AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಸ್ಲಿಮರಿಂದ ಪೆಟ್ರೋಲ್ ಬಾಂಬ್, ತಲ್ವಾರ್ ಕಿತ್ತುಕೊಳ್ಳದಿದ್ದರೆ ನಾವು ಹಿಡಿಯಬೇಕಾಗುತ್ತೆ: ಪ್ರತಾಪ್ ಸಿಂಹ

ಮಂಡ್ಯ ನಾಗಮಂಗಲದಲ್ಲಿ ಸಂಭವಿಸಿದ ಕೋಮು ಗಲಭೆ ಬಗ್ಗೆ ಬಿಜೆಪಿ ನಾಯಕರು ಒಬ್ಬರಾದ ಮೇಲೊಬ್ಬರಂತೆ ರಾಜ್ಯ ಸರ್ಕಾರದ ವಿರುದ್ಧ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಇದೀಗ ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ಇನ್ನೂ ಒಂದು ಹೆಜ್ಜೆ ಮುಂದಿಟ್ಟಿದ್ದು, ಮುಸ್ಲಿಮರಿಂದ ಪೆಟ್ರೋಲ್ ಬಾಂಬ್, ತಲ್ವಾರ್ ಕಿತ್ತುಕೊಳ್ಳದಿದ್ದರೆ ಗಣೇಶ ಮೆರವಣಿಗೆ ವೇಳೆ ನಾವೇ ಅದನ್ನು ಹಿಡಿಯಬೇಕಾಗುತ್ತದೆ ಎಂದಿದ್ದಾರೆ.

ಮುಸ್ಲಿಮರಿಂದ ಪೆಟ್ರೋಲ್ ಬಾಂಬ್, ತಲ್ವಾರ್ ಕಿತ್ತುಕೊಳ್ಳದಿದ್ದರೆ ನಾವು ಹಿಡಿಯಬೇಕಾಗುತ್ತೆ: ಪ್ರತಾಪ್ ಸಿಂಹ
ಪ್ರತಾಪ್ ಸಿಂಹImage Credit source: Facebook
ರಾಮ್​, ಮೈಸೂರು
| Edited By: |

Updated on:Sep 13, 2024 | 10:20 AM

Share

ಮೈಸೂರು, ಸೆಪ್ಟೆಂಬರ್ 13: ಮುಸ್ಲಿಮರ ಬಳಿ ಇರುವ ಪೆಟ್ರೋಲ್ ಬಾಂಬ್, ತಲ್ವಾರ್ ಕಿತ್ತುಕೊಳ್ಳಬೇಕು. ಇಲ್ಲದಿದ್ದರೆ ನಾವು ಪೆಟ್ರೋಲ್ ಬಾಂಬ್, ತಲ್ವಾರ್ ಹಿಡಿಯಬೇಕಾಗುತ್ತದೆ. ಗಣೇಶ ಮೆರವಣಿಗೆ ವೇಳೆ ಪೆಟ್ರೋಲ್ ಬಾಂಬ್, ತಲ್ವಾರ್ ಹಿಡಿಯಬೇಕಾಗುತ್ತದೆ ಎಂದು ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ ನೀಡಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಕಾನೂನು ಸುವ್ಯವಸ್ಥೆ ಹದಗೆಟ್ಟರೆ ಅದಕ್ಕೆ ಸರ್ಕಾರವೇ ನೇರ ಹೊಣೆಯಾಗಲಿದೆ ಎಂದರು.

ಬೇರೆ ಜಿಲ್ಲೆಗಳಲ್ಲಿ ಅದ್ದೂರಿಯಾಗಿ ಗಣೇಶ ಮೆರವಣಿಗೆಗಳು ನಡೆಯುತ್ತವೆ. ಅಷ್ಟರೊಳಗೆ ಸರ್ಕಾರ ಮುಸ್ಲಿಂ ಪುಂಡರ ಮೇಲೆ ನಿಯಂತ್ರಣ ಹೇರಬೇಕು. ನಿಯಂತ್ರಣ ಹೇರದಿದ್ದರೆ ನಮ್ಮ ರಕ್ಷಣೆ ಜವಾಬ್ದಾರಿ ನಮಗೆ ಗೊತ್ತಿದೆ ಎಂದು ಪ್ರತಾಪ್ ಸಿಂಹ ಎಚ್ಚರಿಕೆ ನೀಡಿದ್ದಾರೆ.

ಮಂಡ್ಯದ ನಾಗಮಂಗಲದಲ್ಲಿ ಗಣೇಶೋತ್ಸವ ಮೆರವಣಿಗೆ ಮೇಲೆ ನಡೆದ ಕಲ್ಲು ತೂರಾಟ ಹಾಗೂ ನಂತರದ ಗಲಭೆಯ ಬೆನ್ನಲ್ಲೇ ಪ್ರತಾಪ್ ಸಿಂಹ ಈ ಹೇಳಿಕೆ ನೀಡಿದ್ದಾರೆ.

ಸಿದ್ದರಾಮಯ್ಯ ತಲೆದಂಡ ಖಚಿತ: ಪ್ರತಾಪ್ ಸಿಂಹ

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ತಲೆದಂಡ ಖಚಿತ ಎಂದು ಪ್ರತಾಪ್ ಸಿಂಹ ಅಭಿಪ್ರಾಯಪಟ್ಟಿದ್ದಾರೆ. ಮುಡಾ ಹಗರಣ ವಿಚಾರ ಕೋರ್ಟ್‌ನಲ್ಲಿದೆ. ಆ ಕೇಸ್ ವಿಚಾರ ಏನೇ ಆಗಲಿ ಅದು ಬೇರೆ ವಿಚಾರ. ಆದರೆ, ವಾಲ್ಮೀಕಿ ಹಗರಣದಲ್ಲಿ ಸಿಎಂ ತಲೆದಂಡ ನಿಶ್ಚಿತ. ಅರ್ಥಿಕ ಹಗರಣ ಆದಾಗ ಅದಕ್ಕೆ ಅರ್ಥಿಕ ಸಚಿವರೇ ಹೊಣೆಗಾರರು. ಸಿಎಂ ಅವರೇ 88 ಕೋಟಿ ರೂಪಾಯಿ ಅವ್ಯವಹಾರ ಆಗಿರುವುದನ್ನು ಒಪ್ಪಿಕೊಂಡಿದ್ದಾರೆ ಎಂದು ಅವರು ಹೇಳಿದರು.

ವಾಲ್ಮೀಕಿ ನಿಗಮದ ದುಡ್ಡಲ್ಲಿ ಬಳ್ಳಾರಿ ಲೋಕಸಭಾ ಚುನಾವಣೆ ಮಾಡಲಾಗಿದೆ. ಆ ಹಣವನ್ನು ಮದ್ಯ ಖರೀದಿಗೆ ಬಳಸಿರುವುದು ಸಾಬೀತಾಗಿದೆ. ಹೀಗಾಗಿ ಸಿದ್ದರಾಮಯ್ಯ ರಾಜೀನಾಮೆ ನಿಶ್ಚಿತ ಎಂದು ಪ್ರತಾಪ್ ಸಿಂಹ ಹೇಳಿದರು.

ಇದನ್ನೂ ಓದಿ: ನಾಗಮಂಗಲ ದಳ್ಳುರಿ, ಸಿಸಿಟಿವಿ ದೃಶ್ಯ ಆಧರಿಸಿ 97 ಆರೋಪಿಗಳಿಗಾಗಿ ಪೊಲೀಸರ ಹುಡುಕಾಟ

ಮುಡಾ ವಿಚಾರದಲ್ಲಿ ನಾನು ಮೊದಲೇ ಸೈಟ್ ವಾಪಾಸ್ ಕೊಡಿ ಎಂದು ಹೇಳಿದ್ದೆ. ನನ್ನ ಕಾಳಜಿಯುತ ಸಲಹೆಯನ್ನು ಸಿಎಂ ಕೇಳಲಿಲ್ಲ. ಈಗ ಈ ವಿಚಾರವಾಗಿ ಮುಂಚಿತವಾಗಿಯೇ ರಾಜೀನಾಮೆ ಕೊಡಿ ಅಂದರೆ ನನ್ನಂತಹ ಸಣ್ಣವನ ಮಾತು ಅವರು ಕೇಳುತ್ತಾರಾ ಎಂದು ಅವರು ಪ್ರಶ್ನಿಸಿದರು.

ಮಹಿಷಾ ದಸರಾಗೆ ವಿರೋಧ

ನಾನು ಸಂಸದನಾಗಿದ್ದರೂ ಅಷ್ಟೇ ಆಗಿಲ್ಲದಿದ್ದರೂ ಅಷ್ಟೆಮ ತಾಯಿ ಚಾಮುಂಡಿಗೆ ಅವಮಾನವಾಗುವುದಕ್ಕೆ ಬಿಡುವುದಿಲ್ಲ. ಬೆಟ್ಟದಲ್ಲಿ ಮಹಿಷಾ ದಸರಾ ನಡೆಸಲು ಬಿಡುವುದಿಲ್ಲ. ಯಾರ ನಿಲುವುಗಳು ಏನೇ ಇರಲಿ. ನನ್ನ ನಿಲುವು ಮಾತ್ರ ಯಾವತ್ತಿಗೂ ಒಂದೇ. ಮಹಿಷಾ ದಸರಾ ನಡೆಸುವವರು ಅವರ ಮನೆಗಳಲ್ಲಿ ನಡೆಸಲಿ. ‘ನಮಗೆ ಮಹಿಷನಂಥ ಮಕ್ಕಳೇ’ ಹುಟ್ಟಲ್ಲಿ ಎಂದು ದಿನವೂ ಪೂಜೆ ಮಾಡಲಿ. ಅದಕ್ಕೆ ನಮದೇನು ವಿರೋಧ ಇಲ್ಲ ಎಂದು ಪ್ರತಾಪ್ ಸಿಂಹ ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:20 am, Fri, 13 September 24

ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ