AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು – ಮೈಸೂರು ಹೆದ್ದಾರಿ ಟೋಲ್ ದರ ಹೆಚ್ಚಳ, ಸಂಸದ ಪ್ರತಾಪ್ ಸಿಂಹ ಹೇಳಿದ್ದಿಷ್ಟು

17 ದಿನದಲ್ಲೇ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಶೇ.22ರಷ್ಟು ಬೆಂಗಳೂರು - ಮೈಸೂರು ಎಕ್ಸ್‌ಪ್ರೆಸ್‌ ವೇ ಟೋಲ್ ದರ ಹೆಚ್ಚಿಸಿದ್ದು, ಈ ಬಗ್ಗೆ ಸಂಸದ ಪ್ರತಾಪ್ ಸಿಂಹ ಪ್ರತಿಕ್ರಿಯಿಸಿ, ಟೋಲ್ ದರ ಹೆಚ್ಚಳ ನಿರ್ಧಾರ ಪರಾಮರ್ಶೆ ಮಾಡಬೇಕೆಂದು ಮನವಿ ಮಾಡಿದ್ದಾರೆ.

ಬೆಂಗಳೂರು - ಮೈಸೂರು ಹೆದ್ದಾರಿ ಟೋಲ್ ದರ ಹೆಚ್ಚಳ, ಸಂಸದ ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಸಂಸದ ಪ್ರತಾಪ್​ ಸಿಂಹ
ರಮೇಶ್ ಬಿ. ಜವಳಗೇರಾ
|

Updated on: Mar 31, 2023 | 1:32 PM

Share

ಮೈಸೂರು: ಬೆಂಗಳೂರು – ಮೈಸೂರು ಎಕ್ಸ್‌ಪ್ರೆಸ್‌ ವೇ ಟೋಲ್ ದರ((Bengaluru Mysuru expressway toll price)) ಮತ್ತಷ್ಟು ಹೆಚ್ಚಳವಾಗಿದೆ. ಟೋಲ್ ಸಂಗ್ರಹ ಆರಂಭವಾದ 17 ದಿನದಲ್ಲೇ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಶೇ.22ರಷ್ಟು ಟೋಲ್​ ದರ ಹೆಚ್ಚಿಸಿದ್ದುಮ ನಾಳೆಯಿಂದಲೇ (ಏಪ್ರಿಲ್​ 1ರಿಂದ) ಪರಿಷ್ಕೃತ ದರ ಜಾರಿಗೆ ಬರಲಿದೆ. ಇದಕ್ಕೆ ವಾಹನ ಸವಾರರು ಆಕ್ರೋಶ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಇನ್ನು ಈ ಬಗ್ಗೆ ಇಂದು (ಮಾರ್ಚ್​ 31) ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಂಸದ ಪ್ರತಾಪ್ ಸಿಂಹ(Prata, ಹೈವೇ ಅಥಾರಿಟಿ ಪ್ರತೀ ವರ್ಷ ಟೋಲ್ ದರ ಹೆಚ್ಚಿಸುವುದು ಸಾಮಾನ್ಯ. ದೇಶದ ಎಲ್ಲ ಟೋಲ್ ದರಗಳಲ್ಲೂ ಹೆಚ್ಚಳ ಆಗಿದೆ. ಆದರೆ ಮೈಸೂರು-ಬೆಂಗಳೂರು ಹೆದ್ದಾರಿ ಮಾರ್ಚ್ 14 ರಂದು ಪ್ರಾರಂಭ ಆಗಿದೆ. ನಾನು ಈಗಾಗಲೇ ಹೈವೇ ಅಥಾರಿಟಿಯ ಹಿರಿಯ ಅಧಿಕಾರಿಗಳ ಜತೆ ಮಾತಾಡಿದ್ದು, ಟೋಲ್ ದರ ಹೆಚ್ಚಳ ನಿರ್ಧಾರ ಪರಾಮರ್ಶೆ ಮಾಡಬೇಕೆಂದು ಮನವಿ ಮಾಡಿದ್ದೇನೆ ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ: Bengaluru Mysuru Expressway Toll Price Hike: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ ಟೋಲ್ ದರ ಮತ್ತಷ್ಟು ಹೆಚ್ಚಳ

ನಾನು ಈಗಾಗಲೇ ಹೈವೇ ಅಥಾರಿಟಿಯ ಹಿರಿಯ ಅಧಿಕಾರಿಗಳ ಜತೆ ಮಾಡಿದ್ದು, ಟೋಲ್ ದರ ಯಥಾಸ್ಥಿತಿ ಮುಂದುವರೆಸುವಂತೆ ಮನವಿ ಮಾಡಿದ್ದೇನೆ. ಇಂದು ಸಂಜೆ ಒಳಗೆ ಹೈವೇ ಅಥಾರಿಟಿಯವರು ತಮ್ಮ ನಿರ್ಣಯವನ್ನು ತಿಳಿಸಲಿದ್ದಾರೆ ಎಂದು ಹೇಳಿದರು.

ಮಾರ್ಚ್ 14 ರಿಂದ ಆರಂಭವಾಗಿರುವ ಟೋಲ್

ಮಾರ್ಚ್ 14 ರಿಂದ ಟೋಲ್ ಸಂಗ್ರಹ ಆರಂಭವಾಗಿತ್ತು. ಇದೀಗ 17 ದಿನದಲ್ಲೇ ರಾಷ್ಟ್ರೀಯ ಹೆದ್ದಾರಿ ಶುಲ್ಕ ನಿಯಮ 2008ರ ಪ್ರಕಾರ ಶೇ 22ರಷ್ಟು ದರ ಹೆಚ್ಚಳ ಮಾಡಲಾಗಿದ್ದು, ವಾಹನ ಸವಾರರ ಆಕ್ರೋಶಕ್ಕೆ ಕಾರಣವಾಗಿದೆ. ಇದೀಗ ಸಂಸದ ಪ್ರತಾಪ್ ಸಿಂಹ ಅವರು ಹೇಳಿದಂತೆ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಇಂದು ಸಂಜೆ ಟೋಲ್​ ದರ ಬಗ್ಗೆ ಸ್ಪಷ್ಟನೆ ನೀಡಲಿದ್ದು, ಏನು ಹೇಳುತ್ತಾರೆ ಎಂದು  ಕಾದುಬೋಬೇಕಿದೆ.

ಹೀಗಿರಲಿದೆ ಪರಿಷ್ಕೃತ ದರ

  • ಕಾರು/ವ್ಯಾನ್/ಜೀಪ್: ಏಕಮುಖ ಸಂಚಾರ 165 ರೂ(30ರೂ ಹೆಚ್ಚಳ). ದ್ವಿಮುಖ ಸಂಚಾರ – 250 ರೂ(45ರೂ ಹೆಚ್ಚಳ).
  • ಲಘು ವಾಹನಗಳು/ಮಿನಿಬಸ್: 270 ರೂ.(50ರೂ ಹೆಚ್ಚಳ) ದ್ವಿಮುಖ ಸಂಚಾರ -405 ರೂ.(75 ರೂ. ಹೆಚ್ಚಳ)
  • ಟ್ರಕ್/ ಬಸ್/ಎರಡು ಆಕ್ಸೆಲ್ ವಾಹನ – 565 ರೂ(165 ರೂ ಹೆಚ್ಚಳ), ದ್ವಿಮುಖ ಸಂಚಾರ – 850 ರೂ(160 ರೂ.ಹೆಚ್ಚಳ)
  • ತ್ರಿ ಆಕ್ಸೆಲ್ ವಾಣಿಜ್ಯ ವಾಹನಗಳು: ಏಕ‌ಮುಖ ಸಂಚಾರ 615 ರೂ.(115ರೂ ಹೆಚ್ಚಳ), ದ್ವಿ ಮುಖಸಂಚಾರ – 925 ರೂ.( 225 ರೂ.ಹೆಚ್ಚಳ)
  • ಭಾರೀ ಕಟ್ಟಡ ನಿರ್ಮಾಣ ವಾಹಗನಳು/ಅರ್ಥ್ ಮೂವರ್ಸ್‌/4-6 ಆಕ್ಸೆಲ್ ವಾಹನಗಳು: 885 ರೂ.(165ರೂ ಹೆಚ್ಚಳ) ದ್ವಿಮುಖ ಸಂಚಾರ – 1,330 ರೂ. ಹೆಚ್ಚಳ(250ರೂ ಹೆಚ್ಚಳ)
  • 7 ಅಥವಾ ಅದಕ್ಕಿಂತ ಎಕ್ಸೆಲ್ ವಾಹನಗಳು: 1,080 ರೂ.(200ರೂ ಹೆಚ್ಚಳ) ದ್ವಿಮುಖ ಸಂಚಾರ – 1,620 ರೂ.( 305 ರೂ.ಹೆಚ್ಚಳ)

ಇನ್ನಷ್ಟು ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ