77 ಸಾವಿರ ವಿದ್ಯಾರ್ಥಿಗಳಿಗೆ ಪದವಿ ಪತ್ರ: ಕರ್ನಾಟಕ ಮುಕ್ತ ವಿವಿ ವಿರುದ್ಧ ರಾಜ್ಯಪಾಲರಿಗೆ ಅಂಚೆ ಪತ್ರ ರವಾನೆ ಚಳುವಳಿ

ನಿಯಮ ಉಲ್ಲಂಘಿಸಿದರೆ ಮತ್ತೆ ಕೆಎಸ್ಓಯು ಮಾನ್ಯತೆ ಕಳೆದುಕೊಳ್ಳುವ ಸಾಧ್ಯತೆ ಇದೆ. ಹೀಗಾಗಿ ರಾಜ್ಯಪಾಲರು ಇತ್ತ ಗಮನಹರಿಸಬೇಕು ಎಂದು ರಾಜ್ಯ ಪಾಲರಿಗೆ ಪತ್ರ ರವಾನಿಸುವ ಮೂಲಕ, ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಅಂಚೆ ಚಳುವಳಿ ನಡೆಸಿದೆ.

77 ಸಾವಿರ ವಿದ್ಯಾರ್ಥಿಗಳಿಗೆ ಪದವಿ ಪತ್ರ: ಕರ್ನಾಟಕ ಮುಕ್ತ ವಿವಿ ವಿರುದ್ಧ ರಾಜ್ಯಪಾಲರಿಗೆ ಅಂಚೆ ಪತ್ರ ರವಾನೆ ಚಳುವಳಿ
ಕರ್ನಾಟಕ ಮುಕ್ತ ವಿವಿ ವಿರುದ್ಧ ರಾಜ್ಯಪಾಲರಿಗೆ ಅಂಚೆ ಪತ್ರ ರವಾನೆ ಚಳುವಳಿ
Follow us
TV9 Web
| Updated By: preethi shettigar

Updated on:Aug 03, 2021 | 1:29 PM

ಮೈಸೂರು: ಯುಜಿಸಿ ಆದೇಶಗಳಿಗೆ ವಿರುದ್ಧವಾಗಿ ಕರ್ನಾಟಕ ರಾಜ್ಯ ಮುಕ್ತ ವಿವಿ (KSOU) ಪದವಿ ಪ್ರಮಾಣ ಪತ್ರ ನೀಡುತ್ತಿದೆ ಎಂಬ ಆರೋಪ ಕೇಳಿಬಂದಿದೆ. ತರಾತುರಿಯಲ್ಲಿ 77 ಸಾವಿರ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ನೀಡಲು‌ ಮುಂದಾಗಿದ್ದಾರೆ ಎಂದು ಕರ್ನಾಟಕ ರಾಜ್ಯ ಮುಕ್ತ ವಿವಿ ವಿರುದ್ಧ ಅಂಚೆ ಪತ್ರ ಚಳುವಳಿ ನಡೆಸಲಾಗುತ್ತಿದೆ. ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ರಾಜ್ಯಾಧ್ಯಕ್ಷ ಶಿವರಾಮು ನೇತೃತ್ವದಲ್ಲಿ ಮೈಸೂರಿನಲ್ಲಿ ಈ ಅಂಚೆ ಪತ್ರ ಚಳುವಳ ನಡೆಯುತ್ತಿದೆ.

KSOU ನಿಯಮ ಬಾಹಿರವಾಗಿ ನೇಮಕಾತಿ ಮಾಡುತ್ತಿದೆ. ಇದರಿಂದ ಮುಕ್ತ ವಿವಿಗೆ ಆರ್ಥಿಕ ಹೊರೆ ಹೆಚ್ಚಾಗಲಿದೆ. ತರಾತುರಿಯಲ್ಲಿ 77,000 ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ನೀಡಲು‌ ಮುಂದಾಗಿದ್ದಾರೆ. ನಿಯಮ ಉಲ್ಲಂಘಿಸಿದರೆ ಮತ್ತೆ ಕೆಎಸ್ಓಯು ಮಾನ್ಯತೆ ಕಳೆದುಕೊಳ್ಳುವ ಸಾಧ್ಯತೆ ಇದೆ. ಹೀಗಾಗಿ ರಾಜ್ಯಪಾಲರು ಇತ್ತ ಗಮನಹರಿಸಬೇಕು ಎಂದು ರಾಜ್ಯ ಪಾಲರಿಗೆ ಪತ್ರ ರವಾನಿಸುವ ಮೂಲಕ, ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಅಂಚೆ ಚಳುವಳಿ ನಡೆಸಿದೆ.

ಮಂಗಳೂರು ವಿವಿ ಪದವಿ ಪರೀಕ್ಷೆಗೆ ವಿದ್ಯಾರ್ಥಿಗಳ ಪರದಾಟ ಪರೀಕ್ಷೆ ಬರೆಯಲು ಬರುವ ವಿದ್ಯಾರ್ಥಿಗಳಿಗೆ ನೆಗೆಟಿವ್ ರಿಪೋರ್ಟ್ ಕಡ್ಡಾಯವಾಗಿದ್ದು, ಕೇರಳ ಗಡಿಯಲ್ಲಿರುವ ಕನ್ನಡಿಗ ವಿದ್ಯಾರ್ಥಿಗಳಲ್ಲಿ ಆತಂಕ ಎದುರಾಗಿದೆ. ರಾಜ್ಯಕ್ಕೆ ಬರಲು ಕೊವಿಡ್ ನೆಗೆಟಿವ್ ರಿಪೋರ್ಟ್ ಕಡ್ಡಾಯವಾಗಿದ್ದು, ಒಂದು ದಿನದಲ್ಲಿ ಹೇಗೆ ಈ ರಿಪೋರ್ಟ್ ತರುವುದು ಎಂದು ವಿದ್ಯಾರ್ಥಿಗಳು ಆತಂಕಕ್ಕೆ ಗುರಿಯಾಗಿದ್ದಾರೆ.

ಮೊದಲ ಡೋಸ್ ಪಡೆದ ಆಧಾರ ಮೇಲೆ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳು ನಿರ್ಧರಿಸಿದ್ದರು. ಆದರೆ ನಿನ್ನೆ ಕೇರಳ ಗಡಿಯಲ್ಲಿ ಕಟ್ಟುನಿಟ್ಟಿನ ಕ್ರಮಕೈಗೊಂಡಿದ್ದು, ಎರಡನೇ ಡೋಸ್ ಆದರೂ ನೆಗೆಟಿವ್ ರಿಪೋರ್ಟ್ ಕಡ್ಡಾಯ ಎಂದು ತಿಳಿಸಲಾಗಿದೆ. ವಿವಿಗಳು ಕೂಡ ಈ ನಿಯಮಕ್ಕೆ ಬದ್ಧವಾಗಿದ್ದು, ನೆಗೆಟಿವ್ ರಿಪೋರ್ಟ್ ಇಲ್ಲದ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ಇಲ್ಲ ಎಂದು ಹೇಳಿದೆ. ಹೀಗಾಗಿ ವ್ಯಾಕ್ಸಿನ್ ಆಧಾರದ ಮೇಲೆ ಪರೀಕ್ಷೆಗೆ ಬರಲು ಅವಕಾಶ ಮಾಡಿಕೊಡಿ. ಇಲ್ಲವಾದಲ್ಲಿ ಪರೀಕ್ಷೆ ಬರೆಯಲು ಸಾಧ್ಯವಾಗಲ್ಲ ಎಂದು ಕೇರಳ ಗಡಿ ಭಾಗದ ವಿದ್ಯಾರ್ಥಿಗಳು ಅಳಲು ತೋಡಿಕೊಂಡಿದ್ದಾರೆ.

ನೆಗೆಟಿವ್ ರಿಪೋರ್ಟ್ ಒಂದು ದಿನದಲ್ಲಿ ತರಲು ಸಾಧ್ಯವಾಗಲ್ಲ. ಆದ್ದರಿಂದ ವ್ಯಾಕ್ಸಿನೇಷನ್‌ ಆಧಾರದ ಮೇಲೆ ಪರೀಕ್ಷೆಗೆ ಕುರಿಸಿ. ಈಗಾಗಲೇ ನಾವು ಬಸ್ ಇಲ್ಲದೇ ಪರೀಕ್ಷೆ ಬರೆಯಲು ಪರದಾಡುತ್ತಿದ್ದೇವೆ. ಹೀಗಿರುವಾಗ ಮತ್ತೆ ಈ ಹೊಸ ನಿಯಮ ಮಾಡಿ ನಮ್ಮನ್ನು ಪರೀಕ್ಷೆಯಿಂದ ವಂಚಿತರನ್ನಾಗಿ ಮಾಡಬೇಡಿ ಎಂದು ಕೇರಳ ಗಡಿ ಭಾಗದ ವಿದ್ಯಾರ್ಥಿಗಳು ಮನವಿ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: School Reopening: ದುಡುಕಿ ಶಾಲೆ ಆರಂಭಿಸಲು ನಿರ್ಧರಿಸಬೇಡಿ: ಜಯದೇವ ಆಸ್ಪತ್ರೆ ನಿರ್ದೇಶಕ ಡಾ. ಮಂಜುನಾಥ್ ಸಲಹೆ

ಎರಡನೇ ಡೋಸ್ ಲಸಿಕೆ ಪಡೆದರೂ ನೆಗೆಟಿವ್ ರಿಪೋರ್ಟ್ ಕಡ್ಡಾಯ; ಮಂಗಳೂರು ವಿವಿ ಪದವಿ ಪರೀಕ್ಷೆಗೆ ವಿದ್ಯಾರ್ಥಿಗಳ ಪರದಾಟ

Published On - 12:34 pm, Tue, 3 August 21

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ