KSRTC ಚಾಲಕನಿಗೆ ಹೃದಯಾಘಾತ: ನಿಯಂತ್ರಣ ತಪ್ಪಿ ಮಹಿಳೆಗೆ ಗುದ್ದಿದ ಬಸ್, ಇಬ್ಬರ ಸಾವು
ಮೈಸೂರಿನಲ್ಲಿ ಕೆಎಸ್‌ಆರ್‌ಟಿಸಿ ಬಸ್ ಚಾಲಕನಿಗೆ ಚಾಲನೆ ಮಾಡುವಾಗಲೇ ಹೃದಯಾಘಾತವಾಗಿ, ಬಸ್ ನಿಯಂತ್ರಣ ತಪ್ಪಿ ಪಾದಚಾರಿ ಮಹಿಳೆಯೊಬ್ಬರಿಗೆ ಡಿಕ್ಕಿ ಹೊಡೆದಿದೆ. ಈ ಘಟನೆಯಲ್ಲಿ ಚಾಲಕ ಮತ್ತು ಪಾದಚಾರಿ ಮೃತಪಟ್ಟಿದ್ದಾರೆ. ಅಪಘಾತ ಹೆಚ್.ಡಿ.ಕೋಟೆ ತಾಲೂಕಿನಲ್ಲಿ ಸಂಭವಿಸಿದೆ. ಪ್ರಯಾಣಿಕರು ಅದೃಷ್ಟವಶಾತ್ ಪಾರಾಗಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮೈಸೂರು, ಏಪ್ರಿಲ್ 02: ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಹೃದಯಾಘಾತವಾಗಿದ್ದು (Heart Attack), ಕೆಎಸ್‌ಆರ್‌ಟಿಸಿ ಬಸ್ (KSRTC Bus) ನಿಯಂತ್ರಣ ತಪ್ಪಿ ಪಾದಾಚಾರಿ ಮಹಿಳೆಗೆ ಡಿಕ್ಕಿಯಾಗಿದೆ. ಘಟನೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಚಾಲಕ ಮತ್ತು ಪಾದಚಾರಿ ಮಹಿಳೆಗೆ ಇಬ್ಬರೂ ಮೃತಪಟ್ಟಿದ್ದಾರೆ. ಹೊರಗುತ್ತಿಗೆ ಆಧಾರದಲ್ಲಿ ಸೇವೆ ಸಲ್ಲಿಸುತ್ತಿದ್ದ ಮೈಸೂರು ಮೂಲದ ಚಾಲಕ ಸುನೀಲ್ ಕುಮಾರ್ ಮತ್ತು ಹೆಚ್.ಡಿ.ಕೋಟೆ ತಾಲೂಕಿನ ದಮ್ಮನಕಟ್ಟೆ ಗ್ರಾಮದ ಲಕ್ಷ್ಮಮ್ಮ ಮೃತ ದುರ್ದೈವಿಗಳು.
ಕೆಎಸ್‌ಆರ್‌ಟಿಸಿ ಬಸ್ ಕೇರಳ ರಾಜ್ಯದ ಮಾನಂದವಾಡಿಯಿಂದ ಹೆಚ್.ಡಿ.ಕೋಟೆ ಬರುತ್ತಿತ್ತು. ಬಸ್, ಹೆಚ್.ಡಿ.ಕೋಟೆ ತಾಲೂಕಿನ ದಮ್ಮನಕಟ್ಟೆ ಬಳಿ ಬರುತ್ತಿದ್ದಂತೆ ಚಾಲಕನಿಗೆ ಹಠಾತ್ ಹೃದಯಾಘಾತವಾಗಿದೆ. ಬಸ್ ಸ್ಟೇರಿಂಗ್ ಮೇಲೆ ಚಾಲಕ ಪ್ರಜ್ಞೆ ತಪ್ಪಿ ಮಲಗಿದ್ದಾನೆ. ಬಳಿಕ, ಬಸ್ ನಿಯಂತ್ರಣ ಕಳೆದುಕೊಂಡು ಪಾದಾಚಾರಿ ಲಕ್ಷ್ಮಮ್ಮ ಅವರಿಗೆ ಡಿಕ್ಕಿ ಹೊಡೆದಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬಳಿಕ, ಬಸ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಜಮೀನಿಗೆ ನುಗ್ಗಿದೆ. ಅದೃಷ್ಟವಶಾತ್, ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಆರಂಭದಲ್ಲಿ, ಚಾಲಕನಿಗೆ ಹೃದಯಾಘಾತವಾದ ವಿಷಯ ತಿಳಿಯದೆ ಚಾಲಕನ ಮೇಲೆ ಗ್ರಾಮಸ್ಥರು ಮುಗಿಬಿದ್ದರು. ಹೆಚ್.ಡಿ.ಕೋಟೆ ತಾಲೂಕಿನ ಅಂತರಸಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಅನ್ಯಕೋಮಿನವನೊಂದಿಗೆ ಹಿಂದೂ ಯುವತಿ ಮದುವೆ: ವಿವಾಹ ಮಾಡಿಸಿದ್ದನಿಗೆ ಹಿಂದೂಗಳಿಂದ ಬೆದರಿಕೆ
ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಗೆ ಹೃದಯಾಘಾತ
ಧಾರವಾಡ: ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಗೆ ಹೃದಯಾಘಾತವಾಗಿದೆ. ಕೂಡಲೇ, ಚಾಲಕ ಬಸ್ ಅನ್ನು ಜಿಲ್ಲಾ ಆಸ್ಪತ್ರೆಯತ್ತ ಬಸ್ ತಿರುಗಿಸಿದ್ದಾರೆ. ಆದರೆ, ಆಸ್ಪತ್ರೆಗೆ ಹೋಗುವಷ್ಟರಲ್ಲಿ ಮಹಿಳೆ ಮೃತಪಟ್ಟಿದ್ದಾರೆ. ಇಂದುಮತಿ ಕಾಂಬಳೆ (50) ಮೃತ ಮಹಿಳೆ. ಮೃತ ಇಂದುಮತಿ ಕಾಂಬಳೆ ನೀರಾವರಿ ನಿಗಮದ ಸಿಬ್ಬಂದಿಯಾಗಿದ್ದರು. ಕಚೇರಿಯಿಂದ ಹುಬ್ಬಳ್ಳಿಯಲ್ಲಿನ ತಮ್ಮ ನಿವಾಸಕ್ಕೆ ಹಿಂದಿರುಗುತ್ತಿದ್ದರು. ಹೀಗಾಗಿ, ಇಂದುಮತಿ ಅವರು ಧಾರವಾಡದ ಜ್ಯುಬಿಲಿ ವೃತ್ತದಲ್ಲಿ ಹುಬ್ಬಳ್ಳಿಗೆ ಹೋಗುವ ಖಾಸಗಿ ಬಸ್ ಹತ್ತಿದ್ದಾರೆ. ಬಸ್ ಸ್ವಲ್ಪ ದೂರ ಹೋಗುತ್ತಿದ್ದಂತೆ ಮಹಿಳೆಗೆ ಹೃದಯಾಘಾತವಾಗಿದೆ. ಮಹಿಳೆಗೆ ಹೃದಯಾಘಾತವಾದ ದೃಶ್ಯ ಬಸ್ನಲ್ಲಿನ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.