ಆಷಾಢ ಮಾಸದ ವಿಶೇಷ ಪೂಜೆಗೆ ಚಾಮುಂಡಿ ಬೆಟ್ಟದಲ್ಲಿ ಸಿದ್ದತೆ, ತಯಾರಾಗಿವೆ 25 ಸಾವಿರ ಮೈಸೂರು ಪಾಕ್​

ಆಷಾಢ ಮಾಸ ಆರಂಭವಾಗಿದ್ದು ಪ್ರತಿ ವರ್ಷದಂತೆ ಈ ವರ್ಷವೂ ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿ ದೇವಿಗೆ ಶುಕ್ರವಾರ ವಿಶೇಷ ಪೂಜೆ ನೆರವೇರಿಸಲಾಗುತ್ತದೆ. ಪೂಜೆಗೆ ಈಗಾಗಲೆ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ. ಪ್ರಸಾದಕ್ಕಾಗಿ 25 ಸಾವಿರ ಮೈಸೂರು ಪಾಕ್​ ನಿರ್ಮಿಸಲಾಗಿದೆ.

ಆಷಾಢ ಮಾಸದ ವಿಶೇಷ ಪೂಜೆಗೆ ಚಾಮುಂಡಿ ಬೆಟ್ಟದಲ್ಲಿ ಸಿದ್ದತೆ, ತಯಾರಾಗಿವೆ 25 ಸಾವಿರ ಮೈಸೂರು ಪಾಕ್​
ಚಾಮುಂಡಿ ಬೆಟ್ಟ
Follow us
ರಾಮು, ಆನೇಕಲ್​
| Updated By: ವಿವೇಕ ಬಿರಾದಾರ

Updated on: Jul 11, 2024 | 9:47 AM

ಮೈಸೂರು, ಜುಲೈ 11: ಪ್ರತಿ ವರ್ಷದಂತೆ ಈ ವರ್ಷವೂ ಆಷಾಢ ಮಾಸದ (Ashadha Masa) ಶುಕ್ರವಾರದಂದು ಚಾಮುಂಡಿ ಬೆಟ್ಟದಲ್ಲಿ (Chamundi Betta) ಚಾಮುಂಡೇಶ್ವರಿ (Chamundeshwari) ದೇವಿಗೆ ವಿಶೇಷ ಪೂಜೆ ನೆರವೇರಲಿದೆ. ಪ್ರತಿ ವರ್ಷ ಸಾವಿರಾರು ಭಕ್ತರು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ತಾಯಿ ಚಾಮುಂಡಿಗೆ ವಿಶೇಷ ಪೂಜೆ ಸಲ್ಲಿಸಿ ದರ್ಶನ ಪಡೆದು ಪುನೀತರಾಗುತ್ತಾರೆ. ಆಷಾಢ ಶುಕ್ರವಾರದ ವಿಶೇಷ ಪೂಜೆಗೆ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ. ವಿಶೇಷ ಪೂಜೆಗಾಗಿ ಚಾಮುಂಡೇಶ್ವರಿ ಸೇವಾ ಸಮಿತಿ ವತಿಯಿಂದ 25 ಸಾವಿರ ಮೈಸೂರು ಪಾಕ್ (Mysore Pak) ಸಿದ್ದಪಡಿಸಿದೆ.

ಶುಕ್ರವಾರ (ಜು.12) ರಂದು ಬೆಳಗ್ಗೆ 6 ಗಂಟೆಯಿಂದ ಸಾಯಂಕಾಲ 4 ಗಂಟೆಯವರೆಗೂ ಪ್ರಸಾದ ವಿನಿಯೋಗ ಮಾಡಲಾಗುತ್ತದೆ. ಮೈಸೂರು ಪಾಕ್​ಗೆ 200 ಕೆಜಿ ಕಡಲೆ‌ಹಿಟ್ಟು, 500 ಕೆಜಿ ಸಕ್ಕರೆ, 30 ಲೀಟರ್ ಎಣ್ಣೆ, 100 ಕೆಜಿ ತುಪ್ಪ 100 ಕೆಜಿ ಬೆಣ್ಣೆ ಕಾಯಿಸಿದ ತುಪ್ಪ, 3 ಕೆಜಿ ಏಲಕ್ಕಿ 2 ಕೆಜಿ ಅಡುಗೆ ಅರಿಶಿನ ಬಳಸಲಾಗುತ್ತಿದೆ. 40 ಜನ‌ ಬಾಣಸಿಗರು ಮೈಸೂರು ಪಾಕ್ ತಯಾರಿಸುತ್ತಿದ್ದಾರೆ.

ಇದನ್ನೂ ಓದಿ: ಆಷಾಢ ಶುಕ್ರವಾರ ಚಾಮುಂಡಿ ಬೆಟ್ಟಕ್ಕೆ ಖಾಸಗಿ ವಾಹನ ನಿಷೇಧ; ಪಾರ್ಕಿಂಗ್ ಬಗ್ಗೆ ಇಲ್ಲಿದೆ ವಿವರ

ಚಾಮುಂಡಿ ಬೆಟ್ಟಕ್ಕೆ ಶನಿ, ಭಾನುವಾರವೂ ಖಾಸಗಿ ವಾಹನ ನಿಷೇಧ ಚಾಮುಂಡಿಬೆಟ್ಟದಲ್ಲಿ ಶುಕ್ರ, ಶನಿ, ಭಾನವಾರದಂದು ಆಷಾಢ ಮಾಸದ ವಿಶೇಷ ಪೂಜೆ ನೆರವೇರಲಿದೆ. ಹೀಗಾಗಿ, ಈ‌ ಬಾರಿ ಎಲ್ಲ ಆಷಾಢ ಶುಕ್ರವಾರ, ಶನಿವಾರ, ಭಾನುವಾರದಂದು ಖಾಸಗಿ ವಾಹನಗಳಿಗೆ ನಿರ್ಬಂಧಿಸಲಾಗಿದೆ. ಶುಕ್ರವಾರ ಮಾತ್ರ ಉಚಿತ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ. ಶನಿವಾರ ಮತ್ತು ಭಾನುವಾರ ಉಚಿತ ಬಸ್ ವ್ಯವಸ್ಥೆ ಇರುವುದಿಲ್ಲ.

ಜು.12, 13, 14, 19, 20, 21, 26, 27, 28 ಮತ್ತು ಆಗಸ್ಟ್​​ 02, 03 ಮತ್ತು 04ನೇ ತಾರೀಖಿನಂದು ಬೆಟ್ಟಕ್ಕೆ ಖಾಸಗಿ ವಾಹನಗಳನ್ನು ನಿರ್ಬಂಧಿಸಲಾಗಿದೆ. ಗಣ್ಯರು, ಕರ್ತವ್ಯನಿರತ ಸಿಬ್ಬಂದಿ, ಮಾಧ್ಯಮ ಹಾಗೂ ಚಾಮುಂಡಿ ಬೆಟ್ಟದ ನಿವಾಸಿಗಳಿಗೆ ವಿನಾಯತಿ ನೀಡಲಾಗಿದೆ. ಪ್ರಸಾದ ಹಂಚಲು ಚಾಮುಂಡಿ ಬೆಟ್ಟದ ಬಸ್ ನಿಲ್ದಾಣದ ಬಳಿ ವ್ಯವಸ್ಥೆ ಮಾಡಲಾಗಿದೆ. ಈ ಬಾರಿ ಚಾಮುಂಡಿ ಬೆಟ್ಟದಲ್ಲಿ ನಡೆಯುವ ಆಷಾಢ ಶುಕ್ರವಾರದ ಪೂಜೆಗೆ ಯಾವುದೇ ವಿಶೇಷ ಪಾಸ್‌ ಇರುವುದಿಲ್ಲ ಎಂದು ಪ್ರಭಾರ ಪೊಲೀಸ್ ಕಮಿಷನರ್ ಡಾ‌. ಎಂಬಿ ಬೋರಲಿಂಗಯ್ಯ ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ
ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್