Vehicles Ban in Chamundi Hill: ಆಷಾಢ ಶುಕ್ರವಾರ ಚಾಮುಂಡಿ ಬೆಟ್ಟಕ್ಕೆ ಖಾಸಗಿ ವಾಹನ ನಿಷೇಧ; ಪಾರ್ಕಿಂಗ್ ಬಗ್ಗೆ ಇಲ್ಲಿದೆ ವಿವರ

|

Updated on: Jul 10, 2024 | 9:50 AM

Ashadha Shukravara 2024: ಅಷಾಢ ಶುಕ್ರವಾರ ಸಮೀಪಿಸುತ್ತಿದ್ದಂತೆಯೇ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ವಿಶೇಷ ಪೂಜೆ, ದರ್ಶನಕ್ಕೆ ಸಿದ್ಧತೆ ಭರದಿಂದ ಸಾಗಿದೆ. ಪ್ರತಿ ಆಷಾಢ ಶುಕ್ರವಾರದಂದು ಬೆಟ್ಟಕ್ಕೆ ಖಾಸಗಿ ವಾಹನ ಪ್ರವೇಶಕ್ಕೆ ಅವಕಾಶ ಇರುವುದಿಲ್ಲ. ಯಾವಾಗಲೆಲ್ಲ ಆಷಾಢ ಶುಕ್ರವಾರ ಇದೆ? ಪಾರ್ಕಿಂಗ್​ಗೆ ಎಲ್ಲಿ ವ್ಯವಸ್ಥೆ ಮಾಡಲಾಗಿದೆ? ಬೆಟ್ಟಕ್ಕೆ ಹೋಗುವುದು ಹೇಗೆಂಬ ಮಾಹಿತಿ ಇಲ್ಲಿದೆ.

Vehicles Ban in Chamundi Hill: ಆಷಾಢ ಶುಕ್ರವಾರ ಚಾಮುಂಡಿ ಬೆಟ್ಟಕ್ಕೆ ಖಾಸಗಿ ವಾಹನ ನಿಷೇಧ; ಪಾರ್ಕಿಂಗ್ ಬಗ್ಗೆ ಇಲ್ಲಿದೆ ವಿವರ
ಆಷಾಢ ಶುಕ್ರವಾರ ಚಾಮುಂಡಿ ಬೆಟ್ಟಕ್ಕೆ ಖಾಸಗಿ ವಾಹನ ನಿಷೇಧ; ಪಾರ್ಕಿಂಗ್ ಬಗ್ಗೆ ಇಲ್ಲಿದೆ ವಿವರ
Follow us on

ಮೈಸೂರು, ಜುಲೈ 10: ಮೈಸೂರಿನ ಚಾಮುಂಡೇಶ್ವರಿ ದೇವಿ ದೇವಸ್ಥಾನದಲ್ಲಿ ಜುಲೈ 12 ರಂದು ಮೊದಲ ಆಷಾಢ ಶುಕ್ರವಾರದ ಪೂಜೆ ನಡೆಯಲಿದ್ದು, ಜಿಲ್ಲಾಡಳಿತವು ಭಕ್ತರಿಗೆ ತೊಂದರೆಯಾಗದಂತೆ ದೇವಿಯ ದರ್ಶನಕ್ಕೆ ಬೇಕಾದ ಎಲ್ಲಾ ವ್ಯವಸ್ಥೆಗಳನ್ನು ಮಾಡಿದೆ. ಜುಲೈ ತಿಂಗಳಿನಲ್ಲಿ ನಡೆಯುವ ಆಷಾಢ ಶುಕ್ರವಾರದ ಆಚರಣೆಗಳಲ್ಲಿ ನಗರ ಮತ್ತು ಹೊರಗಿನ ಲಕ್ಷಾಂತರ ಭಕ್ತರು ಭಾಗವಹಿಸುವ ನಿರೀಕ್ಷೆಯಿದೆ. ಈ ವರ್ಷ ಆಷಾಢ ಶುಕ್ರವಾರಗಳು ಜುಲೈ 12, 19, 26 ಮತ್ತು ಆಗಸ್ಟ್ 2 ರಂದು ಬಂದಿದ್ದು, ಜುಲೈ 27 ರಂದು ಚಾಮುಂಡೇಶ್ವರಿ ವರ್ಧಂತಿ ನಡೆಯಲಿದೆ.

ಡಿಸಿ ಜಿ.ಲಕ್ಷ್ಮೀಕಾಂತ್ ರೆಡ್ಡಿ, ಹೆಚ್ಚುವರಿ ಡಿಸಿ ಪಿ.ಶಿವರಾಜ್, ನಗರ ಪೊಲೀಸ್ ಆಯುಕ್ತ ಸೀಮಾ ಲಾಟ್ಕರ್, ಡಿಸಿಪಿ (ಕಾನೂನು ಮತ್ತು ಸುವ್ಯವಸ್ಥೆ) ಎಂ.ಮುತ್ತುರಾಜ್ ಸೇರಿದಂತೆ ಜಿಲ್ಲಾಡಳಿತ ಮತ್ತು ನಗರ ಪೊಲೀಸ್‌ ಹಿರಿಯ ಅಧಿಕಾರಿಗಳು ಮತ್ತು ಡಿಸಿಪಿ (ಅಪರಾಧ ಮತ್ತು ಸಂಚಾರ) ಎಸ್. ಜಾಹ್ನವಿ ಬೆಟ್ಟಕ್ಕೆ ಭೇಟಿ ನೀಡಿ ಈಗಾಗಲೇ ಸಿದ್ಧತೆಗಳ ಬಗ್ಗೆ ಮೇಲ್ವಿಚಾರಣೆ ನಡೆಸಿದ್ದಾರೆ.

ಬಳಿಕ ಚಾಮುಂಡೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರು ಹಾಗೂ ಕಾರ್ಯನಿರ್ವಾಹಕ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಜನಸಂದಣಿ ನಿಯಂತ್ರಣ, ಸರತಿ ಸಾಲು ನಿರ್ವಹಣೆ, ಭಕ್ತರಿಗೆ ಕುಡಿಯುವ ನೀರು, ಶೌಚಾಲಯ ಸೇರಿದಂತೆ ಸೌಲಭ್ಯಗಳ ವ್ಯವಸ್ಥೆಗೆ ಸಂಬಂಧಿಸಿ ಸಲಹೆ ಸೂಚನೆ ನೀಡಿದ್ದಾರೆ.

ಚಾಮುಂಡಿ ಬೆಟ್ಟಕ್ಕೆ ಖಾಸಗಿ ವಾಹನ ನಿಷೇಧ

ಎಲ್ಲಾ ಆಷಾಢ ಶುಕ್ರವಾರ ಮತ್ತು ವರ್ಧಂತಿಯಂದು ಬೆಟ್ಟಕ್ಕೆ ಎಲ್ಲಾ ರೀತಿಯ ವಾಹನಗಳ ಪ್ರವೇಶವನ್ನು ನಿಷೇಧಿಸಲಾಗಿದೆ. ಭಕ್ತರ ಅನುಕೂಲಕ್ಕಾಗಿ ಲಲಿತಾ ಮಹಲ್ ಹೆಲಿಪ್ಯಾಡ್ ಬಳಿ ವಾಹನ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದ್ದು, ಬೆಟ್ಟಕ್ಕೆ ತೆರಳಲು ಉಚಿತ ಕೆಎಸ್‌ಆರ್‌ಟಿಸಿ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ.

ಇದನ್ನೂ ಓದಿ: ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ಬಸನಗೌಡ ದದ್ದಲ್, ಮಾಜಿ ಸಚಿವ ನಾಗೇಂದ್ರ ಮನೆ ಮೇಲೆ ಇ.ಡಿ ದಾಳಿ

ಪಾರ್ಕಿಂಗ್​ ಎಲ್ಲಿ?

ಲಲಿತಾ ಮಹಲ್ ಹೆಲಿಪ್ಯಾಡ್ ಬಳಿ ವಾಹನ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ. ಪಾರ್ಕಿಂಗ್ ಮೈದಾನವು 2,000 ದ್ವಿಚಕ್ರ ವಾಹನಗಳು ಮತ್ತು ಸುಮಾರು 1,000 ನಾಲ್ಕು ಚಕ್ರದ ವಾಹನಗಳು ಮತ್ತು ಇತರ ಪ್ರಯಾಣಿಕ ವಾಹನಗಳಿಗೆ ಅವಕಾಶ ಕಲ್ಪಿಸುತ್ತದೆ. ಇಷ್ಟೇ ಅಲ್ಲದೆ ಫ್ಲೆಕ್ಸ್ ಬ್ಯಾನರ್‌ಗಳು, ಬೋರ್ಡ್‌ಗಳು ಮತ್ತು ಇತರ ಪ್ರಚಾರ ಸಾಮಗ್ರಿಗಳ ಪ್ರದರ್ಶನ ನಿಷೇಧಿಸಲಾಗಿದೆ. ಯಾವುದೇ ವಿಶೇಷ ಪಾಸ್‌ಗಳನ್ನು ನೀಡಲಾಗುವುದಿಲ್ಲ ಎಂದು ಜಿಲ್ಲಾಡಳಿತ ತಿಳಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ