀಡಿದರು: ದರ್ಶನ್ ಸಹಾಯದ ಬಗ್ಗೆ ಶೈಲಶ್ರೀ ಮಾತು
50 ಸಾವಿರ ರೂಪಾಯಿ ನೀಡಿದರು: ದರ್ಶನ್ ಸಹಾಯದ ಬಗ್ಗೆ ಶೈಲಶ್ರೀ ಮಾತು
ಶ್ರೀಲಂಕಾದ ಕೊಲಂಬೋಗೆ ಆಗಮಿಸಿದ ಮೋದಿಗೆ ಮಳೆಯು ನಡುವೆಯೂ ವಿಶೇಷ ಸ್ವಾಗತ
ಶ್ರೀಲಂಕಾದ ಕೊಲಂಬೋಗೆ ಆಗಮಿಸಿದ ಮೋದಿಗೆ ಮಳೆಯು ನಡುವೆಯೂ ವಿಶೇಷ ಸ್ವಾಗತ
‘ಕುಲದಲ್ಲಿ ಕೀಳ್ಯಾವುದೋ’ ಚಿತ್ರದ ಹಾಡು ಬಿಡುಗಡೆ ಮಾಡಿದ ಆನೆ; ವಿಡಿಯೋ ಸೂಪರ್
‘ಕುಲದಲ್ಲಿ ಕೀಳ್ಯಾವುದೋ’ ಚಿತ್ರದ ಹಾಡು ಬಿಡುಗಡೆ ಮಾಡಿದ ಆನೆ; ವಿಡಿಯೋ ಸೂಪರ್
4 ಪಂದ್ಯಗಳಲ್ಲೂ ಮಾಲೀಕರಿಗೆ ನಿರಾಶೆ ಮೂಡಿಸಿದ ಪಂತ್
4 ಪಂದ್ಯಗಳಲ್ಲೂ ಮಾಲೀಕರಿಗೆ ನಿರಾಶೆ ಮೂಡಿಸಿದ ಪಂತ್
ಜಿಗಣಿಯಲ್ಲಿ ಮನೆಯೊಳಗೆ ನುಗ್ಗಿ ಬಿಂದಾಸಾಗಿ ಮಲಗಿದ ಚಿರತೆ; ಕಂಗಾಲಾದ ಮನೆಮಂದಿ
ಜಿಗಣಿಯಲ್ಲಿ ಮನೆಯೊಳಗೆ ನುಗ್ಗಿ ಬಿಂದಾಸಾಗಿ ಮಲಗಿದ ಚಿರತೆ; ಕಂಗಾಲಾದ ಮನೆಮಂದಿ