AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru-Mysuru Expressway: ಟೋಲ್‌ ದರ ಏರಿಕೆ, ಜೂನ್​.19 ರಂದು ಪ್ರತಿಭಟನೆಗೆ ಕರೆ ನೀಡಿದ ಕನ್ನಡ ಪರ ಸಂಘಟನೆಗಳು

ಬೆಂಗಳೂರು-ಮೈಸೂರು ದಶಪಥ ರಸ್ತೆಯ ಟೋಲ್‌ ದರ ಹೆಚ್ಚಳ ವಿರೋಧಿಸಿ ಕನ್ನಡ ಪರ ಸಂಘಟನೆ ಹೋರಾಟಗಾರರು ಜೂನ್​.19 ರಂದು ಕಣಮಿಣಿಕೆ‌ ಟೋಲ್ ಪ್ಲಾಜಾ ಬಳಿ ಮಾಡಲು ಮುಂದಾಗಿದ್ದಾರೆ.

Bengaluru-Mysuru Expressway: ಟೋಲ್‌ ದರ ಏರಿಕೆ, ಜೂನ್​.19 ರಂದು ಪ್ರತಿಭಟನೆಗೆ ಕರೆ ನೀಡಿದ ಕನ್ನಡ ಪರ ಸಂಘಟನೆಗಳು
ಬೆಂಗಳೂರು-ಮೈಸೂರು ದಶಪಥ ರಸ್ತೆಯ ಟೋಲ್​
Follow us
ವಿವೇಕ ಬಿರಾದಾರ
|

Updated on:Jun 13, 2023 | 2:03 PM

ರಾಮನಗರ: ಬೆಂಗಳೂರು-ಮೈಸೂರು ದಶಪಥ ರಸ್ತೆಯ (Bengaluru-Mysuru highway) ಟೋಲ್‌ ದರ ಮತ್ತೆ ಹೆಚ್ಚಳ ಮಾಡಿದಕ್ಕೆ ವಾಹನ ಸವಾರರು ಆಕ್ರೋಶ ಹೊರಹಾಕುತ್ತಿದ್ದಾರೆ. ಜೊತೆಗೆ ಕನ್ನಡ ಪರ ಸಂಘಟನೆ ಹೋರಾಟಗಾರರು ಆಕ್ರೋಶ ಹೊರಹಾಕಿದ್ದು, ಕಣಮಿಣಿಕೆ‌ ಟೋಲ್ ಪ್ಲಾಜಾ ಬಳಿ ಜೂನ್​.19 ರಂದು ಕನ್ನಡ ಪರ ಸಂಘಟನೆಗಳು ಪ್ರತಿಭಟನೆಗೆ ಕರೆ ನೀಡಿವೆ.

ಟೋಲ್‌ ದರ ಹೀಗಿದೆ

  • ಕಾರು, ವ್ಯಾನ್‌, ಜೀಪ್‌ ಏಕಮುಖ ಸಂಚಾರ ದರ:- 135 ರಿಂದ 165ಕ್ಕೆ  ಏರಿಕೆ – 30 ರೂ. ಹೆಚ್ಚಳ
  • ಲಘು ವಾಹನಗಳು, ಮಿನಿ ಬಸ್‌ಗಳ ಏಕಮುಖ ಟೋಲ್‌ ದರ:- 220 ರಿಂದ 270ಕ್ಕೆ ಏರಿಕೆ – 50 ರೂ. ಹೆಚ್ಚಳ
  • ಟ್ರಕ್‌, ಬಸ್, 2 ಆ್ಯಕ್ಸೆಲ್‌ ವಾಹನ ಏಕಮುಖ ಸಂಚಾರ ಟೋಲ್ ದರ:- 460 ರಿಂದ 565ಕ್ಕೆ ಏರಿಕೆ (105 ಹೆಚ್ಚಳ)
  • 3 ಆ್ಯಕ್ಸೆಲ್‌ ವಾಹನಗಳ ಏಕಮುಖ ಸಂಚಾರ ಟೋಲ್ ದರ:- 500 ರಿಂದ 615ಕ್ಕೆ ಏರಿಕೆ (115 ರೂ. ಹೆಚ್ಚಳ)
  • ಭಾರಿ ವಾಹನಗಳ ಏಕಮುಖ ಸಂಚಾರ ಟೋಲ್ ದರ:-  720ರಿಂದ  885ಕ್ಕೆ ಏರಿಕೆ (165 ರೂ.ಗೆ ಹೆಚ್ಚಳ)
  • 7 ಅಥವಾ ಅದಕ್ಕಿಂತ ಹೆಚ್ಚಿನ ಆ್ಯಕ್ಸೆಲ್‌ ವಾಹನಗಳ ಟೋಲ್‌  880 ರಿಂದ 1,080ಕ್ಕೆ (200 ಹೆಚ್ಚಳ)

ಟೋಲ್‌ ದರ ಹೆಚ್ಚಳ ಸಮರ್ಥಿಸಿಕೊಂಡ ಸಂಸದ ಪ್ರತಾಪ್ ಸಿಂಹ

ಇಡೀ ದೇಶದಲ್ಲಿ ಆರ್ಥಿಕ ವರ್ಷ ಶುರುವಾದಾಗ ಟೋಲ್ ಹೆಚ್ಚಳ ಸಹಜ. ಈ ಹೈವೆಗೆ ಏಪ್ರಿಲ್ ನಲ್ಲಿ ಟೋಲ್ ಹೆಚ್ಚಳ ಆಗಬೇಕಿತ್ತು. ಆಗ ಆಗಿರಲಿಲ್ಲ. ಈಗ ಶೇ.22ರಷ್ಟು ಏರಿಕೆ ಆಗಿದೆ. ಹಾಗೂ ಟೋಲ್ ಸಂಗ್ರಹದ ಆರಂಭದಲ್ಲಿ ಫಾಸ್ಟ್​​ ಟ್ಯಾಗ್ ಸಮಸ್ಯೆ ಇತ್ತು, ಈಗ ಸಮಸ್ಯೆ ಇಲ್ಲ. ಫಾಸ್ಟ್​ ಟ್ಯಾಗ್ ಇರದಿದ್ದರೆ ಡಬಲ್ ಚಾರ್ಜ್ ಕಟ್ಟುವುದು ಕಡ್ಡಾಯವಾಗಿದೆ ಎಂದು ಹೇಳಿದರು.

ಇದನ್ನೂ ಓದಿ: ಬೆಂಗಳೂರು-ಮೈಸೂರು ದಶಪಥ ರಸ್ತೆ ಟೋಲ್‌ ದರ ಮತ್ತೆ ಹೆಚ್ಚಳ: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಆದೇಶ

ಕೆಇಆರ್​​​ಸಿ ವಿದ್ಯುತ್​ ದರ ಏರಿಕೆ ಮಾಡಲು ಶಿಫಾರಸು ಮಾಡಿತ್ತು. ಅದನ್ನು ತಡೆಯುವ, ತಿರಸ್ಕರಿಸುವ ಹಕ್ಕು ರಾಜ್ಯ ಸರ್ಕಾರಕ್ಕೆ ಇದೆ. ಗುತ್ತಿಗೆದಾರರ ಅನುದಾನ ಬಿಡುಗಡೆ ಆದೇಶಕ್ಕೆ ತಡೆ ಹಿಡಿಯುತ್ತೀರಿ. ಆದ್ರೆ, ವಿದ್ಯುತ್ ಬಿಲ್ ಆದೇಶಕ್ಕೆ ಏಕೆ ತಡೆ ನೀಡಲ್ಲ ಎಂದು ಕಾಂಗ್ರೆಸ್ ನಾಯಕರಿಗೆ ಪ್ರಶ್ನಿಸಿದ ಪ್ರತಾಪ್ ಸಿಂಹ, ಕಾಂಗ್ರೆಸ್​​ನವರು ಲೂಟಿ ಮಾಡಲು ಬಂದಿದ್ದಾರೆ. ಜನ ವಿರೋಧಿ ಮುಖ ಮರೆಮಾಚಲು ಬಿಜೆಪಿ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

8 ಸಾವಿರ ಕೋಟಿ ರೂಪಾಯಿಯಲ್ಲಿ ಸಿದ್ದವಾಗಿದ್ದ ಬೆಂಗಳೂರು-ಮೈಸೂರು ದಶಪಥ

ಸುಮಾರು 8 ಸಾವಿರ ಕೋಟಿ ರೂ. ಸಿದ್ದವಾದ ಬೆಂಗಳೂರು-ಮೈಸೂರು ನಡುವಿನ ದಶಪಥ ರಾಷ್ಟ್ರೀಯ ಹೆದ್ದಾರಿಯನ್ನು ಮಾರ್ಚ್​​ 11ರಂದು ಪ್ರಧಾನಿ ನರೇಂದ್ರ ಮೋದಿಯವರು ಮಂಡ್ಯ ಜಿಲ್ಲೆಯ ಮದ್ದೂ​ರಿ​ನಲ್ಲಿ ಲೋಕಾ​ರ್ಪಣೆ ಮಾಡಿದ್ದರು. ಇದು ರಾಜ್ಯದ ಮೊದಲ ಎಕ್ಸ್‌ಪ್ರೆಸ್‌ ಹೆದ್ದಾರಿಯಾಗಿದ್ದು, ಇದರ ಟೋಲ್​ ಸಂಗ್ರಹವನ್ನು ಫೆ.27 ರಿಂದ ಪ್ರಾರಂಭಿಸಲಾಗಿತ್ತು. ಬೆಂಗಳೂರು ಬಳಿಯ ಕಣಿಮಿಣಿಕೆ ಮತ್ತು ರಾಮನಗರ ಜಿಲ್ಲೆಯ ಶೇಷಗಿರಿ ಹಳ್ಳಿ ಬಳಿ ಟೋಲ್​ ಸಂಗ್ರಹಿಸಲಾಗುತ್ತಿದೆ. ಮಂಡ್ಯ ಜಿಲ್ಲೆ ನಿಡಘಟ್ಟವರೆಗೆ 55.63 ಕಿಮೀ ಉದ್ದದ ರಸ್ತೆಗೆ ಶುಲ್ಕ ನಿಗದಿ ಮಾಡಲಾಗಿತ್ತು.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:13 pm, Tue, 13 June 23

ಮತ್ತೋರ್ವ ಶಂಕಿತ ಉಗ್ರ ಫಾರೂಕ್ ಅಹ್ಮದ್ ತಡ್ವಾನ ಮನೆ ಧ್ವಂಸ
ಮತ್ತೋರ್ವ ಶಂಕಿತ ಉಗ್ರ ಫಾರೂಕ್ ಅಹ್ಮದ್ ತಡ್ವಾನ ಮನೆ ಧ್ವಂಸ
Weekly Horoscope: ಏಪ್ರಿಲ್ 28 ರಿಂದ ಮೇ 4 ರವರೆಗಿನ ವಾರ ಭವಿಷ್ಯ
Weekly Horoscope: ಏಪ್ರಿಲ್ 28 ರಿಂದ ಮೇ 4 ರವರೆಗಿನ ವಾರ ಭವಿಷ್ಯ
Daily Devotional: ಉಪವಾಸವಿದ್ದಾಗ ಹಗಲು ಹೊತ್ತಿನಲ್ಲಿ ಮಲಗಬಹುದಾ?
Daily Devotional: ಉಪವಾಸವಿದ್ದಾಗ ಹಗಲು ಹೊತ್ತಿನಲ್ಲಿ ಮಲಗಬಹುದಾ?
ಅಕ್ಷಯ ಅಮಾವಾಸ್ಯೆ: ಈ ದಿನದಂದು ಯಾವೆಲ್ಲಾ ರಾಶಿಗಳಿಗೆ ಶುಭ, ಅಶುಭ ತಿಳಿಯಿರಿ
ಅಕ್ಷಯ ಅಮಾವಾಸ್ಯೆ: ಈ ದಿನದಂದು ಯಾವೆಲ್ಲಾ ರಾಶಿಗಳಿಗೆ ಶುಭ, ಅಶುಭ ತಿಳಿಯಿರಿ
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ