ಬಿಜೆಪಿ ಜೆಡಿಎಸ್ ಮೈತ್ರಿಯಿಂದ ನಮಗೆ ಅನುಕೂಲವಾಗುತ್ತೆ, ನಾವು 20 ಕ್ಷೇತ್ರಗಳಲ್ಲಿ ಗೆಲ್ಲುತ್ತೇವೆ -ಸಿದ್ದರಾಮಯ್ಯ
ಕಾಂಗ್ರೆಸ್ ಟಿಕೆಟ್ ಹಂಚಿಕೆಯಲ್ಲಿ ಯಾವ ಕಗ್ಗಂಟು ಆಗಿಲ್ಲ. ಎಳೆದಾಟವೂ ಆಗಿಲ್ಲ. ನಾಳೆ ಅಥವಾ ನಾಳಿದ್ದು ಉಳಿದ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗುತ್ತೆ. ಬಿಜೆಪಿ ಜೆಡಿಎಸ್ ಮೈತ್ರಿಯಿಂದ ನಮಗೆ ಅನುಕೂಲ ಆಗುತ್ತೆ. ಈ ಹಿಂದೆ ಜೆಡಿಎಸ್ ಜೊತೆ ಮೈತ್ರಿ ಆಗಿದ್ದಾಗ ಅನಾನುಕೂಲ ಆಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಮೈಸೂರು, ಮಾರ್ಚ್.24: ಲೋಕಸಭೆ ಚುನಾವಣೆಗೆ (Lok Sabha Election) ಕಾಂಗ್ರೆಸ್ ಸಾಕಷ್ಟು ಅಳೆದೂ ತೂಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡ್ತಿದೆ. ಸದ್ಯ ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನರ ಮತ್ತು ಬಳ್ಳಾರಿ ಕ್ಷೇತ್ರಗಳಿಗೆ ಯಾವುದೇ ಅಭ್ಯರ್ಥಿಗಳನ್ನು ಘೋಷಿಸದೆ ಪೆಂಡಿಂಗ್ ಉಳಿಸಿಕೊಂಡಿದೆ. ಇನ್ನು ಟಿಕೆಟ್ ಹಂಚಿಕೆ ಸಂಬಂಧ ಮಾತನಾಡಿದ ಸಿಎಂ (Siddaramaiah), ಕಾಂಗ್ರೆಸ್ ಟಿಕೆಟ್ ಹಂಚಿಕೆಯಲ್ಲಿ ಯಾವ ಕಗ್ಗಂಟು ಆಗಿಲ್ಲ. ಎಳೆದಾಟವೂ ಆಗಿಲ್ಲ. ನಾಳೆ ಅಥವಾ ನಾಳಿದ್ದು ಉಳಿದ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗುತ್ತೆ. ಇಪ್ಪತ್ತು ಕ್ಷೇತ್ರಗಳಲ್ಲಿ ನಾವು ಗೆಲ್ಲುತ್ತೇವೆ. ಬಿಜೆಪಿಯವರ ರೀತಿ ನಾವು ಸುಳ್ಳು ಹೇಳಲ್ಲ. ಅವ್ರು 28 ಕ್ಷೇತ್ರ ಗೆಲ್ಲುತ್ತೇವೆ ಅಂತಾರೆ ಅದು ಸಾಧ್ಯನಾ? ಎಂದು ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯನವರು ಬಿಜೆಪಿಗೆ ಪ್ರಶ್ನೆ ಮಾಡಿದರು.
ಬಿಜೆಪಿ ಜೆಡಿಎಸ್ ಮೈತ್ರಿಯಿಂದ ನಮಗೆ ಅನುಕೂಲ ಆಗುತ್ತೆ. ಈ ಹಿಂದೆ ಜೆಡಿಎಸ್ ಜೊತೆ ಮೈತ್ರಿ ಆಗಿದ್ದಾಗ ಅನಾನುಕೂಲ ಆಗಿದೆ. ಅದರಂತೆ ಇವರ ಮೈತ್ರಿಯೂ ಅನುಕೂಲ ಆಗಲ್ಲ. ಅವರ ಮೈತ್ರಿ ನಮಗೆ ಅನುಕೂಲ. ನಾವು ನುಡಿದಂತೆ ನಡೆದಿದ್ದೇವೆ. ಬಿಜೆಪಿಯವರಂತೆ ಸುಳ್ಳು ಹೇಳಲ್ಲ. ಬಿಜೆಪಿಯವರು 600 ಭರವಸೆಗಳಲ್ಲಿ ಶೇಕಡಾ 10% ಈಡೇರಿಸಿಲ್ಲ. ಮೋದಿಯವರು ಜನಕ್ಕೆ 15 ಲಕ್ಷ ಕೋಟ್ರಾ? ಎರಡು ಕೋಟಿ ಉದ್ಯೋಗ ಸೃಷ್ಟಿ ಮಾಡುದ್ರಾ? ರೈತರ ಆದಾಯ ಡಬಲ್ ಮಾಡುದ್ರಾ? ಎಂದು ಸಿಎಂ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿಗೆ ಸರಣಿ ಪ್ರಶ್ನೆ ಕೇಳಿದರು.
ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯ, ಜಯಪ್ರಕಾಶ್ ಹೆಗ್ಡೆ ವಿರುದ್ಧ ರಾಜ್ಯ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ ಬಿಜೆಪಿ ನಿಯೋಗ
ಇನ್ನು ಇದೇ ವೇಳೆ ಕಾಂಗ್ರೆಸ್ ಟಿಕೆಟ್ ಹಂಚಿಕೆಯಲ್ಲಿ ಕುಟುಂಬ ರಾಜಕಾರಣ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿದ ಸಿಎಂ ಕುಟುಂಬ ರಾಜಕಾರಣವನ್ನು ಸ್ಪಷ್ಟವಾಗಿ ನಿರಾಕರಿಸಿದರು. ಜನರು ಬಯಸಿದವರಿಗೆ ಟಿಕೆಟ್ ಕೊಟ್ಟಿದ್ದೇವೆ. ಇದರಲ್ಲಿ ಕುಟುಂಬ ರಾಜಕಾರಣ ಇಲ್ಲ ಎಂದರು. ಹೆಚ್ಚಿನ ಕ್ಷೇತ್ರ ಗೆಲ್ಲದಿದ್ದರೆ ಸಿದ್ದರಾಮಯ್ಯನವರು ರಾಜೀನಾಮೆ ಕೊಡಬೇಕಾಗಬಹುದು ಎಂಬ ಗುಬ್ಬಿ ಶ್ರೀನಿವಾಸ್ ಹೇಳಿಕೆ ಸಂಬಂಧ ಸಿದ್ದರಾಮಯ್ಯನವರು ಮಾಧ್ಯಮದ ವಿರುದ್ಧ ಕಿಡಿಕಾರಿದ್ದಾರೆ. ಗುಬ್ಬಿ ಶ್ರೀನಿವಾಸ್ ಹೇಳಿಕೆಯಲ್ಲಿ ಹಿಂದೆ ಮುಂದೆ ಬಿಟ್ಟುಬಿಡ್ತೀರಾ. ಅವರ ಪೂರ್ಣ ಅರ್ಥದ ಮಾತು ತೋರಿಸಲ್ಲ. ಅವರು ಹೇಳಿರೋದು ಸಿದ್ದರಾಮಯ್ಯ ಬಡವರ ಪರ ಕೆಲಸ ಮಾಡಿದ್ದಾರೆ. ಜನ ಅವರನ್ನ ಬೆಂಬಲಿಸಬೇಕು. ಇದನ್ನ ಬಿಟ್ಟು ಬೇರೆ ಏನು ಹೇಳಿಲ್ಲ ಎಂದರು.
ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 2:11 pm, Sun, 24 March 24