ವಿಪಕ್ಷ ನಾಯಕ ಸಿದ್ದರಾಮಯ್ಯರಿಂದ ಪ್ರಚೋದನಕಾರಿ ಹೇಳಿಕೆ ಅರೋಪ: ಮೈಸೂರಿನಲ್ಲಿ ಬಿಜೆಪಿ ಮುಖಂಡನಿಂದ ಎಸ್​ಪಿಗೆ ದೂರು

| Updated By: ವಿವೇಕ ಬಿರಾದಾರ

Updated on: Aug 19, 2022 | 3:21 PM

ವಿಪಕ್ಷ ನಾಯಕ ಸಿದ್ದರಾಮಯ್ಯರಿಂದ ಪ್ರಚೋದನಕಾರಿ ಹೇಳಿಕೆ ಅರೋಪ ಬಿಜೆಪಿ ಮುಖಂಡ ತೋಟದಪ್ಪ ಬಸವರಾಜು ಎಂಬುವರು ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಶಾಸಕ ಯತೀಂದ್ರ ಸಿದ್ದರಾಮಯ್ಯ ವಿರುದ್ದ ಪತ್ರದ ಮೂಲಕ ಎಸ್​ಪಿಗೆ ದೂರು ನೀಡಿದ್ದಾರೆ. 

ವಿಪಕ್ಷ ನಾಯಕ ಸಿದ್ದರಾಮಯ್ಯರಿಂದ ಪ್ರಚೋದನಕಾರಿ ಹೇಳಿಕೆ ಅರೋಪ: ಮೈಸೂರಿನಲ್ಲಿ ಬಿಜೆಪಿ ಮುಖಂಡನಿಂದ ಎಸ್​ಪಿಗೆ ದೂರು
ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಮುಖಂಡನಿಂದ ದೂರು
Follow us on

ಮೈಸೂರು: ವಿಪಕ್ಷ ನಾಯಕ ಸಿದ್ದರಾಮಯ್ಯರಿಂದ (Siddaramaiah) ಪ್ರಚೋದನಕಾರಿ ಹೇಳಿಕೆ ಅರೋಪ ಬಿಜೆಪಿ (BJP) ಮುಖಂಡ ತೋಟದಪ್ಪ ಬಸವರಾಜು ಎಂಬುವರು ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಶಾಸಕ ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ವಿರುದ್ದ ಪತ್ರದ ಮೂಲಕ ಎಸ್​ಪಿಗೆ ದೂರು ನೀಡಿದ್ದಾರೆ.  ನಿನ್ನೆ (ಆಗಸ್ಟ 18) ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಸಿದ್ದರಾಮಯ್ಯ ಕಾರಿನ ಮೇಲೆ ಮಡಿಕೇರಿಯಲ್ಲಿ ಬಿಜೆಪಿ ಕಾರ್ಯಕರ್ತರು ಮೊಟ್ಟೆ ಎಸೆದು ಕಪ್ಪು ಬಾವುಟ ಪ್ರದರ್ಶನ ಮಾಡಿದ್ದರು.

ಇದರಿಂದ ಕೆಂಡಾಮಂಡಾಲರಾಗಿದ್ದ ಸಿದ್ದರಾಮಯ್ಯ ಕೊಡಗಿನಿಂದ ಚಿಕ್ಕಮಗಳೂರಿಗೆ ತೆರಳುವ ಮುನ್ನ ಪೊಲೀಸ್​ರ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ಕಿಡಿಕಾರಿದ್ದರು. ನಮಗೂ ಮೊಟ್ಟೆಎಸೆಯಲು ಬರಲ್ವಾ? ನಾವು ಹೋರಾಟ ಶುರು ಮಾಡಿದರೆ ಮುಖ್ಯಮಂತ್ರಿ ಎಲ್ಲೂ ಓಡಾಡೋಕೆ ಆಗಲ್ಲ ಎಂದು ಬಿಜೆಪಿ ಮುಖಂಡರಿಗೆ ಖಡಕ್‌ ಎಚ್ಚರಿಕೆ ನೀಡಿದ್ದರು.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಮ್ಮ ಕಾರ್ಯಕರ್ತರಿಗೆ ಮೊಟ್ಟೆ ಹೊಡೆಯಲು ಬರುವುದಿಲ್ಲವೇ ಎಂದಿದ್ದಾರೆ. ಮುಖ್ಯಮಂತ್ರಿ ಹಾಗೂ ಸಚಿವರು ಓಡಾಡಲು ಆಗುತ್ತದೆಯೇ ಎಂದು ಸವಾಲು ಹಾಕುತ್ತಾರೆ. ಒಬ್ಬ ಮುಖ್ಯಮಂತ್ರಿಗಳಿಗೆ ಈ ರೀತಿ ನೇರವಾಗಿ ಹೇಳಿಕೆ ನೀಡುವುದು ಎಷ್ಟರ ಮಟ್ಟಿಗೆ ಸರಿ. ಈ ರೀತಿಯ ಪ್ರಚೋದನಕಾರಿ ಹೇಳಿಕೆ ನೀಡುವುದನ್ನು ಸಿದ್ದರಾಮಯ್ಯ ಬಿಡಬೇಕು ಎಂದು ದೂರು ನೀಡಿದ್ದಾರೆ.

ರಾಜ್ಯ ಸರ್ಕಾರವನ್ನು ವಜಾ ಮಾಡುವಂತೆ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ರಾಜ್ಯಪಾಲರಿಗೆ ದೂರು

ಶಿವಮೊಗ್ಗ: ಮಾಜಿ ಸಿಎಂ ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆತ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗದಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ರಾಜ್ಯ ಸರ್ಕಾರವನ್ನು ವಜಾ ಮಾಡುವಂತೆ ಜಿಲ್ಲಾಧಿಕಾರಿಗಳ ಮುಖಾಂತರ ರಾಜ್ಯಪಾಲರಿಗೆ ದೂರು ನೀಡಿದ್ದಾರೆ.

ಬಿಜೆಪಿಯ ಗೂಂಡಾ ಕಾರ್ಯಕರ್ತರು ಮೊಟ್ಟೆ ಎಸೆದಿದ್ದಾರೆ. ಪೊಲೀಸ್ ಇಲಾಖೆಯನ್ನು ಸರ್ಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಕೂಡಲೇ ಸರ್ಕಾರ ವಜಾಗೊಳಿಸುವಂತೆ ರಾಜ್ಯಪಾಲರಿಗೆ ಒತ್ತಾಯಿಸಿದ್ದಾರೆ.

ಮತ್ತಷ್ಟು ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:39 pm, Fri, 19 August 22