ವಿರೋಧದ ನಡುವೆಯೂ ಪ್ರಾಧಿಕಾರದ ಆದೇಶವನ್ನ ಪಾಲಿಸುತ್ತಿರುವ ಸರ್ಕಾರ, ಕಬಿನಿ ಡ್ಯಾಂನಿಂದ 4053 ಕ್ಯೂಸೆಕ್ ನೀರು ಬಿಡುಗಡೆ ?
ತಮಿಳುನಾಡಿಗೆ ನೀರು ಬಿಡುವ ವಿಚಾರವಾಗಿ ಸಾಕಷ್ಟು ಆಕ್ರೋಶ ವ್ಯಕ್ತವಾಗುತ್ತಿದ್ದರೂ, ಕರ್ನಾಟಕ ಸರ್ಕಾರ, ಕಾವೇರಿ ನೀರು ನಿರ್ವಹಣ ಪ್ರಾಧಿಕಾರದ ಆದೇಶವನ್ನು ಪಾಲನೆ ಮಾಡಲು ಮುಂದಾಗಿದೆಯಾ ಎಂಬ ಅನುಮಾನ ವ್ಯಕ್ತವಾಗಿದೆ.
ಮೈಸೂರು ಸೆ.19: ತಮಿಳುನಾಡಿಗೆ (Tamilnadu) ಐದು ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣ ಪ್ರಾಧಿಕಾರ (CWMA) ಆದೇಶ ಹೊರಡಿಸಿದ್ದು, ಇದನ್ನು ಖಂಡಿಸಿ ಮಂಡ್ಯದಲ್ಲಿ (Mandya) ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ತಮಿಳುನಾಡಿಗೆ ನೀರು ಬಿಡುವ ವಿಚಾರವಾಗಿ ಸಾಕಷ್ಟು ಆಕ್ರೋಶ ವ್ಯಕ್ತವಾಗುತ್ತಿದ್ದರೂ, ಕರ್ನಾಟಕ ಸರ್ಕಾರ, ಕಾವೇರಿ ನೀರು ನಿರ್ವಹಣ ಪ್ರಾಧಿಕಾರದ ಆದೇಶವನ್ನು ಪಾಲನೆ ಮಾಡಲು ಮುಂದಾಗಿದೆಯಾ ಎಂಬ ಅನುಮಾನ ವ್ಯಕ್ತವಾಗಿದೆ. ತಮಿಳುನಾಡಿಗೆ ಕಬಿನಿ ಜಲಾಶಯದಿಂದ ಸರ್ಕಾರ 4053 ಕ್ಯೂಸೆಕ್ ನೀರು ಹರಿಸುತ್ತಿದೆ ಎಂದು ಬಿಜೆಪಿ ಆರೋಪಿಸಿದೆ.
ಕಬಿನಿ ಜಲಾಶಯಕ್ಕೆ 3525 ಕ್ಯೂಸೆಕ್ ಒಳ ಹರಿವು ಇದ್ದು, ನಾಲೆಗಳಿಗೆ 2390 ಹಾಗೂ ನದಿಗೆ 1663 ಸೇರಿದಂತೆ ಒಟ್ಟು 4053 ಕ್ಯೂಸೆಕ್ ನೀರು ಸರ್ಕಾರ ಬಿಡುವ ಮೂಲಕ ಸರ್ಕಾರ ಪ್ರಾಧಿಕಾರದ ಆದೇಶಕ್ಕೆ ಮಣಿದಿದೆ ಎಂದು ಆಕ್ರೋಶ ವ್ಯಕ್ತವಾಗುತ್ತಿದೆ. ಸದ್ಯ ಜಲಾಶಯದಲ್ಲಿ 76.18 ಅಡಿ ನೀರು ಇದ್ದು, ಗರಿಷ್ಟ ಸಾಮರ್ಥ್ಯ 84 ಅಡಿ ಇದೆ. 18.78 ಟಿಎಂಸಿ ಸಾಮರ್ಥ್ಯದ ಜಲಾಶಯದಲ್ಲಿ ಸದ್ಯ 14.91 ಟಿಎಂಸಿ ನೀರು ಇದೆ.
ಇದನ್ನೂ ಓದಿ: ತಮಿಳುನಾಡಿಗೆ ಹರಿದ ಕಾವೇರಿ: ರಾಜ್ಯ ಸರ್ಕಾರ ಕೈಗೊಂಡ ನಿರ್ಧಾರ ದುರಂತ ಎಂದ ಹೆಚ್ಡಿ ದೇವೇಗೌಡ
ಇನ್ನು ಕೃಷ್ಣರಾಜಸಾಗರ ಜಲಾಶಯದಿಂದ ನದಿಗೆ 2171 ಕ್ಯೂಸೆಕ್ ನೀರು ಬಿಡಲಾಗುತ್ತಿದೆ. ಸೋಮವಾರದವರೆಗು 1169 ಕ್ಯೂಸೆಕ್ ನೀರು ನದಿಗೆ ಬಿಡಲಾಗುತ್ತಿತ್ತು. ಜಲಾಶಯದ ಗರಿಷ್ಠ ಮಟ್ಟ 124.80 ಅಡಿ ಇದ್ದು, ಸದ್ಯ ನೀರಿನ ಮಟ್ಟ 97.06 ಅಡಿ ಇದೆ. ಗರಿಷ್ಠ ಸಾಮರ್ಥ್ಯ 49.452 ಟಿಎಂಸಿ ಇದೆ. ಇಂದಿನ ಸಂಗ್ರಹ 20.592 ಟಿಎಂಸಿ, ಒಳ ಹರಿವು 7007 ಕ್ಯುಸೆಕ್, ಹೊರ ಹರಿವು 5735 ಕ್ಯುಸೆಕ್ ಇದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ