ಜೂನ್​ 21ರಂದು ಮೈಸೂರಿನಲ್ಲಿ ವಿಶ್ವ ಯೋಗ ದಿನಾಚರಣೆ: ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ ಸಿಎಂ ಬೊಮ್ಮಾಯಿ

ಜೂನ್​ 21ರಂದು ಮೈಸೂರಿನಲ್ಲಿ ವಿಶ್ವ ಯೋಗ ದಿನಾಚರಣೆ (World Yoga Day) ಕಾರ್ಯಕ್ರಮ ನಡೆಯಲಿರುವ ಹಿನ್ನಲೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಚಾಲನೆ ನೀಡಲಿದ್ದಾರೆ. 

ಜೂನ್​ 21ರಂದು ಮೈಸೂರಿನಲ್ಲಿ ವಿಶ್ವ ಯೋಗ ದಿನಾಚರಣೆ: ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ ಸಿಎಂ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Follow us
TV9 Web
| Updated By: ವಿವೇಕ ಬಿರಾದಾರ

Updated on:Jun 07, 2022 | 10:59 PM

ಮೈಸೂರು: ಜೂನ್​ 21ರಂದು ಮೈಸೂರಿನಲ್ಲಿ (Mysore) ವಿಶ್ವ ಯೋಗ ದಿನಾಚರಣೆ (World Yoga Day) ಕಾರ್ಯಕ್ರಮ ನಡೆಯಲಿರುವ ಹಿನ್ನಲೆ ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Narendra Modi) ಅವರು ಚಾಲನೆ ನೀಡಲಿದ್ದಾರೆ.  ಯೋಗಾಭ್ಯಾಸದಲ್ಲಿ 15,000 ಜನ ಭಾಗಿಯಾಗುವ ನಿರೀಕ್ಷೆ ಇದೆ. ಈ ಸಂಬಂಧ ಸಿದ್ದತಾ ಸಭೆ ನಡೆಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜಿಲ್ಲಾಡಳಿತಕ್ಕೆ ಕೆಲ ಸೂಚನೆ ನೀಡಿದ್ದಾರೆ. ಜೂ.13ರೊಳಗೆ ಯೋಗಪಟುಗಳ ಆಯ್ಕೆ ಪೂರ್ಣಗೊಳಿಸಿ, ಎಲ್ಲ ವರ್ಗಗಳ ಜನರನ್ನೂ ಸೇರ್ಪಡೆಗೊಳಿಸುವಂತೆ ಮಾಡಿ. ಯೋಗಪಟುಗಳಿಗೆ ಸಾರಿಗೆ ಸೌಲಭ್ಯ, ಲಘು ಉಪಾಹಾರ ವ್ಯವಸ್ಥೆ ಮಾಡಿ. ಕುಡಿಯುವ ನೀರು ಸೇರಿ ಎಲ್ಲ ವ್ಯವಸ್ಥೆ ಮಾಡಿ. ಕಾರ್ಯಕ್ರಮದ ಯಶಸ್ಸಿಗೆ ಒಟ್ಟು 14 ಸಮಿತಿಗಳ ರಚನೆ ಮಾಡಿ ಎಂದು ಸೂಚನೆ ನೀಡಿದ್ದಾರೆ. ಹಾಗೇ ಪ್ರಧಾನಿಯವರ ಭೇಟಿ ಸಂದರ್ಭದಲ್ಲಿ ಭದ್ರತಾ ವ್ಯವಸ್ಥೆಯಲ್ಲಿ ಲೋಪವಾಗದಂತೆ ಕ್ರಮ ಕೈಗೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಇದನ್ನು ಓದಿ: ಟಿವಿ9 ಚೀಫ್​ ಎಕ್ಸಿಕ್ಯೂಟಿವ್ ಪ್ರೊಡ್ಯೂಸರ್ ವಿಲಾಸ್ ನಾಂದೋಡ್ಕರ್ ಅವರಿಗೆ ಪಿಹೆಚ್​ಡಿ ಪ್ರದಾನ

ಚಾಮರಾಜಪೇಟೆ ಮೈದಾನದಲ್ಲಿ ಯೋಗ ಮಾಡಲು ಅನುಮತಿ

ಬೆಂಗಳೂರು: ಜೂನ್ 21ರಂದು ವಿಶ್ವ ಯೋಗ ದಿನಾಚರಣೆ ಹಿನ್ನೆಲೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಈದ್ಗಾ ಮೈದಾನದಲ್ಲಿ ಯೋಗ ಮಾಡಲು ಅನುಮತಿ  ನೀಡುವಂತೆ ಶ್ರೀರಾಮಸೇನೆ ಬಿಬಿಎಂಪಿ ಪಶ್ಚಿಮ ವಲಯದ ಜಂಟಿ ಆಯುಕ್ತರಿಗೆ ಮನವಿ ಮಾಡಿದೆ.ಶ್ರೀರಾಮ ಸೇನೆ ಪ್ರತಿ ವರ್ಷ ಸಾರ್ವಜನಿಕವಾಗಿ ಯೋಗಾ ದಿನಾಚರಣೆ ನಡೆಸುತ್ತಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಹಕಾರದಿಂದ ವಿಶ್ವದಾದ್ಯಂತ ಆಚರಿಸಲಾಗುತ್ತೆ.  ಹೀಗಾಗಿ ಯೋಗಾ ದಿನದಂದು ಆಚರಣೆಗೆ ಅವಕಾಶ ನೀಡುವಂತೆ ಮನವಿ ಮಾಡಿದ್ದೇವೆ ಎಂದು ಟಿವಿ9ಗೆ ಶ್ರೀರಾಮ ಸೇನೆಯ ಬೆಂಗಳೂರು ಅಧ್ಯಕ್ಷ ಚಂದ್ರಶೇಖರ್ ಮಾಹಿತಿ ನೀಡಿದ್ದಾರೆ.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 10:57 pm, Tue, 7 June 22

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ