ರಾಮನಗರ: ಬೆಂಗಳೂರು-ಮೈಸೂರು ದಶಪಥ ರಸ್ತೆಯ (Bengaluru-Mysuru highway) ಟೋಲ್ ದರ ಮತ್ತೆ ಹೆಚ್ಚಳ ಮಾಡಿದಕ್ಕೆ ವಾಹನ ಸವಾರರು ಆಕ್ರೋಶ ಹೊರಹಾಕುತ್ತಿದ್ದಾರೆ. ಜೊತೆಗೆ ಕನ್ನಡ ಪರ ಸಂಘಟನೆ ಹೋರಾಟಗಾರರು ಆಕ್ರೋಶ ಹೊರಹಾಕಿದ್ದು, ಕಣಮಿಣಿಕೆ ಟೋಲ್ ಪ್ಲಾಜಾ ಬಳಿ ಜೂನ್.19 ರಂದು ಕನ್ನಡ ಪರ ಸಂಘಟನೆಗಳು ಪ್ರತಿಭಟನೆಗೆ ಕರೆ ನೀಡಿವೆ.
ಇಡೀ ದೇಶದಲ್ಲಿ ಆರ್ಥಿಕ ವರ್ಷ ಶುರುವಾದಾಗ ಟೋಲ್ ಹೆಚ್ಚಳ ಸಹಜ. ಈ ಹೈವೆಗೆ ಏಪ್ರಿಲ್ ನಲ್ಲಿ ಟೋಲ್ ಹೆಚ್ಚಳ ಆಗಬೇಕಿತ್ತು. ಆಗ ಆಗಿರಲಿಲ್ಲ. ಈಗ ಶೇ.22ರಷ್ಟು ಏರಿಕೆ ಆಗಿದೆ. ಹಾಗೂ ಟೋಲ್ ಸಂಗ್ರಹದ ಆರಂಭದಲ್ಲಿ ಫಾಸ್ಟ್ ಟ್ಯಾಗ್ ಸಮಸ್ಯೆ ಇತ್ತು, ಈಗ ಸಮಸ್ಯೆ ಇಲ್ಲ. ಫಾಸ್ಟ್ ಟ್ಯಾಗ್ ಇರದಿದ್ದರೆ ಡಬಲ್ ಚಾರ್ಜ್ ಕಟ್ಟುವುದು ಕಡ್ಡಾಯವಾಗಿದೆ ಎಂದು ಹೇಳಿದರು.
ಇದನ್ನೂ ಓದಿ: ಬೆಂಗಳೂರು-ಮೈಸೂರು ದಶಪಥ ರಸ್ತೆ ಟೋಲ್ ದರ ಮತ್ತೆ ಹೆಚ್ಚಳ: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಆದೇಶ
ಕೆಇಆರ್ಸಿ ವಿದ್ಯುತ್ ದರ ಏರಿಕೆ ಮಾಡಲು ಶಿಫಾರಸು ಮಾಡಿತ್ತು. ಅದನ್ನು ತಡೆಯುವ, ತಿರಸ್ಕರಿಸುವ ಹಕ್ಕು ರಾಜ್ಯ ಸರ್ಕಾರಕ್ಕೆ ಇದೆ. ಗುತ್ತಿಗೆದಾರರ ಅನುದಾನ ಬಿಡುಗಡೆ ಆದೇಶಕ್ಕೆ ತಡೆ ಹಿಡಿಯುತ್ತೀರಿ. ಆದ್ರೆ, ವಿದ್ಯುತ್ ಬಿಲ್ ಆದೇಶಕ್ಕೆ ಏಕೆ ತಡೆ ನೀಡಲ್ಲ ಎಂದು ಕಾಂಗ್ರೆಸ್ ನಾಯಕರಿಗೆ ಪ್ರಶ್ನಿಸಿದ ಪ್ರತಾಪ್ ಸಿಂಹ, ಕಾಂಗ್ರೆಸ್ನವರು ಲೂಟಿ ಮಾಡಲು ಬಂದಿದ್ದಾರೆ. ಜನ ವಿರೋಧಿ ಮುಖ ಮರೆಮಾಚಲು ಬಿಜೆಪಿ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಸುಮಾರು 8 ಸಾವಿರ ಕೋಟಿ ರೂ. ಸಿದ್ದವಾದ ಬೆಂಗಳೂರು-ಮೈಸೂರು ನಡುವಿನ ದಶಪಥ ರಾಷ್ಟ್ರೀಯ ಹೆದ್ದಾರಿಯನ್ನು ಮಾರ್ಚ್ 11ರಂದು ಪ್ರಧಾನಿ ನರೇಂದ್ರ ಮೋದಿಯವರು ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಲೋಕಾರ್ಪಣೆ ಮಾಡಿದ್ದರು. ಇದು ರಾಜ್ಯದ ಮೊದಲ ಎಕ್ಸ್‌ಪ್ರೆಸ್ ಹೆದ್ದಾರಿಯಾಗಿದ್ದು, ಇದರ ಟೋಲ್ ಸಂಗ್ರಹವನ್ನು ಫೆ.27 ರಿಂದ ಪ್ರಾರಂಭಿಸಲಾಗಿತ್ತು. ಬೆಂಗಳೂರು ಬಳಿಯ ಕಣಿಮಿಣಿಕೆ ಮತ್ತು ರಾಮನಗರ ಜಿಲ್ಲೆಯ ಶೇಷಗಿರಿ ಹಳ್ಳಿ ಬಳಿ ಟೋಲ್ ಸಂಗ್ರಹಿಸಲಾಗುತ್ತಿದೆ. ಮಂಡ್ಯ ಜಿಲ್ಲೆ ನಿಡಘಟ್ಟವರೆಗೆ 55.63 ಕಿಮೀ ಉದ್ದದ ರಸ್ತೆಗೆ ಶುಲ್ಕ ನಿಗದಿ ಮಾಡಲಾಗಿತ್ತು.
ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 1:13 pm, Tue, 13 June 23