AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮಾಜ್ ವೇಳೆ ಶಾಂತಿ ಇರಬೇಕಾದ ಮಸೀದಿಯೊಳಗೇ ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ

ಫೆಬ್ರವರಿ 13, ಶುಕ್ರವಾರ ನಮಾಜ್ ಸಮಯ. ಶಾಂತಿ ಇರಬೇಕಾದ ಮಸೀದಿಯೊಳಗೇ ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ ನಡೆದಿದೆ. ಹೌದು..ಮೈಸೂರಿನಲ್ಲಿ ನಮಾಜ್ ಮಾಡಲು ಮಸೀದಿಗೆ ಹೋದ ಅಪ್ರಾಪ್ತ ಬಾಲಕನ ಮೇಲೆ ಅಮಾನುಷ ಹಲ್ಲೆಯಾಗಿದೆ. ಮಸೀದಿಯೊಳಗೇ ಕಾಲಿನಿಂದ ಒದೆಯಲಾಗಿದ್ದು, ಘಟನೆಯ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರಯಾಗಿದೆ. ಇದರ ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ.

ನಮಾಜ್ ವೇಳೆ ಶಾಂತಿ ಇರಬೇಕಾದ ಮಸೀದಿಯೊಳಗೇ ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ
Mysuru Mosque
ರಾಮ್​, ಮೈಸೂರು
| Edited By: |

Updated on: Feb 15, 2026 | 10:10 PM

Share

ಮೈಸೂರು, (ಫೆಬ್ರವರಿ 15): ನಮಾಜ್ ಸಮಯದಲ್ಲಿ ಮಸೀದಿಯಲ್ಲಿ (Mosque) ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ ನಡೆದಿರುವ ಘಟನೆ ಮೈಸೂರಿನ (Mysuru) ಎನ್ ಆರ್ ಮೊಹಲ್ಲಾದ ಮಸೀದಿಯಲ್ಲಿ ನಡೆದಿದೆ. ಫೆಬ್ರವರಿ 13 ಶುಕ್ರವಾರ ನಮಾಜ್ ವೇಳೆ ಮೊದಲು ಮಾತಿನ ಜಗಳ ನಡೆದಿದ್ದು, ಬಳಿಕ ಬಾಲಕನ ಮೇಲೆ ಹಲ್ಲೆ ಮಾಡಲಾಗಿದೆ. ಇದಕ್ಕಿಂತಲೂ ಕ್ರೂರವಾಗಿ ಕಾಲಿನಿಂದ ಒದ್ದು ಕ್ರೌರ್ಯ ಮೆರೆದಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ವಿಡಿಯೋದಲ್ಲಿ ಬಾಲಕನನ್ನು ಅಟ್ಟಾಡಿಸಿ ಹಲ್ಲೆ ಮಾಡುತ್ತಿರುವ ದೃಶ್ಯಗಳು ಸ್ಪಷ್ಟವಾಗಿ ಕಾಣುತ್ತಿವೆ.

ಘಟನೆ ಸಂಬಂಧ ನರಸಿಂಹರಾಜ ಪೊಲೀಸ್ ಠಾಣೆಯಲ್ಲಿ ಎನ್‌ಸಿಆರ್ ದಾಖಲಾಗಿದೆ. ಹಲ್ಲೆ ಮಾಡಿದವರು ಅವೇಜ್, ಪರವೇಜ್, ಜಹೀದ್ ಹಾಗೂ ಉಮ್ಮರ್ ಅನ್ನೋ ಆರೋಪ ಕೇಳಿ ಬಂದಿದೆ. ಈ ತಂಡದಲ್ಲಿ ರೌಡಿಶೀಟರ್ ಒಬ್ಬ ಇದ್ದಾನೆ ಅನ್ನೋದು ಬಾಲಕನ ತಂದೆಯ ಗಂಭೀರ ಆರೋಪ. ಈ ಸಂಬಂಧ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಉಳಿದವರು ಎಸ್ಕೇಪ್ ಆಗಿದ್ದಾರೆ. ನಶೆಯಲ್ಲಿ ಹಲ್ಲೆ ಮಾಡಿದ್ದಾರೆ ಅನ್ನೋ ಆರೋಪದ ಮೇಲೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ರಂಗೋಲಿ ಹಾಕ್ತಿದ್ದ ಮಹಿಳೆಯರ ಸರ ಎಗರಿಸಿದ ಖದೀಮರು: ಕದ್ದ ಬೈಕ್​​ನಲ್ಲೇ ಬಂದು ಕೃತ್ಯ

ಪವಿತ್ರ ಸ್ಥಳದಲ್ಲಿ ಇಂಥ ಕೃತ್ಯ ನಡೆದಿರುವುದು ಎಲ್ಲರ ಆಕ್ರೋಶಕ್ಕೆ ಕಾರಣವಾಗಿದೆ ಅಷ್ಟೇ ಅಲ್ಲ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಲ್ಲಿ ಆತಂಕ ಮೂಡಿಸಿದೆ. ಬಾಲಕನ ಮೇಲೆ ಹಲ್ಲೆ ಮಾಡಿದ ಎಲ್ಲಾ ಆರೋಪಿಗಳನ್ನು ಬಂಧಿಸಬೇಕು ಅನ್ನೋದು ಸ್ಥಳೀಯರ ಒತ್ತಾಯವಾಗಿದೆ.

ಮಸೀದಿಯೊಳಗೆ ಬಾಲಕನ ಮೇಲೆ ಹಲ್ಲೆ ನಡೆದಿರುವ ಪ್ರಕರಣ ಮೈಸೂರಿನಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಸಿಸಿ ಕ್ಯಾಮೆರಾ ದೃಶ್ಯ ಆಧರಿಸಿ ಪೊಲೀಸರು ಮುಂದಿನ ಕ್ರಮ ಕೈಗೊಳ್ಳಬೇಕಿದೆ. ಆಗ ಮಾತ್ರ ಇಂತಹ ಘಟನೆಗಳಿಗೆ ಕಡಿವಾಣ ಹಾಕಬಹುದಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ