ಬಿಜೆಪಿಗೆ ಬಿಗ್ ಶಾಕ್, ಸಂಸದ ಶ್ರೀನಿವಾಸ್ ಪ್ರಸಾದ್ ಅಳಿಯ ಬೆನ್ನಲ್ಲೇ ಈಗ ಸಹೋದರ ಕಾಂಗ್ರೆಸ್ ಸೇರ್ಪಡೆ
ಸಿಎಂ ಸಿದ್ದರಾಮಯ್ಯನವರು ಈ ಬಾರಿ ತವರು ಜಿಲ್ಲೆ ಮೈಸೂರು ಜೊತೆಗೆ ಚಾಮರಾಜನಗರ ಲೋಕಸಭಾ ಕ್ಷೇತ್ರಗಳನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದು, ಗೆಲ್ಲಲ್ಲೇಬೇಕೆಂದು ಪಣತೊಟ್ಟಿದ್ದಾರೆ. ಹೀಗಾಗಿ ಈ ಎರಡೂ ಕ್ಷೇತ್ರಗಳಲ್ಲಿ ಆಪರೇಷನ್ ಹಸ್ತದ ಭರಾಟೆ ಜೋರಾಗಿದೆ. ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್ ಸೋದರ ಕಾಂಗ್ರೆಸ್ ಸೇರ್ಪಡೆಯಾಗಿದ್ದು, ಚುನಾವಣೆ ಹೊಸ್ತಿಲ್ಲಲ್ಲೇ ಬಿಜೆಪಿ ಆಘಾತವಾಗಿದೆ.
ಮೈಸೂರು, (ಏಪ್ರಿಲ್ 02): ಸಿಎಂ ಸಿದ್ದರಾಮಯ್ಯನವರ (Siddaramaiah) ಸೂಚನೆ ಮೇರೆಗೆ ಮೊನ್ನೆ ಅಷ್ಟೇ ಸಚಿವರಾದ ಎಚ್ಸಿ ಮಹದೇವಪ್ಪ, ವೆಂಕಟೇಶ್ ಸೇರಿದಂತೆ ಚಾಮರಾನಗರ ಮತ್ತು ಮೈಸೂರು(mYsuru) ಕಾಂಗ್ರೆಸ್ ನಾಯಕರು ಸೇರಿಸಕೊಂಡು ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್(Srinivas Prasad) ಅವರನ್ನು ಭೇಟಿ ಮಾಡಿದ್ದರು. ಅಲ್ಲದೇ ಕಾಂಗ್ರೆಸ್‌ಗೆ ಬೆಂಬಲಿಸುವಂತೆ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ ಶ್ರೀನಿವಾಸ್ ಪ್ರಸಾದ್ ಅಳಿಯ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಅಲ್ಲದೇ ಇದೀಗ ಶ್ರೀನಿವಾಸ್ ಪ್ರಸಾದ್ ಅವರ ಸಹೋದರ ವಿ.ರಾಮಸ್ವಾಮಿ ಸಹ ಕಾಂಗ್ರೆಸ್ ಸೇರ್ಪಡೆಯಾದರು. ಹೌದು… ಮೈಸೂರಿನಲ್ಲಿ ಇಂದು (ಏಪ್ರಿಲ್ 02) ವಿ.ರಾಮಸ್ವಾಮಿ ಅವರು ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾದರು. ಇದರಿಂದ ಚುನಾವಣೆ ಹೊತ್ತಲ್ಲೇ ಬಿಜೆಪಿಗೆ ಮರ್ಮಾಘಾತವಾಗಿದೆ.
ಕಾಂಗ್ರೆಸ್ ಸೇರಿದ ಬಳಿಕ ಮಾತನಾಡಿದ ರಾಮಸ್ವಾಮಿ, ನಾವೆಲ್ಲರೂ ಪ್ರಾಮಾಣಿಕವಾಗಿ ಸಿದ್ದರಾಮಯ್ಯನವರ ಕೈಬಲಪಡಿಸಬೇಕು.ಆಗ ಸಿಎಂ ಸಿದ್ದರಾಮಯ್ಯಗೆ ಬಲ ಹೆಚ್ಚಾದಷ್ಟು ನಮ್ಮ ಕೈಗೆ ಬಲ ಬರುತ್ತೆ. ಸಿದ್ದರಾಮಯ್ಯ ನಮ್ಮ ಕ್ಷೇತ್ರದವರಾಗಿದ್ದಾರೆ. ನಮ್ಮ ಭಾಗದ ಅಭಿವೃದ್ಧಿಗೆ ಅವರಲ್ಲಿ ಮನವಿ ಮಾಡಿಕೊಳ್ಳಬಹುದು. ನಾವೆಲ್ಲಾ ಪ್ರಾಮಾಣಿಕವಾಗಿ ದುಡಿದು ‘ಕೈ’ ಅಭ್ಯರ್ಥಿ ಗೆಲ್ಲಿಸಬೇಕು. ಆಗ ಮಾತ್ರ ನಾವು ಕಾಂಗ್ರೆಸ್ ಪಕ್ಷ ಸೇರಿದ್ದಕ್ಕೆ ಸಾರ್ಥಕವಾಗುತ್ತದೆ. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಬೃಹತ್ ಸಮಾವೇಶ ಮಾಡೋಣ ಎಂದರು.
ಇದನ್ನೂ ಓದಿ: ಕಾಂಗ್ರೆಸ್ ನಾಯಕರೊಂದಿಗೆ ಈಗಲೂ ಆತ್ಮೀಯ ಒಡನಾಟವಿದೆ: ವಿ ಶ್ರೀನಿವಾಸ್ ಪ್ರಸಾದ್, ಸಂಸದ
ಚಾಮರಾಜನಗರ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಅಳಿಯ ಧೀರಜ್ ಪ್ರಸಾದ್ ಮತ್ತು ಸಹೋದರ ಕಾಂಗ್ರೆಸ್ ಸೇರಿದ್ದಾರೆ. ಈ ಮೂಲಕ ಸಿಎಂ ಸಿದ್ದರಾಮಯ್ಯ ಚಾಮರಾಜನಗರ, ಮೈಸೂರಿನಲ್ಲಿ ಆಪರೇಷನ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
ಶ್ರೀನಿವಾಸ್ ಪ್ರಸಾದ್ ಅವರ ಹಲವಾರು ನಿಷ್ಠಾವಂತರು ಮತ್ತು ಕುಟುಂಬ ಸದಸ್ಯರು ಭಾರತೀಯ ಜನತಾ ಪಕ್ಷವನ್ನು (ಬಿಜೆಪಿ) ತೊರೆದು ಕಾಂಗ್ರೆಸ್‌ಗೆ ಸೇರುವ ಮೂಲಕ ಈ ಬದಲಾವಣೆಯು ಲೋಕಸಭೆ ಚುನಾವಣೆಯ ಪೂರ್ವದಲ್ಲಿ ನಿರ್ಣಾಯಕ ಬೆಳವಣಿಗೆಯಾಗಿದೆ. ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸಿರುವ ಹಿನ್ನೆಲೆಯಲ್ಲಿ ಶ್ರೀನಿವಾಸ್ ಪ್ರಸಾದ್ ಅವರನ್ನು ಹೊರತುಪಡಿಸಿ ಅವರ ನಿಷ್ಠಾವಂತರು ಮತ್ತು ಕುಟುಂಬ ಸದಸ್ಯರನ್ನು ಪಕ್ಷಕ್ಕೆ ಮರಳಿ ಕರೆತರುವಲ್ಲಿ ಕಾಂಗ್ರೆಸ್ ಯಶಸ್ವಿಯಾಗಿದೆ. ಇನ್ನುಳಿದಂತೆ ಶ್ರೀನಿವಾಸ್ ಪ್ರಸಾದ್ ಅವರ ಬೆಂಬಲಿಗರಿಗೂ ಸಹ ಕಾಂಗ್ರೆಸ್ ಗಾಳ ಹಾಕಿದೆ.
ಎರಡು ದಿನಗಳ ಹಿಂದಷ್ಟೇ ಸಚಿವ ಮಹದೇವಪ್ಪ ಅವರು ರಾಜಕೀಯ ವೈರತ್ವ ಮರೆತು ತಮ್ಮ ಬೆಂಬಲಿಗರ ಜೊತೆ ಸೇರಿಕೊಂಡು ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್ ಅವರನ್ನು ಭೇಟಿಯಾಗಿದ್ದರು.
ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ