AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ಆರೋಗ್ಯ ಇಲಾಖೆ ಅಧಿಕಾರಿಗಳಿಂದ ಗರ್ಭಿಣಿಯರಿಗೆ ಸೀಮಂತ ಕಾರ್ಯ

ಮೈಸೂರು ಜಿಲ್ಲೆಯಲ್ಲಿ ಆರೋಗ್ಯ ಇಲಾಖೆಯಿಂದ ವಿಶೇಷ ಕಾರ್ಯಕ್ರಮ ನಡೆಸಲಾಗಿದೆ. ಮೈಸೂರಿನ ತುಳಸಿ ದಾಸಪ್ಪ ಹೆರಿಗೆ ಆಸ್ಪತ್ರೆಯಲ್ಲಿ ವೈದ್ಯಾಧಿಕಾರಿಗಳು ಗರ್ಭಿಣಿಯರಿಗೆ ಸೀಮಂತ ಕಾರ್ಯ ನಡೆಸಿದ್ದಾರೆ. ಆರತಿ ಬೆಳಗಿ ಗರ್ಭಿಣಿ ಮಹಿಳೆಯರಿಗೆ ವೈದ್ಯಾಧಿಕಾರಿಗಳು ಸೀಮಂತ ಕಾರ್ಯ ಮಾಡಿದ್ದು, ಪ್ರಸವ ಪೂರ್ವ ಆರೈಕೆ ಪೌಷ್ಟಿಕ ಆಹಾರದ ಬಗ್ಗೆ ವಿಶೇಷ ಜಾಗೃತಿ ಮೂಡಿಸಲಾಯಿತು.

ಮೈಸೂರು: ಆರೋಗ್ಯ ಇಲಾಖೆ ಅಧಿಕಾರಿಗಳಿಂದ ಗರ್ಭಿಣಿಯರಿಗೆ ಸೀಮಂತ ಕಾರ್ಯ
ತುಳಸಿ ದಾಸಪ್ಪ ಹೆರಿಗೆ ಆಸ್ಪತ್ರೆಯಲ್ಲಿ ಗರ್ಭಿಣಿಯರಿಗೆ ಸೀಮಂತ ಕಾರ್ಯ
ರಾಮ್​, ಮೈಸೂರು
| Updated By: Rakesh Nayak Manchi|

Updated on: Jan 18, 2024 | 2:38 PM

Share

ಮೈಸೂರು, ಜ.18: ಪೊಲೀಸ್ ಠಾಣೆ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಗರ್ಭಿಣಿಯಾಗಿರುವ ಮಹಿಳೆಯರಿಗೆ ಸೀಮಂತ ಕಾರ್ಯ ನಡೆಸಲಾಗುತ್ತಿದೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ (Mysuru) ಈ ಹಿಂದೆ ಪೊಲೀಸ್ ಠಾಣೆಗಳಲ್ಲಿ ಸೀಮಂತ (Baby Shower) ಕಾರ್ಯ ನಡೆಸಿದ ಉದಾಹರಣೆಗಳನ್ನು ಕಾಣಬಹುದು. ಇದೀಗ, ತುಳಸಿ ದಾಸಪ್ಪ ಹೆರಿಗೆ ಆಸ್ಪತ್ರೆಯಲ್ಲಿ ವೈದ್ಯಾಧಿಕಾರಿಗಳು ಗರ್ಭಿಣಿಯರಿಗೆ ಸೀಮಂತ ಕಾರ್ಯ ನೆರವೇರಿಸಿದ್ದಾರೆ.

ತುಳಸಿ ದಾಸಪ್ಪ ಹೆರಿಗೆ ಆಸ್ಪತ್ರೆಯಲ್ಲಿ ಇಂದು ಮೈಸೂರು ಜಿಲ್ಲೆಯ ಆರೋಗ್ಯ ಇಲಾಖೆ ಅಧಿಕಾರಿಗಳು ಸೀಮಂತ ಕಾರ್ಯಕ್ರಮ ಆಯೋಜಿಸಿ ಗರ್ಭಿಣಿಯರಿಗೆ ಶಾಸ್ತ್ರೋಕ್ತವಾಗಿ ಸೀಮಂತ ಕಾರ್ಯ ನಡೆಸಿದ್ದಾರೆ. ಗರ್ಭಿಣಿ ಮಹಿಳೆಯರಿಗೆ ವೈದ್ಯಾಧಿಕಾರಿಗಳು ಅರಿಶಿನ, ಬಳೆ ವಿತರಣೆ ಮಾಡಿ ಆರತಿ ಬೆಳಗಿದರು.

ಇದನ್ನೂ ಓದಿ: ಗದಗ: ಸೀಮಂತ ಕಾರ್ಯಕ್ರಮದಲ್ಲಿ ಮಥುರಾ ಮಂದಿರದ ಕನಸು ವ್ಯಕ್ತಪಡಿಸಿದ ಭಕ್ತರು

ಬಳಿಕ ಗರ್ಭಿಣಿಯರಿಗೆ ಪ್ರಸವ ಪೂರ್ವ ಆರೈಕೆ ಹಾಗೂ ಪೌಷ್ಟಿಕ ಆಹಾರದ ಬಗ್ಗೆ ವಿಶೇಷ ಜಾಗೃತಿ ಮೂಡಿದರು. ಸೀಮಂತ ಕಾರ್ಯಕ್ರಮದಲ್ಲಿ ಡಿಹೆಚ್​​​ಒ ಡಾ.ಪಿಸಿ ಕುಮಾರಸ್ವಾಮಿ ಸೇರಿದಂತೆ ಹಲವರು ಭಾಗಿಯಾದರು.

ಇತ್ತೀಚೆಗಷ್ಟೇ, ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಸನ್ ಸೊಸೈಟಿ ಬೆಂಗಳೂರು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ ಕೊಪ್ಪಳ ಹಾಗೂ ಉಪವಿಭಾಗ ಆಸ್ಪತ್ರೆ ಸಹಯೋಗದಲ್ಲಿ ಸಾಮೂಹಿಕ ಸೀಮಂತ ಕಾರ್ಯ ನಡೆಸಲಾಗಿತ್ತು. ಒಟ್ಟು 250 ಗರ್ಭಿಣಿಯರಿಗೆ ಸೀಮಂತ ಮಾಡಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ