ಕಾಂಗ್ರೆಸ್ ಶಾಸಕರ ಖರೀದಿಗೆ ಬಿಜೆಪಿ ಯತ್ನಿಸುತ್ತಿದೆ, 50 ಕೋಟಿ ರೂ. ಆಮಿಷ: ಸಿಎಂ ಸಿದ್ದರಾಮಯ್ಯ
ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ಗೆ 136 ಸ್ಥಾನವಿದ್ದರೂ ಸರ್ಕಾರ ಅಲುಗಾಡಿಲು ಬಿಜೆಪಿ ಯತ್ನಿಸಿದೆ. ಕಾಂಗ್ರೆಸ್ ಶಾಸಕರ ಖರೀದಿಗೆ ಭಾರತೀಯ ಜನತಾ ಪಕ್ಷ ಯತ್ನಿಸುತ್ತಿದೆ. ಕಾಂಗ್ರೆಸ್ನ ಒಬ್ಬೊಬ್ಬ ಶಾಸಕರಿಗೆ ಬಿಜೆಪಿ 50 ಕೋಟಿ ರೂ. ಆಮಿಷ ಒಡ್ಡಲಾಗಿದೆ. ಬಿಜೆಪಿಯ 50 ಕೋಟಿ ರೂ. ಆಮಿಷಕ್ಕೆ ಕಾಂಗ್ರೆಸ್ ಶಾಸಕರು ಬಗ್ಗಿಲ್ಲ ಎಂದಿದ್ದಾರೆ.
ಮೈಸೂರು, ಮಾರ್ಚ್ 1: ಕಾಂಗ್ರೆಸ್ ಶಾಸಕರ ಖರೀದಿಗೆ ಭಾರತೀಯ ಜನತಾ ಪಕ್ಷ ಯತ್ನಿಸುತ್ತಿದೆ. ಕಾಂಗ್ರೆಸ್ನ ಒಬ್ಬೊಬ್ಬ ಶಾಸಕರಿಗೆ ಬಿಜೆಪಿ 50 ಕೋಟಿ ರೂ. ಆಮಿಷ ನೀಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಸ್ಫೋಟಕ ಹೇಳಿಕೆ ನೀಡಿದ್ದಾರೆ. ಇಂದಿನಿಂದ ಎರಡು ದಿನಗಳ ಕಾಲ ಮೈಸೂರು ಜಿಲ್ಲಾ ಪ್ರವಾಸದಲ್ಲಿರುವ ಸಿಎಂ ಮಾಧ್ಯಮದವರೊಂದಿಗೆ ಮಾತನಾಡಿ, ಬಿಜೆಪಿಯ 50 ಕೋಟಿ ರೂ. ಆಮಿಷಕ್ಕೆ ಕಾಂಗ್ರೆಸ್ ಶಾಸಕರು ಬಗ್ಗಿಲ್ಲ. ಸರ್ಕಾರ ಬೀಳಿಸುವುದು ಬಿಜೆಪಿಯವರಿಗೆ ಅಭ್ಯಾಸವಾಗಿ ಹೋಗಿದೆ. ಬಿಜೆಪಿಯವರು ನೇರವಾಗಿ ಯಾವತ್ತೂ ಚುನಾವಣೆ ಮಾಡಿಯೇ ಇಲ್ಲ. ದೇಶದ ಬೇರೆ ರಾಜ್ಯಗಳಲ್ಲಿ ಸರ್ಕಾರ ಅತಂತ್ರ ಮಾಡಿದಂತೆ ಪ್ರಯತ್ನ ಮಾಡುತ್ತಿದೆ. ರಾಜ್ಯದಲ್ಲಿ ನಮ್ಮ ಸರ್ಕಾರ ಅಲುಗಾಡಿಸಲು ಬಿಜೆಪಿ ಯತ್ನಿಸಿರುವುದು ಸತ್ಯ ಎಂದು ಹೇಳಿದ್ದಾರೆ.
ಅಲ್ಲಲ್ಲಿ ಟಿಕೆಟ್ ಸಮಸ್ಯೆಯ ನಡುವೆಯೂ, ಬಿಜೆಪಿ ನಾಯಕರು ಲೋಕಸಭಾ ಚುನಾವಣೆಗೆ ಭರದ ಸಿದ್ಧತೆ ನಡೆಸ್ತಿದ್ದಾರೆ. ನಿನ್ನೆ ಸಂಜೆ ರಾಜ್ಯ ಬಿಜೆಪಿ ಕಚೇರಿಯಲ್ಲಿ ಕ್ಷೇತ್ರವಾರು ಮುಖಂಡರ ಸಭೆ ನಡೆಸಲಾಗಿದೆ. ಹೆಚ್ಚು ಆಕಾಂಕ್ಷಿಗಳಿರುವ, ಅಭ್ಯರ್ಥಿ ಆಯ್ಕೆ ಸಂಭಾವ್ಯ ಕಗ್ಗಂಟು ಇರುವಂತಹ ಕ್ಷೇತ್ರಗಳ ಮುಖಂಡರ ಜೊತೆ ಸಭೆ ನಡೆಸಲಾಗಿದೆ. ಬಿಜೆಪಿ ರಾಜ್ಯ ಲೋಕಸಭಾ ಚುನಾವಣಾ ಉಸ್ತುವಾರಿ ರಾಧಾಮೋಹನ್ ದಾಸ್ ಅಗರವಾಲ್ ನೇತೃತ್ವದಲ್ಲಿ ಬೀದರ್, ಕೋಲಾರ, ಚಿಕ್ಕಬಳ್ಳಾಪುರ, ಉತ್ತರಕನ್ನಡ ಕ್ಷೇತ್ರಗಳ ಮುಖಂಡರ ಸಭೆ ನಡೆದಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸಹ ಉಪಸ್ಥಿತರಿದ್ದರು.
ಇದನ್ನೂ ಓದಿ: ಹಾಸನ: ಲೋಕಸಭಾ ಅಭ್ಯರ್ಥಿಗಳ ಪಟ್ಟಿ ಬಗ್ಗೆ ಸಿಎಂ ಸಿದ್ದರಾಮಯ್ಯ ಅಚ್ಚರಿಯ ಘೋಷಣೆ
ಒಂದು ವೋಟು ಒಂದು ಮೌಲ್ಯ ಇದೆ. ಇದು ರಾಜಕೀಯವಾಗಿ ಜಾರಿಯಾಗಿದೆ. ಇದು ಸಾಮಾಜಿಕ, ಆರ್ಥಿಕವಾಗಿ ಇಲ್ಲ. ರಾಜಕೀಯ ಸ್ವಾತಂತ್ರ್ಯ ಸಾರ್ಥಕ ಆಗಬೇಕಾದರೆ ಪ್ರತಿಯೊಬ್ಬರಿಗೂ ಸಾಮಾಜಿಕ, ಆರ್ಥಿಕ ಶಕ್ತಿ ಇರಬೇಕು. ಸಂವಿಧಾನದಲ್ಲಿ ಸಾಮಾನತೆ, ಸ್ವಾತಂತ್ರ್ಯ, ಬ್ರಾತೃತ್ವ ಇದೆ. ಇವು ಒಂದಕ್ಕೊಂದು ಬೆಸೆದುಕೊಂಡಿವೆ. ಸರ್ವೋದಯವಾಗಲಿ ಸರ್ವರಲಿ ಎಂದು ಕುವೆಂಪು ಹೇಳಿದ್ದಾರೆ.
ಇದನ್ನೂ ಓದಿ: ನನ್ನ ಕುರ್ಚಿಗೆ ಕೈಹಾಕಿದರೆ ಹುಷಾರ್: ಜಾತಿಗಣತಿ ವರದಿ ಸ್ವೀಕರಿಸುವ ಮೂಲಕ ಡಿಕೆಶಿಗೆ ಎಚ್ಚರಿಕೆ ನಿಡಿದ್ರಾ ಸಿದ್ದರಾಮಯ್ಯ?
ಜಾತಿ ಕಾರಣಕ್ಕೆ ಸಾಮಾಜಿಕ, ಆರ್ಥಿಕ ಅಸಮಾನತೆ ನಿರ್ಮಾಣವಾಯಿತು. ನೂರಾರು ವರ್ಷಗಳ ಕಾಲ ಮನುಸ್ಮೃತಿ ಪರಿಣಾಮ ಶೂದ್ರರು, ಮಹಿಳೆಯರು ಅಕ್ಷರ ಸಂಸ್ಕೃತಿಯಿಂದ ವಂಚಿತರಾದರು. ಬ್ರಾಹ್ಮಣ, ಕ್ಷತ್ರಿಯ, ವೈಶ್ಯರು ಕಾಯಕ ಜೀವಿಗಳಲ್ಲ. ಶೂದ್ರರಿಗೆ ಅಕ್ಷರ ಕಲಿಕೆ, ಸಂಪತ್ತು ಸಂಗ್ರಹಕ್ಕೆ ಅವಕಾಶ ಇರಲಿಲ್ಲ. ಎಲ್ಲಿಯವರೆಗೆ ಅಸಮಾನತೆ ಇರುತ್ತೆ ಅಲ್ಲಿವರೆಗೆ ಸ್ವಾತಂತ್ರ್ಯ ಸಾರ್ಥಕವಾಗಲ್ಲ. ನಮ್ಮ ಜಾತಿ ವ್ಯವಸ್ಥೆಗೆ ಚಲನೆ ಇಲ್ಲ ಎಂದು ಹೇಳಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 6:31 pm, Fri, 1 March 24