Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಕ್ಕಲಿಗರ ವಿರುದ್ದ ಅವಹೇಳನಕಾರಿ ಹೇಳಿಕೆ; ಪ್ರೊ.ಕೆ.ಎಸ್.ಭಗವಾನ್ ಅವರನ್ನು ಗಡಿಪಾರು ಮಾಡುವಂತೆ ಬಿಜೆಪಿ ಒತ್ತಾಯ

ಇತ್ತೀಚೆಗಷ್ಟೇ ಮೈಸೂರಿನಲ್ಲಿ ನಡೆದಿದ್ದ ಮಹಿಷ ದಸರಾ ಉತ್ಸವದಲ್ಲಿ ಪ್ರೊ.ಕೆ.ಎಸ್.ಭಗವಾನ್  ಅವರು ಒಕ್ಕಲಿಗರ ಕುರಿತು ನೀಡಿದ್ದ ಅವಹೇಳನಕಾರಿ ಹೇಳಿಕೆ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ಇದೀಗ ಪ್ರೊ.ಕೆ.ಎಸ್.ಭಗವಾನ್ (K.S Bhagawan) ಅವರನ್ನು ಗಡಿಪಾರು ಮಾಡುವಂತೆ ಬಿಜೆಪಿ(BJP) ಒತ್ತಾಯಿಸಿ ಪತ್ರಿಕಾ ಪ್ರಕಟಣೆ ಹೊರಡಿಸಿದೆ.

ಒಕ್ಕಲಿಗರ ವಿರುದ್ದ ಅವಹೇಳನಕಾರಿ ಹೇಳಿಕೆ; ಪ್ರೊ.ಕೆ.ಎಸ್.ಭಗವಾನ್ ಅವರನ್ನು ಗಡಿಪಾರು ಮಾಡುವಂತೆ ಬಿಜೆಪಿ ಒತ್ತಾಯ
ಪ್ರೊ.ಭಗವಾನ್ ಅವಹೇಳನಕಾರಿ ಹೇಳಿಕೆಗೆ ಬಿಜೆಪಿಯಿಂದ ಗಡಿಪಾರಿಗೆ ಒತ್ತಾಯ
Follow us
ರಾಮ್​, ಮೈಸೂರು
| Updated By: ಕಿರಣ್ ಹನುಮಂತ್​ ಮಾದಾರ್

Updated on: Oct 19, 2023 | 3:32 PM

ಮೈಸೂರು, ಅ.19: ಒಕ್ಕಲಿಗರ ವಿರುದ್ದ ಅವಹೇಳನಕಾರಿ ಹೇಳಿಕೆ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ಪ್ರೊ.ಕೆ.ಎಸ್.ಭಗವಾನ್ (K.S Bhagawan) ಅವರನ್ನು ಗಡಿಪಾರು ಮಾಡುವಂತೆ ಬಿಜೆಪಿ(BJP) ಒತ್ತಾಯಿಸಿ ಪತ್ರಿಕಾ ಪ್ರಕಟಣೆ ಹೊರಡಿಸಿದೆ. ಭಗವಾನ್ ತಮ್ಮ ಹೇಳಿಕೆಯಿಂದ ಜಾತಿ ಹಾಗೂ ಧರ್ಮಗಳ ಮಧ್ಯೆ ವೈಷಮ್ಯ ಮೂಡಿಸುತ್ತಿದ್ದಾರೆ. ಈ ಹಿನ್ನಲೆ ಗಡಿಪಾರು ಮಾಡಬೇಕು, ಜೊತೆಗೆ ಅವರಿಗೆ ನೀಡಿರುವ ಪೊಲೀಸ್ ಭದ್ರತೆಯನ್ನು ಕೂಡ ವಾಪಸ್ಸು ಪಡೆಯಬೇಕು. ಇದರಿಂದ 1.5 ಲಕ್ಷ ತೆರಿಗೆ ಹಣ ಉಳಿಯುತ್ತದೆ ಎಂದು ಒತ್ತಾಯಿಸಿದ್ದಾರೆ.

ಹೌದು, ಇತ್ತೀಚೆಗಷ್ಟೇ ಮೈಸೂರಿನಲ್ಲಿ ನಡೆದಿದ್ದ ಮಹಿಷ ದಸರಾ ಉತ್ಸವದಲ್ಲಿ ಪ್ರೊ.ಕೆ.ಎಸ್.ಭಗವಾನ್  ಅವರು ಒಕ್ಕಲಿಗರ ಕುರಿತು ನೀಡಿದ್ದ ಅವಹೇಳನಕಾರಿ ಹೇಳಿಕೆ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ಈ ಕುರಿತು ಮಂಡ್ಯದಲ್ಲಿ ನಿನ್ನೆಯಷ್ಟೇ (ಅ.18) ಭಗವಾನ್​ ವಿರುದ್ಧ ಮಂಡ್ಯ ಬಿಜೆಪಿ ಕಾರ್ಯಕರ್ತರು ಸೇರಿ ಮಂಡ್ಯ ಅಡಿಷನಲ್​ ಎಸ್​ಪಿ ತಿಮ್ಮಯ್ಯ ಎಂಬುವವರಿಗೆ ದೂರು ನೀಡಿದ್ದರು. ಇದರ ಬೆನ್ನಲ್ಲೇ ಇದೀಗ ಮೈಸೂರಿನಲ್ಲಿ ಗಡಿಪಾರಿಗೆ ಒತ್ತಾಯಿಸಿ ಬಜೆಪಿ ಕಾರ್ಯಕರ್ತರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ:ಸ್ವಾಭಿಮಾನಿ ಒಕ್ಕಲಿಗರ ಆತ್ಮಾಭಿಮಾನ ಕೆಣಕಿ ಬಹುದೊಡ್ಡ ತಪ್ಪು ಮಾಡಿದೆ: ಬಿಜೆಪಿ ವಿರುದ್ಧವೇ ಉರಿಗೌಡ-ನಂಜೇಗೌಡ ಬಾಣ ಬಿಟ್ಟ ಕುಮಾರಸ್ವಾಮಿ

ಪ್ರೊ.ಭಗವಾನ್ ಹೇಳಿದ್ದೇನು?

ಇನ್ನು ತೀವ್ರ ವಿರೋಧದ ನಡುವೆಯೇ ಮಹಿಷ ಉತ್ಸವ ನೆರವೇರಿತ್ತು. ಈ ಕಾರ್ಯಕ್ರಮದಲ್ಲಿ ಮಾತನಾಡುತ್ತಾ ಪ್ರೊ.ಕೆಎಸ್​ ಭಗವಾನ್ ಅವರು ‘ಅಗ್ನಿ ಪೂಜೆಯನ್ನು ಯಾಕೆ ಮಾಡುತ್ತಾರೆ. ಅದರಲ್ಲಿ ಏನು ಪ್ರಯೋಜನ ಇಲ್ಲ ಎಂದು ಬುದ್ಧ ತಿಳಿಸಿದ್ದರು. ಹೀಗಾಗಿ ರಾಜ ಮಹಾರಾಜರು ಅಗ್ನಿ ಪೂಜೆಯನ್ನು‌ ನಿಲ್ಲಿಸಿದರು. ಇದಕ್ಕಾಗಿ‌ ಬುದ್ಧರನ್ನು ಕಂಡರೆ ಬ್ರಾಹ್ಮಣರಿಗೆ ಕೋಪ. ಈಗಲೂ ಬ್ರಾಹ್ಮಣರು ಬುದ್ಧರ ಮೇಲೆ ಕೋಪವಿದೆ. ಬುದ್ಧರಿಗೆ ಜ್ಞಾನೋದಯವಾಗಿದ್ದು ಅರಳಿ ಮರದ ಕೆಳಗೆ, ಹೀಗಾಗಿ ಅವರು ಹೋಮ ಮಾಡುವಾಗ ಬೆಂಕಿಗೆ ಅರಳಿ ಮರದ ಚಕ್ಕೆ ಹಾಕುತ್ತಾರೆ. ಬುದ್ಧರ ಮೇಲಿನ ಕೋಪಕ್ಕೆ ಅರಳಿ ಮರದ ಚಕ್ಕೆಯನ್ನು ಬೆಂಕಿಗೆ ಹಾಕುತ್ತಾರೆ. ಬ್ರಾಹ್ಮಣರ ಸಂಪ್ರದಾಯಗಳು ಗೊಡ್ಡು ಸಂಪ್ರದಾಯಗಳು. ಅವರ ಸಂಪ್ರದಾಯಕ್ಕೆ ಅರ್ಥ ಇಲ್ಲ ಎಂದು ಹರಿಹಾಯ್ದಿದ್ದರು. ಜೊತೆಗೆ 2 ಸಾವಿರ ವರ್ಷದಿಂದ ಇವರು ಬೇರೆ ಅವರಿಗೆ ಸಂಸ್ಕೃತ ಕಲಿಸಲಿಲ್ಲ. ಎಲ್ಲಾ ಶೂದ್ರರು ಬ್ರಾಹ್ಮಣರ ಗುಲಾಮರು. ಶೂದ್ರನನ್ನು ದೇವರು ಸೃಷ್ಠಿ ಮಾಡಿರುವುದೆ ಬ್ರಾಹ್ಮಣರ ಸೇವೆ ಮಾಡಲು ಎಂದು‌ ತಿಳಿಸಿದಿದ್ದಾರೆ. ಇದೇ ವೇಳೆ ಒಕ್ಕಲಿಗರು ಸಂಸ್ಕೃತಿ ಹೀನರು‌. ಈ ಮಾತು ನನ್ನದು ಅಲ್ಲ‌ ಕುವೆಂಪು ಅವರದ್ದು. ನಾನು ಹೇಳಿದ್ರೆ ನನ್ನ ಹೊಡೆಯುವುದಕ್ಕೆ ಬರುತ್ತಾರೆ. ನಿಜ ಹೇಳಿದವರನ್ನು ಯಾರು ಬಿಡಲ್ಲ. ಆದರೇ ನಿಜ ಹೇಳಿಯೇ ಸಾಯಬೇಕು ಎಂದು ಹೇಳಿದ್ದರು. ಅವರ ಈ ಹೇಳಿಕೆಯಿಂದ ದಸರಾ ಕವಿಗೋಷ್ಠಿಯಿಂದ ಕೈ ಬೀಡಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ