ಸಿದ್ದರಾಮಯ್ಯ ‘ಸಿದ್ದ ರಹೀಮ್ ಅಯ್ಯ’ ಅಂತಾ ಹೆಸರು ಬದಲಿಸಿಕೊಳ್ಳುತ್ತಾರೆ; ಮೈಸೂರಿನಲ್ಲಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ಹೇಳಿಕೆ
ಎಲ್ಲಾ ರೀತಿಯ ಒತ್ತಡ, ಟೀಕಾ ಪ್ರಹಾರದ ನಡುವೆಯೂ ಸಮವಸ್ತ್ರ ಕಡ್ಡಾಯಕ್ಕೆ ಸರಕಾರ ಬದ್ಧವಾಗಿರುವುದು ಒಳ್ಳೆಯ ಸಂದೇಶ ಎಂದು ಮಾತನಾಡಿದ ಸಂಸದ ಪ್ರತಾಪ್ ಸಿಂಹ, ಹಿಜಾಬ್ಗಾಗಿ ಇಷ್ಟು ಹಠ ಹಿಡಿದು ಏಕೆ ವಿದ್ಯಾರ್ಥಿಗಳು ಕೂತಿದ್ದಾರೆ.
ಮೈಸೂರು: ಸರ್ಕಾರಿ ಕಾಲೇಜುಗಳಲ್ಲಿ ಹಿಜಾಬ್ (Hijab), ಕೇಸರಿ ಶಾಲು ವಿವಾದಕ್ಕೆ ಪ್ರತಿಕ್ರಿಯೆ ನೀಡಿದ ಬಿಜೆಪಿ ಸಂಸದ ಪ್ರತಾಪ್ ಸಿಂಹ (Pratap Simha), ಸಿದ್ದರಾಮಯ್ಯ (Siddaramaiah) ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಬೇಡಿ. ಬೇಕಾದರೆ ಸಿದ್ದರಾಮಯ್ಯರವರು ಹೆಸರು ಬದಲಿಸಿಕೊಳ್ಳುತ್ತಾರೆ. ಸಿದ್ದ ರಹೀಮ್ ಅಯ್ಯ ಅಂತಾ ಹೆಸರು ಬದಲಿಸಿಕೊಳ್ಳುತ್ತಾರೆ. ಚಾಮರಾಜಪೇಟೆಯಲ್ಲಿ ಸ್ಪರ್ಧಿಸುವಂತೆ ಜಮೀರ್ ಹೇಳುತ್ತಿದ್ದಾರೆ. ಅಧಿಕಾರಕ್ಕಾಗಿ ಸಿದ್ದರಾಮಯ್ಯರವರು ಈ ರೀತಿ ಹೇಳುತ್ತಿದ್ದಾರೆ ಅಂತ ತಿಳಿಸಿದರು.
ಎಲ್ಲಾ ರೀತಿಯ ಒತ್ತಡ, ಟೀಕಾ ಪ್ರಹಾರದ ನಡುವೆಯೂ ಸಮವಸ್ತ್ರ ಕಡ್ಡಾಯಕ್ಕೆ ಸರಕಾರ ಬದ್ಧವಾಗಿರುವುದು ಒಳ್ಳೆಯ ಸಂದೇಶ ಎಂದು ಮಾತನಾಡಿದ ಸಂಸದ ಪ್ರತಾಪ್ ಸಿಂಹ, ಹಿಜಾಬ್ಗಾಗಿ ಇಷ್ಟು ಹಠ ಹಿಡಿದು ಏಕೆ ವಿದ್ಯಾರ್ಥಿಗಳು ಕೂತಿದ್ದಾರೆ. ಸಮವಸ್ತ್ರ ಎನ್ನುವುದು ಬರೀ ಬಣ್ಣದ ಉಡುಪಲ್ಲ. ಅದು ಎಲ್ಲಾ ಮಕ್ಕಳು ಸಮಾನರು ಎಂದು ಸಾರುವ ಉಡುಪು. ಎಲ್ಲರು ಕಾಲೇಜಿಗೆ ಜಾಬ್ಗಾಗಿ ಬರುತ್ತಾರೆ. ನೀವು ಹಿಜಾಬ್ಗಾಗಿ ಬರುತ್ತೀದ್ದೀರಾ? ಹಿಜಾಬ್ ಹಾಕಿಕೊಂಡು, ಟೋಪಿ ಹಾಕಿಕೊಂಡು ನೀವು ಕಲಿಯಬೇಕು ಎಂಬುದಾದರೆ ಮದರಾಸಗೆ ಹೋಗಿ. ಮದರಸದಲ್ಲಿ ನಿಮ್ಮ ಪ್ರತ್ಯೇಕ ಭಾವನೆ ಕಾಪಾಡಿ ಕೊಳ್ಳಬಹುದು ಅಂತ ಹೇಳಿದರು.
ಸರಕಾರಿ ಶಾಲೆಗಳಲ್ಲಿ ಈ ಪ್ರತ್ಯೇಕತೆ ಸಾಧ್ಯವಿಲ್ಲ. ಇದು ಬ್ರಿಟಿಷರ ಭಾರತವಲ್ಲ ಇದು ಭರತ ಖಂಡ. ಹಿಂದೂ ಧರ್ಮದ ಬುನಾದಿ ಮೇಲೆ ಇರುವ ದೇಶವಿದು. ಇಲ್ಲಿ ಗಣಪತಿ ಪೂಜೆ, ಹೆಣ್ಣು ಮಕ್ಕಳ ಕುಂಕುಮ ಸಂಸ್ಕೃತಿಯ ಭಾಗ. ಇದನ್ನು ಯಾರು ಪ್ರಶ್ನಿಸುವಂತಿಲ್ಲ. ಇಸ್ಲಾಂ, ಕ್ರಿಶ್ಚಿಯನ್ ಮರುಭೂಮಿಯಲ್ಲಿ ಹುಟ್ಟಿ ನೆಲೆಗಾಗಿ ಹುಡುಕಿಕೊಂಡು ಇಲ್ಲಿಗೆ ಬಂದಿವೆ. ಇಲ್ಲಿಗೆ ಬಂದ ಮೇಲೆ ಹಿಂದೂ ಸಂಸ್ಕೃತಿಯನ್ನು ಒಪ್ಪಿಕೊಳ್ಳಬೇಕು. ಕ್ರಿಶ್ಚಿಯನ್, ಇಸ್ಲಾಂ ಧರ್ಮದ ಏರಿಕೆ ಇಲ್ಲಿ ನಡೆಯುವುದಿಲ್ಲ. ಈ ನೆಲದ ಸಂಸ್ಕೃತಿಯನ್ನು ಕ್ರಿಶ್ಚಿಯನ್, ಇಸ್ಲಾಂ ಧರ್ಮಗಳು ಒಪ್ಪಿಕೊಳ್ಳಬೇಕು ಅಂತ ಪ್ರತಾಪ್ ಸಿಂಹ ಹೇಳಿದರು.
ಹಿಜಾಬ್, ಕೇಸರಿ ಶಾಲು ವಿವಾಧಕ್ಕೆ ಸಿದ್ದರಾಮಯ್ಯ ಪ್ರತಿಕ್ರಿಯೆ: ವಿವಾದ ಉಂಟಾಗಿರುವ ಕಾಲೇಜಿನ ಪ್ರಿನ್ಸಿಪಾಲ್ ಸ್ಥಳೀಯ ಬಿಜೆಪಿ ಶಾಸಕ ಕೆ ರಘುಪತಿ ಭಟ್ ಅಣತಿಯಂತೆ ವರ್ತಿಸುತ್ತಿದ್ದಾರೆ. ಅವರು ಹೊರಡಿಸುವ ಡಿಕ್ಟ್ಯಾಟ್ ಅನ್ನು ಅನೂಚಾನವಾಗಿ ಪಾಲಿಸುತ್ತಿದ್ದಾರೆಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಬೆಂಗಳೂರನಲ್ಲಿ ನಿನ್ನೆ (ಫೆ.04) ಮಾಧ್ಯಮದವರೊಂದಿಗೆ ಮಾತಾಡಿದ ಸಿದ್ದರಾಮಯ್ಯ, ಶಾಲೆಯ ಆಡಳಿತ ಮತ್ತು ಸಮವಸ್ತ್ರದ ವಿಷಯದಲ್ಲಿ ತಲೆಹಾಕಲು ರಘುಪತಿ ಭಟ್ ಯಾರು? ಸರ್ಕಾರದಿಂದ ಸಂಬಳ ಪಡೆಯುವ ಕಾಲೇಜಿನ ಪ್ರಿನ್ಸಿಪಾಲ, ಭಟ್ ಹೇಳುವುದನ್ನು ಯಾಕೆ ಕೇಳುತ್ತಿದ್ದಾನೆ ಎಂದು ಪ್ರಶ್ನಿಸಿದ್ದಾರೆ.
ಇದನ್ನೂ ಓದಿ