AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ಬಿಜೆಪಿಗೆ ಮೇಯರ್ ಸ್ಥಾನ ಬಿಟ್ಟುಕೊಟ್ಟರೆ ಜೆಡಿಎಸ್​ ಜೊತೆಗೆ ಮೈತ್ರಿ: ಬಿಜೆಪಿ ಅಧ್ಯಕ್ಷ ಶ್ರೀವತ್ಸ

Mysuru: ಜೆಡಿಎಸ್ ಜೊತೆಗೆ ಮೈತ್ರಿ ಮಾಡಿಕೊಳ್ಳಲು ಬಿಜೆಪಿ ಒಲವು ತೋರಿಸಿದೆ. ಅಷ್ಟೇ ಅಲ್ಲದೆ, ನಾಳೆ (ಆಗಸ್ಟ್ 19) ಬಿಜೆಪಿ ರಾಜ್ಯಾಧ್ಯಕ್ಷರು ಹಾಗೂ ಹೆಚ್ ಡಿ ಕುಮಾರಸ್ವಾಮಿ ಅವರೊಂದಿಗೆ ಮಾತುಕತೆ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಮೈಸೂರು: ಬಿಜೆಪಿಗೆ ಮೇಯರ್ ಸ್ಥಾನ ಬಿಟ್ಟುಕೊಟ್ಟರೆ ಜೆಡಿಎಸ್​ ಜೊತೆಗೆ ಮೈತ್ರಿ: ಬಿಜೆಪಿ ಅಧ್ಯಕ್ಷ ಶ್ರೀವತ್ಸ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Aug 18, 2021 | 2:48 PM

Share

ಮೈಸೂರು: ನಗರ ಪಾಲಿಕೆ ಮೇಯರ್ ಚುನಾವಣೆ ವಿಚಾರವಾಗಿ ಮೈಸೂರು ನಗರ ಬಿಜೆಪಿ ಅಧ್ಯಕ್ಷ ಶ್ರೀವತ್ಸ ಬುಧವಾರ (ಆಗಸ್ಟ್ 18) ಹೇಳಿಕೆ ನೀಡಿದ್ದಾರೆ. ಬಿಜೆಪಿಗೆ ಮೇಯರ್ ಸ್ಥಾನ ಬಿಟ್ಟುಕೊಟ್ಟರೆ, ಬಿಜೆಪಿಯು ಜೆಡಿಎಸ್ ಪಕ್ಷದ ಜೊತೆ ಮೈತ್ರಿ ಮಾಡಿಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ. ಈ ಬಾರಿ ನಮಗೆ ಪೂರಕ ವಾತಾವರಣವಿದೆ ಎಂದು ಬಿಜೆಪಿ ಸ್ಥಿತಿಗತಿ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿರುವ ಅವರು ಜೆಡಿಎಸ್ ಜತೆ ಮೈತ್ರಿ ಮಾಡಿಕೊಳ್ಳಲು ತಯಾರಿರುವುದಾಗಿ ಹೇಳಿದ್ದಾರೆ. ಆದರೆ, ಮೇಯರ್ ಸ್ಥಾನ ಬಿಜೆಪಿಗೆ ಬಿಟ್ಟುಕೊಡಬೇಕು ಎಂಬ ಷರತ್ತನ್ನು ಕೂಡ ವಿಧಿಸಿದ್ದಾರೆ. ಈ ಮೂಲಕ, ಬಿಜೆಪಿ ಜೆಡಿಎಸ್​ ಪಕ್ಷವನ್ನು ಮೈತ್ರಿಗೆ ಆಹ್ವಾನಿಸಿದೆ.

ಜೆಡಿಎಸ್ ಜೊತೆಗೆ ಮೈತ್ರಿ ಮಾಡಿಕೊಳ್ಳಲು ಬಿಜೆಪಿ ಒಲವು ತೋರಿಸಿದೆ. ಅಷ್ಟೇ ಅಲ್ಲದೆ, ನಾಳೆ (ಆಗಸ್ಟ್ 19) ಬಿಜೆಪಿ ರಾಜ್ಯಾಧ್ಯಕ್ಷರು ಹಾಗೂ ಹೆಚ್ ಡಿ ಕುಮಾರಸ್ವಾಮಿ ಅವರೊಂದಿಗೆ ಮಾತುಕತೆ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಬಿಜೆಪಿಗೆ ಮೇಯರ್ ಸ್ಥಾನ ನೀಡಿದರೆ ಮಾತ್ರ ಜೆಡಿಎಸ್ ಜೊತೆಗೆ ಮೈತ್ರಿ ಮಾಡಿಕೊಳ್ಳುತ್ತೇವೆ ಎಂದು ಮೈಸೂರು ನಗರ ಬಿಜೆಪಿ ಅಧ್ಯಕ್ಷ ಶ್ರೀವತ್ಸ ಹೇಳಿದ್ದಾರೆ.

23 ಸ್ಥಾನಗಳೊಂದಿಗೆ ಅತಿ ಹೆಚ್ಚು ಸದಸ್ಯರು ನಮ್ಮ ಪಕ್ಷದಲ್ಲಿ ಇರುವ ಕಾರಣ ನಾವು ಮೇಯರ್ ಹುದ್ದೆ ಕೇಳುತ್ತಿದ್ದೇವೆ. ಈ ಬಾರಿ ನಮಗೆ ಪೂರಕ ವಾತಾವರಣವಿದೆ. ಕಳೆದ ಬಾರಿ ಮೇಯರ್ ಆಕಾಂಕ್ಷಿಯಾಗಿದ್ದ ಸುನಂದಾ ಪಾಲನೇತ್ರ ಅವರನ್ನೇ ಕಣಕ್ಕಿಳಿಸುತ್ತೇವೆ. ಸುನಂದಾ ಪಾಲನೇತ್ರ ಜೊತೆಗೆ ಪ್ರಮೀಳಾ ಭರತ್ ಸಹ ಇದ್ದಾರೆ ಎಂದು ಬಿಜೆಪಿ ನಗರಾಧ್ಯಕ್ಷ ಶ್ರೀವತ್ಸ ತಿಳಿಸಿದ್ದಾರೆ.

ಆಗಸ್ಟ್ 25 ರಂದು ಚುನಾವಣೆ ಜೂನ್ 11 ರಂದು  ನಡೆಯಬೇಕಿದ್ದ ಮೈಸೂರು ಮಹಾನಗರ ಪಾಲಿಕೆ ಮೇಯರ್​ ಚುನಾವಣೆಗೆ ಕರ್ನಾಟಕ ಹೈಕೋರ್ಟ್ ತಡೆ ಒಡ್ಡಿತ್ತು. ಕೊವಿಡ್-19 ಮಾರ್ಗಸೂಚಿ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್​ನ ಪಾಲಿಕೆ ಸದಸ್ಯ ಪ್ರದೀಪ್ ಚಂದ್ರ  ಅರ್ಜಿ ಸಲ್ಲಿಸಿದ್ದರು. ಜೂನ್ 21ರವರೆಗೆ ಪಾಲಿಕೆ ಮೇಯರ್​ ಚುನಾವಣೆ ಸೂಕ್ತವಲ್ಲ. ಬಳಿಕ ಪರಿಸ್ಥಿತಿ ಪರಾಮರ್ಶಿಸಿ ಚುನಾವಣೆ ದಿನಾಂಕ ನಿಗದಿಪಡಿಸಿ ಎಂದು ಹೈಕೋರ್ಟ್ ಏಕಸದಸ್ಯ ಪೀಠ ಮಧ್ಯಂತರ ಆದೇಶ ನೀಡಿತ್ತು.

ಮೈಸೂರಿನಲ್ಲಿ ಕೊವಿಡ್ ಸೋಂಕು ಹೆಚ್ಚಿರುವ ಹಿನ್ನೆಲೆಯಲ್ಲಿ ಪ್ರಾಕೃತಿಕ ವಿಕೋಪ ಕಾಯ್ದೆ ಅಡಿಯೂ ನಿರ್ಬಂಧವಿದೆ. ಚುನಾವಣೆ ನಡೆಸಿದರೆ ಪಾಲಿಕೆ ಸದಸ್ಯರು ಹಾಗೂ ಬೆಂಬಲಿಗರು ಒಂದೆಡೆ ಸೇರುತ್ತಾರೆ. ಹೀಗಾಗಿ ಚುನಾವಣೆಗೆ ತಡೆ ನೀಡುವಂತೆ ಅರ್ಜಿದಾರರ ಪರ ಎಲ್.ಎಂ.ಚಿದಾನಂದಯ್ಯ ಮನವಿ ಮಾಡಿದ್ದರು. ಈ ವಾದವನ್ನಾಲಿಸಿದ ಹೈಕೋರ್ಟ್​ ಜೂನ್ 21ರವರೆಗೆ ಪಾಲಿಕೆ ಮೇಯರ್​ ಚುನಾವಣೆ ಸೂಕ್ತವಲ್ಲ. ಬಳಿಕ ಪರಿಸ್ಥಿತಿ ಪರಾಮರ್ಶಿಸಿ ಚುನಾವಣೆ ದಿನಾಂಕ ನಿಗದಿಪಡಿಸಿ ಎಂದು ಹೈಕೋರ್ಟ್ ಏಕಸದಸ್ಯ ಪೀಠ ಮಧ್ಯಂತರ ಆದೇಶ ನೀಡಿತ್ತು.

ಇದೀಗ, ಮೇಯರ್ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದೆ. ಆಗಸ್ಟ್ 25ರಂದು ಮೈಸೂರು ಮೇಯರ್ ಚುನಾವಣೆ ನಡೆಯಲಿದೆ ಎಂದು ಪ್ರಾದೇಶಿಕ ಆಯುಕ್ತರ ಕಚೇರಿಯಿಂದ ಮಾಹಿತಿ ಸಿಕ್ಕಿದೆ.

ಇದನ್ನೂ ಓದಿ: ಮೈಸೂರು ಮೇಯರ್ ಆಯ್ಕೆ: ಕಾಂಗ್ರೆಸ್​​ನಲ್ಲಿ ಬಗೆಹರಿಯದ ಬಿಕ್ಕಟ್ಟು, ನಾನೇನೂ ತಪ್ಪು ಮಾಡಿಲ್ಲ ಎಂದ ತನ್ವೀರ್​ ಸೇಠ್​

ಮೈಸೂರು ವಿವಿಯಲ್ಲಿ ಇದ್ದಾರೆ 92 ಅಫ್ಘಾನಿಸ್ತಾನ ವಿದ್ಯಾರ್ಥಿಗಳು, ಅವರೆಲ್ಲ ನಿರ್ಭೀತಿಯಿಂದ ಇದ್ದಾರೆ: ಮೈಸೂರು ವಿವಿ ಕುಲಪತಿ

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ