ಮೈಸೂರು: ಜಿಲ್ಲೆಯ ಚಾಮುಂಡಿ ಬೆಟ್ಟಕ್ಕೆ ರೋಪ್ವೇಗೆ ತೀವ್ರ ವಿರೋಧ ವ್ಯಕ್ತವಾಗಿದೆ. ಚಾಮುಂಡಿ ಬೆಟ್ಟದಲ್ಲಿ ಅಭಿವೃದ್ಧಿ ಹೆಸರಿನಲ್ಲಿ ಪರಿಸರ ನಾಶ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಸರ್ಕಾರಕ್ಕೆ ಗಣ್ಯರ ಮೂಲಕ ಪತ್ರ ಬರೆಸಲು ಚಾಮುಂಡಿಬೆಟ್ಟ ಉಳಿಸಿ ಸಮಿತಿ ಮುಂದಾಗಿದೆ. ರೋಪ್ವೇಗೆ ದಿನದಿಂದ ದಿನಕ್ಕೆ ವಿರೋಧ ಹೆಚ್ಚಾಗುತ್ತಿದೆ. ಈ ಹಿಂದೆ ಕೂಡ ರೋಪ್‌ವೇ ಬೇಡ ಎಂದು ರಾಜವಂಶಸ್ಥೆ ಪ್ರಮೋದಾದೇವಿ ಕೂಡ ವಿರೋಧ ವ್ಯಕ್ತಪಡಿಸಿದ್ದರು.
ಸರ್ಕಾರ ಚಾಮುಂಡಿ ಬೆಟ್ಟದಲ್ಲಿ ರೋಪ್ ವೇ ನಿರ್ಮಾಣ ಮಾಡಲು ಮುಂದಾಗಿದೆ. ಆದ್ರೆ ಸರ್ಕಾರದ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ಚಾಮುಂಡಿ ಬೆಟ್ಟದಲ್ಲಿ ರೋಪ್ ವೇ ನಿರ್ಮಾಣದ ಅವಶ್ಯಕತೆ ಇಲ್ಲ. ನಗರದಿಂದ ಬೆಟ್ಟಕ್ಕೆ ಹೋಗಲು ಕೇವಲ 20 ನಿಮಿಷ ಸಾಕು. ಪರಿಸರ ನಾಶ ಮಾಡಿ ರೋಪ್ ವೇ ಮಾಡುವ ಅಗತ್ಯವಿಲ್ಲ. ಚಾಮುಂಡಿ ಬೆಟ್ಟ ಧಾರ್ಮಿಕ ಕ್ಷೇತ್ರವಾಗಿ ಉಳಿಯಬೇಕು. ಪ್ರವಾಸೋದ್ಯಮ ದೃಷ್ಟಿಯಿಂದ ಅಭಿವೃದ್ಧಿ ಮಾಡಿದ್ರೆ ನಾಶವಾಗುತ್ತೆ. ಈಗಾಗಲೇ ಚಾಮುಂಡಿ ಬೆಟ್ಟದ ಪರಿಸರಕ್ಕೆ ಡ್ಯಾಮೇಜ್ ಆಗಿದೆ. ಈ ಹಿಂದೆ ಬೆರಳೆಣಿಕೆಯಷ್ಟಿದ್ದ ಮನೆ ಇಂದು ಗ್ರಾಮವಾಗಿದೆ. ಬೆಟ್ಟದ ಮೇಲೆಯೇ ನಗರ ಪ್ರದೇಶ ನಿರ್ಮಾಣವಾಗುತ್ತಿದೆ. ಚಾಮುಂಡಿ ಬೆಟ್ಟದ ಪರಿಸರ ಸಂರಕ್ಷಣೆಗೆ ಒತ್ತು ನೀಡಬೇಕು. ಆಲ್ಲಿ ಕಮರ್ಷಿಯಲ್ ಮಳಿಗೆಗಳ ಅವಶ್ಯಕತೆಯೂ ಇಲ್ಲ. ಬೆಟ್ಟದಲ್ಲಿ ಮೂಲಭೂತ ಸೌಕರ್ಯಗಳ ನೀಡಿದರೆ ಸಾಕು ಎಂದು ಮೈಸೂರಿನಲ್ಲಿ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಹೇಳಿಕೆ ನೀಡಿದ್ದರು.
ಈ ಮೊದಲು ಕೂಡ ಮೈಸೂರು ಚಾಮುಂಡಿ ಬೆಟ್ಟದಲ್ಲಿ ರೋಪ್ ವೇ ನಿರ್ಮಾಣ ಯೋಜನೆಗೆ ಹಲವು ಸಂಘಟನೆಗಳಿಂದ ವಿರೋಧ ವ್ಯಕ್ತವಾಗಿತ್ತು. ಚಾಮುಂಡಿ ಬೆಟ್ಟದಲ್ಲಿ ರೋಪ್ ವೇ ನಿರ್ಮಾಣ ವಿಚಾರಕ್ಕೆ ವಿರೋಧ ವ್ಯಕ್ತವಾಗಿತ್ತು. ರೋಪ್ ವೇ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿ ಮೈಸೂರು ಕನ್ನಡ ವೇದಿಕೆಯಿಂದ ಪ್ರತಿಭಟನೆ ನಡೆಸಲಾಗಿತ್ತು. ಚಾಮುಂಡಿಬೆಟ್ಟದ ತಪ್ಪಲಿನ ಬಳಿ ಪ್ರತಿಭಟನೆ ನಡೆಸಲಾಗಿತ್ತು. ಸರ್ಕಾರದ ನಡೆ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು.
ಚಾಮುಂಡಿ ಬೆಟ್ಟಕ್ಕೆ ಸಾಕಷ್ಟು ಮಾರ್ಗಗಳು ಇವೆ. ಸರ್ಕಾರ ಹಣ ಮಾಡುವ ಉದ್ದೇಶದಿಂದ ಈ ಯೋಜನೆ ಜಾರಿಗೆ ತರುತ್ತಿದೆ ಎಂದು ಆರೋಪ ಮಾಡಲಾಗಿತ್ತು. ಪ್ರವಾಸೋದ್ಯಮ ಅಭಿವೃದ್ಧಿ ನೆಪದಲ್ಲಿ ಅರಣ್ಯ ಸಂಪತ್ತು ಹಾಳು ಮಾಡಲು ಸರ್ಕಾರ ಹೊರಟಿದೆ ಎಂದು ಆಕ್ರೋಶ ಕೇಳಿಬಂದಿತ್ತು. ರೋಪ್ ವೇ ನಿರ್ಮಾಣದಿಂದ ಸಾವಿರಾರು ಮರ ಕಾಡು ನಾಶ ಆಗುತ್ತದೆ. ಚಾಮುಂಡಿ ಬೆಟ್ಟ ಹಾಳು ಮಾಡುವುದು ಬೇಡ. ಯಾವುದೇ ಕಾರಣಕ್ಕೂ ಸರ್ಕಾರ ಈ ಯೋಜನೆ ಜಾರಿ ಮಾಡಬಾರದು ಎಂದು ಪ್ರತಿಭಟನಾನಿರತರು ಒತ್ತಾಯ ಮಾಡಿದ್ದರು.
ಇದನ್ನೂ ಓದಿ: ಗೋಕರ್ಣದಲ್ಲಿ ನಡೆಯಿತು ಆಶ್ಚರ್ಯಕರ ಘಟನೆ ? ಇಲ್ಲಿ ಬೆಳೆದು ನಿಂತ ರುದ್ರಾಕ್ಷಿ ಮರ