AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ-ಜೆಡಿಎಸ್ ಹಳೆ​ ಜಗಳಕ್ಕೆ ಬ್ರೇಕ್: ಕೇಸ್​ಗಳ ಹಿಂಪಡೆಯುವ ಭರವಸೆ ನೀಡಿದ ವಿಜಯೇಂದ್ರ, ಹೆಚ್​ಡಿಕೆ

ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಗೆ ಭರ್ಜರಿ ತಯಾರಿ ನಡೆಸುತ್ತಿರುವ ಬಿಜೆಪಿ-ಜೆಡಿಎಸ್ ಸಭೆಗಳನ್ನು ನಡೆಸುತ್ತಿವೆ. ಮೈಸೂರಿನಲ್ಲಿ ಮೊದಲ ಜಂಟಿ ಕೋರ್ ಕಮಿಟಿ ಸಭೆ ನಡೆದಿದ್ದು, ಈ ಸಭೆಯಲ್ಲಿ ಎರಡೂ ಪಕ್ಷಗಳ ನಡುವಿನ ಹಳೆ ಜಗಳಗಳನ್ನು ಇತ್ಯರ್ಥಗೊಳಿಸಲಾಗಿದೆ. ಅಲ್ಲದೆ, ದಾಖಲಾಗಿರುವ ಪ್ರಕರಣಗಳನ್ನು ವಾಪಸ್ ಪಡೆಯಲು ಬಗ್ಗೆ ಬಿವೈ ವಿಜಯೇಂದ್ರ ಹಾಗೂ ಹೆಚ್​ಡಿ ಕುಮಾರಸ್ವಾಮಿ ಪರಸ್ಪರ ಭರವಸೆ ನೀಡಿದ್ದಾರೆ.

ಬಿಜೆಪಿ-ಜೆಡಿಎಸ್ ಹಳೆ​ ಜಗಳಕ್ಕೆ ಬ್ರೇಕ್: ಕೇಸ್​ಗಳ ಹಿಂಪಡೆಯುವ ಭರವಸೆ ನೀಡಿದ ವಿಜಯೇಂದ್ರ, ಹೆಚ್​ಡಿಕೆ
ಬಿಜೆಪಿ-ಜೆಡಿಎಸ್ ಹಳೆ​ ಜಗಳಕ್ಕೆ ಬ್ರೇಕ್: ಕೇಸ್​ಗಳ ಹಿಂಪಡೆಯುವ ಭರವಸೆ ನೀಡಿದ ವಿಜಯೇಂದ್ರ, ಕುಮಾರಸ್ವಾಮಿ
ದಿಲೀಪ್​, ಚೌಡಹಳ್ಳಿ
| Updated By: Rakesh Nayak Manchi|

Updated on:Mar 28, 2024 | 10:20 AM

Share

ಮೈಸೂರು, ಮಾ.28: ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಯಲ್ಲಿ (Lok Sabha Elections) ಎಲ್ಲಾ 28 ಸ್ಥಾನಗಳನ್ನು ಗೆದ್ದುಕೊಳ್ಳಲು ಬಿಜೆಪಿ-ಜೆಡಿಎಸ್ (BJP-JDS) ಪಕ್ಷಗಳುಯ ಭರ್ಜರಿ ತಯಾರಿಗಳನ್ನು ನಡೆಸುತ್ತಿವೆ. ಸಭೆಗಳ ಮೂಲಕ ರಣತಂತ್ರಗಳನ್ನು ರೂಪಿಸುತ್ತಿವೆ. ಯಾವುದೇ ಭಿನ್ನಮತ ಇಲ್ಲದೆ ಒಗ್ಗಟ್ಟಿನಿಂದ ಚುನಾವಣೆ ಎದುರಿಸಲು ಸಭೆಗಳನ್ನು ನಡೆಸುತ್ತಿವೆ. ಮೈಸೂರಿನಿಂದಲೇ (Mysuru) ಜಂಟಿ ಕೋರ್ ಕಮಿಟಿ ಸಭೆ ನಡೆಸಿ ಹಳೆ ಜಗಳಗಳಿಗೆ ಇತಿಶ್ರೀ ಹಾಡಲಾಗಿದೆ. ಅಲ್ಲದೆ, ಪರಸ್ಪರ ದಾಖಲಿಸಿರುವ ಪ್ರಕರಣಗಳನ್ನು ವಾಪಸ್ ಪಡೆಯಲು ಬಗ್ಗೆ ಬಿ.ವೈ. ವಿಜಯೇಂದ್ರ (B.Y. Vijayendra) ಹಾಗೂ ಹೆಚ್.​ಡಿ. ಕುಮಾರಸ್ವಾಮಿ (H.D. Kumaraswamy) ಭರವಸೆ ನೀಡಿದ್ದಾರೆ.

ಬಿಜೆಪಿ ಜೆಡಿಎಸ್ ನಾಯಕರು ಭಾಗಿಯಾಗಿದ್ದ ಕೋರ್ ಕಮಿಟಿ ಸಭೆಯಲ್ಲಿ ಎಲ್ಲಾ ಕಾರ್ಯಕರ್ತರನ್ನು ಒಟ್ಟಿಗೆ ಕರೆದುಕೊಂಡು ಹೋಗಬೇಕು. ಬೂತ್ ಮಟ್ಟದಲ್ಲಿ ಸಮನ್ವಯತೆ ಸಾಧಿಸಬೇಕು. 28 ಕ್ಷೇತ್ರಗಳಲ್ಲಿ ಒಗ್ಗಟ್ಟಿನ ಮಂತ್ರ ಪಠಿಸಬೇಕು. ಮೋದಿ ನಾಯಕತ್ವ ಮೆಚ್ಚಿ ಜೆಡಿಎಸ್ ಬಿಜೆಪಿ ಜೊತೆ ಕೈ ಜೋಡಿಸಿದೆ. ಹೆಚ್​ಡಿ ದೇವೇಗೌಡರ ಆಶಯದಂತೆ ಮೈತ್ರಿ ಮಾಡಿಕೊಳ್ಳಲಾಗಿದೆ ಎಂದು ಉಭಯ ನಾಯಕರು ಹೇಳಿದ್ದಾರೆ.

ಎಲ್ಲೂ ಗೊಂದಲ ಆಗದಂತೆ ಮುಂದುವರಿಯಲು ಜಂಟಿ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ. ಪ್ರಚಾರ ಸಭೆ ಏನೇ ಆದರೂ ಬಿಜೆಪಿ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ಭಾಗಿಯಾಗಬೇಕು ಎಂದು ಹೆಚ್ ಡಿ ಕುಮಾರಸ್ವಾಮಿ ಹಾಗೂ ಬಿ ವಿಜಯೇಂದ್ರ ಖಡಕ್ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಚಾಮುಂಡೇಶ್ವರಿ ಸನ್ನಿದಾನದಲ್ಲಿ ಮೊದಲ ಮೈತ್ರಿ ಸಮನ್ವಯ ಸಭೆ: ಕಾಂಗ್ರೆಸ್​ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ಗೊತ್ತಾ?

ಕೋರ್ ಕಮಿಟಿ ಸಭೆಯಲ್ಲಿ ಸಮನ್ವಯದ ಪಾಠ ಮಾಡಿದ ಕುಮಾರಸ್ವಾಮಿ ಹಾಗೂ ವಿಜಯೇಂದ್ರ, ಹಳೆಯ ಕೇಸ್, ಹಳೆಯ ಜಗಳ ಅಂತ ಯಾವುದು ಇರಕೂಡದು. ರಾಜಕೀಯವಾಗಿ ಬಿಜೆಪಿಯವರು ಜೆಡಿಎಸ್ ಮೇಲೆ ಮತ್ತು ಜೆಡಿಎಸ್​ನವರು ಬಿಜೆಪಿ ಮೇಲೆ ಕೇಸ್ ಹಾಕಿಸಿದ್ದರೆ ಅದನ್ನ ತೆಗೆಸುತ್ತೇವೆ. ಆ ಕೇಸ್​ಗಳ ಪಟ್ಟಿಯಿದ್ದರೆ ನಮ್ಮ ಕೈಗೆ ಕೊಡಿ. ತುರ್ತಾಗಿ ಅದನ್ನ ತೆಗೆಸುವ ಪ್ರಯತ್ನ ಮಾಡುತ್ತೇವೆ ಎಂದಿದ್ದಾರೆ.

ಅಪರೇಷನ್ ದೋಸ್ತಿ ಆರಂಭಿಸಲು ಸೂಚನೆ

ಜೆಡಿಎಸ್​ ಮತ್ತು ಬಿಜೆಪಿಯಿಂದ ಕಾಂಗ್ರೆಸ್​ಗೆ ಹೋದವರನ್ನ ಮರಳಿ ವಾಪಸ್ ಕರೆದುಕೊಂಡು ಬನ್ನಿ ಎಂದು ಸೂಚಿಸಿದ್ದಾರೆ. ಆ ಮೂಲಕ ಅಪರೇಷನ್ ಹಸ್ತಕ್ಕೆ ಪರ್ಯಾಯವಾಗಿ ಅಪರೇಷನ್ ದೋಸ್ತಿ ಶುರುವಿಗೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ.

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಅಬ್ಬರಕ್ಕೆ ಹೆದರಬೇಡಿ. ನಾವು ನಿಮ್ಮ ಜೊತೆಯಲ್ಲಿದ್ದೇವೆ. ಅವರು ಅಬ್ಬರಿಸುವ ಕೆಲಸ ಮಾಡುತ್ತಾರೆ. ಸಿಎಂ ಮೈಸೂರಿನಲ್ಲಿದ್ದಾರೆ, ಮ್ಯಾಜಿಕ್ ಆಗುತ್ತದೆ ಅಂತ ಬಿಂಬಿಸುತ್ತಾರೆ. ಯಾವ ಮ್ಯಾಜಿಕ್​ಗಳು ನಡೆಯುವುದಿಲ್ಲ. ನಮ್ಮ ಅಭ್ಯರ್ಥಿ ಜಾತಿ ಮೀರಿದ ವ್ಯಕ್ತಿ. ಅದು ನಮಗೆ ಬಹು ದೊಡ್ಡ ಪ್ಲಸ್ ಪಾಯಿಂಟ್. ಇಂತಹ ಅವಕಾಶ ಯಾವ ಕ್ಷೇತ್ರದಲ್ಲಿಯೂ ಇರುವುದಿಲ್ಲ. ಮೈಸೂರಿನ ದೋಸ್ತಿ ಪಾಲಿಗೆ ಅಭ್ಯರ್ಥಿಯೆ ವರದಾನ. ಇದನ್ನ ಉಪಯೋಗಿಸಿಕೊಳ್ಳಿ ಎಂದು ಸೂಚನೆ ನೀಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:43 am, Thu, 28 March 24

ಹೊತ್ತಿ ಉರಿದ ಮೈಸೂರು-ಉದಯ್​ಪುರ ಪ್ಯಾಲೇಸ್ ಕ್ವೀನ್ ಎಕ್ಸ್​ಪ್ರೆಸ್​ ರೈಲು
ಹೊತ್ತಿ ಉರಿದ ಮೈಸೂರು-ಉದಯ್​ಪುರ ಪ್ಯಾಲೇಸ್ ಕ್ವೀನ್ ಎಕ್ಸ್​ಪ್ರೆಸ್​ ರೈಲು
ರಂದೀಪ್ ಸುರ್ಜೇವಾಲಾ ಭೇಟಿಯ ನಂತರ ಕೊಂಚ ಖಿನ್ನರಾಗಿರುವ ಡಿಸಿಎಂ
ರಂದೀಪ್ ಸುರ್ಜೇವಾಲಾ ಭೇಟಿಯ ನಂತರ ಕೊಂಚ ಖಿನ್ನರಾಗಿರುವ ಡಿಸಿಎಂ
ರಾಯಚೂರು: ಕಾಂಗ್ರೆಸ್ ನಾಯಕಿ ಮನೆ ರಸ್ತೆಗೇ ಇಲ್ಲ ಕಾಂಕ್ರೀಟ್ ಭಾಗ್ಯ!
ರಾಯಚೂರು: ಕಾಂಗ್ರೆಸ್ ನಾಯಕಿ ಮನೆ ರಸ್ತೆಗೇ ಇಲ್ಲ ಕಾಂಕ್ರೀಟ್ ಭಾಗ್ಯ!
ಆತ್ಮಹತ್ಯೆಗೆ ಯತ್ನ: ನದಿಯ ನಡುಗಡ್ಡೆಯಲ್ಲಿ ಸಿಲುಕಿದ್ದ ಯುವತಿ ರಕ್ಷಣೆ
ಆತ್ಮಹತ್ಯೆಗೆ ಯತ್ನ: ನದಿಯ ನಡುಗಡ್ಡೆಯಲ್ಲಿ ಸಿಲುಕಿದ್ದ ಯುವತಿ ರಕ್ಷಣೆ
ಕಳೆದ ಶುಕ್ರವಾರ ಹಲವಾರು ಸಮಸ್ಯೆಗಳನ್ನು ಭಕ್ತರು ಟಿವಿ9 ಗಮನಕ್ಕೆ ತಂದಿದ್ದರು
ಕಳೆದ ಶುಕ್ರವಾರ ಹಲವಾರು ಸಮಸ್ಯೆಗಳನ್ನು ಭಕ್ತರು ಟಿವಿ9 ಗಮನಕ್ಕೆ ತಂದಿದ್ದರು
ಮೋದಿ ಸ್ವಾಗತಕ್ಕೆಂದು ಏರ್​​ಪೋರ್ಟ್​ಗೆ ಈ ದೇಶದ ಸಚಿವ ಸಂಪುಟವೇ ಬಂದಿತ್ತು
ಮೋದಿ ಸ್ವಾಗತಕ್ಕೆಂದು ಏರ್​​ಪೋರ್ಟ್​ಗೆ ಈ ದೇಶದ ಸಚಿವ ಸಂಪುಟವೇ ಬಂದಿತ್ತು
ಪೋರ್ಟ್​ ಆಫ್​ ಸ್ಪೇನ್​​ನಲ್ಲಿ ಭೋಜ್ಪುರಿ ಗೀತೆಯೊಂದಿಗೆ ಮೋದಿಗೆ ಸ್ವಾಗತ
ಪೋರ್ಟ್​ ಆಫ್​ ಸ್ಪೇನ್​​ನಲ್ಲಿ ಭೋಜ್ಪುರಿ ಗೀತೆಯೊಂದಿಗೆ ಮೋದಿಗೆ ಸ್ವಾಗತ
ಆಷಾಢ ಶುಕ್ರವಾರ: ಮೈಸೂರು ಚಾಮುಂಡೇಶ್ವರಿ ದರ್ಶನಕ್ಕೆ ಬರುವ ಭಕ್ತರೇ ಗಮನಿಸಿ
ಆಷಾಢ ಶುಕ್ರವಾರ: ಮೈಸೂರು ಚಾಮುಂಡೇಶ್ವರಿ ದರ್ಶನಕ್ಕೆ ಬರುವ ಭಕ್ತರೇ ಗಮನಿಸಿ
ಕನ್ನಡದಲ್ಲೇ ಮಾತು ಆರಂಭಿಸಿದ ನೀರಜ್ ಚೋಪ್ರಾ ಬೆಂಗಳೂರಿನ ಬಗ್ಗೆ ಹೇಳಿದ್ದೇನು?
ಕನ್ನಡದಲ್ಲೇ ಮಾತು ಆರಂಭಿಸಿದ ನೀರಜ್ ಚೋಪ್ರಾ ಬೆಂಗಳೂರಿನ ಬಗ್ಗೆ ಹೇಳಿದ್ದೇನು?
ಪತ್ನಿಯೊಂದಿಗೆ ಚಾಮುಂಡೇಶ್ವರಿ ತಾಯಿ ದರ್ಶನ ಪಡೆದ ನಟ ದರ್ಶನ್
ಪತ್ನಿಯೊಂದಿಗೆ ಚಾಮುಂಡೇಶ್ವರಿ ತಾಯಿ ದರ್ಶನ ಪಡೆದ ನಟ ದರ್ಶನ್