ಪಿಎಸ್​ಐ ಹಗರಣದಲ್ಲಿ ಸುಮ್ಮನೇ ನನ್ನ ಹೆಸರು ತೇಲಿಬಿಟ್ಟಿದ್ದಾರೆ, ಕಾಂಗ್ರೆಸ್ ಸರ್ಕಾರ ತನಿಖೆ ನಡೆಸಲಿ; ಬಿವೈ ವಿಜಯೇಂದ್ರ ಸವಾಲು

ಗ್ಯಾರಂಟಿ ಯೋಜನೆಗಳ ಜಾರಿ ವಿಚಾರದಲ್ಲಿ ಷರತ್ತು ಹಾಕಬಾರದು. ಈಗಾಗಲೇ ವಿದ್ಯುತ್ ಬಿಲ್ ದರ ಹೆಚ್ಚಳ ಮಾಡಿದ್ದಾರೆ. ಗ್ಯಾರಂಟಿ ಯೋಜನೆ ಜಾರಿಗಾಗಿ ಹೆಚ್ಚು ಹೆಚ್ಚು ತೆರಿಗೆ ವಿಧಿಸುತ್ತಿದ್ದಾರೆ. ಒಂದು ಕಡೆ ಗ್ಯಾರಂಟಿ ಜಾರಿ, ಮತ್ತೊಂದು ಕಡೆ ಪೆಟ್ಟು ಕೊಡ್ತಿದ್ದಾರೆ ಎಂದು ವಿಜಯೇಂದ್ರ ಟೀಕಿಸಿದ್ದಾರೆ.

ಪಿಎಸ್​ಐ ಹಗರಣದಲ್ಲಿ ಸುಮ್ಮನೇ ನನ್ನ ಹೆಸರು ತೇಲಿಬಿಟ್ಟಿದ್ದಾರೆ, ಕಾಂಗ್ರೆಸ್ ಸರ್ಕಾರ ತನಿಖೆ ನಡೆಸಲಿ; ಬಿವೈ ವಿಜಯೇಂದ್ರ ಸವಾಲು
ವಿಜಯೇಂದ್ರ
Follow us
Ganapathi Sharma
|

Updated on: Jun 05, 2023 | 6:41 PM

ಮೈಸೂರು: ಪಿಎಸ್​ಐ ನೇಮಕಾತಿ ಅಕ್ರಮದಲ್ಲಿ (PSI Recruitment Scam) ಸುಮ್ಮನೇ ಕಾಂಗ್ರೆಸ್​​ನವರು ನನ್ನ ಹೆಸರನ್ನು ತೇಲಿಬಿಟ್ಟಿದ್ದಾರೆ. ಹೇಗೂ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವೇ ಅಸ್ತಿತ್ವದಲ್ಲಿದೆ. ತನಿಖೆ ನಡೆಸಲಿ ಎಂದು ಶಿಕಾರಿಪುರ ಕ್ಷೇತ್ರದ ಬಿಜೆಪಿ ಶಾಸಕ ಬಿವೈ ವಿಜಯೇಂದ್ರ (BY Vijayendra) ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಪಿಎಸ್​ಐ ಹಗರಣದ ಬಗ್ಗೆ ಪಾರದರ್ಶಕವಾಗಿ ತನಿಖೆ ಮಾಡಬೇಕು. ವಿಪಕ್ಷವನ್ನು ಬಗ್ಗುಬಡಿಯಬೇಕೆಂದು ಸೇಡಿನಿಂದ ಮಾಡುವುದು ಸರಿಯಲ್ಲ. ಪಾರದರ್ಶಕವಾಗಿ ತನಿಖೆ ಮಾಡಿದರೆ ನಾವು ಸ್ವಾಗತ ಮಾಡುತ್ತೇವೆ ಎಂದು ಹೇಳಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹೆಚ್ಚು ಸ್ಥಾನ ಗೆಲ್ಲುವ ದೃಷ್ಟಿಯಿಂದ ಕೆಲಸ ಮಾಡಲಾಗುವುದು ಎಂದೂ ಅವರು ಹೇಳಿದ್ದಾರೆ.

ಗ್ಯಾರಂಟಿ ಯೋಜನೆಗಳ ಜಾರಿ ವಿಚಾರದಲ್ಲಿ ಷರತ್ತು ಹಾಕಬಾರದು. ಈಗಾಗಲೇ ವಿದ್ಯುತ್ ಬಿಲ್ ದರ ಹೆಚ್ಚಳ ಮಾಡಿದ್ದಾರೆ. ಗ್ಯಾರಂಟಿ ಯೋಜನೆ ಜಾರಿಗಾಗಿ ಹೆಚ್ಚು ಹೆಚ್ಚು ತೆರಿಗೆ ವಿಧಿಸುತ್ತಿದ್ದಾರೆ. ಒಂದು ಕಡೆ ಗ್ಯಾರಂಟಿ ಜಾರಿ, ಮತ್ತೊಂದು ಕಡೆ ಪೆಟ್ಟು ಕೊಡ್ತಿದ್ದಾರೆ ಎಂದು ವಿಜಯೇಂದ್ರ ಟೀಕಿಸಿದ್ದಾರೆ.

ಗ್ಯಾರಂಟಿ ಯೋಜನೆಗಳಿಗೆ ಎಷ್ಟು ಹಣ ಬೇಕಾಗುತ್ತದೆ ಎಂದು ಪ್ರಶ್ನಿಸಿದ ವಿಜಯೇಂದ್ರ, ಹಣವನ್ನು ಹೇಗೆ ಹೊಂದಿಸಿಕೊಳ್ಳುತ್ತಾರೆ? ಹೊಸ ತೆರಿಗೆ ಹಾಕುತ್ತಾರಾ ಅಥವಾ ಸಾಲ ಮಾಡುತ್ತಾರಾ? ಇದೆಲ್ಲವನ್ನೂ ಬಿಜೆಪಿ ಗಮನಿಸುತ್ತಿದೆ. ಜವಾಬ್ದಾರಿಯುತ ವಿರೋಧ ಪಕ್ಷವಾಗಿ ಹೋರಾಟ ಮಾಡುತ್ತೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕಟುಕರ ರೀತಿ ಮಾತನಾಡುವುದು ಸರಿಯಲ್ಲ: ಸಚಿವ ವೆಂಕಟೇಶ್​ಗೆ ಆರಗ ಜ್ಞಾನೇಂದ್ರ ತಿರುಗೇಟು

ಪಶುಸಂಗೋಪನೆ ಸಚಿವರಿಗೆ ದೇಶದ ಸಂಸ್ಕೃತಿ ಬಗ್ಗೆ ಅರಿವಿಲ್ಲ; ವಿಜಯೇಂದ್ರ

ಎಮ್ಮೆ, ಕೋಣ ಕಡಿದು ಹಾಕುವುದಾದ್ರೆ ಹಸು ಏಕೆ ಕಡಿಯಬಾರದು ಎಂಬ ಪಶುಸಂಗೋಪನೆ ಸಚಿವ ಕೆ ವೆಂಕಟೇಶ್ ಹೇಳಿಕೆಗೆ ಪ್ರತಿಕ್ರಿಯಿಸಿದ ವಿಜಯೇಂದ್ರ, ಸಚಿವರ ಹೇಳಿಕೆ ನೋಡಿದರೆ ಅವರಿಗೆ ದೇಶದ ಸಂಸ್ಕೃತಿ ಬಗ್ಗೆ ಅರಿವಿಲ್ಲ ಅನಿಸುತ್ತೆ. ಇಂತಹ ಉಡಾಫೆ ಹೇಳಿಕೆಯನ್ನು ರಾಜ್ಯದ ಜನ ನಿರೀಕ್ಷೆ ಮಾಡಿರಲಿಲ್ಲ. ಸಚಿವರೇ ರಾಜ್ಯದಲ್ಲಿ ಅಶಾಂತಿ ಸೃಷ್ಟಿಯಾಗುವ ರೀತಿ ನಡೆದುಕೊಳ್ಳುತ್ತಾರೆ. ಹಿಂದೂ ಸಂಸ್ಕೃತಿ, ಪರಂಪರೆ ಗೊತ್ತಿದ್ದರೆ ಈ ರೀತಿ ಮಾತನಾಡುತ್ತಿರಲಿಲ್ಲ. ನಾಳೆಯಿಂದ ಜಿಲ್ಲಾಮಟ್ಟದಲ್ಲಿ ಬಿಜೆಪಿಯಿಂದ ಹೋರಾಟ ಮಾಡುತ್ತದೆ. ಜನಸಾಮಾನ್ಯರು ಕೂಡ ಬೀಗಿಗಿಳಿದು ಹೋರಾಟ ಮಾಡುತ್ತಾರೆ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ