ಫೆ.10, 11ರಂದು ಮೈಸೂರಿನಲ್ಲಿ ‘ಬೈಟ್ಸ್‌’ ಸಮಾವೇಶ: ಶಡಗೋಪನ್‌

ರಾಜ್ಯದಲ್ಲಿ ವೃತ್ತಿಪರ ಶಿಕ್ಷಣದ ಗುಣಮಟ್ಟ ಸುಧಾರಣೆ ಮತ್ತು ಐಟಿ ಉದ್ದಿಮೆಗೆ ಅಗತ್ಯವಾದ ಮಾನವ ಸಂಪನ್ಮೂಲದ ಬೆಳವಣಿಗೆಯ ಗುರಿ ಹೊಂದಿರುವ ಐಟಿ ಶಿಕ್ಷಣ ಮಾನದಂಡಗಳ ಮಂಡಳಿಯು ಫೆ.10 ಮತ್ತು 11ರಂದು ಮೈಸೂರಿನಲ್ಲಿ ‘ಬೈಟ್ಸ್‌' ಸಮಾವೇಶ ಹಮ್ಮಿಕೊಂಡಿದೆ.

ಫೆ.10, 11ರಂದು ಮೈಸೂರಿನಲ್ಲಿ ‘ಬೈಟ್ಸ್‌' ಸಮಾವೇಶ: ಶಡಗೋಪನ್‌
ಸಾಂದರ್ಭಿಕ ಚಿತ್ರ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on: Feb 07, 2023 | 3:30 PM

ಬೆಂಗಳೂರು: ರಾಜ್ಯದಲ್ಲಿ ವೃತ್ತಿಪರ ಶಿಕ್ಷಣದ ಗುಣಮಟ್ಟ ಸುಧಾರಣೆ ಮತ್ತು ಐಟಿ ಉದ್ದಿಮೆಗೆ ಅಗತ್ಯವಾದ ಮಾನವ ಸಂಪನ್ಮೂಲದ ಬೆಳವಣಿಗೆಯ ಗುರಿ ಹೊಂದಿರುವ ಐಟಿ ಶಿಕ್ಷಣ ಮಾನದಂಡಗಳ ಮಂಡಳಿಯು ಫೆ.10 ಮತ್ತು 11ರಂದು ಮೈಸೂರಿನ ಇನ್ಫೋಸಿಸ್‌ ಲರ್ನಿಂಗ್‌ ಕ್ಯಾಂಪಸ್‌ನಲ್ಲಿ ತನ್ನ 4ನೇ ಸಮಾವೇಶವನ್ನು ಹಮ್ಮಿಕೊಂಡಿದೆ ಎಂದು ಸಂಘಟನೆಯ ಮುಖ್ಯಸ್ಥ ಪ್ರೊ.ಶಡಗೋಪನ್ ತಿಳಿಸಿದ್ದಾರೆ.

ಈ ಬಗ್ಗೆ ಸೋಮವಾರ ಪತ್ರಿಕಾ ಪ್ರಕಟಣೆ ನೀಡಿರುವ ಅವರು ‘ಕೈಗಾರಿಕಾ ಕ್ರಾಂತಿ 4.0 ಅವಕಾಶಗಳು ಮತ್ತು ಸವಾಲುಗಳು’ ಎಂಬ ವಿಚಾರ ಕುರಿತು ನಡೆಯಲಿರುವ ಸಮಾವೇಶದಲ್ಲಿ ಉನ್ನತ ಶಿಕ್ಷಣ ಹಾಗೂ ಐಟಿ ಬಿಟಿ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಕಾರ್ಯಕ್ರಮವನ್ನ ಉದ್ಘಾಟಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಅವರು ಮುಂದಿನ ಮೂರು ವರ್ಷಗಳಲ್ಲಿ ಸಾಧಿಸಬೇಕಾದ ಹಲವು ಮಹತ್ವದ ಗುರಿಗಳನ್ನು ಇಟ್ಟುಕೊಂಡಿರುವ ‘ಬೈಟ್ಸ್‌ ಉನ್ನತಿ’ ಕಾರ್ಯಕ್ರಮಕ್ಕೂ ಚಾಲನೆ ನೀಡಲಿದ್ದಾರೆ ಎಂದಿದ್ದಾರೆ.

‘ಬೈಟ್ಸ್ ಉನ್ನತಿ’ಯಡಿಯಲ್ಲಿ ರಾಜ್ಯದ ಗ್ರಾಮೀಣ ಭಾಗಗಳ 10 ಸಾವಿರ ವಿದ್ಯಾರ್ಥಿಗಳಿಗೆ, ಉದ್ಯಮಕ್ಕೆ ಅಗತ್ಯವಾದ ತರಬೇತಿ ನೀಡಲಾಗುವುದು. ಸುಮಾರು ಒಂದು ಸಾವಿರ ಕಂಪನಿಗಳು ಕೃತಕ ಬುದ್ಧಿಮತ್ತೆಯ ವ್ಯವಸ್ಥೆಯ ಮೂಲಕ ಈ ವಿದ್ಯಾರ್ಥಿಗಳ ಮೌಲ್ಯಮಾಪನ ಮತ್ತು ಆಯ್ಕೆ ಮಾಡಿಕೊಳ್ಳಲಿವೆ.ಇದರೊಂದಿಗೆ, ಒಂದು ಸಾವಿರ ವಿದ್ಯಾರ್ಥಿನಿಯರಿಗೆ ಕಾರ್ಪೊರೇಟ್‌ ಸ್ಕಾಲರ್‍‌ಶಿಪ್‌ ಕೊಡಲಾಗುವುದು ಮತ್ತು ಭವಿಷ್ಯದ ತಂತ್ರಜ್ಞಾನಕ್ಕೆ ಸಂಬಂಧಿಸಿದಂತೆ ಒಂದು ಸಾವಿರ ಬೋಧಕರಿಗೆ ಪ್ರಮಾಣಪತ್ರ ಸಹಿತ ತರಬೇತಿಗೆ ವ್ಯವಸ್ಥೆ ಮಾಡಲಾಗುವುದು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: Air India: ಎಸ್​ಬಿಐ, ಬ್ಯಾಂಕ್ ಆಫ್ ಬರೋಡದಿಂದ 18,000 ಕೋಟಿ ಸಾಲ ಪಡೆಯಲಿದೆ ಏರ್ ಇಂಡಿಯಾ

ಸಮಾವೇಶದಲ್ಲಿ ಉದ್ಯಮಗಳ ಪರಿಣಿತರು ವಿವಿಧ ಗೋಷ್ಠಿಗಳಲ್ಲಿ ಮಾತನಾಡಲಿದ್ದು, ಒಟ್ಟು 10 ಸಾವಿರ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ‘ಬೈಟ್ಸ್ ಉನ್ನತಿ’ ಉಪಕ್ರಮದಿಂದ 16 ಸರಕಾರಿ ಎಂಜಿನಿಯರಿಂಗ್‌ ಕಾಲೇಜುಗಳ ಸಹಿತ ಒಟ್ಟು 100 ಎಂಜಿನಿಯರಿಂಗ್ ಕಾಲೇಜುಗಳಿಗೆ ಲಾಭವಾಗಲಿದೆ. ಇದಕ್ಕೆ ಟಿಸಿಎಸ್‌, ಇನ್ಫೋಸಿಸ್‌, ವಿಪ್ರೋ, ಪರ್ಸಿಸ್ಟೆಂಟ್‌, ನೌಕರಿ ಮುಂತಾದ ಉದ್ದಿಮೆಗಳು ಕೈಜೋಡಿಸಿವೆ ಎಂದು ಶಡಗೋಪನ್‌ ವಿವರಿಸಿದ್ದಾರೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!