AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ಚಾಮುಂಡಿ ಬೆಟ್ಟದಲ್ಲಿ ಆಷಾಢ ಸಂಭ್ರಮ, ಭಕ್ತರಿಗೆ ಸೂಚನೆಗಳೇನು? ಇಲ್ಲಿದೆ ಸಂಪೂರ್ಣ ವಿವರ

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಆಷಾಢ ಮಾಸದ ಉತ್ಸವಕ್ಕೆ ಸಿದ್ಧತೆ ಜೋರಾಗಿದೆ. ಈ ಬಾರಿ ಭಕ್ತರಿಗೆ ಹಲವು ವಿಶೇಷ ಸೌಲಭ್ಯಗಳನ್ನು ನೀಡಲಾಗಿದ್ದು, ಜತೆಗೆ ನಿಯಮಗಳನ್ನೂ ಬಿಗಿಗೊಳಿಸಲಾಗಿದೆ. ಉಚಿತ ಬಸ್ ಸೇವೆ ಯಾವಾಗ ಇದೆ? ದರ್ಶನ ಟಿಕೆಟ್ ಸಿಗೋದು ಎಲ್ಲಿ? ಪಾರ್ಕಿಂಗ್ ಜಾಗ ಎಲ್ಲಿ? ವಿಶೇಷ ದರ್ಶನ ಟಿಕೆಟ್ ಪಡೆದವರಿಗೆ ಏನೇನು ಸಿಗುತ್ತದೆ? ಭಕ್ತರಿಗೆ ಏನೇನು ಸೂಚನೆಗಳಿವೆ ಎಂಬಿತ್ಯಾದಿ ಸಮಗ್ರ ಮಾಹಿತಿ ಇಲ್ಲಿದೆ.

ಮೈಸೂರು: ಚಾಮುಂಡಿ ಬೆಟ್ಟದಲ್ಲಿ ಆಷಾಢ ಸಂಭ್ರಮ, ಭಕ್ತರಿಗೆ ಸೂಚನೆಗಳೇನು? ಇಲ್ಲಿದೆ ಸಂಪೂರ್ಣ ವಿವರ
ಚಾಮುಂಡಿ ಬೆಟ್ಟದಲ್ಲಿ ಆಷಾಢ ಉತ್ಸವಕ್ಕೆ ಸಿದ್ಧತೆ ಜೋರು
Ganapathi Sharma
|

Updated on: Jun 26, 2025 | 2:42 PM

Share

ಮೈಸೂರು, ಜೂನ್ 26: ಚಾಮುಂಡಿ ಬೆಟ್ಟದಲ್ಲಿ (Chamundi Hills) ಆಷಾಢ ಮಾಸದ ಸಿದ್ಧತೆ ಜೋರಾಗಿ ಸಾಗುತ್ತಿದೆ. ಈ ಮಾಸದಲ್ಲಿ ಶುಕ್ರವಾರ ಶನಿವಾರ ಮತ್ತು ಭಾನುವಾರಗಳಂದು ಚಾಮುಂಡೇಶ್ವರಿ (Chamundeshwari) ಬೆಟ್ಟಕ್ಕೆ ಯಾವುದೇ ಖಾಸಗಿ ವಾಹನಗಳಿಗೆ ಪ್ರವೇಶವಿರುವುದಿಲ್ಲ ಎಂದು ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಮಾಹಿತಿ ನೀಡಿದ್ದಾರೆ. ಪ್ರತಿ ಆಷಾಢ ಶುಕ್ರವಾರದಂದು (Ashada Friday) ಮಾತ್ರ ಉಚಿತ ಬಸ್ ವ್ಯವಸ್ಥೆ ಕಲ್ಪಿಸಲಾಗಿರುತ್ತದೆ. ಇನ್ನುಳಿದಂತೆ ಲಲಿತ ಮಹಲ್ ಆವರಣದಿಂದ ಸಾರಿಗೆ ಬಸ್ ಸೇವೆ ಇರಲಿದೆ. ಉಳಿದ ಎರಡು ದಿನಗಳಲ್ಲಿ ಲಲಿತ ಮಹಲ್ ಆವರಣದಿಂದ ಚಾಮುಂಡೇಶ್ವರಿ ಬೆಟ್ಟಕ್ಕೆ ಶುಲ್ಕ ಪಾವತಿಸಿ ಬಸ್​​ನಲ್ಲಿ ತೆರಳಬೇಕಾಗುತ್ತದೆ.

ದರ್ಶನಕ್ಕೆ ಬೆಟ್ಟದಲ್ಲಿ ಸಿಗಲ್ಲ ಟಿಕೆಟ್: ಮತ್ತೆಲ್ಲಿ ಸಿಗುತ್ತೆ?

ಚಾಮುಂಡಿ ಬೆಟ್ಟದ ಮೇಲೆ ದರ್ಶನದ ಯಾವುದೇ ಟಿಕೆಟ್ ನೀಡಲಾಗುವುದಿಲ್ಲ. ಬದಲಿಗೆ ಎಲ್ಲಾ ವಿಶೇಷ ದರ್ಶನದ ಟಿಕೆಟ್​​ಗಳನ್ನು ಲಲಿತ ಮಹಲ್ ಆವರಣದಲ್ಲಿ ಹಾಗೂ ನಗರ ಬಸ್ ನಿಲ್ದಾಣದಲ್ಲಿ ನೀಡಲಾಗುತ್ತಿದೆ.

ಚಾಮುಂಡೇಶ್ವರಿ ದರ್ಶನದ ಟಿಕೆಟ್ ದರ ಎಷ್ಟು?

ಧರ್ಮ ದರ್ಶನಕ್ಕೆ 300 ರೂ. ಹಾಗೂ 2000 ರೂಪಾಯಿಗಳ ಪ್ರತ್ಯೇಕವಾಗಿ ದರ್ಶನದ ವ್ಯವಸ್ಥೆಗಳಿವೆ. ಇದಕ್ಕೆ ಅನುಗುಣವಾಗಿ ಪ್ರತ್ಯೇಕ ಬಸ್​ಗಳ ವ್ಯವಸ್ಥೆ ಕೂಡ ಇರುತ್ತದೆ.

ಇದನ್ನೂ ಓದಿ
Image
ಗ್ರಾಹಕರಿಗೆ ಮತ್ತೊಂದು ಶಾಕ್: ಬೆಸ್ಕಾಂ ವಿದ್ಯುತ್ ಬಿಲ್ ನೋಡಿ ಜನ ಬೇಸ್ತು
Image
ಇನ್ಮುಂದೆ ಐದು ಖಾಸಗಿ ಆ್ಯಪ್​ಗಳ ಮೂಲಕವೂ ಖರೀದಿಸಬಹುದು ಮೆಟ್ರೋ ಟಿಕೆಟ್!
Image
ವಿದ್ಯುತ್ ಕನಿಷ್ಠ ಶುಲ್ಕಕ್ಕೆ ತೆರಿಗೆ ವಿಧಿಸುವಂತಿಲ್ಲ: ಹೈಕೋರ್ಟ್ ತೀರ್ಪು
Image
ಪ್ಯಾರಾಸಿಟಮೋಲ್ ಸೇರಿದಂತೆ 15 ಔಷಧಿ ಬಳಕೆ ನಿರ್ಬಂಧಿಸಿದ ಆರೋಗ್ಯ ಇಲಾಖೆ

ಮೋಬೈಲ್, ಕ್ಯಾಮರಾ ಬಳಸಿದರೆ ಮತ್ತೆಂದೂ ಸಿಗದು!

ಚಾಮುಂಡೇಶ್ವರಿ ಅಮ್ಮನವರ ದೇವಾಲಯದಲ್ಲಿ ಉತ್ಸವ ಮೂರ್ತಿ, ಗರ್ಭಗುಡಿ ಮತ್ತು ಪ್ರಾಂಗಣದಲ್ಲಿ ಮೊಬೈಲ್ ಹಾಗೂ ಕ್ಯಾಮೆರಾಗಳಲ್ಲಿ ಛಾಯಾ ಚಿತ್ರ ಮಾಡುವುದನ್ನು ನಿಷೇಧಿಸಲಾಗಿದೆ. ಒಂದು ವೇಳೆ ವಿಡಿಯೋ ಮಾಡಿದ್ದಲ್ಲಿ ಅಥವಾ ಫೋಟೋ ತೆಗೆದಿದ್ದಲ್ಲಿ ಶಾಶ್ವತವಾಗಿ ಮೊಬೈಲ್ ಹಾಗೂ ಕ್ಯಾಮರಾಗಳನ್ನು ಅಧಿಕಾರಿಗಳು ವಶಕ್ಕೆ ಪಡೆಯಲಿದ್ದಾರೆ. ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತದೆ ಎಂದು ಅಧಿಕಾರಿಗಳು ಎಚ್ಚರಿಸಿದ್ದಾರೆ. ಪ್ರಾಧಿಕಾರದ ವತಿಯಿಂದ ಉತ್ಸವ ಮೂರ್ತಿಯ ಫೋಟೋ ಹಾಗೂ ವಿಡಿಯೋ ಚಿತ್ರೀಕರಿಸಿ ನೇರ ಪ್ರಸಾರ ಮಾಡಲಾಗುತ್ತದೆ. ಸಾರ್ವಜನಿಕವಾಗಿ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರವನ್ನು ನೋಡಬಹುದಾಗಿದೆ.

ಭಕ್ತರಿಗೆ ಉಚಿತ ಡ್ರೈಫ್ರೂಟ್ಸ್, ಬಾದಾಮಿ ಹಾಲು

ಧರ್ಮ ದರ್ಶನದ ಸಾಲಿನಲ್ಲಿ ಬರುವಂತಹ ಭಕ್ತಾದಿಗಳಿಗೆ ಉಚಿತ ಡ್ರೈಫ್ರೂಟ್ಸ್ ಹಾಗೆ ಬಾದಾಮಿ ಹಾಲು ಹಾಗೂ ಶುದ್ಧ ಕುಡಿಯುವ ನೀರಿನ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಧರ್ಮ ದರ್ಶನದ ಸರದಿ ಸಾಲಿನಲ್ಲಿ ಮಾರಾಟದ ಮಳಿಗೆಗಳನ್ನ ತೆರೆದು ಮಳಿಗೆಗಳಲ್ಲಿ ನಂದಿನಿ ಉತ್ಪನ್ನಗಳು ಹಾಗೂ ಗಾಜಿನ ನೀರಿನ ಬಾಟಲ್, ಕಾಫಿ ಮಾರಾಟಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಎಲ್ಲಾ ಭಕ್ತರಿಗೆ ಕುಂಕುಮ ಪ್ರಸಾದ, ಮುತ್ತೈದೆರಿಗೆ ಮಡಿಲಕ್ಕಿ ವಿತರಣೆ ಪ್ರಾಧಿಕಾರದ ವತಿಯಿಂದ ಇರಲಿದೆ.

ಭಕ್ತರಿಗೆ ವಿಶೇಷ ಗಿಫ್ಟ್ ಬ್ಯಾಗ್: ಏನೇನಿರಲಿದೆ?

ಪ್ಲಾಸ್ಟಿಕ್ ಮುಕ್ತ ವಲಯಕ್ಕೆ ಆದ್ಯತೆಯನ್ನು ನೀಡಲಾಗಿದ್ದು, ಬಟ್ಟೆ ಬ್ಯಾಗ್​ಗಳ ಮಾರಾಟಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. 2000 ರೂ. ಟಿಕೆಟ್ ಪಡೆಯುವಂತಹ ಭಕ್ತರಿಗೆ ವಿಶೇಷವಾಗಿ ಒಂದು ವಿಗ್ರಹ ಒಂದು ಲಾಡು ಪ್ರಸಾದ ಮತ್ತು 500 ಎಂಎಲ್ ನೀರಿನ ಗಾಜಿನ ಬಾಟಲ್ ಒಳಗೊಂಡಂತೆ ವಿಶೇಷ ಬ್ಯಾಗ್ ನೀಡಲಾಗುತ್ತದೆ. ಈ ವಿಶೇಷ ಗಿಫ್ಟ್ ಬ್ಯಾಗ್​​ನಲ್ಲಿ ತಾಯಿ ಚಾಮುಂಡೇಶ್ವರಿ ವಿಗ್ರಹ, ಗಂಡಬೇರುಂಢ ವಿಗ್ರಹ, ಅಂಬಾರಿ ಹೊತ್ತಿರುವಂತಹ ಆನೆಯ ವಿಗ್ರಹ, ಕುಂಕುಮ ಭರಣಿ, ಕೈಗೆ ಕಟ್ಟುವಂತಹ ದಾರ ಸೇರಿದಂತೆ ಶ್ರೀ ಚಕ್ರವಿರುವಂತಹ ಮರದ ಬಾಕ್ಸ್ ನೀಡಲಾಗುತ್ತದೆ.

ಚಾಮುಂಡಿ ಬೆಟ್ಟ ಸುತ್ತ ಬಿಗಿ ಭದ್ರತೆ

ಚಾಮುಂಡೇಶ್ವರಿ ಬೆಟ್ಟದ ಬುಡದಿಂದ ಸಾವಿರ ಮೆಟ್ಟಿಲುಗಳಿಗೆ, ಚಾಮುಂಡೇಶ್ವರಿ ಬೆಟ್ಟದ ಮೇಲ್ಭಾಗ ಸೇರಿದಂತೆ ಲಲಿತ ಮಹಲ್ ಆವರಣದಲ್ಲಿ ನೂರಕ್ಕೂ ಹೆಚ್ಚು ಎಐ ತಂತ್ರಜ್ಞಾನ ಆಧಾರಿತ ಸಿಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ. ದರ್ಶನಕ್ಕೆ ಬರುವಂತಹ ಭಕ್ತಾದಿಗಳಿಗೆ ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರಿನ ವ್ಯವಸ್ಥೆ, ಊಟದ ವ್ಯವಸ್ಥೆ ಕೂಡ ಕಲ್ಪಿಸಲಾಗಿದೆ. ಜೊತೆಗೆ ಶೌಚಾಲಯಗಳ ವ್ಯವಸ್ಥೆ ಹಾಗೂ ಇತರೆ ಸೌಕರ್ಯಗಳನ್ನ ಸಹ ಮಾಡಲಾಗಿದೆ.

ವಾಟರ್ ಬಾಟಲ್ ಗಾಜಿನದ್ದು, ವಾಪಸ್ ಕೊಟ್ರೆ ಸಿಗತ್ತೆ ದುಡ್ಡು!

ಈ ಬಾರಿ ವಿಶೇಷವಾಗಿ, ಪ್ಲಾಸ್ಟಿಕ್ ನಿಷೇಧದ ಹಿನ್ನೆಲೆಯಲ್ಲಿ ನೀರನ್ನು ಗಾಜಿನ ಬಾಟಲ್​​ಗಳ ಮೂಲಕ ಮಾರಾಟ ಮಾಡಲಾಗುತ್ತದೆ. 500 ಎಂಎಲ್ ಗಾಜಿನ ನೀರಿನ ಬಾಟಲಿಗೆ 50 ರೂ. ಇದ್ದು, ಬಾಟಲ್ ವಾಪಸ್ ನೀಡಿದರೆ 30 ರೂ. ವಾಪಸ್ ನೀಡುವ ವ್ಯವಸ್ಥೆ ಮಾಡಲಾಗಿದೆ.

ಇದನ್ನೂ ಓದಿ: 11 ದಿನಗಳ ದಸರಾ ಆಚರಣೆ ಅಪಶಕುನವಾ? ಡಾ. ಶೆಲ್ವ ಪಿಳೈ ಅಯ್ಯಂಗಾರ್ ವಿವರಣೆ ಇಲ್ಲಿದೆ

ಈ ಬಾರಿಯೂ ನಾಲ್ಕು ಶುಕ್ರವಾರ ಮತ್ತು ಒಂದು ವರ್ಧಂತಿ ದಿನ ದಾಸೋಹದ , ಹೂವಿನ ಅಲಂಕಾರ ಮತ್ತು ವಿಶೇಷ ಪೂಜೆಗಳನ್ನು ನೆರವೇರಿಸಲಾಗುತ್ತದೆ. ಉತ್ತಮ ಗುಣಮಟ್ಟದ ಬ್ಯಾರಿಕೇಡ​​ಗಳು ಹಾಗೆಯೇ ಜರ್ಮನ್ ಟೆಂಟ್​ಗಳ ವ್ಯವಸ್ಥೆ ಕೂಡ ಮಾಡಲಾಗುತ್ತಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!