AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನಲ್ಲಿ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ​​ ಕೇಸ್​: ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆಗೆ ನೋಟಿಸ್!

ಮೈಸೂರಿನಲ್ಲಿ ನಡೆದ ಬಾಲಕಿ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತನಿಖೆ ಕುರಿತು ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ರೇಣುಕಾರಾಜು ಸಾಮಾಜಿಕ ಜಾಲತಾಣದಲ್ಲಿ ಆಧಾರರಹಿತ ಪೋಸ್ಟ್ ಮಾಡಿದ್ದಕ್ಕಾಗಿ ಅವರಿಗೆ ಪೊಲೀಸ್ ನೋಟಿಸ್ ಜಾರಿ ಮಾಡಲಾಗಿದೆ. ಹೀಗಾಗಿ ಕೂಡಲೇ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ಸೂಚಿಸಿದ್ದಾರೆ.

ಮೈಸೂರಿನಲ್ಲಿ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ​​ ಕೇಸ್​: ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆಗೆ ನೋಟಿಸ್!
ಅಧ್ಯಕ್ಷೆ ರೇಣುಕಾರಾಜು
ರಾಮ್​, ಮೈಸೂರು
| Updated By: ಗಂಗಾಧರ​ ಬ. ಸಾಬೋಜಿ|

Updated on: Oct 13, 2025 | 6:01 PM

Share

ಮೈಸೂರು, ಅಕ್ಟೋಬರ್​ 13: ಮೈಸೂರಿನಲ್ಲಿ (Mysuru) ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ ಪ್ರಕರಣ ಸದ್ಯ ರಾಜ್ಯದಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ. ಘಟನೆ ನಡೆದ 24 ಗಂಟೆಯೊಳಗೆ ಪೊಲೀಸರು ಆರೋಪಿ ಹೆಡೆಮುರಿಕಟ್ಟಿದ್ದಾರೆ. ಸದ್ಯ ಈ ಕೇಸ್​ಗೆ ಸಂಬಂಧಿಸಿದಂತೆ ಬಿಜೆಪಿ (bjp) ಮಹಿಳಾ ಮೋರ್ಚಾ ಅಧ್ಯಕ್ಷೆ ರೇಣುಕಾರಾಜುಗೆ ಪೊಲೀಸರು ನೋಟಿಸ್ ನೀಡಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ.

ಅಧ್ಯಕ್ಷೆ ರೇಣುಕಾರಾಜು ಮಾಡಿದ್ದ ಪೋಸ್ಟ್ ಏನು?

ಪ್ರಕರಣ ನಡೆದು 24 ಗಂಟೆಯೊಳಗೆ ಪೊಲೀಸರು ಓರ್ವ ಆರೋಪಿಯನ್ನ ಬಂಧಿಸಿದ್ದರು. ಈ ವಿಚಾರವಾಗಿ ‘ಪ್ರಕರಣದ ನಿಜವಾದ ಆರೋಪಿಯನ್ನು ಪೊಲೀಸರು ಬಂಧಿಸಿಲ್ಲ. ಆರೋಪಿ ಬಂಧನ ಎಂದು ಹೇಳಿರುವ ವಿಚಾರದಲ್ಲಿ ವಿಶ್ವಾಸವಿಲ್ಲ. ಈ ಬಗ್ಗೆ ಕೂಲಂಕಷವಾಗಿ ತನಿಖೆಯಾಗಬೇಕು’ ಎಂದು ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ರೇಣುಕಾರಾಜು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದರು.

ಇದನ್ನೂ ಓದಿ: ಮೈಸೂರು ದಸರೆಗೆ ಬಲೂನ್ ಮಾರಲು ಬಂದಿದ್ದ ಬಾಲಕಿ ಅತ್ಯಾಚಾರ ಕೊಲೆ:ಕೀಚಕನಿಗೆ ಪೊಲೀಸ್ ಗುಂಡೇಟು

ಸದರಿ ಹೇಳಿಕೆ ಜಾಲತಾಣದಲ್ಲಿ ವ್ಯಾಪಕವಾಗಿ ವೈರಲ್ ಆಗುತ್ತಿದೆ. ಈ ಪ್ರಕರಣವು ಘೋರ, ಅತಿಸೂಕ್ಷ್ಮ, ಗಂಭೀರ ಪ್ರಕರಣವಾಗಿದ್ದು, ವೈಜ್ಞಾನಿಕ ಹಾಗೂ ಪಾರದರ್ಶಕವಾಗಿ ತನಿಖೆ ಮಾಡುತ್ತಿದ್ದರೂ ನೀವು ಪೊಲೀಸರ ಬಗ್ಗೆ ಸಾರ್ವಜನಿಕರಿಗೆ ತಪ್ಪು ಸಂದೇಶ ನೀಡಿ, ಆಧಾರ ರಹಿತ ಹೇಳಿಕೆ ನೀಡಿದ್ದು ಮೇಲ್ನೋಟಕ್ಕೆ ಕಂಡುಬರುತ್ತಿದ್ದು, ನಿಮ್ಮ ಮೇಲೆ ಏಕೆ ಕ್ರಮ ತೆಗೆದುಕೊಳ್ಳಬಾರದೆಂದು ಪೊಲೀಸರು ನೋಟಿಸ್ ನೀಡಿದ್ದಾರೆ. ಈ ನೋಟಿಸ್ ತಲುಪಿದ ಕೂಡಲೇ ವಿಚಾರಣೆಗೆ ಹಾಜರಾಗುವಂತೆ ತನಿಖಾಧಿಕಾರಿ ಸೂಚಿಸಿದ್ದಾರೆ.

ಘಟನೆ ಹಿನ್ನೆಲೆ

ಅದ್ಧೂರಿಯಾಗಿ ನಡೆದ ದಸರಾ ಅಂತ್ಯವಾಗಿತ್ತು. ಮೈಸೂರಿನ ದಸರಾ ಜನರ ಪಾಲಿಗೆ ಕೇವಲ ಕಣ್ಮನ ಸೆಳೆಯೋ ಹಬ್ಬವಾದರೆ, ವ್ಯಾಪಾರಿಗಳ ಪಾಲಿಗೆ ಇದು ಹೊಟ್ಟೆ ತುಂಬಿಸುವ ಕಾರ್ಯಕ್ರಮ. ಇದೇ ದಸರಾದಲ್ಲಿ ವ್ಯಾಪಾರಕ್ಕೆ ಅಂತಾ ದೂರದ ಊರುಗಳಿಂದ ಜನ ಬರ್ತಾರೆ. ಹೀಗೆ ಬಲೂನ್‌ ಬೊಂಬೆ ಮಾರಾಟಕ್ಕೆ ಹಕ್ಕಿಬಿಕ್ಕಿ ಜನಾಂಗದವರು ಬಂದಿದ್ದರು.

ಇದನ್ನೂ ಓದಿ: ಮೈಸೂರು ದಸರೆಗೆ ಬಲೂನ್‌ ಮಾರಲು ಬಂದಿದ್ದ ಬಾಲಕಿ ಶವ ಪತ್ತೆ, ಅತ್ಯಾಚಾರ ಶಂಕೆ

ಅರಮನೆ ಮುಂಭಾಗ ದೊಡ್ಡಕೆರೆ ಮೈದಾನದಲ್ಲಿ ತಾತ್ಕಾಲಿಕ ಟೆಂಟ್‌ ಹಾಕಿಕೊಂಡು ವಾಸವಾಗಿದ್ದರು. ಹೀಗಿರುವಾಗಲೇ ಅಕ್ಟೋಬರ್‌ 9 ರ ಬೆಳಗಿನಜಾವ ಘೋರವೇ ನಡೆದಿತ್ತು. ಫೋಷಕರ ಜತೆಗಿದ್ದ ಬಾಲಕಿಯನ್ನ ಎಳೆದೊಯ್ದಿದ್ದ ಅದೊಬ್ಬ ದುರುಳ ಅತ್ಯಾಚಾರ ಎಸಗಿ ಕೊಲೆ ಮಾಡಿ ಎಸ್ಕೇಪ್ ಆಗಿದ್ದ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.