AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಬೊಮ್ಮಾಯಿ ದಯಮಾಡಿ ದಲಿತರ ಮನೆಗೆ ಬರಬೇಡಿ, ಬಂದು ನಮಗೆ ಅವಮಾನ ಮಾಡಬೇಡಿ : ಎಂಎಲ್​ಸಿ ಹೆಚ್​.ವಿಶ್ವನಾಥ್

ನೀವೇ ತಟ್ಟೆಲೋಟ ಎಲ್ಲವನ್ನೂ ತಂದು ದಲಿತರ ಮನೆಯಲ್ಲಿ ತಿನ್ನೋದು ಬೇಕಾ? ದಲಿತರ ಮನೆಯಲ್ಲಿ ಊಟ ಮಾಡಿದರೆ ನಮಗೇನು ಲಾಭ? ಎಂದು ಸಿಎಂ ಬೊಮ್ಮಾಯಿ ವಿರುದ್ಧ ಹೆಚ್​ ವಿಶ್ವನಾಥ್​ ಪ್ರಶ್ನೆ ಮಾಡಿದ್ದಾರೆ.

ಸಿಎಂ ಬೊಮ್ಮಾಯಿ ದಯಮಾಡಿ ದಲಿತರ ಮನೆಗೆ ಬರಬೇಡಿ, ಬಂದು ನಮಗೆ ಅವಮಾನ ಮಾಡಬೇಡಿ : ಎಂಎಲ್​ಸಿ ಹೆಚ್​.ವಿಶ್ವನಾಥ್
ಹೆಚ್ ವಿಶ್ವನಾಥ, ಎಮ್ ಎಲ್ ಸಿ
TV9 Web
| Edited By: |

Updated on:Oct 22, 2022 | 3:02 PM

Share

ಮೈಸೂರು: ನೀವೇ ತಟ್ಟೆಲೋಟ ಎಲ್ಲವನ್ನೂ ತಂದು ದಲಿತರ ಮನೆಯಲ್ಲಿ ತಿನ್ನೋದು ಬೇಕಾ? ದಲಿತರ ಮನೆಯಲ್ಲಿ ಊಟ ಮಾಡಿದರೆ ನಮಗೇನು ಲಾಭ? ರಾಜಕೀಯ ಲಾಭಕ್ಕಾಗಿ ದಲಿತರ ಮನೆಗೆ ಊಟಕ್ಕೆ ಬರಬೇಡಿ ಎಂದು ಮೈಸೂರಿನಲ್ಲಿ (Mysore) ಬಿಜೆಪಿ (BJP) ಎಂಎಲ್​ಸಿ (MLC) ಹೆಚ್​.ವಿಶ್ವನಾಥ್ (H Vishwanath) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ವಿರುದ್ಧ ಕಿಡಿಕಾರಿದ್ದಾರೆ. ರಾಜ್ಯ ಬಿಜೆಪಿ ಸರ್ಕಾರ ತನ್ನ 3 ವರ್ಷದ ಸಾಧನೆಯನ್ನು ಜನರಿಗೆ ತಿಳಿಸಲು ಜನಸಂಕಲ್ಪ ಯಾತ್ರೆ ಪ್ರಾರಂಭ ಮಾಡಿದ್ದು, ಇದರ ಭಾಗವಾಗಿ ಅ. 12 ರಂದು ಸಿಎಂ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ. ಎಸ್​. ಯಡಿಯೂರಪ್ಪ (BS Yadiyurappa) ಹೊಸಕೋಟೆ ಸಮೀಪದ ಕಮಲಾಪುರ ಗ್ರಾಮದ ದಲಿತ ವ್ಯಕ್ತಿಯೊಬ್ಬರ ಮನೆಯಲ್ಲಿ ಉಪಹಾರ ಸೇವಿಸಿದ್ದರು.

ಈ ಕುರಿತು ಇಂದು (ಅ. 22) ಹಳ್ಳಿಹಕ್ಕಿ ಹೆಚ್. ವಿಶ್ವನಾಥ್​​​ ಮೈಸೂರಿನಲ್ಲಿ ಮಾತನಾಡಿ ಹೋಟೆಲ್​ ಊಟ ತಿನ್ನೋಕೆ ದಲಿತರ ಮನೆಗೆ ಹೋಗಬೇಕಾ? ನಿಮ್ಮನ್ನ ಯಾರು ಕರೆದಿರೋದು? ಇದೆಲ್ಲಾ ನಮಗೆ ಬೇಡ. ನಮಗೆ ಅವಮಾನ ಮಾಡಬೇಡಿ. ನೀವು ಮಾಡಬೇಕಾದ ಕೆಲಸ ಮಾಡಿ. ಅದು ಬಿಟ್ಟು ನೀವು ನಿಮ್ಮ ರಾಜಕೀಯ ಲಾಭಕ್ಕಾಗಿ ಬರಬೇಡಿ ಎಂದು ವಾಗ್ದಾಳಿ ಮಾಡಿದ್ದಾರೆ.

‘ದಲಿತರ ಮನೆಗೆ ಹೋಗುತ್ತೀರಾ, ಹಾಗಾದರೆ ನೀವು ಒಂದು ಕಾರ್ಯಕ್ರಮದೊಂದಿಗೆ ಹೋಗಿ. ಅದು ಬಿಟ್ಟು ನೀವು ಬ್ರಾಂಡ್‌ ಹೋಟೆಲ್ ಊಟ ತಿಂಡಿ ತಿನ್ನೋಕೆ ದಲಿತರ ಮನೆ ಹೋಗಬೇಕಾ? ಬ್ರಾಹ್ಮಣರು, ಲಿಂಗಾಯತರ ಹೋಟೆಲ್ ಊಟ ತರಿಸಿ ತಿನ್ನೋಕೆ ದಲಿತರ ಮನೆಗೆ ಯಾಕ್ ಹೋಗುತ್ತೀರಾ? ದಲಿತರ ಮನೆಗೆ ನೀವು ಬಂದರೆ ನಿಮಗೆ ಲಾಭ, ನಮಗೇನು ಲಾಭ ? ದಯಮಾಡಿ ದಲಿತರ ಮನೆಗೆ ಬರಬೇಡಿ, ಬಂದು ನಮಗೆ ಅವಮಾನ ಮಾಡಬೇಡಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶಾಲಾ ಶ್ರೇಯೋಭಿವೃದ್ಧಿಗೆ ಪೋಷಕರಿಂದ ಹಣ ಸಂಗ್ರಹ ಸುತ್ತೋಲೆ ವಾಪಸ್​ ಪಡೆಯಿರಿ

ಶಾಲಾ ಶ್ರೇಯೋಭಿವೃದ್ಧಿಗೆ ಪೋಷಕರಿಂದ ಹಣ ಸಂಗ್ರಹ ವಿಚಾರವಾಗಿ ಮಾತನಾಡಿದ ಅವರು ರಾಜ್ಯ ಸರ್ಕಾರ ತಕ್ಷಣ ಈ ಸುತ್ತೋಲೆ ವಾಪಸ್ ಪಡೆಯಬೇಕು. ಸರ್ಕಾರಿ ಶಾಲೆಗಳ ನಿರ್ವಹಣೆಗೆ 100 ರೂಪಾಯಿ ಶುಲ್ಕ ಯಾಕೆ? ಸರ್ಕಾರಿ ಶಾಲೆಯಲ್ಲಿ ಓದೋರು ಆರ್ಥಿಕವಾಗಿ ಹಿಂದುಳಿದವರು. ಇವತ್ತು ಸರ್ಕಾರಿ ಶಾಲೆಗಳನ್ನು ಮುಚ್ಚುವ ಸ್ಥಿತಿಗೆ ತಂದಿದ್ದಾರೆ ಎಂದರು.

ಕನ್ನಡ ಶಾಲೆ ಮುಚ್ಚಲು ಏನು ಹುನ್ನಾರ ಆಗಬೇಕೋ ಅದು ಆಗುತ್ತಿದೆ. ಕನ್ನಡ ಶಾಲೆಗಳು ಮುಚ್ಚುತ್ತಿವೆ. ಹಿಂದಿನ ಸರ್ಕಾರದಿಂದಲೇ ಶಾಲಾ ನಿರ್ವಹಣೆಗೆ ವರ್ಷಕ್ಕಿಷ್ಟು ಅಂತಾ ಅನುದಾನ ನೀಡಲಾಗಿತ್ತು. ಈಗ ಅದೆಲ್ಲವನ್ನು ನಿಲ್ಲಿಸಿದ್ದಾರೆ. ಈಗ ನಿರ್ವಹಣಾ ವೆಚ್ಚ ಅಂತ ನೂರು ರೂಪಾಯಿ ತೆಗೆದುಕೊಳ್ಳುತ್ತಿದ್ದಾರೆ. ತಂದೆ ತಾಯಿ ಕೊಡುಗೆ ಅಂತಾ ತಗೆದುಕೊಂಡರೆ ಇದು ಸರಿನಾ..? ಎಂದು ಪ್ರಶನ್ನಿಸಿದರು.

ಪ್ರತಾಪ್ ಸಿಂಹ ಮೈಸೂರು ಮಹಾರಾಜರಿಗಿಂತ ದೊಡ್ಡವರು

ಟಿಪ್ಪು ಎಕ್ಸ್‌ಪ್ರೆಸ್‌ ರೈಲಿನ ಹೆಸರು ಬದಲಾಯಿಸಿದ ವಿಚಾರವಾಗಿ ಮಾತನಾಡಿದ ಅವರು ಪ್ರತಾಪ್ ಸಿಂಹ ಮೈಸೂರು ಮಹಾರಾಜರಿಗಿಂತ ದೊಡ್ಡವರು. ಅವರಿಗಿಂತ ನಾನೇ ಜಾಸ್ತಿ ಕೆಲಸ ಮಾಡಿದ್ದೇನೆ ಅಂತಾ ಹೇಳಿದ್ದಾರೆ. ಅವರ ಬಗ್ಗೆ ನಾನೇನು ಮಾತನಾಡಲಿ ? ಅವರು ದೊಡ್ಡ ವ್ಯಕ್ತಿ ಎಂದು ಸಂಸದ ಪ್ರತಾಪ್​ ಸಿಂಹ ವಿರುದ್ಧ ವ್ಯಂಗ್ಯವಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಇಲ್ಲಿ ಕ್ಲಿಕ್ ಮಾಡಿ

Published On - 2:52 pm, Sat, 22 October 22

ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?