ಸಂಸತ್ನೊಳಗೆ ನುಸುಳಿ ಹಂಗಾಮ ಮಾಡಿದ ಮನೋರಂಜನ್ ಮನೆಯಲ್ಲಿ ಕೇಂದ್ರ ಗುಪ್ತಚರ ಇಲಾಖೆ ಅಧಿಕಾರಿಗಳ ಪರಿಶೀಲನೆ
ದೆಹಲಿಯ ಸಂಸತ್ ಭವನಕ್ಕೆ ನುಗ್ಗಿ ಆತಂಕ ಸೃಷ್ಟಿಸಿದ್ದ ಮನೋರಂಜನ್ ಮನೆಗೆ ಕೇಂದ್ರ ಮತ್ತು ರಾಜ್ಯ ಗುಪ್ತಚರ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಧಿಕಾರಿಗಳು ಮನೋರಂಜನ್ ಪೂರ್ವಾಪರ ಮಾಹಿತಿ ಸಂಗ್ರಹಿಸಿದ್ದಾರೆ. ಮನೋರಂಜನ್ ಕೊಠಡಿಯಲ್ಲಿ ಇಂಚಿಂಚು ಪರಿಶೀಲನೆ ನಡೆಸಲಾಗಿದೆ.
ಮೈಸೂರು, ಡಿ.14: ಲೋಕಸಭೆ ಕಲಾಪದ ವೇಳೆ ಭಾರಿ ಭದ್ರತಾ ಲೋಪ (Parliament Security Breach) ಪ್ರಕರಣಕ್ಕೆ ಸಂಬಂಧಿಸಿ ಮೈಸೂರಿನ ವಿಜಯನಗರದಲ್ಲಿರುವ ಆರೋಪಿ ಮನೋರಂಜನ್ ಮನೆಗೆ ಕೇಂದ್ರ ಗುಪ್ತಚರ ಇಲಾಖೆ ಅಧಿಕಾರಿಗಳು (Central Intelligence Agency Officials) ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಾಗೂ ಮನೋರಂಜನ್ ಕುಟುಂಬಸ್ಥರಿಂದ ಮಾಹಿತಿ ಸಂಗ್ರಹಿಸಿದ್ದಾರೆ. ಸುಮಾರು 1 ಗಂಟೆಗೂ ಹೆಚ್ಚು ಸಮಯದಿಂದ ಮನೋರಂಜನ್ ಮನೆಯಲ್ಲಿ ತಪಾಸಣೆ ನಡೆಸಿ ಹಿಂದಿರುಗಿದ್ದಾರೆ.
ದೆಹಲಿಯ ಸಂಸತ್ ಭವನಕ್ಕೆ ನುಗ್ಗಿ ಆತಂಕ ಸೃಷ್ಟಿಸಿದ್ದ ಮನೋರಂಜನ್ ಮನೆಗೆ ನಿನ್ನೆ ಎಸಿಪಿ ಗಜೇಂದ್ರ ಪ್ರಸಾದ್, ವಿಜಯನಗರ ಪಿಐ ಸುರೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಆಗ ಮನೋರಂಜನ್ ಮನೆಯಲ್ಲಿ ಕ್ರಾಂತಿಕಾರಿ ಚಿಗುವೆರಾ ಸೇರಿದಂತೆ ಹಲವು ದಾರ್ಶನಿಕರು, ಕ್ರಾಂತಿಕಾರಿಗಳ ಬಗ್ಗೆಗಿನ ಪುಸ್ತಕಗಳು ಪತ್ತೆಯಾಗಿದ್ದವು. ಸದ್ಯ ಇಂದು ಮೈಸೂರಿನ ವಿಜಯನಗರದಲ್ಲಿರುವ ಮನೋರಂಜನ್ ಮನೆಗೆ ಕೇಂದ್ರ ಗುಪ್ತಚರ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಕುಟುಂಬಸ್ಥರಿಂದ ಮಾಹಿತಿ ಸಂಗ್ರಹಿಸಿ ಮನೆಯ ಪರಿಶೀಲನೆ ನಡೆಸಿದ್ದಾರೆ.
ಕೇಂದ್ರ ಮತ್ತು ರಾಜ್ಯ ಗುಪ್ತಚರ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಅಧಿಕಾರಿಗಳು ಮನೋರಂಜನ್ ಪೂರ್ವಾಪರ ಮಾಹಿತಿ ಸಂಗ್ರಹಿಸಿದ್ದಾರೆ. ಮನೋರಂಜನ್ ಕೊಠಡಿಯಲ್ಲಿ ಇಂಚಿಂಚು ಪರಿಶೀಲನೆ ನಡೆಸಲಾಗಿದೆ. ಮನೋರಂಜನ್ ಸಂಪರ್ಕದಲ್ಲಿದ್ದವರಿಗಾಗಿ ಐಬಿ ಅಧಿಕಾರಿಗಳು ಶೋಧ ನಡೆಸುತ್ತಿದ್ದಾರೆ. ಕೇಂದ್ರ ಗುಪ್ತಚರ ಇಲಾಖೆಯ ಮೈಸೂರು ವಿಭಾಗದ ಉಪ ನಿರ್ದೇಶಕ ಪ್ರವೀಣ್ ನೇತೃತ್ವದಲ್ಲಿ ಮನೆಯಲ್ಲಿ ಪರಿಶೀಲನೆ ನಡೆಸಲಾಗಿದೆ.
ಇದನ್ನೂ ಓದಿ: ಲೋಕಸಭೆ ಸದನದೊಳಗೆ ನುಗ್ಗಿ ಹಂಗಾಮ ಮಾಡಿದ ಮನೋರಂಜನ್ಗೆ ಇದೆ ಬೆಂಗಳೂರಿನ ನಂಟು, ಈತ ಓದಿದ್ದು ಬೆಂಗಳೂರಿನ BITಯಲ್ಲಿ
2014 ರಲ್ಲಿ ಇಂಜಿನಿಯರಿಂಗ್ ಮುಗಿಸಿದ ಮನೋರಂಜನ್ ಅದಾದ ಬಳಿಕ ಕೆಲ ದಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡಿದ್ದಾನೆ. ಆದಾದ ಬಳಿಕ ಕೆಲಸ ಇಷ್ಟ ಇಲ್ಲದೆ ಪುಸ್ತಕ ಓದುವ ಹುಚ್ಚು ಹತ್ತಿಸಿಕೊಂಡಿದ್ದ. ಇದಕ್ಕೆ ಸಾಕ್ಷಿ ಎಂಬಂತೆ ಮನೆಯಲ್ಲಿ ಸಾಕಷ್ಟು ಪುಸ್ತಕಗಳು ಪತ್ತೆಯಾಗಿದೆ. ಅದರಲ್ಲೂ ಅನೇಕ ಪುಸ್ತಕಗಳು ಕ್ರಾಂತಿಕಾರಿಗಳ ಪುಸ್ತಕಗಳೆ ಇವೆ.
ಮನೋರಂಜನ್ ತಂದೆ ಕೂಡ ಮಗನ ಕೃತ್ಯವನ್ನ ಖಂಡಿಸಿದ್ದಾರೆ. ಮಗ ಮಾಡಿದ್ದು ತಪ್ಪು ಆತನನ್ನ ಗಲ್ಲಿಗೆರಿಸಿ ಅಂತನು ಹೇಳ್ತಿದ್ದಾರೆ. ಅಷ್ಟೆ ಅಲ್ಲದೆ ಆತ ಬೆಂಗಳೂರಿಗೆ ಹೋಗುತ್ತಿದ್ದ, ದೆಹಲಿಗೆ ಯಾಕಾಗಿ ಹೋಗಿದ್ದ ಅಂತ ಗೊತ್ತಿಲ್ಲ ಅಂತ ಹೇಳಿದ್ದಾರೆ. ಇನ್ನು ಬಿಇಗೆ ಸೀಟ್ ಕೊಡಿಸಿದ್ದೆ ಮಾಜಿ ಪ್ರಧಾನಿ ದೇವೇಗೌಡರು ಎಂದು ಮನೋರಂಜನ್ ತಂದೆ ದೇವರಾಜೇಗೌಡ ತಿಳಿಸಿದ್ದಾರೆ.
ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ