AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chamundi Hills: ಚಾಮುಂಡಿ ಬೆಟ್ಟದಲ್ಲಿ ಮೂರನೇ ಆಷಾಢ ಮಾಸದ ಸಂಭ್ರಮ: ನಾಡ ದೇವತೆಗೆ ವಿಶೇಷ ಪೂಜೆ

Chamundeshwari: ಮುಂಜಾಗೃತ ಕ್ರಮವಾಗಿ ಬೆಟ್ಟದಲ್ಲಿ ಬಿಗಿ ಪೊಲೀಸ್ ಬಂದೂಬಸ್ತ ಒದಗಿಸಲಾಗಿದೆ. ಜಿಲ್ಲಾಡಳಿತ ಬೆಟ್ಟಕ್ಕೆ ಉಚಿತ ಬಸ್ ವ್ಯವಸ್ಥೆ ಮಾಡಿದೆ. ಚಾಮುಂಡಿಬೆಟ್ಟದ ವಾಹನ ಪಾಸ್​ಗಳು ರದ್ದು ಮಾಡಲಾಗಿದೆ.

Chamundi Hills: ಚಾಮುಂಡಿ ಬೆಟ್ಟದಲ್ಲಿ ಮೂರನೇ ಆಷಾಢ ಮಾಸದ ಸಂಭ್ರಮ: ನಾಡ ದೇವತೆಗೆ ವಿಶೇಷ ಪೂಜೆ
ಚಾಮುಂಡಿ ಬೆಟ್ಟದಲ್ಲಿ ಮೂರನೇ ಆಷಾಢ ಮಾಸದ ಸಂಭ್ರಮ
TV9 Web
| Edited By: |

Updated on:Jul 15, 2022 | 8:49 AM

Share

ಮೈಸೂರು: ಚಾಮುಂಡಿ ಬೆಟ್ಟದಲ್ಲಿ ಮೂರನೇ ಆಷಾಢ ಮಾಸದ (Ashadha Masa) ಸಂಭ್ರಮ ಹಿನ್ನೆಲೆ ಮುಂಜಾನೆಯಿಂದಲೇ ನಾಡಿನ ಅಧಿದೇವತೆಗೆ ವಿಶೇಷ ಪೂಜೆ ಸಲ್ಲಿಸಲಾಗಿದೆ. ತಾಯಿಗೆ ರುದ್ರಾಭಿಷೇಕ, ಪಂಚಾಮೃತ ಅಭಿಷೇಕ, ಕುಂಕುಮಾರ್ಚನೆ ಮಾಡಿದ್ದು, ಬೆಳಗ್ಗೆಯಿಂದ ಭಕ್ತರಿಗೆ ಚಾಮುಂಡಿ ತಾಯಿ ದರ್ಶನಕ್ಕೆ ಅವಕಾಶ ನೀಡಿದ್ದು, ಇಂದು ರಾತ್ರಿ 9.30 ರವರೆಗೆ ದರ್ಶನಕ್ಕೆ ಅವಕಾಶವಿರಲಿದೆ. ಎಂದಿನಂತೆ ಖಾಸಗಿ ವಾಹನಗಳಿಗೆ ಬೆಟ್ಟಕ್ಕೆ ಪ್ರವೇಶ ನಿಷೇಧ ಮಾಡಿದ್ದು, ಮುಂಜಾಗೃತ ಕ್ರಮವಾಗಿ ಬೆಟ್ಟದಲ್ಲಿ ಬಿಗಿ ಪೊಲೀಸ್ ಬಂದೂಬಸ್ತ ಒದಗಿಸಲಾಗಿದೆ. ಜಿಲ್ಲಾಡಳಿತ ಬೆಟ್ಟಕ್ಕೆ ಉಚಿತ ಬಸ್ ವ್ಯವಸ್ಥೆ ಮಾಡಿದೆ. ಚಾಮುಂಡಿಬೆಟ್ಟದ ವಾಹನ ಪಾಸ್​ಗಳು ರದ್ದು ಮಾಡಲಾಗಿದ್ದು, ತುರ್ತು ಕರ್ತವ್ಯಕ್ಕಾಗಿ ಪಾಸ್ ವಿತರಿಸಲಾಗಿತ್ತು. ಕಳೆದ ವಾರ ಪಾಸ್ ಗೊಂದಲದಿಂದಾಗಿ ಸಾಕಷ್ಟು ಸಮಸ್ಯೆಯಾಗಿತ್ತು.

ಇದನ್ನೂ ಓದಿ: ಮೈಸೂರು ಚಾಮುಂಡಿ ಬೆಟ್ಟದಲ್ಲಿ ಆಷಾಢ ಶುಕ್ರವಾರ: ಖಾಸಗಿ ವಾಹನಗಳಿಗೆ ನಿರ್ಬಂಧ; ಪಾಸ್​​ ರದ್ದು

ಹಾಗಾಗಿ ಈ ವಾರ ಪಾಸ್​ಗೆ ಬ್ರೇಕ್ ಹಾಕಲಾಗಿದೆ. ಜುಲೈ 15, 22ರಂದು ಆಷಾಢ ಶುಕ್ರವಾರ ಮತ್ತು ಜುಲೈ 20ರಂದು ವರ್ಧಂತಿಗೂ ಪಾಸ್ ಕೊಡದಿರಲು ನಿರ್ಧರಿಸಲಾಗಿದೆ. ಚಾಮುಂಡಿಬೆಟ್ಟಕ್ಕೆ ತೆರಳುವವರು ಬಸ್​ನಲ್ಲೇ ತೆರಳುವಂತೆ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಚಾಮುಂಡಿ ಬೆಟ್ಟದಲ್ಲಿ ರೋಪ್​ವೇ ಯೋಜನೆ: ಸರ್ಕಾರದ ನಿರ್ಧಾರ ಸರಿ ಇದೆ ಎಂದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್

ನಾಡದೇವತೆ ಮಹಿಷಾಸುರ ಮರ್ದಿನಿ ಚಾಮುಂಡೇಶ್ವರಿ ತಾಯಿಗೆ ಆಷಾಢ ಮಾಸದಲ್ಲಿ ವಿಶೇಷ ಪೂಜೆಗೆ ಆಗಮಿಸುವ ಭಕ್ತರು ಕಡ್ಡಾಯವಾಗಿ ಕೊರೊನಾ  2ನೇ ಡೋಸ್​ ​ ಪಡೆದಿರುವ ಜೊತೆಗೆ ನೆಗೆಟಿವ್ ವರದಿಯ ಪ್ರತಿ ಕಡ್ಡಾಯ ತರಬೇಕು ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಸೋಮಶೇಖರ್ ಹೇಳಿದ್ದರು. ಪ್ರತಿ ವರ್ಷ ಆಷಾಢ ಮಾಸದ ಶುಕ್ರವಾರ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಮಾಡಲಾಗುತ್ತದೆ. ಈ ಪೂಜೆಯನ್ನು ಕಣ್ಣತುಂಬಿಕೊಳ್ಳಲು ಅಪಾರ ಸಂಖ್ಯೆಯ ಭಕ್ತರು ಬಂದು ತಾಯಿಯ ದರ್ಶನ ಪಡೆದರು.

Published On - 8:35 am, Fri, 15 July 22

48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ