ಕಣ್ಣಿಗೆ ಗಾಯವಾಗಿ ಆಪರೇಷನ್ ಆಗಿದ್ದ ನೋವಿನಲ್ಲೂ ಮೂರ್ತಿ ಕೆತ್ತನೆ ಮಾಡಿದ್ದ ಅರುಣ್: ಪತ್ನಿ ವಿಜೇತ ಮಾಹಿತಿ

ಸಂಕ್ರಾಂತಿ ಹಬ್ಬದ ದಿನವೇ ನಮ್ಮ ಕುಟುಂಬಕ್ಕೆ ಸಿಹಿ ಸುದ್ದಿ ಸಿಕ್ಕಿದೆ‌. ಕೆತ್ತನೆ ಶುರುಮಾಡಿದ ದಿನದಿಂದಲೇ ಯೋಗಿರಾಜ್ ಮೂರ್ತಿಯೆ ಆಯ್ಕೆಯಾಗಬಹುದು ಎಂಬುದಾಗಿ ಅನಿಸಿತ್ತು. ಅರುಣ್ ಕುಟುಂಬದ ಹೆಸರನ್ನು ಉಳಿಸಿದ್ದಾರೆ ಎಂದು ಅವರ ಪತ್ನಿ ವಿಜೇತ ‘ಟಿವಿ9’ಗೆ ತಿಳಿಸಿದ್ದಾರೆ.

ಕಣ್ಣಿಗೆ ಗಾಯವಾಗಿ ಆಪರೇಷನ್ ಆಗಿದ್ದ ನೋವಿನಲ್ಲೂ ಮೂರ್ತಿ ಕೆತ್ತನೆ ಮಾಡಿದ್ದ ಅರುಣ್: ಪತ್ನಿ ವಿಜೇತ ಮಾಹಿತಿ
ರಾಮ ಮಂದಿರದಲ್ಲಿ ಪ್ರತಿಷ್ಠಾಪನೆಗೆ ಆಯ್ಕೆಯಾಗಿರುವ ಮೂರ್ತಿ ಜತೆ ಅರುಣ್ ಯೋಗಿರಾಜ್
Follow us
TV9 Web
| Updated By: Ganapathi Sharma

Updated on: Jan 16, 2024 | 9:21 AM

ಮೈಸೂರು, ಜನವರಿ 16: ಅಯೋಧ್ಯೆಯ ರಾಮ ಮಂದಿರಕ್ಕಾಗಿ (Ayodhya Ram Mandir) ರಾಮಲಲ್ಲಾ ಮೂರ್ತಿ (Ram Lalla Idol) ಕೆತ್ತನೆ ಮಾಡುವ ಸಂದರ್ಭದಲ್ಲಿ ಶಿಲ್ಪಿ ಅರುಣ್ ಯೋಗಿರಾಜ್ (Arun Yogiraj) ಕಣ್ಣಿಗೆ ಗಾಯವಾಗಿ ಆಪರೇಷನ್ ಮಾಡಲಾಗಿತ್ತು. ಕಲ್ಲಿನ ಚೂರು ಕಣ್ಣಿಗೆ ಬಿದ್ದಿದ್ದರಿಂದ ಗಾಯವಾಗಿತ್ತು. ಆ ನೋವಿನಲ್ಲೂ ಅವರು ಕೆಲಸ ಮಾಡಿದ್ದರು ಎಂದು ಅವರ ಪತ್ನಿ ವಿಜೇತ (Vijetha) ‘ಟಿವಿ9’ಗೆ ಮಾಹಿತಿ ನೀಡಿದ್ದಾರೆ. ಅರುಣ್ ಯೋಗಿರಾಜ್ ಅವರು ಕೆತ್ತನೆ ಮಾಡಿರುವ ಮೂರ್ತಿಯನ್ನು ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಅಂತಿಮಗೊಳಿಸಿ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ ಬಗ್ಗೆ ‘ಟಿವಿ9’ ಜತೆ ಮಾತನಾಡಿದ ಅವರು, ನಾನು ಮೂರ್ತಿ ಮಾಡಲಿಲ್ಲ ದೇವರೇ ಮೂರ್ತಿಯನ್ನು ಮಾಡಿಸಿದ್ದು ಎಂದು ಅರುಣ್ ಹೇಳುತ್ತಿದ್ದರು ಎಂಬುದಾಗಿ ತಿಳಿಸಿದ್ದಾರೆ.

ಸಂಕ್ರಾಂತಿ ದಿನವೇ ಸಿಹಿ ಸುದ್ದಿ: ವಿಜೇತ

ಸಂಕ್ರಾಂತಿ ಹಬ್ಬದ ದಿನವೇ ನಮ್ಮ ಕುಟುಂಬಕ್ಕೆ ಸಿಹಿ ಸುದ್ದಿ ಸಿಕ್ಕಿದೆ‌. ಕೆತ್ತನೆ ಶುರುಮಾಡಿದ ದಿನದಿಂದಲೇ ಯೋಗಿರಾಜ್ ಮೂರ್ತಿಯೆ ಆಯ್ಕೆಯಾಗಬಹುದು ಎಂಬುದಾಗಿ ಅನಿಸಿತ್ತು. ಅರುಣ್ ಕುಟುಂಬದ ಹೆಸರನ್ನು ಉಳಿಸಿದ್ದಾರೆ. ನಮಗೆ ಇದು ಹೆಮ್ಮೆಯ ವಿಚಾರ. ಅರುಣ್ ತಂದೆ‌ ಹಾಗೂ ತಾತ ಇಬ್ಬರೂ ಶಿಲ್ಪಿಗಳೇ. ತಂದೆ ರಾಷ್ಟ್ರೀಯ ಪ್ರಶಸ್ತಿ ವಿಜೇತರು ಎಂದು ವಿಜೇತ ಹೇಳಿದ್ದಾರೆ.

ರಾಮಲಲ್ಲಾ ಮೂರ್ತಿ ಬಹಳ ಸುಂದರವಾಗಿ ಮೂಡಿ ಬಂದಿದೆ. ಐದು ವರ್ಷದ ಬಾಲಕನ ರೀತಿ ಭಾವ ಇದೆ. ಅದನ್ನು ಕೆತ್ತನೆ ಮಾಡುವ ಸಂದರ್ಭದಲ್ಲಿ ಅರುಣ್ ಸಾಕಷ್ಟು ಅಧ್ಯಯನ ಮಾಡಿದ್ದರು. ಮಕ್ಕಳ ಭಾವ, ದೇಹದ ರೂಪವನ್ನು ಗಮನಿಸುತ್ತಿದ್ದರು. ಮೂರ್ತಿ ಕೆತ್ತನೆ ಬಹಳ ಕಷ್ಟದ ಕೆಲಸವಾಗಿತ್ತು. ಕಾಲ್ಪನಿಕವಾಗಿದ್ದರಿಂದ ಹೇಗೆ ಮೂಡಿ ಬರಬಹುದು ಅಂತ ಗೊತ್ತಿರಲಿಲ್ಲ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: Who is Arun Yogiraj: ಅಯೋಧ್ಯೆ ರಾಮಮಂದಿರಕ್ಕೆ ಮೈಸೂರಿನ ಶಿಲ್ಪಿ ಕೆತ್ತಿದ ವಿಗ್ರಹ, ಯಾರು ಅರುಣ್ ಯೋಗಿರಾಜ್?

ಈ ಮಧ್ಯೆ, ಅರುಣ್ ಯೋಗಿರಾಜ್ ಕೆತ್ತನೆ ಮಾಡಿರುವ ಮೂರ್ತಿ ಆಯ್ಕೆಯಾಗಿರುವುದಕ್ಕೆ ಅವರ ತಾಯಿ ಕೂಡ ಹರ್ಷ ವ್ಯಕ್ತಪಡಿಸಿದ್ದಾರೆ. ಕಳೆದ ಆರು ತಿಂಗಳು ಆತ ಏನು ಮಾಡಿದ್ದನೋ ಅದಕ್ಕೆ ಈಗ ಫಲಿತಾಂಶ ಬಂದಿದೆ. ನನಗೆ ತುಂಬಾ ಖುಷಿಯಾಗಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಅಯೋಧ್ಯೆ ರಾಮ ಮಂದಿರ ಉದ್ಘಾಟನೆ: ರಾಮಲಲ್ಲಾ ಗರ್ಭ ಗೃಹದ ಚಿನ್ನದ ಬಾಗಿಲು ಪೂರ್ಣ, ಹೀಗಿದೆ ನೋಡಿ

ಅರುಣ್ ಯೋಗಿರಾಜ್ ಕೆತ್ತನೆ ಮಾಡಿರುವ ಮೂರ್ತಿಯೇ ಅಯೋಧ್ಯೆಯಲ್ಲಿ ಪ್ರತಿಷ್ಠಾಪನೆಯಾಗಲಿದೆ ಎಂಬುದು ಈ ಹಿಂದೆಯೇ ಬಹಿರಂಗಗೊಂಡಿತ್ತು. ಆದರೆ, ಅಧಿಕೃತ ಘೋಷಣೆಯಾಗಿರಲಿಲ್ಲ. ಈ ಬಗ್ಗೆ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಸೋಮವಾರ ಅಧಿಕೃತ ಘೋಷಣೆ ಮಾಡಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
ಡೊನಾಲ್ಡ್​ಟ್ರಂಪ್​ಗೆ ಮರಳು ಕಲಾವಿದನಿಂದ ಅಭಿನಂದನೆ
ಡೊನಾಲ್ಡ್​ಟ್ರಂಪ್​ಗೆ ಮರಳು ಕಲಾವಿದನಿಂದ ಅಭಿನಂದನೆ
ಪತ್ನಿ ಗರ್ಭಿಣಿಯಾಗಿದ್ದಾಗ ಪತಿ ಈ ತಪ್ಪುಗಳನ್ನು ಮಾಡಬಾರದು
ಪತ್ನಿ ಗರ್ಭಿಣಿಯಾಗಿದ್ದಾಗ ಪತಿ ಈ ತಪ್ಪುಗಳನ್ನು ಮಾಡಬಾರದು