ಚಾಮುಂಡಿ ಬೆಟ್ಟದಲ್ಲಿ ರೋಪ್ವೇ ಅಗತ್ಯವಿಲ್ಲ; ಸರ್ಕಾರಕ್ಕೆ ಗಣ್ಯರ ಮೂಲಕ ಪತ್ರ ಬರೆಸಲು ಮುಂದಾದ ಚಾಮುಂಡಿಬೆಟ್ಟ ಉಳಿಸಿ ಸಮಿತಿ

Chamundi Betta Ropeway: ಚಾಮುಂಡಿ ಬೆಟ್ಟದಲ್ಲಿ ಅಭಿವೃದ್ಧಿ ಹೆಸರಿನಲ್ಲಿ ಪರಿಸರ ನಾಶ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಸರ್ಕಾರಕ್ಕೆ ಗಣ್ಯರ ಮೂಲಕ ಪತ್ರ ಬರೆಸಲು ಚಾಮುಂಡಿಬೆಟ್ಟ ಉಳಿಸಿ ಸಮಿತಿ ಮುಂದಾಗಿದೆ.

ಚಾಮುಂಡಿ ಬೆಟ್ಟದಲ್ಲಿ ರೋಪ್ವೇ ಅಗತ್ಯವಿಲ್ಲ; ಸರ್ಕಾರಕ್ಕೆ ಗಣ್ಯರ ಮೂಲಕ ಪತ್ರ ಬರೆಸಲು ಮುಂದಾದ ಚಾಮುಂಡಿಬೆಟ್ಟ ಉಳಿಸಿ ಸಮಿತಿ
ಚಾಮುಂಡಿ ಬೆಟ್ಟದ ವಿಹಂಗಮ ನೋಟ (ಸಂಗ್ರಹ ಚಿತ್ರ)
Follow us
TV9 Web
| Updated By: ಆಯೇಷಾ ಬಾನು

Updated on: Apr 10, 2022 | 7:52 AM

ಮೈಸೂರು: ಜಿಲ್ಲೆಯ ಚಾಮುಂಡಿ ಬೆಟ್ಟಕ್ಕೆ ರೋಪ್ವೇಗೆ ತೀವ್ರ ವಿರೋಧ ವ್ಯಕ್ತವಾಗಿದೆ. ಚಾಮುಂಡಿ ಬೆಟ್ಟದಲ್ಲಿ ಅಭಿವೃದ್ಧಿ ಹೆಸರಿನಲ್ಲಿ ಪರಿಸರ ನಾಶ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಸರ್ಕಾರಕ್ಕೆ ಗಣ್ಯರ ಮೂಲಕ ಪತ್ರ ಬರೆಸಲು ಚಾಮುಂಡಿಬೆಟ್ಟ ಉಳಿಸಿ ಸಮಿತಿ ಮುಂದಾಗಿದೆ. ರೋಪ್ವೇಗೆ ದಿನದಿಂದ ದಿನಕ್ಕೆ ವಿರೋಧ ಹೆಚ್ಚಾಗುತ್ತಿದೆ. ಈ ಹಿಂದೆ ಕೂಡ ರೋಪ್‌ವೇ ಬೇಡ ಎಂದು ರಾಜವಂಶಸ್ಥೆ ಪ್ರಮೋದಾದೇವಿ ಕೂಡ ವಿರೋಧ ವ್ಯಕ್ತಪಡಿಸಿದ್ದರು.

ಸರ್ಕಾರ ಚಾಮುಂಡಿ ಬೆಟ್ಟದಲ್ಲಿ ರೋಪ್ ವೇ ನಿರ್ಮಾಣ ಮಾಡಲು ಮುಂದಾಗಿದೆ. ಆದ್ರೆ ಸರ್ಕಾರದ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ಚಾಮುಂಡಿ ಬೆಟ್ಟದಲ್ಲಿ ರೋಪ್ ವೇ ನಿರ್ಮಾಣದ ಅವಶ್ಯಕತೆ ಇಲ್ಲ. ನಗರದಿಂದ ಬೆಟ್ಟಕ್ಕೆ ಹೋಗಲು ಕೇವಲ 20 ನಿಮಿಷ ಸಾಕು. ಪರಿಸರ ನಾಶ ಮಾಡಿ ರೋಪ್ ವೇ ಮಾಡುವ ಅಗತ್ಯವಿಲ್ಲ. ಚಾಮುಂಡಿ ಬೆಟ್ಟ ಧಾರ್ಮಿಕ ಕ್ಷೇತ್ರವಾಗಿ ಉಳಿಯಬೇಕು. ಪ್ರವಾಸೋದ್ಯಮ ದೃಷ್ಟಿಯಿಂದ ಅಭಿವೃದ್ಧಿ ಮಾಡಿದ್ರೆ ನಾಶವಾಗುತ್ತೆ. ಈಗಾಗಲೇ ಚಾಮುಂಡಿ ಬೆಟ್ಟದ ಪರಿಸರಕ್ಕೆ ಡ್ಯಾಮೇಜ್ ಆಗಿದೆ. ಈ ಹಿಂದೆ ಬೆರಳೆಣಿಕೆಯಷ್ಟಿದ್ದ ಮನೆ ಇಂದು ಗ್ರಾಮವಾಗಿದೆ. ಬೆಟ್ಟದ ಮೇಲೆಯೇ ನಗರ ಪ್ರದೇಶ ನಿರ್ಮಾಣವಾಗುತ್ತಿದೆ. ಚಾಮುಂಡಿ ಬೆಟ್ಟದ ಪರಿಸರ ಸಂರಕ್ಷಣೆಗೆ ಒತ್ತು ನೀಡಬೇಕು. ಆಲ್ಲಿ ಕಮರ್ಷಿಯಲ್ ಮಳಿಗೆಗಳ ಅವಶ್ಯಕತೆಯೂ ಇಲ್ಲ. ಬೆಟ್ಟದಲ್ಲಿ ಮೂಲಭೂತ ಸೌಕರ್ಯಗಳ ನೀಡಿದರೆ ಸಾಕು ಎಂದು ಮೈಸೂರಿನಲ್ಲಿ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಹೇಳಿಕೆ ನೀಡಿದ್ದರು.

ಈ ಮೊದಲು ಕೂಡ ಮೈಸೂರು ಚಾಮುಂಡಿ ಬೆಟ್ಟದಲ್ಲಿ ರೋಪ್ ವೇ ನಿರ್ಮಾಣ ಯೋಜನೆಗೆ ಹಲವು ಸಂಘಟನೆಗಳಿಂದ ವಿರೋಧ ವ್ಯಕ್ತವಾಗಿತ್ತು. ಚಾಮುಂಡಿ ಬೆಟ್ಟದಲ್ಲಿ ರೋಪ್ ವೇ ನಿರ್ಮಾಣ ವಿಚಾರಕ್ಕೆ ವಿರೋಧ ವ್ಯಕ್ತವಾಗಿತ್ತು. ರೋಪ್ ವೇ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿ ಮೈಸೂರು ಕನ್ನಡ ವೇದಿಕೆಯಿಂದ ಪ್ರತಿಭಟನೆ ನಡೆಸಲಾಗಿತ್ತು. ಚಾಮುಂಡಿಬೆಟ್ಟದ ತಪ್ಪಲಿನ ಬಳಿ ಪ್ರತಿಭಟನೆ ನಡೆಸಲಾಗಿತ್ತು. ಸರ್ಕಾರದ ನಡೆ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು.

ಚಾಮುಂಡಿ ಬೆಟ್ಟಕ್ಕೆ ಸಾಕಷ್ಟು ಮಾರ್ಗಗಳು ಇವೆ. ಸರ್ಕಾರ ಹಣ ಮಾಡುವ ಉದ್ದೇಶದಿಂದ ಈ ಯೋಜನೆ ಜಾರಿಗೆ ತರುತ್ತಿದೆ ಎಂದು ಆರೋಪ ಮಾಡಲಾಗಿತ್ತು. ಪ್ರವಾಸೋದ್ಯಮ ಅಭಿವೃದ್ಧಿ ನೆಪದಲ್ಲಿ ಅರಣ್ಯ ಸಂಪತ್ತು ಹಾಳು ಮಾಡಲು ಸರ್ಕಾರ ಹೊರಟಿದೆ ಎಂದು ಆಕ್ರೋಶ ಕೇಳಿಬಂದಿತ್ತು. ರೋಪ್ ವೇ ನಿರ್ಮಾಣದಿಂದ ಸಾವಿರಾರು ಮರ ಕಾಡು ನಾಶ ಆಗುತ್ತದೆ. ಚಾಮುಂಡಿ ಬೆಟ್ಟ ಹಾಳು ಮಾಡುವುದು ಬೇಡ. ಯಾವುದೇ ಕಾರಣಕ್ಕೂ ಸರ್ಕಾರ ಈ ಯೋಜನೆ ಜಾರಿ ಮಾಡಬಾರದು ಎಂದು ಪ್ರತಿಭಟನಾನಿರತರು ಒತ್ತಾಯ ಮಾಡಿದ್ದರು.

ಇದನ್ನೂ ಓದಿ: ಗೋಕರ್ಣದಲ್ಲಿ ನಡೆಯಿತು ಆಶ್ಚರ್ಯಕರ ಘಟನೆ ? ಇಲ್ಲಿ ಬೆಳೆದು ನಿಂತ ರುದ್ರಾಕ್ಷಿ ಮರ

Ram Navami 2022: ರಾಮನ ಕಾಣಲು ರಾಮನೇ‌ ಕೊಟ್ಟ ಉಪಾಯ

ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್