Mysore News: ಬೈಕ್ಗೆ ಗೂಡ್ಸ್ ವಾಹನ ಡಿಕ್ಕಿಯಾಗಿ ಸವಾರ ಸ್ಥಳದಲ್ಲೆ ಸಾವು
ಅಪಘಾತಗಳನ್ನ ತಡೆಯಲು ಎಷ್ಟೇ ಮುಂಜಾಗೃತ ಕ್ರಮಗಳನ್ನು ಕೈಗೊಂಡರು, ತಡೆಯಲಾಗುತ್ತಿಲ್ಲ. ಅದರಂತೆ ಹುಣಸೂರು ತಾಲೂಕಿನ ಬಿಳಿಗೆರೆಗಾಯ ಬಳಿ ಬೈಕ್ಗೆ ಗೂಡ್ಸ್ ವಾಹನ ಡಿಕ್ಕಿಯಾಗಿ ಸವಾರ ಸ್ಥಳದಲ್ಲೆ ಸಾವನ್ನಪ್ಪಿರುವ ಘಟನೆ ನಡೆದಿದೆ.
ಮೈಸೂರು: ಅಪಘಾತಗಳನ್ನ ತಡೆಯಲು ಎಷ್ಟೇ ಮುಂಜಾಗೃತ ಕ್ರಮಗಳನ್ನು ಕೈಗೊಂಡರು, ತಡೆಯಲಾಗುತ್ತಿಲ್ಲ. ಅದರಂತೆ ಹುಣಸೂರು (Hunsur) ತಾಲೂಕಿನ ಬಿಳಿಗೆರೆಗಾಯ ಬಳಿ ಬೈಕ್ಗೆ ಗೂಡ್ಸ್ ವಾಹನ ಡಿಕ್ಕಿಯಾಗಿ ಸವಾರ ಸ್ಥಳದಲ್ಲೆ ಸಾವನ್ನಪ್ಪಿರುವ ಘಟನೆ ನಡೆದಿದೆ. ಸುಹೇಬ್(24) ಮೃತ ವ್ಯಕ್ತಿ. ಇನ್ನು ಹಿಂಬದಿ ಸವಾರ ಜುನೇದ್‌ಗೆ ಗಾಯಗಳಾಗಿದ್ದು, ಕೆ.ಆರ್.ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಹುಣಸೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಫರ್ನಿಚರ್ ಅಂಗಡಿಗೆ ಬೆಂಕಿ ತಗುಲಿ ಲಕ್ಷಾಂತರ ಮೌಲ್ಯದ ವಸ್ತುಗಳು ಬೆಂಕಿಗಾಹುತಿ
ಮೈಸೂರು: ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಫರ್ನಿಚರ್ ಅಂಗಡಿಗೆ ಬೆಂಕಿ ತಗುಲಿ ಲಕ್ಷಾಂತರ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾದ ಘಟನೆ ನಡೆದಿದೆ. ಅಜೀಂ ಎಂಬುವರಿಗೆ ಸೇರಿದ ಸಂಗಮ್ ಡೆಕೋರೇಷನ್ & ಫರ್ನಿಚರ್ ಅಂಗಡಿ ಇದಾಗಿದ್ದು, ಸ್ಥಳಕ್ಕೆ ಅಗ್ನಿ ಶಾಮಕ ದಳ ಸಿಬ್ಬಂದಿಗಳು ಬಂದು ಬೆಂಕಿ ನಂದಿಸಿದ್ದಾರೆ. ಈ ಕುರಿತು ಕೃಷ್ಣರಾಜ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:ಚಿಕ್ಕಮಗಳೂರು: ಕಾರು ಟಿಟಿ ವಾಹನ ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು
ಡಿವೈಡರ್ಗೆ ಮಿನಿ ಲಾರಿ ಡಿಕ್ಕಿ, ತಾಯಿ-ಮಗ ಸ್ಥಳದಲ್ಲೇ ಸಾವು
ಕೊಪ್ಪಳ: ತಾಲೂಕಿನ ಮಂಗಳಾಪುರ ರಾಷ್ಟ್ರೀಯ ಹೆದ್ದಾರಿ 63 ರಲ್ಲಿ, ಡಿವೈಡರ್ಗೆ ಮಿನಿ ಲಾರಿ ಡಿಕ್ಕಿಯಾಗಿ ತಾಯಿ ಮಗ ಸ್ಥಳದಲ್ಲೇ ಸಾವನ್ನಪ್ಪಿದ ಧಾರುಣ ಘಟನೆ ನಡೆದಿದೆ. ಕೊಪ್ಪಳದ ತೆಗ್ಗಿನಕೇರಿ ನಿವಾಸಿಗಳಾದ ರೇಣುಕಮ್ಮ(50), ಪ್ರಭು(25) ಮೃತರು. ಇನ್ನುಳಿದ 6 ಜನರಿಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡೆದಿದೆ ಎನ್ನಲಾಗುತ್ತಿದೆ. ಈ ಕುರಿತು ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈಜಲು ಹೋಗಿದ್ದ ಇಬ್ಬರು ಬಾಲಕರು ನೀರುಪಾಲು
ಬೆಂಗಳೂರು: ಈಜಲು ಹೋಗಿದ್ದ ಇಬ್ಬರು ಬಾಲಕರು ನೀರುಪಾಲಾದ ಘಟನೆ ಎಲೆಕ್ಟ್ರಾನಿಕ್ ಸಿಟಿಯ ಎರಡನೇ ಹಂತದ ನೀಲಾದ್ರಿ ಬಳಿ ನಡೆದಿದೆ. ಟ್ವೀನ್ಸ್ ಇಂಟರ್ನ್ಯಾಷನಲ್ ಸ್ಕೂಲ್ ಹಿಂಭಾಗದಲ್ಲಿರುವ ಕಲ್ಲಿನ ಕ್ವಾರೆಯಲ್ಲಿ ಈಜಲು ಹೋಗಿದ್ದ ಇಬ್ಬರೂ ಬಾಲಕರು, ನಿನ್ನೆ(ಮೇ.30) ಸಂಜೆ ಈಜಲು ಹೋಗಿದ್ದರು. ಈ ವೇಳೆ ಈ ದುರ್ಘಟನೆ ನಡೆದಿದ್ದು, ಕಿರಣ್ ಮತ್ತು ಫೈಜಲ್ ಇಬ್ಬರು 13 ವರ್ಷದ ಬಾಲಕರು ಮೃತಪಟ್ಟಿದ್ದಾರೆ. ಇನ್ನು ನಿನ್ನೆಯಿಂದ ಅಗ್ನಿಶಾಮಕ ಸಿಬ್ಬಂದಿಗಳು ಮೃತದೇಹವನ್ನು ಹುಡುಕುತ್ತಿದ್ದು ಇನ್ನು ಪತ್ತೆಯಾಗಿಲ್ಲ.
ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ