AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದಿಂದ ನಮ್ಮ ಆಚರಣೆ, ಪರಂಪರೆಗೆ ಧಕ್ಕೆ: ಯದುವೀರ್

ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ ಪ್ರಾಧಿಕಾರ ರಚನೆ ಮಾಡುತ್ತಿದೆ. ಆದರೆ, ಪ್ರಾಧಿಕಾರ ರಚನೆಗೆ ರಾಜಮನೆತನ ಆಕ್ಷೇಪ ವ್ಯಕ್ತಪಡಿಸಿದೆ. ಈ ವಿಚಾರವಾಗಿ ರಾಜಮನೆತನ ಮತ್ತು ಸರ್ಕಾರದ ನಡುವೆ ಗುದ್ದಾಟ ನಡೆದಿದೆ. ರಾಜ ಯದುವೀರ್ ಒಡೆಯರ್​ ಸರ್ಕಾರದ ವಿರುದ್ಧ ಅಸಮಾಧಾನ ಹೊರ ಹಾಕಿದರು.

ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದಿಂದ ನಮ್ಮ ಆಚರಣೆ, ಪರಂಪರೆಗೆ ಧಕ್ಕೆ: ಯದುವೀರ್
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್
TV9 Web
| Updated By: ವಿವೇಕ ಬಿರಾದಾರ|

Updated on:Sep 03, 2024 | 3:29 PM

Share

ಮೈಸೂರು, ಸೆಪ್ಟೆಂಬರ್​ 03: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಇಂದು (ಸೆ.03) ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ (Chamundeshwari Development Authority) ಸಭೆ ನಡೆಸಿದರು. ಈ ಸಭೆಗೆ ಯದುವಂಶದ ಪ್ರಮೋದಾದೇವಿ ಒಡೆಯರ್ (Pramoda Devi Wadiyar)​ ಮತ್ತು ರಾಜ, ಸಂಸದ ಯದುವೀರ್​ ಒಡೆಯರ್ (Yaduveer Krishnadatta Chamaraja Wadiyar) ಅವರು ವಿರೋಧ ವ್ಯಕ್ತಪಡಿಸಿದ್ದಾರೆ. ಸಭೆ ವಿಚಾರವಾಗಿ ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಚಾಮುಂಡೇಶ್ವರಿ ಕ್ಷೇತ್ರ ಪ್ರಾಧಿಕಾರದ ಸಭೆ ನಿಯಮ ಬಾಹಿರವಾಗಿದೆ ಎಂದು ಹೇಳಿದರು.

ಪ್ರಾಧಿಕಾರದಿಂದ ನಮ್ಮ ನಂಬಿಕೆ, ಆಚರಣೆ ಪರಂಪರೆಗೆ ಧಕ್ಕೆ ಬರುತ್ತೆ. ನಮ್ಮ ಹಕ್ಕನ್ನು ನಾವು ಯಾವತ್ತೂ ಬಿಟ್ಟು ಕೊಡುವುದಿಲ್ಲ. ಬೆಟ್ಟವನ್ನು ನಿಯಂತ್ರಿಸಲು ಸರ್ಕಾರ ಪ್ರಾಧಿಕಾರ ರಚನೆ ಮಾಡುತ್ತಿದೆ. ಹುಂಡಿ ಹಣ ಆಯಾ ದೇವಸ್ಥಾನದ ಅಭಿವೃದ್ಧಿಗೆ ಬಳಕೆ ಆಗಬೇಕು. ಹಿಂದೂ ದೇವಾಲಯಗಳ ಮೇಲೆ ಏಕೆ ರೀತಿ ಮಾಡಲಾಗುತ್ತಿದೆ. ಪ್ರಾಧಿಕಾರ ರಚನೆಯಾದರೆ ನಮ್ಮ ಆಚರಣೆಗೂ ಬ್ರೇಕ್ ಬೀಳುತ್ತೆ. ಈ ಸಂಬಂಧ ಕಾನೂನು ಹೋರಾಟ ಮುಂದುವರಿಯಲಿದೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.

ಇದನ್ನೂ ಓದಿ: ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆ ಮುಂದೂಡಲು ಸಾಧ್ಯವಿಲ್ಲ: ಸಿದ್ದರಾಮಯ್ಯ

ತಡೆಯಾಜ್ಞೆ ನಡುವೆಯೂ ಸಭೆ ನಡೆಸುತ್ತಿರುವುದು ನ್ಯಾಯಾಂಗ ನಿಂದನೆ ಆಗುತ್ತದೆ. ನ್ಯಾಯಾಂಗ ನಿಂದನೆಗೆ ಒಳಪಡುವ ಸಭೆಗೆ ನಾನು ಹೋಗುವುದಿಲ್ಲ. ಪ್ರಾಧಿಕಾರ ರಚನೆ ಸಂಬಂಧ ಸೆಪ್ಟೆಂಬರ್​​ 5ರವರೆಗೆ ತಡೆಯಾಜ್ಞೆ ಇರುವುದು ಸತ್ಯ. ಮುಖ್ಯಮಂತ್ರಿಗಳು ಹೇಗೆ ತಡೆಯಾಜ್ಞೆ ತೆರವಾಗಿದೆ ಎಂದು ಹೇಳಿದರು ಗೊತ್ತಿಲ್ಲ ಎಂದರು.

ಏನಿದು ವಿವಾದ

ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ರಚನೆ ಆಕ್ಷೇಪ ವ್ಯಕ್ತಪಡಿಸಿ ಪ್ರಮೋದಾದೇವಿ ಒಡೆಯರ್​ ಅವರು ಜುಲೈ 26 ರಂದು ತಡೆಯಾಜ್ಞೆ ತಂದಿದ್ದರು. ಈ ತಡೆಯಾಜ್ಞೆ ತೆರವುಗೊಳಿಸುವಂತೆ ಸರ್ಕಾರ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದೆ. ಸರ್ಕಾರದ ಪರ ವಕೀಲರು ನ್ಯಾಯಾಲಯಕ್ಕೆ, ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಸರ್ಕಾರ ಜೂನ್​ 28 ರಂದು ಆದೇಶ ಹೊರಡಿಸಿತ್ತು. ಜುಲೈ 1 ರಿಂದಲೇ ಕಾಯ್ದೆ ಜಾರಿಗೆ ಬಂದಿದೆ. ಹೀಗಾಗಿ ತಡೆಯಾಜ್ಞೆ ಮಧ್ಯಂತರ ಆದೇಶ ತೆರವು ಮಾಡಬೇಕು ಎಂದು ಮನವಿ ಮಾಡಿದರು.

ಪ್ರಮೋದಾದೇವಿ ಒಡೆಯರ್​ ಪರ ವಕೀಲರು ಮತ್ತೆ ಮಧ್ಯಂತರ ಆದೇಶವನ್ನು ನೀಡಬೇಕು ಎಂದು ಕೋರಿದರು. ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ, ಪ್ರಕರಣ ಸಂಬಂಧ ಆಕ್ಷೇಪಣೆ ಸಲ್ಲಿಸುವಂತೆ ಒಡೆಯರ್​ ಪರ ವಕೀಲರಿಗೆ ಸೂಚನೆ ನೀಡಿ, ವಿಚಾರಣೆಯನ್ನು ಸೆಪ್ಟೆಂಬರ್​ 5ಕ್ಕೆ ಮುಂದೂಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 2:39 pm, Tue, 3 September 24