ಮೈಸೂರು, (ಏಪ್ರಿಲ್ 01): ಜ್ಯೋತಿಷಿಗಳ ಸಲಹೆಯಂತೆ ಇಂದು(ಏಪ್ರಿಲ್ 01) ಮೈಸೂರು-ಕೊಡಗು ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ (Yaduveer Krishnadatta Chamaraja Wadiyar) ಅವರು ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದ್ದಾರೆ. ತಾಯಿ ಪ್ರಮೋದಾದೇವಿ ಒಡೆಯರ್, ಶಾಸಕ ಶ್ರೀವತ್ಸ ಜತೆ ಸೇರಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಉಮೇದುವಾರಿಕೆ ಸಲ್ಲಿಸಿದರು. ಏಪ್ರಿಲ್ 3ರಂದು ಬೃಹತ್ ರ‍್ಯಾಲಿ ಮೂಲಕ ಅವರು ನಾಮಪತ್ರ ಸಲ್ಲಿಸಿದ್ದಾರೆ. ಇನ್ನು ಪರ-ವಿರೋಧದ ಚರ್ಚೆಗಳ ಮಧ್ಯೆ ರಾಜಕೀಯ ಕ್ಷೇತ್ರಕ್ಕೆ ಪ್ರವೇಶಿಸಿರುವ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಬಳಿ ಆಸ್ತಿ ಎಷ್ಟಿದೆ ಎನ್ನುವುದನ್ನು ನೋಡುವುದಾದರೆ, ಚರಾಸ್ತಿ ಮೌಲ್ಯ 4,99,59,303 ರೂಪಾಯಿ ಇದೆ. ಆದ್ರೆ, ಯದುವೀರ್ ಹೆಸರಿನಲ್ಲಿ ಯಾವುದೇ ಕೃಷಿ ಭೂಮಿ, ಸ್ವಂತ ಮನೆ ಇಲ್ಲ ಇಲ್ಲದಿರುವುದೇ ವಿಶೇಷ.
ಯದುವೀರ್ ಒಡೆಯರ್ ಚರಾಸ್ತಿ ಮೌಲ್ಯ 4,99,59,303 ರೂಪಾಯಿ ಇದ್ದು, ಸದ್ಯ ಅವರ ಬಳಿ ಕೈಯಲ್ಲಿ ಒಂದು ಲಕ್ಷ ರೂಪಾಯಿ ನಗದು ಇದೆ. ಇನ್ನು ಯದುವೀರ್ ಒಡೆಯರ್ ಅವರ 2 ಬ್ಯಾಂಕ್ ಖಾತೆಗಳಲ್ಲಿ 23.55 ಲಕ್ಷ ಹಣ ಇದೆ. ಒಂದು ಕೋಟಿ ಮೌಲ್ಯದ ವಿವಿಧ ಕಂಪನಿಗಳಲ್ಲಿ ಬಾಂಡ್ ಮತ್ತು ಶೇರ್ ಹೊಂದಿದ್ದಾರೆ. ಇನ್ನು 4 ಕೆಜಿ ಚಿನ್ನ ಮತ್ತು 20 ಕೆಜಿ ಬೆಳ್ಳಿ ಇದೆ ಎಂದು ನಾಮಪತ್ರ ಅಫಿಡೆವಿಟ್ನಲ್ಲಿ ಘೋಷಿಸಿಕೊಂಡಿದ್ದಾರೆ.
ಇನ್ನು ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮಹಾರಾಜ ಆಗಿದ್ದರೂ ಸಹ ಅವರು ಯಾವುದೇ ಕೃಷಿ ಭೂಮಿ, ಸ್ವಂತ ಮನೆ ಹೊಂದಿಲ್ಲ. ವಾಣಿಜ್ಯ ಕಟ್ಟಡಗಳಿಲ್ಲ. ಬ್ಯಾಂಕ್ನಿಂದ ಸಾಲ ಸಹ ಪಡೆದಿಲ್ಲ. ಹಾಗೇ ಯಾವುದೇ ರೀತಿಯ ಆದಾಯ ತೆರಿಗೆ ಹಣ ಬಾಕಿ ಉಳಿಸಿಕೊಂಡಿಲ್ಲ. ಇನ್ನು ಬಿಜೆಪಿ ಅಭ್ಯರ್ಥಿ ಯದುವೀರ್ ವಿರುದ್ಧ ಯಾವ ಪ್ರಕರಣ ದಾಖಲಾಗಿಲ್ಲ ಎಂದು ಯದುವೀರ್ ಅಫಿಡವಿಟ್‌ನಲ್ಲಿ ಸ್ಪಷ್ಟಪಡಿಸಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.