Mysuru Dasara Elephant : ಅರ್ಜುನ ಸಾವಿನ ಬೆನ್ನಲ್ಲೇ ಮತ್ತೊಂದು ಮೈಸೂರು ದಸರಾ ಆನೆ ದುರಂತ ಸಾವು

ವಿಶ್ವ ವಿಖ್ಯಾತ ಮೈಸೂರು ದಸರಾದಲ್ಲಿ ಬರೋಬ್ಬರಿ 8 ವರ್ಷ ಅಂಬಾರಿ ಹೊತ್ತಿದ್ದ ಅರ್ಜುನ ಆನೆ ಸಾವಿಗೀಡಾಗಿದ್ದು, ಇಡೀ ಕರುನಾಡೇ ಮಮ್ಮಲ ಮರುಗಿತ್ತು. ಈ ಕರಾಳ ನೆನಪು ಜನರ ಮನಸ್ಸಿನಿಂದ ಮಾಸುವ ಮುನ್ನವೇ ಮತ್ತೊಂದು ದಸರಾ ಆನೆ ದುರಂತ ಅಂತ್ಯ ಕಂಡಿದೆ.

Mysuru Dasara Elephant : ಅರ್ಜುನ ಸಾವಿನ ಬೆನ್ನಲ್ಲೇ ಮತ್ತೊಂದು ಮೈಸೂರು ದಸರಾ ಆನೆ ದುರಂತ ಸಾವು
ದಸರಾ ಆನೆ ಅಶ್ವತ್ಥಾಮ
Follow us
| Updated By: ರಮೇಶ್ ಬಿ. ಜವಳಗೇರಾ

Updated on:Jun 11, 2024 | 4:20 PM

ಮೈಸೂರು, (ಜೂನ್ 11): ಮೈಸೂರು ದಸರಾದಲ್ಲಿ (Mysuru Dasara) ಬರೊಬ್ಬರಿ 8 ವರ್ಷ ಅಂಬಾರಿ ಹೊತ್ತಿದ್ದ ಅರ್ಜುನ ಆನೆ ಸಾವನ್ನಪ್ಪಿದ ಬೆನ್ನಲ್ಲೇ ಇದೀಗ ಮತ್ತೊಂದು ದಸರಾ ಆನೆ (dasara elephant ashwathama )ಮೃತಪಟ್ಟಿದೆ. ವಿದ್ಯುತ್ ತಂತಿ ತುಳಿದು ದಸರಾ ಆನೆ ಅಶ್ವತ್ಥಾಮ ದುರಂತ ಅಂತ್ಯಕಂಡಿದ್ದಾನೆ. ನಾಗರಹೊಳೆ ಅರಣ್ಯ ಪ್ರದೇಶದ ಗಡಿಯಲ್ಲಿ ಹಾಕಲಾಗಿರುವ ಸೋಲಾರ್ ತಂತಿ ಬೇಲಿಯಲ್ಲಿ ವಿದ್ಯುತ್ ಪ್ರವಹಿಸಿ ಸಾವನಪ್ಪಿದ ಅಶ್ವತ್ಥಾಮ ಸಾವನ್ನಪ್ಪಿದ್ದಾನೆ. ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಭೀಮನಕಟ್ಟೆ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದೆ.

ಹುಣಸೂರು ಪಿರಿಯಾಪಟ್ಟಣ ಗಡಿ ಭಾಗದಲ್ಲಿರುವ ಆನೆ ಶಿಬಿರದಲ್ಲಿದ್ದ 38 ವರ್ಷದ ಅಶ್ವತ್ಥಾಮ ಆನೆ, ಎರಡು ಬಾರಿ ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದಲ್ಲಿ ಭಾಗಿಯಾಗಿತ್ತು. 2017ರಲ್ಲಿ ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನಲ್ಲಿ ಅಶ್ವತ್ಥಾಮ ಆನೆಯನ್ನು ಸೆರೆ ಹಿಡಿಯಲಾಗಿತ್ತು. ಬಳಿಕ ಅದನ್ನು ಪಳಗಿಸಿ ಮೈಸೂರು ದಸರಾ ಮಹೋತ್ಸವಕ್ಕೆ ಕರೆತರಲಾಗಿತ್ತು. ಶಾಂತ ಹಾಗೂ ಗಾಂಭಿರ್ಯಕ್ಕೆ ಅಶ್ವತ್ಥಾಮ ಆನೆ ಹೆಸರುವಾಸಿಯಾಗಿತ್ತು.

ಇದನ್ನೂ ಓದಿ: ದಸರಾ ಆನೆ ಅರ್ಜುನ ಸಮಾಧಿ ವಿರೂಪ ಆರೋಪ ಪ್ರಕರಣ; ಎಫ್​ಐಆರ್​ ದಾಖಲು

ಕಾದಾಟದಲ್ಲಿ ಪ್ರಾಣತೆತ್ತ ಅರ್ಜುನ

ಮೊದಲಿಗೆ ಪುಂಡನಾಗಿ ಕೇಡಿ, ರೌಡಿ, ಕೋಪಿಷ್ಟ ಎಂದೆಲ್ಲ ಕರೆಯಿಸಿಕೊಂಡಿದ್ದರೂ ಆ ನಂತರ ಅರ್ಜುನ ಎಲ್ಲರ ಪ್ರೀತಿಗೆ ಪಾತ್ರನಾಗುವುದರೊಂದಿಗೆ ಮೈಸೂರು ದಸರಾದಲ್ಲಿ ಎಂಟು ಬಾರಿ ಚಿನ್ನದ ಅಂಬಾರಿ ಹೊತ್ತು ಸೈ ಎನಿಸಿಕೊಂಡಿದ್ದನು. ಆದರೆ ವಯಸ್ಸಿನ ಕಾರಣದಿಂದ ಅಂಬಾರಿ ಹೊರುವ ಜವಾಬ್ದಾರಿಯನ್ನು ಅಭಿಮನ್ಯುಗೆ ನೀಡಿ ತಾನು ನಿಶಾನೆ ಆನೆಯಾಗಿ ಜಂಬೂಸವಾರಿ ಮುನ್ನಡೆಸುವ ಕಾರ್ಯವನ್ನು ವಹಿಸಿಕೊಂಡಿದ್ದನು. ಆದರೆ ಈಗ ಕಾಡಾನೆಗಳಿಂದ ದಾಳಿಗೊಳಗಾಗಿ ಅರ್ಜುನ ಸಾವನ್ನಪ್ಪಿದ್ದ.

ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಯಸಳೂರು ಬಳಿ ಕಾಡಾನೆ ಸೆರೆ ಹಿಡಿದು ಸ್ಥಳಾಂತರ ಮಾಡುವ ಕಾರ್ಯಾಚರಣೆ ನಡೆಯುತ್ತಿತ್ತು. ಈ ವೇಳೆ ಕಾಡಾನೆಗೆ ಅರವಳಿಕೆ ಚುಚ್ಚುಮದ್ದು ನೀಡುವ ಕಾರ್ಯಾಚರಣೆ ವೇಳೆ ಅರ್ಜುನನ ಮೇಲೆ ಒಂಟಿಸಲಗ ಅಟ್ಯಾಕ್ ಮಾಡಿದೆ. ಈ ಘಟನೆಯಲ್ಲಿ ಅರ್ಜುನ ಆನೆ ಮೃತಪಟ್ಟಿದ್ದ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:11 pm, Tue, 11 June 24

ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್