ಬಿಕೆ ಹರಿಪ್ರಸಾದ್ ಬಂಧಿಸಿ ಮಂಪರು ಪರೀಕ್ಷೆ ಮಾಡಬೇಕು: ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ

ಬಿ.ಕೆ.ಹರಿಪ್ರಸಾದ್ ಬಂಧಿಸಿ ಮಂಪರು ಪರೀಕ್ಷೆ ಮಾಡಬೇಕು. ಮುಖ್ಯಮಂತ್ರಿಗಳು ತಕ್ಷಣ ಈ ನಿರ್ಧಾರವನ್ನು ಕೈಗೊಳ್ಳಬೇಕು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ. ನಗರದಲ್ಲಿ ಬಿಜೆಪಿ ಪಕ್ಷದ ಕಚೇರಿಯಲ್ಲಿ ಕಾರ್ಯಕರ್ತರ ಸಭೆ ಬಳಿಕ ಮಾತನಾಡಿದ ಅವರು, ಈ ಸರ್ಕಾರ​ ಬಂದ್ಮೇಲೆ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ.

ಬಿಕೆ ಹರಿಪ್ರಸಾದ್ ಬಂಧಿಸಿ ಮಂಪರು ಪರೀಕ್ಷೆ ಮಾಡಬೇಕು: ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ
ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on:Jan 06, 2024 | 8:33 PM

ಮೈಸೂರು, ಜನವರಿ 06: ಬಿ.ಕೆ.ಹರಿಪ್ರಸಾದ್ ಬಂಧಿಸಿ ಮಂಪರು ಪರೀಕ್ಷೆ ಮಾಡಬೇಕು. ಮುಖ್ಯಮಂತ್ರಿಗಳು ತಕ್ಷಣ ಈ ನಿರ್ಧಾರವನ್ನು ಕೈಗೊಳ್ಳಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (BY Vijayendra) ಆಗ್ರಹಿಸಿದ್ದಾರೆ. ನಗರದಲ್ಲಿ ಬಿಜೆಪಿ ಪಕ್ಷದ ಕಚೇರಿಯಲ್ಲಿ ಕಾರ್ಯಕರ್ತರ ಸಭೆ ಬಳಿಕ ಮಾತನಾಡಿದ ಅವರು, ಈ ಸರ್ಕಾರ​ ಬಂದ್ಮೇಲೆ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಸಚಿವರು, ಶಾಸಕರು ಸಮಾಜ ಒಡೆಯುವ ಕೆಲಸ ಮಾಡುತ್ತಿವೆ. ಆಡಳಿತ ಪಕ್ಷದಿಂದ ರಾಜ್ಯದಲ್ಲಿ ಅಶಾಂತಿ ಉಂಟಾಗಿದೆ ಎಂದು ವಾಗ್ದಾಳಿ ಮಾಡಿದ್ದಾರೆ.

ಹಿಂದೂ ಕಾರ್ಯಕರ್ತರನ್ನು ಬೆದರಿಸುವ ಕೆಲಸವಾಗುತ್ತಿದೆ

ಡಿ.ಜೆ. ಹಳ್ಳಿ, ಕೆ.ಜೆ.ಹಳ್ಳಿ ಗಲಭೆ ಕೇಸ್​ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಹಿಂದೂ ಕಾರ್ಯಕರ್ತರನ್ನು ಬೆದರಿಸುವ ಕೆಲಸವಾಗುತ್ತಿದೆ. ಮತ್ತೊಂದೆಡೆ ಅಲ್ಪಸಂಖ್ಯಾತರನ್ನು ಓಲೈಸುವ ಕೆಲಸ. ಹಿಂದೂ ಕಾರ್ಯಕರ್ತರನ್ನು ಅರೆಸ್ಟ್ ಮಾಡುವುದು. ಠಾಣೆಗೆ ಬೆಂಕಿ ಹಚ್ಚಿದವರನ್ನ ಅಮಾಯಕರು ಅನ್ನೋದು ಇದು ಕಾಂಗ್ರೆಸ್ ಸರ್ಕಾರದ ಆಡಳಿತ ವೈಖರಿ. ಇದನ್ನ ನಾವು ಖಂಡಿಸುತ್ತೇವೆ ಎಂದು ಕಿಡಿಕಾರಿದ್ದಾರೆ.

ಡಿಸಿಎಂ ಡಿ.ಕೆ ಶಿವಕುಮಾರ್​ ವಿರುದ್ಧ ಪ್ರಲ್ಹಾದ್​​ ಜೋಶಿ ಕಿಡಿ

ಕೆಜೆ ಹಳ್ಳಿ, ಡಿಜೆ ಹಳ್ಳಿ ಆರೋಪಿಗಳ ರಕ್ಷಣೆ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್​ ಹೇಳಿಕೆ ವಿಚಾರವಾಗಿ ಧಾರವಾಡದಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ, ಇದು ತುಷ್ಟೀಕರಣ ರಾಜಕಾರಣ. ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಕೇಸ್ ಆರೋಪಿಗಳು ಅಮಾಯಕರು. ಕರಸೇವಕರನ್ನ ಬಂಧಿಸುತ್ತಾರೆಂದ್ದರೆ ಕಾಂಗ್ರೆಸ್ ದುಸ್ಥಿತಿ ನೋಡಿ. ಇದು ತುಷ್ಟೀಕರಣದ ಪರಾಕಾಷ್ಟೆ ಎಂದು ವಾಗ್ದಾಳಿ ಮಾಡಿದ್ದಾರೆ.

ಇದನ್ನೂ ಓದಿ: ಜನಸ್ಪಂದನ: ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣದ ಆರೋಪಿಗಳ ಬಿಡುಗಡೆ ಮಾಡುವಂತೆ ಡಿಕೆ ಶಿವಕುಮಾರ್​ಗೆ ಕುಟುಂಬಸ್ಥರ ಮನವಿ

ಈಗಾಗಲೇ ಜನ ಹೋರಾಟದ ಮೂಲಕ ಉತ್ತರ ಕೊಟ್ಟಿದ್ದಾರೆ. ಹೋರಾಟದ ಫಲದಿಂದ ಕರಸೇವಕ ಹೊರಗೆ ಬಂದಿದ್ದಾರೆ. ಬೇರೆ ಕರಸೇವಕರನ್ನು ಬಂಧಿಸುವ ಉದ್ದೇಶ ಅವರಿಗಿತ್ತು. ಬಂಧಿಸುವ ಅಧಿಕಾರಿಗಳಿಗೆ ಸ್ಪಷ್ಟ ಎಚ್ಚರಿಕೆ ಕೊಡಲಾಗಿದೆ. ಹೋರಾಟದ ಎಚ್ಚರಿಕೆ ಕೊಟ್ಟ ಬಳಿಕ ನಿಲ್ಲಿಸಿದ್ದಾರೆ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:32 pm, Sat, 6 January 24

ತಾಜಾ ಸುದ್ದಿ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ