ಚಾಮುಂಡಿ ಬೆಟ್ಟಕ್ಕೆ ನಾಳೆಯೂ ಸೇರಿ 2 ಶುಕ್ರವಾರ ಭಕ್ತರಿಗೆ ಪ್ರವೇಶ ನಿರ್ಬಂಧ
ಚಾಮುಂಡೇಶ್ವರಿ ದೇಗುಲದ ಪೂಜೆಗಳು ಮತ್ತು ಧಾರ್ಮಿಕ ಆಚರಣೆಗಳು ಎಂದಿನಂತೆ ಮುಂದುವರಿಯಲಿವೆ.
ಮೈಸೂರು: ಪ್ರಖ್ಯಾತ ಚಾಮುಂಡಿ ಬೆಟ್ಟಕ್ಕೆ ನಾಳೆ ಶುಕ್ರವಾರ 13/08/2021 ಹಾಗೂ ಮುಂದಿನ ಶುಕ್ರವಾರ 20/08/2021ಗಳಂದು ಭಕ್ತರು, ಸಾರ್ವಜನಿಕರಿಗೆ ಪ್ರವೇಶವಿಲ್ಲ ಎಂದು ಮೈಸೂರು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಆದೇಶಿಸಿದ್ದಾರೆ. ಕೊರೊನಾ ಹಿನ್ನೆಲೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಚಾಮುಂಡೇಶ್ವರಿ ದೇಗುಲದ ಪೂಜೆಗಳು ಮತ್ತು ಧಾರ್ಮಿಕ ಆಚರಣೆಗಳು ಎಂದಿನಂತೆ ಮುಂದುವರಿಯಲಿವೆ.
ಮೈಸೂರು ದಸರಾ ಬಗ್ಗೆ ಸಿಎಂ ಹೇಳಿದ್ದೇನು? ಮುಂದಿನ ವಾರಗಳಲ್ಲಿ ಕೊವಿಡ್ ಹೆಚ್ಚಾಗಲಿದೆಯೋ ಕಡಿಮೆ ಆಗಲಿದೆಯೇ ನೋಡುತ್ತೇವೆ. ಹೈ ಪವರ್ ಕಮಿಟಿಯಲ್ಲಿ ಮೈಸೂರು ದಸರಾ ಬಗ್ಗೆ ಚರ್ಚೆ ಮಾಡುತ್ತೇವೆ. ಕೊರೊನಾ ಸ್ಥಿತಿಗತಿ ಬಗ್ಗೆ ಅಧಿಕಾರಿಗಳ ಜತೆ ಸಭೆ ನಡೆಸಿದ್ದೇನೆ. ಆನಂತರ ಒಂದು ಸ್ಪಷ್ಟ ಚಿತ್ರಣ ದೊರೆಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇತ್ತೀಚಿಗಷ್ಟೇ ವಿವರಿಸಿದ್ದರು. ಕೊರೊನಾ 3ನೇ ಅಲೆ ಬರದಂತೆ ಪ್ರಾರ್ಥನೆ ಮಾಡೋಣ. 3ನೇ ಅಲೆ ಬರದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಕೇರಳ, ಮಹಾರಾಷ್ಟ್ರದಲ್ಲಿ ಕೊರೊನಾ ಕೇಸ್ ಹೆಚ್ಚಾಗುತ್ತಿದೆ. ಮುಂಜಾಗ್ರತಾ ಕ್ರಮಕೈಗೊಳ್ಳುವಂತೆ ಡಿಸಿಗಳಿಗೆ ಸೂಚಿಸಿದ್ದೇನೆ. ಕಡ್ಡಾಯವಾಗಿ ಕೊವಿಡ್-19 ಟೆಸ್ಟ್ ಮಾಡುವಂತೆ ಸೂಚನೆ ನೀಡಿದ್ದೇನೆ ಎಂದು ದಸರಾ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೆಲವು ದಿನಗಳ ಹಿಂದಷ್ಟೇ ತಿಳಿಸಿದ್ದರು.
ಇದನ್ನೂ ಓದಿ:
ಶಾಸಕ ಸತೀಶ್ ರೆಡ್ಡಿ ಕಾರಿಗೆ ಬೆಂಕಿ ಹಚ್ಚಿದವರು ಇಬ್ಬರಲ್ಲ, ಮೂವರು! ಸಿಸಿಟಿವಿ ದೃಶ್ಯದಿಂದ ಬಯಲಾದ ಸತ್ಯ
ತಾಯಿಯ ಮನೆ ಹೆಸರು ಬಳಸಲು ಮಗುವಿಗೆ ಹಕ್ಕಿದೆ, ತಂದೆ ಅದನ್ನು ಆಕ್ಷೇಪಿಸುವಂತಿಲ್ಲ: ದೆಹಲಿ ಹೈಕೋರ್ಟ್ ಮಹತ್ವದ ತೀರ್ಪು
(Chamundi Hills entry is restricted in these 2 Fridays in Shravana Masam 2021)
Published On - 5:06 pm, Thu, 12 August 21