AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mysuru Mayor election; ಮೊದಲ ಬಾರಿಗೆ ಮೈಸೂರು ಮೇಯರ್ ಪಟ್ಟಕ್ಕೇರಿದ ಬಿಜೆಪಿ: ಮೇಯರ್ ಆಗಿ ಸುನಂದಾ ಪಾಲನೇತ್ರ ಆಯ್ಕೆ

ಬಿಜೆಪಿ ಅಭ್ಯರ್ಥಿ ಸುನಂದಾ ಪಾಲನೇತ್ರ ಪರ 26 ಮತಗಳು ಲಭಿಸಿದ್ದು ಕಾಂಗ್ರೆಸ್ ಅಭ್ಯರ್ಥಿ ಶಾಂತಕುಮಾರಿ ಪರ 22 ಮತ ಚಲಾವಣೆಯಾಗಿದೆ.

Mysuru Mayor election; ಮೊದಲ ಬಾರಿಗೆ ಮೈಸೂರು ಮೇಯರ್ ಪಟ್ಟಕ್ಕೇರಿದ ಬಿಜೆಪಿ: ಮೇಯರ್ ಆಗಿ ಸುನಂದಾ ಪಾಲನೇತ್ರ ಆಯ್ಕೆ
ಸುನಂದಾ ಪಾಲನೇತ್ರ
TV9 Web
| Updated By: ಆಯೇಷಾ ಬಾನು|

Updated on:Aug 25, 2021 | 1:51 PM

Share

ಮೈಸೂರು: ಮೊದಲ ಬಾರಿಗೆ ಮೈಸೂರು ಮಹಾನಗರ ಪಾಲಿಕೆ ಮೇಯರ್ ಸ್ಥಾನ ಬಿಜೆಪಿಗೆ ಲಭಿಸಿದೆ. ಬಿಜೆಪಿಯ ಸುನಂದಾ ಪಾಲನೇತ್ರ ಆಯ್ಕೆಯಾಗಿದ್ದು ಮೇಯರ್ ಪಟ್ಟಕ್ಕೇರಿದ್ದಾರೆ. ಬಿಜೆಪಿ ಅಭ್ಯರ್ಥಿ ಸುನಂದಾ ಪಾಲನೇತ್ರ ಪರ 26 ಮತಗಳು ಲಭಿಸಿದ್ದು ಕಾಂಗ್ರೆಸ್ ಅಭ್ಯರ್ಥಿ ಶಾಂತಕುಮಾರಿ ಪರ 22 ಮತ ಚಲಾವಣೆಯಾಗಿದೆ.

25 ವರ್ಷಗಳಿಂದ ಪಾಲಿಕೆಯ ರಾಜಕಾರಣದಲ್ಲಿದ್ದೇನೆ. 5 ಬಾರಿ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದೇನೆ. ಇದು ನನ್ನ ಕೊನೆಯ ಚುನಾವಣೆ ಎಂದು ಮತದಾನದ ವೇಳೆ ಸುನಂದಾ ಪಾಲನೇತ್ರ ಹೇಳಿದ್ದರು. ಕಳೆದ ಬಾರಿ ಮೇಯರ್ ಎಲೆಕ್ಷನ್ ವೇಳೆಯೂ ಬಿಜೆಪಿಯಿಂದ ಸುನಂದಾ ಪಾಲನೇತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋತಿದ್ದರು. ಇನ್ನು, ಬಿಜೆಪಿಯೂ ಈವರೆಗೆ ಒಮ್ಮೆಯೂ ಮೈಸೂರು ಮಹಾನಗರ ಪಾಲಿಕೆಯ ಗದ್ದುಗೆ ಏರಿರಲಿಲ್ಲ. ಆದ್ರೆ ಅದೃಷ್ಟವಶಾತ್ ಮೊದಲ ಬಾರಿಗೆ ಮೈಸೂರು ಮಹಾನಗರ ಪಾಲಿಕೆ ಮೇಯರ್ ಸ್ಥಾನ ಬಿಜೆಪಿಗೆ ಲಭಿಸಿದೆ. ಸುನಂದಾ ಪಾಲನೇತ್ರ ಮೇಯರ್ ಆಗಿ ಆಯ್ಕೆಯಾಗಿದ್ದಾರೆ.

ಮೈಸೂರು ಮಹಾನಗರ ಪಾಲಿಕೆ ಮೇಯರ್ ಸ್ಥಾನ ಬಿಜೆಪಿಗೆ ಲಭಿಸಿದ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ ಜೋರಾಗಿದೆ. ಮತ್ತೊಂದು ಕಡೆ ಕಾಂಗ್ರೆಸ್​ಗೆ ದಿಕ್ಕಾರ ಕೂಗಿ ಜೆಡಿಎಸ್ ಸದಸ್ಯರು ಹೊರನಡೆದಿದ್ದಾರೆ. ಎಲ್ಲಾ ಅಧಿಕಾರ ನಮಗೆ ಬೇಕು ಎಂದು ಅಧಿಕಾರದ ಲಾಲಾಸೆ ಕಾಂಗ್ರೆಸ್​ನದು. ಉಪಮೇಯರ್ ಇದ್ದರೂ ಎಲ್ಲವೂ ನಮಗೆ ಬೇಕು ಎಂದು ಕಾಂಗ್ರೆಸ್ ಹೇಳುತ್ತಾರೆ ಎಂದು ಜೆಡಿಎಸ್ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೈಸೂರು ಮೇಯರ್​​ಗೆ ಸಿಎಂ ಬೊಮ್ಮಾಯಿ ಅಭಿನಂದನೆ ಮೈಸೂರು ಮೇಯರ್ ಸುನಂದಾ ಪಾಲನೇತ್ರಗೆ ಸಿಎಂ ಬಸವರಾಜ ಬೊಮ್ಮಾಯಿ ಅಭಿನಂದನೆ ಸಲ್ಲಿಸಿದ್ದಾರೆ. ಬಹಳ ವರ್ಷಗಳ ನಂತರ ಮೊದಲ ಬಾರಿಗೆ ಬಿಜೆಪಿಗೆ ಮೈಸೂರು ಮೇಯರ್ ಪಟ್ಟ ಸಿಕ್ಕಿದೆ. ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ಮೈಸೂರು ಮೇಯರ್‌ಗೆ ಅಭಿನಂದನೆ ಸಲ್ಲಿಸಿದ BSY ಮೈಸೂರು ಮೇಯರ್ ಸ್ಥಾನ ಬಿಜೆಪಿಗೆ ಸಿಕ್ಕಿರುವ ಹಿನ್ನೆಲೆಯಲ್ಲಿ ಮೇಯರ್ ಸುನಂದಾ ಪಾಲನೇತ್ರಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಭಿನಂದನೆ ಸಲ್ಲಿಸಿದ್ದಾರೆ. ಮೈಸೂರು ಮಹಾನಗರ ಪಾಲಿಕೆಯ ಮೇಯರ್ ಸ್ಥಾನವನ್ನು ಮೊದಲ ಬಾರಿಗೆ ಬಿಜೆಪಿ ಪಡೆದುಕೊಂಡಿದ್ದು, ಇದು ಪಕ್ಷದ ಬೇರುಗಳು ವಿಸ್ತಾರಗೊಳ್ಳುತ್ತಿರುವ ಪ್ರಬಲ ಸಂಕೇತವಾಗಿದೆ ಮೈಸೂರಿನ ಮೇಯರ್ ಆಗಿ ಆಯ್ಕೆಯಾಗಿರುವ ಪಕ್ಷದ ಅಭ್ಯರ್ಥಿ ಸುನಂದಾ ಪಾಲನೇತ್ರ ಅವರಿಗೆ ಹಾರ್ದಿಕ ಅಭಿನಂದನೆಗಳು ಎಂದು ಟ್ವೀಟ್ ಮಾಡಿದ್ದಾರೆ.

ಬಿಎಸ್‌ವೈ, ಸಿಎಂ ಬೊಮ್ಮಾಯಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಮೈಸೂರು ಮಹಾನಗರ ಪಾಲಿಕೆ ಮೇಯರ್ ಆಗಿರುವ ಸುನಂದಾ ಸಂತಸ ಹಂಚಿಕೊಂಡಿದ್ದಾರೆ. ಮೇಯರ್ ಆಗಿದ್ದಕ್ಕೆ ತುಂಬಾ ಖುಷಿಯಾಗುತ್ತಿದೆ. ತುಂಬಾ ದಿನಗಳ ಬಳಿಕ ಬಿಜೆಪಿಗೆ ಅಧಿಕಾರ ಸಿಕ್ಕಿದೆ. ಕಳೆದ ಬಾರಿಯೇ ನಾನು ಮೇಯರ್ ಆಗಬೇಕಿತ್ತು, ಈಗ ಸಿಕ್ಕಿದೆ. ಬಿ.ಎಸ್‌. ಯಡಿಯೂರಪ್ಪ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಟಿವಿ9ಗೆ ಮೈಸೂರು ಮೇಯರ್ ಸುನಂದಾ ಪಾಲನೇತ್ರ ತಿಳಿಸಿದರು.

ಮೈಸೂರು ಮೇಯರ್ ಚುನಾವಣೆ ಘೋಷಣೆ ಬಳಿಕ ಮಹಿಳಾ ಸದಸ್ಯರ ನಡುವೆ ಪೈಪೋಟಿ ಗರಿಗೆದರಿತ್ತು. ಇದರ ನಡುವೆ ಬಿಜೆಪಿ ಹಿರಿಯ ಸದಸ್ಯೆ ಸುನಂದಾ ಪಾಲನೇತ್ರಿ ಅವರ ಹೆಸರು ಮುಂಚೂಣಿಯಲ್ಲಿ ಕೇಳಿ ಬರುತ್ತಿತ್ತು. ಮೂರು ಬಾರಿ ಕಾರ್ಪೋರೇಟರ್ ಆಗಿರುವುದು ಹಾಗೂ ಬಿ.ಎಸ್. ಯಡಿಯೂರಪ್ಪ ಕುಟುಂಬದ ಸಂಬಂಧಿಕರು ಕೂಡ ಆಗಿದ್ದಾರೆ.

ಇದನ್ನೂ ಓದಿ: ಗರಿಗೆದರಿದ ಮೈಸೂರು ಮಹಾನಗರ ಪಾಲಿಕೆ ಮೇಯರ್​ ಚುನಾವಣೆ; ಕೊನೆ ಕ್ಷಣದ ಲೆಕ್ಕಾಚಾರ ಹೇಗಿದೆ?

Published On - 12:39 pm, Wed, 25 August 21

NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು