ಅಯೋಧ್ಯೆಯ ಬಾಲರಾಮ ಮೂರ್ತಿ ಬಗ್ಗೆ ಇಂಟ್ರೆಸ್ಟಿಂಗ್ ಮಾಹಿತಿ ಬಿಚ್ಚಿಟ್ಟ ಮೈಸೂರಿನ ಹಿರಿಯ ಶಿಲ್ಪಿ

ರಾಮಲಲ್ಲಾ ಮೂರ್ತಿ ಕೆತ್ತನೆಗೆ ಬಳಸಿದ ಕಲ್ಲು ಮೈಸೂರು ಜಿಲ್ಲೆ ಎಚ್.ಡಿ ಕೋಟೆ ತಾಲೂಕಿನ ಬುಜ್ಜೆಗೌಡನಪುರ ಗ್ರಾಮದಿಂದ ತಂದದ್ದು. ಈ ಕಲ್ಲನ್ನು ಕೃಷ್ಣ ಶಿಲೆ ಎಂದು ಕರೆಯಲಾಗುತ್ತೆ. ಆ್ಯಸಿಡ್, ವಾಟರ್, ಫೈರ್, ರಸ್ಟ್ ಪ್ರೊಫ್ ನಿಂದ ಕೃಷ್ಣ ಶಿಲೆ ಕೂಡಿದೆ ಎಂದು ಬಾಲರಾಮ ಮೂರ್ತಿ ಕೆತ್ತನೆ ಸಂಬಂಧ ಮೈಸೂರಿನ ಹಿರಿಯ ಶಿಲ್ಪಿ ಸೂರ್ಯಪ್ರಕಾಶ್ ಅವರು ಕೆಲವು ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ.

ಅಯೋಧ್ಯೆಯ ಬಾಲರಾಮ ಮೂರ್ತಿ ಬಗ್ಗೆ ಇಂಟ್ರೆಸ್ಟಿಂಗ್ ಮಾಹಿತಿ ಬಿಚ್ಚಿಟ್ಟ ಮೈಸೂರಿನ ಹಿರಿಯ ಶಿಲ್ಪಿ
ಹಿರಿಯ ಶಿಲ್ಪಿ ಸೂರ್ಯಪ್ರಕಾಶ್
Follow us
| Updated By: ಆಯೇಷಾ ಬಾನು

Updated on: Dec 29, 2023 | 9:46 AM

ಮೈಸೂರು, ಡಿ.29: ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಗೆ ಕೆಲವೇ ದಿನಗಳು ಬಾಕಿ ಉಳಿದಿವೆ. ಅಯೋಧ್ಯೆಯಲ್ಲಿ ಹಬ್ಬದ ಸಂಭ್ರಮ ಮನೆ ಮಾಡಿದೆ (Ayodhya Ram Mandir Opening Ceremony). ಅಯೋಧ್ಯೆಯ ಕಣ ಕಣವೂ ರಾಮ ನಾಮದಲ್ಲಿ ಮಿಂದೇಳುತ್ತಿದೆ.‌ ತೇತ್ರಾಯುಗವನ್ನೆ ಅಯೋಧ್ಯೆಯಲ್ಲಿ ಮರುಸೃಷ್ಟಿಸಲು ಭರ್ಜರಿ ತಯಾರಿ ನಡೆಯುತ್ತಿದೆ. ಇನ್ನು ಜನವರಿ 22 ರಂದು ಅಯೋಧ್ಯೆ ರಾಮಮಂದಿರದಲ್ಲಿ ರಾಮನ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆಗೆ ಸಿದ್ಧತೆ ಜೋರಾಗಿದೆ. ಇದೆಲ್ಲದರ ನಡುವೆ ಬಾಲರಾಮ ಮೂರ್ತಿ (Ram Lalla idol) ಕೆತ್ತನೆ ಮಾಡಿರುವ ಶಿಲ್ಪಿ ಅರುಣ್ ಯೋಗಿರಾಜ್ ಅವರ ಹಿರಿಯ ಸಹೋದರ ಸೂರ್ಯಪ್ರಕಾಶ್ ಅವರು ಕೆಲವು ಇಂಟ್ರೆಸ್ಟಿಂಗ್ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

ಅಯೋಧ್ಯೆಯಲ್ಲಿ ಬಾಲರಾಮ ಪ್ರತಿಷ್ಠಾಪನೆಗೆ ದಿನಗಣನೆ ಶುರುವಾಗಿದೆ. ಪ್ರತಿಯೊಬ್ಬರ ಚಿತ್ತ ಅಯೋಧ್ಯೆಯತ್ತ ನೆಟ್ಟಿದೆ. ಮತ್ತೊಂದೆಡೆ ರಾಮಲಲ್ಲಾ ಮೂರ್ತಿ ಕೆತ್ತನೆಗೆ ಬಳಸಿದ ಕಲ್ಲು ಮೈಸೂರು ಜಿಲ್ಲೆ ಎಚ್.ಡಿ ಕೋಟೆ ತಾಲೂಕಿನ ಬುಜ್ಜೆಗೌಡನಪುರ ಗ್ರಾಮದಿಂದ ತಂದದ್ದು. ಈ ಕಲ್ಲನ್ನು ಕೃಷ್ಣ ಶಿಲೆ ಎಂದು ಕರೆಯಲಾಗುತ್ತೆ. ಆ್ಯಸಿಡ್, ವಾಟರ್, ಫೈರ್, ರಸ್ಟ್ ಪ್ರೊಫ್ ನಿಂದ ಕೃಷ್ಣ ಶಿಲೆ ಕೂಡಿದೆ ಎಂದು ಬಾಲರಾಮ ಮೂರ್ತಿ ಕೆತ್ತನೆ ಸಂಬಂಧ ಮೈಸೂರಿನ ಹಿರಿಯ ಶಿಲ್ಪಿ ಸೂರ್ಯಪ್ರಕಾಶ್ ಅವರು ಕೆಲವು ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ.

ಹೆಚ್.ಡಿ.ಕೋಟೆಯಲ್ಲಿ ಸಿಗುವ ಕೃಷ್ಣ ಶೀಲೆ ಬೇರೆಲ್ಲೂ ಸಿಗಲ್ಲ

ಕಬ್ಬಿಣ 850 ಡಿಗ್ರಿಯಲ್ಲಿ ಕಾಯಿಸಿದರೆ ಕರಗಿ ಹೋಗುತ್ತೆ. ಆದರೆ ಕೃಷ್ಣ ಶಿಲೆ ಕರಗಲ್ಲ, ಸಿಡಿಯಲ್ಲ, ಆ್ಯಸಿಡ್ ಹಾಕಿದ್ರು ಏನೂ ಆಗಲ್ಲ. ಮಳೆ, ಗಾಳಿ, ಬಿಸಿಲಿಗೂ ಕೃಷ್ಣ ಶಿಲೆ ಏನು ಆಗಲ್ಲ. ಮೈಸೂರು ಅರಮನೆಯಲ್ಲಿರುವ ಮೂರ್ತಿಗಳು ಕೃಷ್ಣ ಶಿಲೆಯಲ್ಲೇ ಮಾಡಿರುವುದು. ಮೈಸೂರಿನ ಹೆಚ್.ಡಿ ಕೋಟೆ ಹಾಗೂ ಹಾಸನದಲ್ಲಿ ಮಾತ್ರ ಕೃಷ್ಣ ಶಿಲೆ ಕಲ್ಲುಗಳು ಸಿಗುತ್ತದೆ. ಹಾಸನದಲ್ಲಿ ಸಿಗುವ ಕಲ್ಲು, ಹೆಚ್.ಡಿ.ಕೋಟೆಯಲ್ಲಿ ಸಿಗುವ ಕಲ್ಲಿನಷ್ಟು ಚೆನ್ನಾಗಿಲ್ಲ‌. ಶಂಕರಾಚಾರ್ಯರ ಮೂರ್ತಿಯನ್ನು ಮಾಡಿದ್ದು ಹೆಚ್.ಡಿ.ಕೋಟೆಯ ಕೃಷ್ಣ ಶಿಲೆಯಲ್ಲೇ. ಸರ್ಕಾರ ಕೃಷ್ಣ ಶಿಲೆ ಸಿಗುತ್ತಿರುವ ಜಾಗವನ್ನ ಸಂರಕ್ಷಣೆ ಮಾಡಬೇಕು. ಕೃಷ್ಣ ಶಿಲೆ ಸಾಕಷ್ಟು ಗಟ್ಟಿಯಾದ ಕಲ್ಲು. ಕಲ್ಲಿನಲ್ಲಿ ನೀರಿನ ಅಂಶ ಇರುತ್ತೆ. ನೀರಿನ ಅಂಶ ಹಾನಿಯಾಗಿರುವ ಕಲ್ಲಿನಿಂದ ಕೆತ್ತನೆ ಮಾಡಲಾಗಿದೆ.

ಇದನ್ನೂ ಓದಿ: ಅಯೋಧ್ಯೆಯ ರಾಮಮಂದಿರದಲ್ಲಿ ಸ್ಥಾಪನೆಯಾಗಲಿದೆ 600ಕೆಜಿ ತೂಕದ ಲೋಹದ ಗಂಟೆ

ಸರ್ಕಾರ ಕೃಷ್ಣ ಶಿಲೆ ಸಂರಕ್ಷಣೆ ಮಾಡುವ ಕೆಲಸ ಮಾಡಬೇಕು

ಗಟ್ಟಿ ಕಲ್ಲಿನಿಂದ ಕೆತ್ತನೆ ಮಾಡುವುದು ಬಹಳ ಕಷ್ಟದ ಕೆಲಸ‌. ಇದನ್ನ ಎಲ್ಲರು ಬಳಪದ ಕಲ್ಲು ಎನ್ನುತ್ತಾರೆ. ಆದರೆ ಇದು ಬಳಪದ ಕಲ್ಲಲ್ಲ. ಈ ಕಲ್ಲಿನ ವಿಶೇಷ ಅಂದ್ರೆ ಎಲ್ಲಾ ಕಾಲದಲ್ಲೂ ಒಂದೇ ಟೆಂಪರೇಚರ್ ಇರುತ್ತೆ. ಈ ಕಾರಣದಿಂದ ವಿದೇಶಗಳಲ್ಲಿ ಇದನ್ನ ಸೀಲಿಂಗ್​ಗೆ ಬಳಸುತ್ತಿದ್ದಾರೆ. ಇದರಿಂದ ಚಳಿ, ಮಳೆ, ಬೇಸಿಗೆ ಎಲ್ಲಾ ಸಂದರ್ಭದಲ್ಲೂ ಒಂದೇ ವಾತಾವರಣ ಇರುತ್ತೆ ಎಂಬ ಕಾರಣಕ್ಕೆ. ಸರ್ಕಾರ ಸಂರಕ್ಷಣೆ ಮಾಡುತ್ತೇವೆ ಎಂದು ಹೇಳಿದ್ದಾರೆ. ಆದಷ್ಟು ಬೇಗ ಸಂರಕ್ಷಣೆ ಮಾಡುವ ಕೆಲಸ ಮಾಡಬೇಕು ಎಂದು ಶಿಲ್ಪಿ ಸೂರ್ಯ ಪ್ರಕಾಶ್ ಅವರು ತಿಳಿಸಿದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ