AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಕೀಯಕ್ಕೆ ಬರುವ ವಿಚಾರದಲ್ಲಿ ನನ್ನಲ್ಲಿ ಇನ್ನೂ ಗೊಂದಲಗಳಿವೆ: ಖ್ಯಾತ ಹೃದ್ರೋಗ ತಜ್ಞ ಡಾ ಸಿಎನ್ ಮಂಜುನಾಥ್

ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಡಾ.ಸಿ.ಎನ್.ಮಂಜುನಾಥ್​ ಜಯದೇವ ಆಸ್ಪತ್ರೆಯಲ್ಲಿ ಮಾಡಿದ ಒಳ್ಳೆ ಕೆಲಸ ನಿರೀಕ್ಷೆಯಿಂದ, ನನ್ನ ಮೇಲಿನ ಪ್ರೀತಿಯಿಂದ ಜನ ರಾಜಕೀಯ ಪ್ರವೇಶಿಸಿ ಅಂತಿದ್ದಾರೆ. ಆದರೆ ರಾಜಕೀಯಕ್ಕೆ ಬರುವ ವಿಚಾರದಲ್ಲಿ ನನ್ನಲ್ಲಿ ಇನ್ನೂ ಗೊಂದಲಗಳಿವೆ. ಪತ್ನಿ, ಮಕ್ಕಳು, ಕುಟುಂಬ ಸದಸ್ಯರ ಜೊತೆ ಚರ್ಚೆ ಮಾಡಬೇಕಾಗಿದೆ. ರಾಜಕೀಯಕ್ಕೆ ಬರಲು ಭಯ ಪಡುತ್ತಿದ್ದೇನೆ ಎಂದು ಅರ್ಥವಲ್ಲ ಎಂದು ಹೇಳಿದ್ದಾರೆ.

ರಾಜಕೀಯಕ್ಕೆ ಬರುವ ವಿಚಾರದಲ್ಲಿ ನನ್ನಲ್ಲಿ ಇನ್ನೂ ಗೊಂದಲಗಳಿವೆ: ಖ್ಯಾತ ಹೃದ್ರೋಗ ತಜ್ಞ ಡಾ ಸಿಎನ್ ಮಂಜುನಾಥ್
ಡಾ.ಸಿ.ಎನ್.ಮಂಜುನಾಥ್
ದಿಲೀಪ್​, ಚೌಡಹಳ್ಳಿ
| Updated By: ಗಂಗಾಧರ​ ಬ. ಸಾಬೋಜಿ|

Updated on:Feb 22, 2024 | 8:27 PM

Share

ಮೈಸೂರು, ಫೆಬ್ರವರಿ 22: ರಾಜಕೀಯಕ್ಕೆ ಬರುವ ವಿಚಾರದಲ್ಲಿ ನನ್ನಲ್ಲಿ ಇನ್ನೂ ಗೊಂದಲಗಳಿವೆ. ಪತ್ನಿ, ಮಕ್ಕಳು, ಕುಟುಂಬ ಸದಸ್ಯರ ಜೊತೆ ಚರ್ಚೆ ಮಾಡಬೇಕಾಗಿದೆ ಎಂದು ಖ್ಯಾತ ಹೃದ್ರೋಗ ತಜ್ಞ ಡಾ.ಸಿ.ಎನ್.ಮಂಜುನಾಥ್ (Dr CN Manjunath) ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜನ ಹಾಗೂ ಮಾಧ್ಯಮದವರು ನನ್ನ ಮೇಲಿನ ಪ್ರೀತಿಯಿಂದ ನನ್ನ ರಾಜಕೀಯ ಪ್ರವೇಶದ ಬಗ್ಗೆ ಮಾತನಾಡುತ್ತಿದ್ದಾರೆ. ರಾಜಕಾರಣಕ್ಕೆ ಬರಬೇಕೋ ಬೇಡವೋ ಎನ್ನುವ ಗೊಂದಲವಿದೆ. ಹಾಗಂತ ರಾಜಕೀಯಕ್ಕೆ ಬರಲು ಭಯ ಪಡುತ್ತಿದ್ದೇನೆ ಎಂದು ಅರ್ಥವಲ್ಲ. ರಾಜಕೀಯ ಹೊಸ ಕ್ಷೇತ್ರ, ಹೇಗೋ ಏನೋ ಎಂದು ನೋಡಬೇಕು. ಹಾಗಾಗಿ ಈ ಬಗ್ಗೆ ಸದ್ಯಕ್ಕೆ ನಾನು ತೀರ್ಮಾನ ಮಾಡಿಲ್ಲ ಎಂದು ಸ್ಪಷ್ಟನೆ ನಿಡಿದ್ದಾರೆ.

ಜಯದೇವದಲ್ಲಿ ಮಾಡಿದ ಒಳ್ಳೆಯ ಕೆಲಸದ ನೀರಿಕ್ಷೆಯಲ್ಲೇ ಈ ಒತ್ತಾಯಗಳು ಕೇಳಿ ಬರುತ್ತಿವೆ. ನನಗೆ ಬೀದಿ ರಾಜಕೀಯ ಇಷ್ಟ ಇಲ್ಲ. ಅಭಿವೃದ್ಧಿಯ ಪಾಲಿಟಿಕ್ಸ್ ಬಗ್ಗೆ ಆಸಕ್ತಿ ಇದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ರಾಷ್ಟ್ರ ರಾಜಕಾರಣಕ್ಕೆ ಜಯದೇವ ಮಾಜಿ ನಿರ್ದೇಶಕ ಡಾ ಮಂಜುನಾಥ್ ಕರೆತರಲು ಜೆಡಿಎಸ್ ಕಸರತ್ತು

ಮಂಜುನಾಥ್ ಅವರು ಮುಂಬರಲಿರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರೆ ಎಂಬ ಮಾತುಗಳು ಕೇಳಿಬಂದಿದ್ದವು. ಈ ನಿಟ್ಟಿನಲ್ಲಿ ಮಂಜುನಾಥ್ ಮನವೊಲಿಕೆಗೆ ಜೆಡಿಎಸ್​ ನಾಯಕರು ಮುಂದಾಗಿದ್ದರು. ಜತೆಗೆ, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮಂಜುನಾಥ್ ಅವರನ್ನು ಸ್ಪರ್ಧಿಸುವಂತೆ ತೆರೆಮರೆಯಲ್ಲಿ ಕಸರತ್ತು ನಡೆಸುತ್ತಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿದ್ದವು.

ಮಂಜುನಾಥ್​ ಅವರಿಗೆ ಈಗಾಗಲೇ ರಾಜಕೀಯ ಹಿನ್ನೆಲೆ ಇದೆ. ಅವರು ಶ್ರವಣಬೆಳಗೊಳದ ಜೆಡಿಎಸ್ ಶಾಸಕ ಸಿ.ಎನ್.ಬಾಲಕೃಷ್ಣ ಅವರ ಸಹೋದರ. ಅವರ ಪತ್ನಿ ಅನಸೂಯಾ ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡರ ಹಿರಿಯ ಪುತ್ರಿ. ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಈ ಬಾರಿ ಗೆಲುವು ಕಷ್ಟವಾಗಬಹುದು ಎಂದು ಪಕ್ಷದ ಮೂಲಗಳು ಹೇಳುತ್ತಿದ್ದು, ಕುಟುಂಬದ ಹಿರಿಮೆಗೆ ಮಂಜುನಾಥ್ ಅವರ ಹೆಸರು ಕೇಳಿಬರುತ್ತಿವೆ.

ಇದನ್ನೂ ಓದಿ: ಬಡ ಹೃದ್ರೋಗಿಗಳ ಆಶಾಕಿರಣ, ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಡಾ ಸಿಎನ್ ಮಂಜುನಾಥ್ ಸೇವಾವಧಿ ನಾಳೆ ಮುಕ್ತಾಯ

ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಯ ನಿರ್ದೇಶಕ ಡಾ. ಸಿಎನ್ ಮಂಜುನಾಥ್ ಅವರ ಅಧಿಕಾರವಧಿ ಜನವರಿ 30ರಂದ ಕೊನೆಗೊಂಡಿತ್ತು. ಅವರನ್ನು ಸಂಸ್ಥೆಯಿಂದ ಗೌರವ ಪೂರ್ವಕವಾಗಿ ಬೀಳ್ಕೊಡಲಾಗಿತ್ತು. ಬೀಳ್ಕೊಡುಗೆ ಸಮಾರಂಭದ ಬಳಿಕ ಮಾತನಾಡಿದ್ದ ಅವರು, ಜಯದೇವ ಹೃದ್ರೋಗ ಆಸ್ಪತ್ರೆಯು ಜನರ ಆಸ್ಪತ್ರೆಯಾಗಿದೆ. ಇದನ್ನು ಪಂಚಾತಾರ ಖಾಸಗಿ ಆಸ್ಪತ್ರೆಯಂತೆ ಮಾಡುವ ಗುರಿ ಹೊಂದಿದ್ದೆವು. ಇಲ್ಲಿ ಪ್ರತಿಯೋಬ್ಬರಿಗೂ ಸೇವಾ ಮನೋಭಾವವನ್ನು ಬೆಳಸಲಾಗಿದೆ. ಇಷ್ಟು ವರ್ಷದ ಸೇವೆ ಸಂತೋಷ ತಂದಿದೆ. ನಿವೃತ್ತಿ ಬಳಿಕವೂ ವೈದ್ಯಕೀಯ ಸೇವೆ ಮುಂದುವರಿಸುತ್ತೇನೆ. ಸದಾ ಜನರ ಸೇವೆ ಮಾಡುತ್ತೇನೆ ಎಂದು ಹೇಳಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:13 pm, Thu, 22 February 24

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ