ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆ ಮುಂದೂಡಲು ಸಾಧ್ಯವಿಲ್ಲ: ಸಿದ್ದರಾಮಯ್ಯ

ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ರಚನೆ ಸಂಬಂಧ ಸರ್ಕಾರ ಮತ್ತು ರಾಜಮನೆತನದ ನಡುವೆ ಗುದ್ದಾಟ ನಡೆದಿದೆ. ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆಯನ್ನು ಕಾನೂನಾತ್ಮಕವಾಗಿ ಮಾಡುತ್ತಿದ್ದೇನೆ. ಯಾರದ್ದೋ ಹೇಳಿಕೆ ಆಧರಿಸಿ ಸಭೆ ಮಾಡಲು ಆಗುವುದಿಲ್ಲ. ಸಭೆ ಮುಂದೂಡಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆ ಮುಂದೂಡಲು ಸಾಧ್ಯವಿಲ್ಲ: ಸಿದ್ದರಾಮಯ್ಯ
ಸಿದ್ದರಾಮಯ್ಯ
Follow us
| Updated By: ವಿವೇಕ ಬಿರಾದಾರ

Updated on:Sep 03, 2024 | 11:14 AM

ಮೈಸೂರು, ಸೆಪ್ಟೆಂಬರ್​ 03: ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ (Chamundeshwari Development Authority) ಸಭೆಯನ್ನು ಕಾನೂನಾತ್ಮಕವಾಗಿ ಮಾಡುತ್ತಿದ್ದೇನೆ. ಯಾರದ್ದೋ ಹೇಳಿಕೆ ಆಧರಿಸಿ ಸಭೆ ಮಾಡಲು ಆಗುವುದಿಲ್ಲ. ಸಭೆ ಮುಂದೂಡಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹೇಳಿದರು. ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಯದುವೀರ್ ಹೇಳಿಕೆ ಮುಖ್ಯವೋ ಕಾನೂನು ಮುಖ್ಯವೋ? ನಾನು ಕಾನೂನು ಪ್ರಕಾರವೇ ಇವತ್ತಿನ ಸಭೆ ಮಾಡುತ್ತಿದ್ದೇನೆ. ಕೋರ್ಟ್​​​ನಲ್ಲಿ ತಡೆಯಾಜ್ಞೆ ತೆರವು ಆಗಿದ್ದಕ್ಕೆ ಸಭೆ ಮಾಡುತ್ತಿದ್ದೇನೆ ಎಂದು ತಿಳಿಸಿದರು.

ಮುಡಾ ಮಾಜಿ ಆಯುಕ್ತ ದಿನೇಶ್ ಅಮಾನತು ವಿಚಾರ ಗೊತ್ತಿಲ್ಲ. 2009ರ ಹಿಂದಿನ ಬಡಾವಣೆಗೆ 50:50 ಬದಲಿ ನಿವೇಶನ ಅನ್ವಯ ಆಗುವುದಿಲ್ಲ. ಈ ಅಂಶ ಉಲ್ಲೇಖದ ಬಗ್ಗೆ ನನಗೆ ಮಾಹಿತಿ ಇಲ್ಲ. ಮುಡಾ ಆದೇಶದ ಅಂಶಗಳು ಏನು ಎಂಬುದು ಸಹ ಗೊತ್ತಿಲ್ಲ. ಗೊತ್ತಿಲ್ಲದನ್ನು ನಾನು ಹೇಗೆ ವಿವರವಾಗಿ ಹೇಳಲಿ. ಆದೇಶದಲ್ಲಿ ಏನಿದೆ ಎಂದು ನೋಡಿಕೊಂಡು ಮಾತನಾಡುತ್ತೇನೆ ಎಂದು ಹೇಳಿದರು.

ಇದನ್ನೂ ಓದಿ: ಸರ್ಕಾರ vs ರಾಜಮನೆತನ: ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆಗೆ ರಾಜಮಾತೆ ವಿರೋಧ

ಸರ್ಕಾರಕ್ಕೆ ಕೊರೊನಾ​​ ಹಗರಣದ ಮಧ್ಯಂತರ ವರದಿ ಸಲ್ಲಿಕೆ ವಿಚಾರವಾಗಿ ಮಾತನಾಡಿದ ಅವರು, ಮುಂದಿನ ಸಚಿವ ಸಂಪುಟದ ಮುಂದೆ ವರದಿ ಮಂಡಿಸುತ್ತೇನೆ. ಸಂಪುಟದಲ್ಲಿ ಚರ್ಚೆ ಮಾಡಿ ಮುಂದಿನ ತೀರ್ಮಾನ ಹೇಳುತ್ತೇನೆ. ವರದಿಯಲ್ಲಿ ಏನಿದೆ ಎಂಬುದನ್ನು ನಾನು ನೋಡಿಲ್ಲ. ಎಷ್ಟು ಪ್ರಮಾಣದ ಭ್ರಷ್ಟಾಚಾರ ಆಗಿದೆ ಎಂಬುದು ಗಮನಕ್ಕೆ ಬಂದಿಲ್ಲ. ನನ್ನ ಗಮನಕ್ಕೆ ಬರದೆ ಸುಧಾಕರ್​​ಗೆ ಮಾಹಿತಿ ಕೊಟ್ಟವರು ಯಾರು? ಕುಂಬಳಕಾಯಿ‌ ಕಳ್ಳ ಅಂದ್ರೆ ಏಕೆ ಹೆಗಲು ಮುಟ್ಟಿಕೊಳ್ಳಬೇಕು? ಕೆ.ಸುಧಾಕರ್​​ಗೆ ಸುಳ್ಳು ವರದಿ ಎಂದು ಹೇಗೆ ಗೊತ್ತಾಗುತ್ತದೆ?. ಸುಧಾಕರ್ ತಪ್ಪು ಮಾಡಿರುವುದು ಮಾನಸಿಕವಾಗಿ ಗೊತ್ತಿದೆ. ಹೀಗಾಗಿ ಅವನು ಆ ರೀತಿ ಮಾತನಾಡುತ್ತಿದ್ದಾನೆ ಎಂದರು.

ಅಂಗನವಾಡಿ ಕಾರ್ಯಕರ್ತೆಯರಿಗೆ ವೇತನ ಆಗದ ವಿಚಾರವಾಗಿ ಮಾತನಾಡಿದ ಅವರು, ಈ ಬಗ್ಗೆ ನನ್ನ ಗಮನಕ್ಕೆ ಬಂದಿಲ್ಲ, ಮಾಹಿತಿ ಪಡೆಯುತ್ತೇನೆ. ಆದರೆ, ನಾವು ಯಾವುದೇ ವೇತನ ಬಾಕಿ ಉಳಿಸಿಕೊಂಡಿಲ್ಲ. ಮಾಹಿತಿ ಪಡೆದು ಚರ್ಚೆ ಮಾಡ್ತೇನೆ ಎಂದು ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:01 am, Tue, 3 September 24

ದರ್ಶನ್​ಗೆ ಕೆಟ್ಟ ಸಮಯ ನಡೆಯುತ್ತಿದೆ, ಫೆಬ್ರವರಿಗೆ ಸರಿಹೋಗುತ್ತೆ: ಕೆ ಮಂಜು
ದರ್ಶನ್​ಗೆ ಕೆಟ್ಟ ಸಮಯ ನಡೆಯುತ್ತಿದೆ, ಫೆಬ್ರವರಿಗೆ ಸರಿಹೋಗುತ್ತೆ: ಕೆ ಮಂಜು
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ ದಿನಾಂಕ ಯಾವುದು ಗೊತ್ತಾ?
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ ದಿನಾಂಕ ಯಾವುದು ಗೊತ್ತಾ?
ಮಸೀದಿ ಮುಂದೆ ಪಟಾಕಿ ಸಿಡಿಸಿದ್ದಕ್ಕೆ ಹಿಂದೂ ಕಾರ್ಯಕರ್ತರ ವಿರುದ್ಧ ಎಫ್​ಐಆರ್
ಮಸೀದಿ ಮುಂದೆ ಪಟಾಕಿ ಸಿಡಿಸಿದ್ದಕ್ಕೆ ಹಿಂದೂ ಕಾರ್ಯಕರ್ತರ ವಿರುದ್ಧ ಎಫ್​ಐಆರ್
ಆರ್​ಎಸ್ಎಸ್, ಬಿಜೆಪಿ ವಿರುದ್ಧ ಎಂ ಲಕ್ಷ್ಮಣ್ ಗಂಭೀರ ಆರೋಪ
ಆರ್​ಎಸ್ಎಸ್, ಬಿಜೆಪಿ ವಿರುದ್ಧ ಎಂ ಲಕ್ಷ್ಮಣ್ ಗಂಭೀರ ಆರೋಪ
ವಿಡಿಯೋ ನೋಡಿ - ಪಪ್ಪಾಯಿ ಹಣ್ಣಿನಲ್ಲಿ ವಿಚಿತ್ರ ವಿನಾಯಕ!
ವಿಡಿಯೋ ನೋಡಿ - ಪಪ್ಪಾಯಿ ಹಣ್ಣಿನಲ್ಲಿ ವಿಚಿತ್ರ ವಿನಾಯಕ!
‘ಬೇರೇ ಜೈಲಿಗೆ ಶಿಫ್ಟ್ ಮಾಡಿ ಪ್ಲೀಸ್’; ಬಳ್ಳಾರಿ ಜೈಲಲ್ಲಿ ಸುಸ್ತಾದ ದರ್ಶನ್
‘ಬೇರೇ ಜೈಲಿಗೆ ಶಿಫ್ಟ್ ಮಾಡಿ ಪ್ಲೀಸ್’; ಬಳ್ಳಾರಿ ಜೈಲಲ್ಲಿ ಸುಸ್ತಾದ ದರ್ಶನ್
ನಾಗಮಂಗಲ ಕೋಮುಗಲಭೆ​​: ಬೆಂಕಿ ಬಿದ್ದಿದ್ದ ಬೈಕ್​ ಶೋರೂಂಗೆ ಹೆಚ್​ಡಿಕೆ ಭೇಟಿ
ನಾಗಮಂಗಲ ಕೋಮುಗಲಭೆ​​: ಬೆಂಕಿ ಬಿದ್ದಿದ್ದ ಬೈಕ್​ ಶೋರೂಂಗೆ ಹೆಚ್​ಡಿಕೆ ಭೇಟಿ
ನಾಗಮಂಗಲ ಕೋಮುಗಲಭೆ ಕೇಸ್​​: ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ನಾಗಮಂಗಲ ಕೋಮುಗಲಭೆ ಕೇಸ್​​: ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
Daily Devotional: ಎಕ್ಕದ ಗಣಪತಿಯ ಮಹತ್ವ ತಿಳಿಯಿರಿ
Daily Devotional: ಎಕ್ಕದ ಗಣಪತಿಯ ಮಹತ್ವ ತಿಳಿಯಿರಿ
Nithya Bhavishya: ಈ ರಾಶಿಯವರಿಗೆ ಆಸ್ತಿ ಖರೀದಿಯ ಯೋಜನೆ ಯಶಸ್ವಿಯಾಗಬಹುದು
Nithya Bhavishya: ಈ ರಾಶಿಯವರಿಗೆ ಆಸ್ತಿ ಖರೀದಿಯ ಯೋಜನೆ ಯಶಸ್ವಿಯಾಗಬಹುದು