ಮೈಸೂರು, ಸೆ.24: ತಮಿಳುನಾಡಿಗೆ ಕಾವೇರಿ ನೀರು (Cauvery Water) ಹರಿಸದಂತೆ ಕರ್ನಾಟಕ ಸರ್ಕಾರವನ್ನು ಒತ್ತಾಯಿಸಿ ಸೆ.26 ರಂದು ಬೆಂಗಳೂರು ಬಂದ್‌ಗೆ (Bangalore Bandh) ಕರೆ ನೀಡಲಾಗಿದೆ. ಅಲ್ಲದೆ, ಅಖಂಡ ಕರ್ನಾಟಕ ಬಂದ್ಗೂ ತೀರ್ಮಾನಿಸಲಾಗಿದೆ. ಈ ನಡುವೆ ಮೈಸೂರು ಜಿಲ್ಲೆಯ ಟಿ ನರಸಿಪುರ ತಾಲೂಕು ಬಂದ್‌ಗೆ (T.Narasipura Bandh) ಕರೆ ನೀಡಲಾಗಿದೆ. ಕಾವೇರಿ ಕಬಿನಿ ಹಿತರಕ್ಷಣಾ ಸಮಿತಿಯಿಂದ ಬಂದ್‌ಗೆ ಕರೆ ನೀಡಲಾಗಿದೆ.
ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುಗಡೆ ಖಂಡಿಸಿ ಕಾವೇರಿ ಕಬಿನಿ ಹಿತರಕ್ಷಣಾ ಸಮಿತಿಯು ಸೆಪ್ಟೆಂಬರ್ 26 ರಂದು ಟಿ.ನರಸೀಪುರ ಬಂದ್‌ಗೆ ಕರೆ ನೀಡಿದೆ. ಟಿ.ನರಸೀಪುರದ ಐಬಿಯಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ.
ಇದನ್ನೂ ಓದಿ: ಸೋಮವಾರ ಅಖಂಡ ಕರ್ನಾಟಕ ಬಂದ್ ದಿನಾಂಕ ಘೋಷಣೆ ಮಾಡುತ್ತೇವೆ: ವಾಟಾಳ್ ನಾಗರಾಜ್
ಕಾವೇರಿ ಕಬಿನಿ ಹಿತರಕ್ಷಣಾ ಸಮಿತಿ, ರೈತ ಸಂಘ, ಕಬ್ಬು ಬೆಳೆಗಾರರ ಸಂಘ, ಕನ್ನಡಪರ ಸಂಘಟನೆ ಸೇರಿದಂತೆ 20 ಕ್ಕೂ ಹೆಚ್ಚು ಸಂಘಟನೆಗಳು ಈ ಸಭೆಯಲ್ಲಿ ಭಾಗಿಯಾಗಿದ್ದವು. ಅಲ್ಲದೆ, ಟಿ.ನರಸೀಪುರ ಬಂದ್‌ಗೆ ಸಾರ್ವಜನಿಕರು, ಸಂಘ ಸಂಸ್ಥೆಗಳು, ವರ್ತಕರು ಸಹಕಾರ ನೀಡುವಂತೆ ರೈತರು ಮನವಿ ಮಾಡಿದರು.
ಕಾವೇರಿ ನೀರಿಗಾಗಿ ಪ್ರತಿಭಟನೆ ಮತ್ತಷ್ಟು ತೀವ್ರಗೊಳಿಸಲು ವಿವಿಧ ಸಂಘಟನೆಗಳು ತೀರ್ಮಾನಿಸಿದ್ದು, ಸೆಪ್ಟೆಂಬರ್ 26 ರಂದು ಬೆಂಗಳೂರು ಬಂದ್‌ಗೆ ಕರೆ ನೀಡಲಾಗಿದೆ. ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ನಡೆದ ಸಭೆಯಲ್ಲಿ ಕಾವೇರಿ ನೀರಿಗಾಗಿ ಬೆಂಗಳೂರು ಬಂದ್‌ಗೆ ಒಮ್ಮತದ ತೀರ್ಮಾನ ಕೈಗೊಳ್ಳಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:43 pm, Sun, 24 September 23