Mysore News: ಸಮೀಕ್ಷೆಗೆ ತೆರಳಿದ್ದ ಆಶಾ ಕಾರ್ಯಕರ್ತೆ ಮೇಲೆ ಹಲ್ಲೆ ಆರೋಪ

ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಅಣ್ಣೂರು ಗ್ರಾಮದಲ್ಲಿ ಸಮೀಕ್ಷೆಗೆ ತೆರಳಿದ್ದ ಆಶಾ ಕಾರ್ಯಕರ್ತೆ ಮೇಲೆ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ.

Mysore News: ಸಮೀಕ್ಷೆಗೆ ತೆರಳಿದ್ದ ಆಶಾ ಕಾರ್ಯಕರ್ತೆ ಮೇಲೆ ಹಲ್ಲೆ ಆರೋಪ
ಮಂಗಳಮ್ಮ ಆಶಾ ಕಾರ್ಯಕರ್ತೆ

Updated on: Jun 20, 2023 | 6:45 AM

ಮೈಸೂರು: ಜಿಲ್ಲೆಯ ಹೆಚ್.ಡಿ.ಕೋಟೆ (HD Kote) ತಾಲೂಕಿನ ಅಣ್ಣೂರು ಗ್ರಾಮದಲ್ಲಿ ಸಮೀಕ್ಷೆಗೆ ತೆರಳಿದ್ದ ಆಶಾ ಕಾರ್ಯಕರ್ತೆ (Asha Worker) ಮೇಲೆ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ಮಂಗಳಮ್ಮ ಹಲ್ಲೆಗೊಳಗಾದ ಆಶಾ ಕಾರ್ಯಕರ್ತೆ. ಮಂಗಳಮ್ಮ ಗ್ರಾಮಕ್ಕೆ ಸಮೀಕ್ಷೆಗೆ ತೆರಳಿ ಮಾಹಿತಿ ಕಲೆ ಹಾಕುತ್ತಿದ್ದರು. ಈ ವೇಳೆ ಅದೇ ಗ್ರಾಮದ ಮಾದೇಶ ಎಂಬುವನು ಮಂಗಳಮ್ಮ ಅವರ ಜೊತೆ ಅಸಭ್ಯವಾಗಿ ವರ್ತಿಸಿ ಹಲ್ಲೆ ಮಾಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ.

ಅಲ್ಲದೇ ಮಧ್ಯ ಬಂದ ಶಿವಕುಮಾರ್ ಎಂಬುವವರ ಮೇಲೂ ಹಲ್ಲೆ ಮಾಡಿ ಪರಾರಿಯಾಗಿದ್ದಾನೆ. ಮಂಗಳಮ್ಮ ಮತ್ತು ಶಿವಕುಮಾರ್ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್.ಡಿ.ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಕಬಿನಿ‌ ಪೊಲೀಸ್ ಭದ್ರತಾ‌ ಕೊಠಡಿಗೆ ಡಿಕ್ಕಿ ಹೊಡೆದ ಲಾರಿ

ಬೈಕ್ ಹಳ್ಳಕ್ಕೆ ಬಿದ್ದು ಸವಾರ ಸಾವು

ಮೈಸೂರು: ನಿಯಂತ್ರಣ ತಪ್ಪಿದ ಬೈಕ್ ಹಳ್ಳಕ್ಕೆ ಬಿದ್ದು ಸವಾರ ಸಾವನ್ನಪ್ಪಿರುವ ಘಟನೆ ಹುಣಸೂರು ತಾಲ್ಲೂಕು ಕಾಳಬೂಚನಹಳ್ಳಿ ಬಳಿ ನಡೆದಿದೆ. ಬಿ.ಆರ್ ಕಾವಲ್ ನಿವಾಸಿ ಉಮೇಶ್ 26 ಮೃತ ದುರ್ದೈವಿ.
ಜಮೀನಿನ ಶುಂಠಿ ಕೆಲಸಕ್ಕೆ ಕೂಲಿ ಕಾರ್ಮಿಕರನ್ನು ಬರಲು ಹೇಳಿ ವಾಪಸ್ಸು ಬರುವ ವೇಳೆ ಅಪಘಾತ ಸಂಭವಿಸಿದೆ. ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೈಸೂರು ಜಿಲ್ಲೆಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ