ಮುಡಾ ಮಾಜಿ ಆಯುಕ್ತರ ವಿರುದ್ಧ ಲೋಕಾಯುಕ್ತಕ್ಕೆ ದೂರು

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ನಿವೇಶನ ಹಂಚಿಕೆ ವಿಚಾರವಾಗಿ ನಡೆದಿರುವ ಹಗರಣ ರಾಜ್ಯದಲ್ಲಿ ಸಾಕಷ್ಟು ಚರ್ಚೆಯಾಗುತ್ತಿದೆ. ಈ ಹಗರಣದ ಆರೋಪ ಹೊತ್ತಿರುವ ಮುಡಾದ ಮಾಜಿ ಆಯುಕ್ತ ದಿನೇಶ್​ ಕುಮಾರ್​ ಜಿಟಿ ಅವರ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ.

ಮುಡಾ ಮಾಜಿ ಆಯುಕ್ತರ ವಿರುದ್ಧ ಲೋಕಾಯುಕ್ತಕ್ಕೆ ದೂರು
ಮುಡಾ
Follow us
ರಾಮ್​, ಮೈಸೂರು
| Updated By: ವಿವೇಕ ಬಿರಾದಾರ

Updated on: Sep 01, 2024 | 10:04 AM

ಮೈಸೂರು, ಸೆಪ್ಟೆಂಬರ್​​ 01: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ನಿವೇಶನ ​​ಹಂಚಿಕೆಯಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಕ್ಕೆ ಸಂಬಂಧಿಸಿದಂತೆ ಇಬ್ಬರು ಮಾಜಿ ಮುಡಾ ಆಯುಕ್ತರ ವಿರುದ್ಧ ಲೋಕಾಯುಕ್ತಕ್ಕೆ (Lokayukta) ದೂರು ನೀಡಲಾಗಿದೆ. ಮಾಜಿ ಮುಡಾ ಆಯುಕ್ತರಾದ ನಟೇಶ್, ದಿನೇಶ್ ಕುಮಾರ್ ಅವರ ವಿರುದ್ಧ ಕೃಷ್ಣರಾಜ ಕ್ಷೇತ್ರದ ಬಿಜೆಪಿ ಶಾಸಕ ಶ್ರೀವತ್ಸ (Srivatsa) ಲೋಕಾಯುಕ್ತಕ್ಕೆ ದೂರುನೀಡಿದ್ದಾರೆ.

ಮಾಜಿ ಮುಡಾ ಆಯುಕ್ತರಾದ ನಟೇಶ್, ದಿನೇಶ್ ಕುಮಾರ್ ಅಕ್ರಮದಲ್ಲಿ ಭಾಗಿಯಾಗಿದ್ದಾರೆ. ಕೂಡಲೇ ಅಧಿಕಾರಿಗಳ ವಿರುದ್ಧ ಕ್ರಿಮಿನಲ್​​ ಕೇಸ್ ದಾಖಲಿ, ಅವರನ್ನು ಬಂಧಿಸಬೇಕು. ಈ ಸಂಬಂಧ ಭೂಸ್ವಾಧೀನ ಅಧಿಕಾರಿಗಳು, ಸರ್ಕಾರದ ಕಾರ್ಯದರ್ಶಿಗಳು, ನಗರಾಭಿವೃದ್ಧಿ ಇಲಾಖೆ ವಿರುದ್ಧ ಕ್ರಮ ಕೈಗೊಳ್ಳಬೇಕು. ಈ ಅಕ್ರಮದಿಂದ ಸರ್ಕಾರದ ಬೊಕ್ಕಸಕ್ಕೆ ನಷ್ಟ ಮಾಡಿದ ಅಧಿಕಾರಿಗಳಿಂದಲೇ ಹಣ ವಸೂಲಿ ಮಾಡಬೇಕು ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ದೂರಿನಲ್ಲಿ ಏನಿದೆ

ನಾನು (ಶಾಸಕ ಶ್ರೀವತ್ಸ್​​​) ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯನಾದ ನಂತರ ಪ್ರಾಧಿಕಾರದ ನಿವೇಶನಗಳನ್ನು ಕಾನೂನು ಬಾಹಿರವಾಗಿ ಹಾಗೂ ಅಕ್ರಮವಾಗಿ 50:50 ಅನುಪಾತದಲ್ಲಿ ಸರಿ ಸುಮಾರು 5.00 ಲಕ್ಷ ಚ.ಅ. ಗೂ ಹೆಚ್ಚಿನ ನಿವೇಶನಗಳನ್ನು ಹಂಚಿಕೆ ಮಾಡಿ ಆದೇಶ ಹೊರಡಿಸಿರುವುದು ಕಂಡುಬಂದ ಹಿನ್ನಲೆಯಲ್ಲಿ ಅಂತಹ ಆದೇಶಗಳನ್ನು ರದ್ದುಗೊಳಿಬೇಕು.

ಹಾಗೂ ಈ ಹಿಂದಿನ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿದ್ದ, ಕೆಎಎಸ್ ಅಧಿಕಾರಿ ದಿನೇಶ್ ಕುಮಾರ್ ಜಿ.ಟಿರವರ ವಿರುದ್ಧ ಮತ್ತು ಇಂತಹ ಪ್ರಕರಣಗಳಲ್ಲಿ ಭಾಗಿಯಾದಂತಹ ಇತರೆ ಅಧಿಕಾರಿ ವರ್ಗದವರ ಮೇಲೆ ಸೂಕ್ತ ತನಿಖೆ ನಡೆಸಿ ಸರಿಯಾದ ಶಿಸ್ತು ಕ್ರಮ ಕೈಗೊಳ್ಳುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಹಾಗೂ ಮಾನ್ಯ ಪ್ರಧಾನ ಕಾರ್ಯದರ್ಶಿಗಳು, ನಗರಾಭಿವೃದ್ಧಿ ಇಲಾಖೆ ಇವರಿಗೆ ಸೂಕ್ತ ದಾಖಲೆಗಳೊಂದಿಗೆ ಪತ್ರ ಬರೆದಿದ್ದರೂ ಸಹ ಈ ತನಕ ಇವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ.

ಇದನ್ನೂ ಓದಿ: ಮುಡಾ ಹಗರಣ ಆರೋಪಿತ ಅಧಿಕಾರಿ ಹಾವೇರಿ ವಿಶ್ವವಿದ್ಯಾಲಯದ ಕುಲಸಚಿವ!

ಇಂತಹ ಅಕ್ರಮಗಳಿಂದ ಸರ್ಕಾರದ ಬೊಕ್ಕಸಕ್ಕೆ ಸುಮಾರು 5,000 ಕೋಟಿಗಳಷ್ಟು ನಷ್ಟ ಉಂಟಾಗಿರುತ್ತದೆ. ಕಾನೂನು ಬಾಹಿರವಾಗಿ ಅಧಿಕಾರ ದುರುಪಯೋಗ ಪಡಿಸಿಕೊಂಡಿರುವಂತಹ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಈ ಹಿಂದಿನ ಆಯುಕ್ತರಗಳಾದ ನಟೇಶ್, ಕೆ.ಎ.ಎಸ್ ಮತ್ತು ದಿನೇಶ್ ಕುಮಾರ್ ಜಿ.ಟಿ. ಕೆ.ಎ.ಎಸ್ ಹಾಗೂ ಸರ್ಕಾರದ ಬೊಕ್ಕಸಕ್ಕೆ ನಷ್ಟ ಉಂಟುಮಾಡಿದ್ದಾರೆ. ಇವರ ವಿರುದ್ಧ ತನಿಖೆ ಕೈಗೊಂಡು ಕ್ರಿಮಿನಲ್ ಮೊಕದ್ದಮೆ ದಾಖಲಿಸಿ.

ಈ ಕೂಡಲೇ ಅಕ್ರಮದಲ್ಲಿ ಭಾಗಿಯಾಗಿರುವ ಅಧಿಕಾರಿ ವರ್ಗದವರನ್ನು ಬಂಧಿಸಿ ಸರ್ಕಾರಕ್ಕೆ ಆಗಿರುವ ನಷ್ಟವನ್ನು ಸದರಿ ಅಧಿಕಾರಿಗಳಿಂದಲೇ ಭರಿಸುವಂತೆ ಸೂಕ್ತ ಆದೇಶ ಹೊರಡಿಸಬೇಕೆಂದು ಮನವಿ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಬೈಕ್​ನ್ನ 60 ಮೀಟರ್ ಎಳೆದೊಯ್ದ ಕಾರು: ಎದೆ ಝಲ್​ ಎನಿಸುವ ವಿಡಿಯೋ
ಬೈಕ್​ನ್ನ 60 ಮೀಟರ್ ಎಳೆದೊಯ್ದ ಕಾರು: ಎದೆ ಝಲ್​ ಎನಿಸುವ ವಿಡಿಯೋ
ತಂದೆಯ ರೀತಿ ಆಶೀರ್ವಾದ ಮಾಡಿದ್ದರು: ಸರಿಗಮ ವಿಜಿ ನಿಧನಕ್ಕೆ ತರುಣ್ ಸಂತಾಪ
ತಂದೆಯ ರೀತಿ ಆಶೀರ್ವಾದ ಮಾಡಿದ್ದರು: ಸರಿಗಮ ವಿಜಿ ನಿಧನಕ್ಕೆ ತರುಣ್ ಸಂತಾಪ
ಬಹಳ ಎಚ್ಚರವಹಿಸಬೇಕೆಂದು ಹೇಳುತ್ತಾರೆ ಪ್ರಯಾಗ್​ರಾಜ್​ಗೆ ಬಂದಿರುವ ಕನ್ನಡಿಗ
ಬಹಳ ಎಚ್ಚರವಹಿಸಬೇಕೆಂದು ಹೇಳುತ್ತಾರೆ ಪ್ರಯಾಗ್​ರಾಜ್​ಗೆ ಬಂದಿರುವ ಕನ್ನಡಿಗ
ಕೊಪ್ಪಳ ಗವಿಮಠದ ಅಜ್ಜನ ಜಾತ್ರೆಗೆ ಹರಿದು ಬಂದ ಜನ ಸಾಗರದ ವಿಡಿಯೋ ನೋಡಿ
ಕೊಪ್ಪಳ ಗವಿಮಠದ ಅಜ್ಜನ ಜಾತ್ರೆಗೆ ಹರಿದು ಬಂದ ಜನ ಸಾಗರದ ವಿಡಿಯೋ ನೋಡಿ
ಯಡಿಯೂರಪ್ಪ ಕಾಲಿಗೆ ಚಕ್ರ ಕಟ್ಟಿಕೊಂಡು ಪಕ್ಷ ಸಂಘಟನೆ ಮಾಡಿದ್ದಾರೆ: ಬಿವೈವಿ
ಯಡಿಯೂರಪ್ಪ ಕಾಲಿಗೆ ಚಕ್ರ ಕಟ್ಟಿಕೊಂಡು ಪಕ್ಷ ಸಂಘಟನೆ ಮಾಡಿದ್ದಾರೆ: ಬಿವೈವಿ
ಮೂಕ ಪ್ರಾಣಿಯ ಕೆಚ್ಚಲು ಕೊಯ್ಯುವುದು ತಾಯಿಗೆ ದ್ರೋಗ ಬಗೆದಂತೆ: ತನ್ವೀರ್ ಸೇಟ
ಮೂಕ ಪ್ರಾಣಿಯ ಕೆಚ್ಚಲು ಕೊಯ್ಯುವುದು ತಾಯಿಗೆ ದ್ರೋಗ ಬಗೆದಂತೆ: ತನ್ವೀರ್ ಸೇಟ
ಆರತಿ ಉಕ್ಕಡಕ್ಕೆ ಭೇಟಿ ನೀಡಿದ ದರ್ಶನ್; ಅಹಲ್ಯ ದೇವಿಗೆ ವಿಶೇಷ ಪೂಜೆ
ಆರತಿ ಉಕ್ಕಡಕ್ಕೆ ಭೇಟಿ ನೀಡಿದ ದರ್ಶನ್; ಅಹಲ್ಯ ದೇವಿಗೆ ವಿಶೇಷ ಪೂಜೆ
ನವಿ ಮುಂಬೈನಲ್ಲಿ ಏಷ್ಯಾದ 2ನೇ ದೊಡ್ಡ ಇಸ್ಕಾನ್ ದೇವಾಲಯ ಉದ್ಘಾಟಿಸಿದ ಮೋದಿ
ನವಿ ಮುಂಬೈನಲ್ಲಿ ಏಷ್ಯಾದ 2ನೇ ದೊಡ್ಡ ಇಸ್ಕಾನ್ ದೇವಾಲಯ ಉದ್ಘಾಟಿಸಿದ ಮೋದಿ
ದೇವರಾಜ ಮಾರ್ಕೆಟ್ ಡೆಮಾಲಿಶ್ ಮಾಡಲು ನ್ಯಾಯಾಲಯ ಆದೇಶಿಸಿದೆ: ಮಹದೇವಪ್ಪ
ದೇವರಾಜ ಮಾರ್ಕೆಟ್ ಡೆಮಾಲಿಶ್ ಮಾಡಲು ನ್ಯಾಯಾಲಯ ಆದೇಶಿಸಿದೆ: ಮಹದೇವಪ್ಪ
ಮಹಾಕುಂಭದಲ್ಲಿ ಭಕ್ತಸಾಗರ; ಕಣ್ಸೆಳೆಯುತ್ತಿದೆ ವಿಹಂಗಮ ನೋಟ
ಮಹಾಕುಂಭದಲ್ಲಿ ಭಕ್ತಸಾಗರ; ಕಣ್ಸೆಳೆಯುತ್ತಿದೆ ವಿಹಂಗಮ ನೋಟ