ಅತ್ಯಾಚಾರ ಪ್ರಕರಣ: ಮೈಸೂರಿನ ಖಾಸಗಿ ವಸತಿ ಶಾಲೆಗೆ ಬಾಂಬ್ ಬೆದರಿಕೆ
ಕಳೆದ ಎರಡು ವರ್ಷಗಳ ಹಿಂದೆ ಅಂದರೆ 2023ರಲ್ಲಿ ಹೈದರಾಬಾದ್‌ನಲ್ಲಿ ನಡೆದಿದ್ದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನ ಖಾಸಗಿ ವಸತಿ ಶಾಲೆಗೆ ಬಾಂಬ್ ಬೆದರಿಕೆ ಹಾಕಲಾಗಿದೆ. ಅತ್ಯಾಚಾರ ಪ್ರಕರಣದ ಬಗ್ಗೆ ಪೊಲೀಸರು ಕ್ರಮ ಕೈಗೊಳ್ಳದಿದ್ದರೆ ಬಾಂಬ್ ಇಟ್ಟು ಶಾಲೆ ಸ್ಫೋಟಿಸುತ್ತೇವೆ ಎಂದು ಬೆದರಿಕೆ ಇಮೇಲ್ ಬಂದಿದ್ದು, ಈ ಸಂಬಂಧ ಸ್ಥಳಕ್ಕೆ ಬಾಂಬ್ ಪತ್ತೆ ದಳ, ಶ್ವಾನದಳ ಸಿಬ್ಬಂದಿ ದೌಡಾಯಿಸಿದ್ದಾರೆ.

ಮೈಸೂರು, (ಜೂನ್,18): 2023ರಲ್ಲಿ ಹೈದರಾಬಾದ್‌ನಲ್ಲಿ ನಡೆದಿದ್ದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನ (Mysuru) ಭುಗತಗಳ್ಳಿಯಲ್ಲಿರುವ ಜ್ಞಾನಸರೋವರ ಇಂಟರ್ನ್ಯಾಷನಲ್ ವಸತಿ ಶಾಲೆಗೆ (Jnana sarovara international school) ಬಾಂಬ್ ಬೆದರಿಕೆ (bomb threats)ಬಂದಿದೆ. ಅತ್ಯಾಚಾರ ಪ್ರಕರಣದ ಬಗ್ಗೆ ಕ್ರಮ ಕೈಗೊಳ್ಳದಿದ್ದರೆ. ಬಾಂಬ್ ಇಟ್ಟು ಶಾಲೆ ಸ್ಫೋಟಿಸುತ್ತೇವೆ. ಮಕ್ಕಳಿಗೆ ಹಾನಿ ಮಾಡುವ ಉದ್ದೇಶದಿಂದ ವಸತಿ ಶಾಲೆ ಸ್ಫೋಟಿಸುತ್ತೇವೆ ಎಂದು ಹೆಸರು, ಫೋನ್ ನಂಬರ್ ಉಲ್ಲೇಖಿಸಿ ಇಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿದೆ. ಇದರಿಂದ ಆತಂಕಗೊಂಡ ಶಾಲೆ ಆಡಳಿತ ಮಂಡಳಿ ಮೂಡಲೇ ಮೈಸೂರು ಎಸ್ಪಿಗೆ ಲಿಖಿತ ದೂರು ನೀಡಿದ್ದಾರೆ.
ಇ-ಮೇಲ್ ಮೂಲಕ ಬಾಂಬ್ ಬೆದರಿಕೆಯಿಂದ ಆತಂಕಗೊಂಡ ಶಾಲಾ ಆಡಳಿತ ಮಂಡಳಿ ಕೂಡಲೇ ಮೈಸೂರು ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಿದ್ದು, ಈ ದೂರಿನ ಮೇರೆಗೆ ಭುಗತಗಳ್ಳಿಯಲ್ಲಿರುವ ಜ್ಞಾನಸರೋವರ ಇಂಟರ್ನ್ಯಾಷನಲ್ ವಸತಿ ಶಾಲೆಗೆ ಮೈಸೂರು ಗ್ರಾಮಾಂತರ ಪೊಲೀಸರು, ಸ್ಪೋಟಕ ಪತ್ತೆ ದಳ ಶ್ವಾನ ದಳ ಸೇರಿ ವಿವಿಧ ತಜ್ಞರಿಂದ ಪರಿಶೀಲನೆ ಮಾಡುತ್ತಿದ್ದಾರೆ. ಎಸ್ ಪಿ ವಿಷ್ಣುವರ್ಧನ್ ಮಾರ್ಗದರ್ಶನದಲ್ಲಿ ಶೋಧ ಕಾರ್ಯ ನಡೆದಿದೆ.
ಇದನ್ನೂ ಓದಿ: ಹಾಸನ: ಮೂರು ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಸಂದೇಶ
ಯಾವುದೇ ಸ್ಪೋಟಕ ಪತ್ತೆಯಾಗಿಲ್ಲ
ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿದ ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಸುಧಾಕರ್ ಶೆಟ್ಟಿ, ಪರಿಶೀಲನೆ ನಂತರ ಯಾವುದೇ ಸ್ಪೋಟಕ ಪತ್ತೆಯಾಗಿಲ್ಲ. ಇದು ಒಂದು ಹುಸಿ ಬಾಂಬ್ ಕರೆ. ಇ ಮೇಲ್ ಕಳುಹಿಸಿದವನ ಪತ್ತೆಗಾಗಿ ಕಾರ್ಯಾಚರಣೆ ಮುಂದುವರಿದಿದೆ. ಪೋಷಕರು ಆತಂಕಪಡದಂತೆ ಮನವಿ ಮನವಿ ಮಾಡಿದ್ದಾರೆ.
ಕರ್ನಾಟಕದಲ್ಲಿ ಇತ್ತೀಚೆಗೆ ಬಾಂಬ್ ಬೆದರಿಕೆ ಸಂದೇಶ ಪ್ರಕರಣಗಳು ಹೆಚ್ಚಾಗತೊಡಗಿವೆ. ಕೆಲವು ದಿನಗಳ ಹಿಂದೆ ಬೆಂಗಳೂರಿನಲ್ಲಿ ಕೆಲವು ಶಾಲೆಗಳಿಗೆ ಬಾಂಬ್ ಬೆದರಿಕೆ ಸಂದೇಶ ಬಂದಿದ್ದವು. ಮೊನ್ನೇ ಅಷ್ಟೇ ಹಾಸನದ ಖಾಸಗಿ ಶಾಲೆಗಳಿಗೆ ಹಾಗೂ ಮೈಸೂರು, ಉಡುಪಿಯ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ ಬಂದಿತ್ತು. ಈ ಬೆದರಿಕೆಗಳಲ್ಲಿ ಯಾವುದೇ ಕಾರಣ ತಿಳಿಸಿಲ್ಲ. ಆದ್ರೆ, ಮೈಸೂರಿನ ಜ್ಞಾನಸರೋವರ ಇಂಟರ್ನ್ಯಾಷನಲ್ ವಸತಿ ಶಾಲೆಗೆ ಹಾಕಿರುವ ಬಾಂಬ್ ಬೆದರಿಕೆಗೆ ಅತ್ಯಾಚಾರ ಪ್ರಕರಣ ಕಾರಣ ನೀಡಲಾಗಿದೆ. ಅದು 2023ರಲ್ಲಿ ಹೈದರಾಬಾದ್ ನಲ್ಲಿ ಅತ್ಯಾಚಾರ ಕೇಸ್ ಬಗ್ಗೆ ಕ್ರಮ ಕೈಗೊಳ್ಳುವಂತೆ ಇ ಮೇಲ್ ನಲ್ಲಿ ಉಲ್ಲೇಖಿಸಲಾಗಿದೆ.
ಮೈಸೂರಿನ ಜ್ಞಾನಸರೋವರ ಇಂಟರ್ನ್ಯಾಷನಲ್ ವಸತಿ ಶಾಲೆಗೆ ಹಾಕಿರುವ ಬಾಂಬ್ ಬೆದರಿಕೆ ವಿಚಿತ್ರವಾಗಿದೆ. ಇಮೇಲ್ ನಲ್ಲಿ 2023ರಲ್ಲಿ ನಡೆದಿದ್ದ ಅತ್ಯಾಚಾರ ಪ್ರಕರಣವನ್ನು ಉಲ್ಲೇಖಿಸಿದ್ದು,ಅಚ್ಚರಿಕೆ ಕಾರಣವಾಗಿದೆ. ಹೈದರಾಬಾದ್ ಅತ್ಯಾಚಾರ ಕೇಸಿಗೂ ಈ ಶಾಲೆಗೂ ಏನು ಸಂಬಂಧ ಎನ್ನುವ ಪ್ರಶ್ನೆಗಳು ಉದ್ಭವಿಸಿದ್ದು, ಈ ಬಗ್ಗೆ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 3:54 pm, Wed, 18 June 25







