AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮುಂಡೇಶ್ವರಿ ಕ್ಷೇತ್ರ ಪ್ರಾಧಿಕಾರ: ಬಿಜೆಪಿ ಸಂಸದ ಯದುವೀರ್​ ವಿರುದ್ಧ ಪ್ರತಾಪ್ ಸಿಂಹ ಕಿಡಿ

ಲೋಕಸಭೆ ಚುನಾವಣೆ ಸಂದರ್ಭ ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ ಬಗ್ಗೆ ಅಸಮಾಧಾನ ಹೊರಹಾಕಿದ್ದ ಬಿಜೆಪಿ ನಾಯಕ ಪ್ರತಾಪ್ ಸಿಂಹ ಇದೀಗ ಮತ್ತೆ ಯದುವೀರ್​ಗೆ ಟಾಂಗ್ ನೀಡಿದ್ದಾರೆ. ಅಷ್ಟೇ ಅಲ್ಲದೆ, ಸಿಎಂ ಸಿದ್ದರಾಮಯ್ಯ ಪರ ವಹಿಸಿ ಮಾತನಾಡಿದ್ದಾರೆ. ಹಾಗಾದರೆ ಪ್ರತಾಪ್ ಸಿಂಹ ಹೇಳಿದ್ದೇನು? ವಿವರ ತಿಳಿಯಲು ಮುಂದೆ ಓದಿ.

ಚಾಮುಂಡೇಶ್ವರಿ ಕ್ಷೇತ್ರ ಪ್ರಾಧಿಕಾರ: ಬಿಜೆಪಿ ಸಂಸದ ಯದುವೀರ್​ ವಿರುದ್ಧ ಪ್ರತಾಪ್ ಸಿಂಹ ಕಿಡಿ
ಪ್ರತಾಪ್ ಸಿಂಹ (ಸಂಗ್ರಹ ಚಿತ್ರ)
ದಿಲೀಪ್​, ಚೌಡಹಳ್ಳಿ
| Updated By: Ganapathi Sharma|

Updated on: Sep 11, 2024 | 12:41 PM

Share

ಮೈಸೂರು, ಸೆಪ್ಟೆಂಬರ್ 11: ಚಾಮುಂಡೇಶ್ವರಿ ಕ್ಷೇತ್ರ ಪ್ರಾಧಿಕಾರಕ್ಕೆ ಮೈಸೂರು ರಾಜಮನೆತನ ವಿರೋಧ ವಿಚಾರವಾಗಿ ಪ್ರತಿಕ್ರಿಯಿಸಿದ ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ, ಸಂಸದ ಯದುವೀರ್ ಒಡೆಯರ್​ಗೆ ಟಾಂಗ್ ನೀಡಿದರು. ಮೈಸೂರಿನಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯರನ್ನು ಸೈದ್ಧಾಂತಿಕ ವಿಚಾರದಲ್ಲಿ ಮಾತ್ರ ವಿರೋಧಿಸುತ್ತೇನೆ. ಹಾಗೆಂದು ಚಾಮುಂಡೇಶ್ವರಿ ಕ್ಷೇತ್ರ ಪ್ರಾಧಿಕಾರದ ಅಗತ್ಯವಿದೆ ಎಂದರು.

ಸಿದ್ದರಾಮಯ್ಯ ಒಳ್ಳೆಯ ಕೆಲಸ ಮಾಡಿದ್ದಾರೆ: ಪ್ರತಾಪ್ ಸಿಂಹ

ಬೆಟ್ಟದ ನ್ಯೂನತೆಗಳನ್ನು ಸರಿದೂಗಿಸಲು ಪ್ರಾಧಿಕಾರದ ಅವಶ್ಯಕತೆ ಇದೆ. ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಪೊಲೀಸ್​ ಠಾಣೆ ಹಾಗೂ ಆಸ್ಪತ್ರೆ ಬೇಕು. ಇದೆಲ್ಲಾ ಆಗಬೇಕಿದ್ದರೆ ಒಂದು ಪ್ರಾಧಿಕಾರ ಬೇಕೇ ಬೇಕು. ಹಿಂದೆ ಬಿಜೆಪಿ ಸರ್ಕಾರದಲ್ಲೂ ಪ್ರಾಧಿಕಾರಬೇಕೆಂದು ಧ್ವನಿ ಎತ್ತಿದ್ದೆವು. ಸಿದ್ದರಾಮಯ್ಯ ಪ್ರಾಧಿಕಾರ ರಚನೆ ಮಾಡಿದ್ದಾರೆ, ಇದು ಒಳ್ಳೆಯ ಕೆಲಸ ಎಂದರು.

ಆಸ್ತಿ ವಿಚಾರವಾಗಿ ಮಾತನಾಡುವುದಿಲ್ಲ. ಆದರೆ, ದೇವರು ಭಕ್ತರಿಗೆ ಸೇರಬೇಕು. ಭಕ್ತರಿಗೆ ಸೌಲಭ್ಯ ಕಲ್ಪಿಸಬೇಕಾದದ್ದು ಸರ್ಕಾರದ ಕರ್ತವ್ಯ ಎಂದು ಪ್ರತಾಪ್ ಸಿಂಹ ಹೇಳಿದರು.

ಅಮೃತ್ ಯೋಜನೆಯ ಕುಡಿಯುವ ನೀರು ತಲುಪದಿರಲು ಕಾರಣ ಯಾರು? ನಾನು ಹೇಳಿದರೆ ವಿವಾದ ಆಗುತ್ತದೆ. ಪೈಪ್​​ಲೈನ್​ ಬಗ್ಗೆ ನೀವೇ ನೋಡಿ ಎಂದು ಯದುವೀರ್​ ವಿರುದ್ಧ ಮಾಜಿ ಸಂಸದ ಪ್ರತಾಪ್ ಸಿಂಹ ಆಕ್ರೋಶ ವ್ಯಕ್ತಪಡಿಸಿದರು.

ಚಾಮುಂಡಿ ಬೆಟ್ಟದಲ್ಲಿ ಮುಸ್ಲಿಮರ ಅಂಗಡಿಯೇಕೆ: ಪ್ರತಾಪ್ ಪ್ರಶ್ನೆ

ಚಾಮುಂಡಿ ಬೆಟ್ಟದ ದೇವಿಕೆರೆ ಮೇಲೆ ನಮಾಜ್ ಮಾಡುತ್ತಿದ್ದರು. ಚಾಮುಂಡಿ ಬೆಟ್ಟದಲ್ಲಿ ಮುಸ್ಲಿಮರ 12 ಅಂಗಡಿಗಳಿದ್ದವು. ಅಲ್ಲಿರುವುದು ಹಿಂದೂಗಳ ದೇವಸ್ಥಾನ. ಭಕ್ತಿ ಭಾವದಿಂದ ಹೋಗುವ ಜಾಗದಲ್ಲಿ ಇವರು ಯಾಕೆ ಅಂಗಡಿ ಇಡಬೇಕು? ಮುಜರಾಯಿ ಕಾನೂನಿನಲ್ಲಿ ಕೂಡ ಇದಕ್ಕೆ ಅವಕಾಶ ಇಲ್ಲ ಎಂದು ಮುಸ್ಲಿಂ ಅಂಗಡಿಗಳನ್ನು ತೆಗೆಸಿದ್ದೆ ಎಂದು ಪ್ರತಾಪ್ ಸಿಂಹ ಹೇಳಿದರು.

ಇದನ್ನೂ ಓದಿ: ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದಿಂದ ನಮ್ಮ ಆಚರಣೆ, ಪರಂಪರೆಗೆ ಧಕ್ಕೆ: ಯದುವೀರ್

ಚಾಮುಂಡೇಶ್ವರಿಗೆ ಅವಮಾನ‌ದ ರೀತಿಯಲ್ಲಿದ್ದ ಮಹಿಷ ದಸರಾ ತಡೆಯುವ ಕೆಲಸ ಮಾಡಿದೆ. ಅಂದು ಚಾಮುಂಡೇಶ್ವರಿ ತಾಯಿಗೆ ಅನ್ಯಾಯ ಆಗುವಾಗ ಮಾತನಾಡಿಲ್ಲ. ಇಂದು ಬೇರೆ ಬೇರೆ ಕಾರಣಕ್ಕೆ ಕಾಂಟ್ರವರ್ಸಿ ಮಾಡುತ್ತಿದ್ದಾರೆ ಎಂದು ಈ ಹಿಂದೆ ಸಂಸದರಾಗಿದ್ದ ಸಂದರ್ಭದ ತಮ್ಮ ಹೋರಾಟವನ್ನು ಪ್ರತಾಪ್ ಸಿಂಹ ನೆನಪಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ