AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯದುವೀರ್ ನಾಮಪತ್ರ ಸಲ್ಲಿಕೆ: ಮಹಾರಾಜರಿಗೆ ಕೃಷಿ ಭೂಮಿ, ಸ್ವಂತ ಮನೆ ಇಲ್ಲ

Yaduveer Asset Details: ಲೋಕಸಭೆ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ (Karnataka) ಬಿಜೆಪಿ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆಯ ಭರಾಟೆ ಜೋರಾಗಿದೆ. ಮೈಸೂರು-ಕೊಡಗು ಅಭ್ಯರ್ಥಿ ಯದುವೀರ್​, ಬೆಂಗಳೂರು ಕೇಂದ್ರದಲ್ಲಿ ಪಿ.ಸಿ. ಮೋಹನ್, ಚಿಕ್ಕಬಳ್ಳಾಪುರದಲ್ಲಿ ಡಾ.ಕೆ.ಸುಧಾಕರ್ ಸೇರಿ ಹಲವು ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಇದೇ ಮೊದಲ ಬಾರಿಗೆ ಚುನಾವಣೆ ಅಖಾಡಕ್ಕಿಳಿದಿರುವ ಮೈಸೂರು ಮಹಾರಾಜ ಯದುವೀರ್ ಆಸ್ತಿ ಎಷ್ಟಿದೆ? ಎನ್ನುವ ವಿವರ ಇಲ್ಲಿದೆ.

ಯದುವೀರ್ ನಾಮಪತ್ರ ಸಲ್ಲಿಕೆ: ಮಹಾರಾಜರಿಗೆ ಕೃಷಿ ಭೂಮಿ, ಸ್ವಂತ ಮನೆ ಇಲ್ಲ
ನಾಮಪತ್ರ ಸಲ್ಲಿಸಿದ ಯದುವೀರ್
TV9 Web
| Updated By: ರಮೇಶ್ ಬಿ. ಜವಳಗೇರಾ|

Updated on: Apr 01, 2024 | 4:13 PM

Share

ಮೈಸೂರು, (ಏಪ್ರಿಲ್ 01): ಜ್ಯೋತಿಷಿಗಳ ಸಲಹೆಯಂತೆ ಇಂದು(ಏಪ್ರಿಲ್ 01) ಮೈಸೂರು-ಕೊಡಗು ಬಿಜೆಪಿ ಅಭ್ಯರ್ಥಿ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ (Yaduveer Krishnadatta Chamaraja Wadiyar) ಅವರು ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದ್ದಾರೆ. ತಾಯಿ ಪ್ರಮೋದಾದೇವಿ ಒಡೆಯರ್, ಶಾಸಕ‌ ಶ್ರೀವತ್ಸ ಜತೆ ಸೇರಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಉಮೇದುವಾರಿಕೆ ಸಲ್ಲಿಸಿದರು. ಏಪ್ರಿಲ್‌ 3ರಂದು ಬೃಹತ್‌ ರ‍್ಯಾಲಿ ಮೂಲಕ ಅವರು ನಾಮಪತ್ರ ಸಲ್ಲಿಸಿದ್ದಾರೆ. ಇನ್ನು ಪರ-ವಿರೋಧದ ಚರ್ಚೆಗಳ ಮಧ್ಯೆ ರಾಜಕೀಯ ಕ್ಷೇತ್ರಕ್ಕೆ ಪ್ರವೇಶಿಸಿರುವ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಬಳಿ ಆಸ್ತಿ ಎಷ್ಟಿದೆ ಎನ್ನುವುದನ್ನು ನೋಡುವುದಾದರೆ, ಚರಾಸ್ತಿ ಮೌಲ್ಯ 4,99,59,303 ರೂಪಾಯಿ ಇದೆ. ಆದ್ರೆ, ಯದುವೀರ್ ಹೆಸರಿನಲ್ಲಿ ಯಾವುದೇ ಕೃಷಿ ಭೂಮಿ, ಸ್ವಂತ ಮನೆ ಇಲ್ಲ ಇಲ್ಲದಿರುವುದೇ ವಿಶೇಷ.

ಯದುವೀರ್ ಆಸ್ತಿ ವಿವರ

ಯದುವೀರ್ ಒಡೆಯರ್​ ಚರಾಸ್ತಿ ಮೌಲ್ಯ 4,99,59,303 ರೂಪಾಯಿ ಇದ್ದು, ಸದ್ಯ ಅವರ ಬಳಿ ಕೈಯಲ್ಲಿ ಒಂದು ಲಕ್ಷ ರೂಪಾಯಿ ನಗದು ಇದೆ. ಇನ್ನು ಯದುವೀರ್​ ಒಡೆಯರ್ ಅವರ 2 ಬ್ಯಾಂಕ್ ಖಾತೆಗಳಲ್ಲಿ 23.55 ಲಕ್ಷ ಹಣ ಇದೆ. ಒಂದು ಕೋಟಿ ಮೌಲ್ಯದ ವಿವಿಧ ಕಂಪನಿಗಳಲ್ಲಿ ಬಾಂಡ್ ಮತ್ತು ಶೇರ್ ಹೊಂದಿದ್ದಾರೆ. ಇನ್ನು 4 ಕೆಜಿ ಚಿನ್ನ ಮತ್ತು 20 ಕೆಜಿ ಬೆಳ್ಳಿ ಇದೆ ಎಂದು ನಾಮಪತ್ರ ಅಫಿಡೆವಿಟ್​ನಲ್ಲಿ ಘೋಷಿಸಿಕೊಂಡಿದ್ದಾರೆ.

ಇದನ್ನೂ ಓದಿ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿಗಳು: ಯಾರು ಯಾವ ಕ್ಷೇತ್ರದಿಂದ ಉಮೇದುವಾರಿಕೆ ಸಲ್ಲಿಸಿದ್ರು? ಇಲ್ಲಿವೆ ಫೋಟೋಸ್

ಮಹಾರಾಜರಿಗೆ ಕೃಷಿ ಭೂಮಿ, ಸ್ವಂತ ಮನೆ ಇಲ್ಲ

ಇನ್ನು ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಮಹಾರಾಜ ಆಗಿದ್ದರೂ ಸಹ ಅವರು ಯಾವುದೇ ಕೃಷಿ ಭೂಮಿ, ಸ್ವಂತ ಮನೆ ಹೊಂದಿಲ್ಲ. ವಾಣಿಜ್ಯ ಕಟ್ಟಡಗಳಿಲ್ಲ. ಬ್ಯಾಂಕ್​ನಿಂದ ಸಾಲ ಸಹ ಪಡೆದಿಲ್ಲ. ಹಾಗೇ ಯಾವುದೇ ರೀತಿಯ ಆದಾಯ ತೆರಿಗೆ ಹಣ ಬಾಕಿ ಉಳಿಸಿಕೊಂಡಿಲ್ಲ. ಇನ್ನು ಬಿಜೆಪಿ ಅಭ್ಯರ್ಥಿ ಯದುವೀರ್ ವಿರುದ್ಧ ಯಾವ ಪ್ರಕರಣ ದಾಖಲಾಗಿಲ್ಲ ಎಂದು ಯದುವೀರ್ ಅಫಿಡವಿಟ್‌ನಲ್ಲಿ ಸ್ಪಷ್ಟಪಡಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.