AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chamundi Hills Ropeway: ಚಾಮುಂಡಿಬೆಟ್ಟಕ್ಕೆ ರೋಪ್​ವೇ ಬೇಕಿತ್ತು, ಯೋಜನೆ ಕೈಬಿಟ್ಟಿದ್ದಕ್ಕೆ ಉದ್ಯಮಿಗಳು ಗರಂ

ಬೆಟ್ಟದ ಮೇಲೆ ವಾಹನ ಸಂಚಾರ, ಮಾಲಿನ್ಯ ಕಡಿಮೆಯಾಗುತಿತ್ತು. ತಜ್ಞರ ಅಭಿಪ್ರಾಯ ಪಡೆದು ನಿರ್ಧಾರ ಮರುಪರಿಶೀಲಿಸಲು ರಾಜ್ಯ ಸರ್ಕಾರಕ್ಕೆ ಪ್ರವಾಸೋದ್ಯಮಿಗಳು ಪತ್ರವನ್ನು ಬರೆಯಲಾಗಿದೆ. 

Chamundi Hills Ropeway: ಚಾಮುಂಡಿಬೆಟ್ಟಕ್ಕೆ ರೋಪ್​ವೇ ಬೇಕಿತ್ತು, ಯೋಜನೆ ಕೈಬಿಟ್ಟಿದ್ದಕ್ಕೆ ಉದ್ಯಮಿಗಳು ಗರಂ
ರಾಜ್ಯ ಸರ್ಕಾರಕ್ಕೆ ಪ್ರವಾಸೋದ್ಯಮಿಗಳು ಬರೆದ ಪತ್ರ. ಚಾಮುಂಡಿಬೆಟ್ಟ
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on: Jul 07, 2022 | 10:43 AM

Share

ಮೈಸೂರು: ಚಾಮುಂಡಿ ಬೆಟ್ಟಕ್ಕೆ (Chamundi Hill) ರೋಪ್​​​ವೇ (Rope Way) ನಿರ್ಮಿಸುವ ಪ್ರಸ್ತಾವಕ್ಕೆ ಜನರಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಈ ವಿಚಾರವನ್ನೇ ಕೈಬಿಟ್ಟಿತ್ತು. ಆದರೆ ಈಗ ಈ ಯೋಜನೆ ಕೈ ಬಿಟ್ಟಿದ್ದಕ್ಕೆ ಪ್ರವಾಸೋದ್ಯಮಿಗಳ ತೀವ್ರ ವಿರೋಧ ವ್ಯಕ್ತವಾಗಿದೆ. ರೋಪ್​ವೇ ನಿರ್ಮಾಣದಿಂದಾಗಿ ಪರಿಸರ ನಾಶವಾಗುವುದಿಲ್ಲ. ಆದರೂ ರಾಜ್ಯಸರ್ಕಾರ ಹಲವರ ಒತ್ತಡಕ್ಕೆ ಮಣಿದು ಕೈಬಿಟ್ಟಿದ್ದು, ಪ್ರವಾಸೋದ್ಯಮಿಗಳಿಗೆ ಬೇಸರ ತರಿಸಿದೆ. ರೋಪ್​ವೇದಿಂದ ಪ್ರವಾಸೋದ್ಯಮ ಅಭಿವೃದ್ಧಿಯಾಗುತ್ತಿತ್ತು. ಬೆಟ್ಟದ ಮೇಲೆ ವಾಹನ ಸಂಚಾರ, ಮಾಲಿನ್ಯ ಕಡಿಮೆಯಾಗುತಿತ್ತು. ತಜ್ಞರ ಅಭಿಪ್ರಾಯ ಪಡೆದು ನಿರ್ಧಾರ ಮರುಪರಿಶೀಲಿಸಲು ರಾಜ್ಯ ಸರ್ಕಾರಕ್ಕೆ ಪ್ರವಾಸೋದ್ಯಮಿಗಳು ಪತ್ರವನ್ನು ಬರೆಯಲಾಗಿದೆ.

ಈ ಸಂಬಂಧ ನಡೆದ ಸಭೆಯ ಬಳಿಕ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ ಜಿಲ್ಲಾ ಉಸ್ತುವಾರಿ ಸಚಿವ ಎಸ್​.ಟಿ.ಸೋಮಶೇಖರ್, ಮೈಸೂರಿನ ಚಾಮುಂಡಿ ಬೆಟ್ಟ ಧಾರ್ಮಿಕ ಸ್ಥಳ (Religious Plae) ಆಗಬೇಕು. ಪ್ರವಾಸಿ ಸ್ಥಳ (Tourist Spot) ಆಗುವುದಕ್ಕಿಂತ ಅದು ಬಹಳ ಮುಖ್ಯವಾಗುತ್ತದೆ ಎಂದು ಹೇಳಿದ್ದಾರೆ. ಚಾಮುಂಡಿ ಬೆಟ್ಟಕ್ಕೆ ಪ್ರವಾಸಿಗರು, ಧಾರ್ಮಿಕ ಭಾವನೆಯಿಂದ ಬರುತ್ತಾರೆ. ಜನಾಭಿಪ್ರಾಯಕ್ಕೆ ಮನ್ನಣೆ ನೀಡಿ ರೋಪ್ ವೇ ಕೈ ಬಿಟ್ಟಿದ್ದೇವೆ. ಬೆಟ್ಟಕ್ಕೆ ಹೋಗಲು ರಸ್ತೆ ಮಾರ್ಗ, ಮೆಟ್ಟಿಲುಗಳೇ ಸಾಕು. ರೋಪ್​ವೇ ಬೇಡ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಹೀಗಾಗಿ ರೋಪ್​ವೇ ಯೋಜನೆ ಕೈಬಿಟ್ಟಿದ್ದೇವೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ; Asia Cup 2022: ಭಾರತ-ಪಾಕಿಸ್ತಾನ್ ಮುಖಾಮುಖಿಗೆ ಡೇಟ್ ಫಿಕ್ಸ್

ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೈಸೂರಿನಲ್ಲಿ ಪ್ರವಾಸೋದ್ಯಕ್ಕೆ ಉತ್ತೇಜನ ನೀಡುವ ದೃಷ್ಟಿಯಿಂದ 2022-23ನೇ ಸಾಲಿನ ಬಜೆಟ್​ನಲ್ಲಿ ಹಲವು ಯೋಜನೆಗಳನ್ನು ಪ್ರಕಟಿಸಿದ್ದರು. ಚಿಕ್ಕಮಗಳೂರಿನ ಮುಳ್ಳಯ್ಯನಗಿರಿ, ಚಿಕ್ಕಬಳ್ಳಾಪುರದ ನಂದಿಬೆಟ್ಟ ಮತ್ತು ಮೈಸೂರಿನ ಚಾಮುಂಡಿ ಬೆಟ್ಟ ರೋಪ್​ವೇ ಕಾಮಗಾರಿಗಳೂ ಅದರಲ್ಲಿ ಸೇರಿದ್ದವು. ಪ್ರವಾಸೋದ್ಯಮಕ್ಕೆ ಈ ಯೋಜನೆಗಳು ಪೂರಕವಾಗಲಿವೆ ಎಂಬುದು ಸರ್ಕಾರದ ನಿರೀಕ್ಷೆಯಾಗಿತ್ತು. ಆದರೆ ಸ್ಥಳೀಯರಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಈ ಯೋಜನೆಯಿಂದ ಸರ್ಕಾರ ಹಿಂದೆ ಸರಿದಿದೆ.

ವಿರೋಧ ಏಕೆ?

ಚಾಮುಂಡಿ ಬೆಟ್ಟಕ್ಕೆ ರೋಪ್​ವೇ ಕಾಮಗಾರಿ ಕೈಗೊಂಡರೆ ಭೂಮಿ ಸಡಿಲಗೊಂಡು ಬೆಟ್ಟದ ಪರಿಸರಕ್ಕೆ ಹಾನಿಯಾಗಬಹುದು. ಭೂ ಕುಸಿತಂಧ ಅಪಾಯ ಎದುರಾಗಬಹುದು. ಅರ್ಧಗಂಟೆಯಲ್ಲಿ ಬೆಟ್ಟ ತಲುಪುವ ಸೌಲಭ್ಯ ಇರುವಾಗ ರೋಪ್​ವೇ ಏಕೆ ಬೇಕು? ಇದರಿಂದ ಪರಿಸರದ ಸಹಜ ಸೌಂದರ್ಯಕ್ಕೂ ಧಕ್ಕೆಯೊದಗುವುದಲ್ಲದೇ ಅರಣ್ಯ ನಾಶದ ಅಪಾಯವೂ ಇದೆ ಎಂದು ಪರಿಸರವಾದಿಗಳು ವಾದಿಸಿದ್ದರು. ಚಾಮುಂಡಿ ಬೆಟ್ಟದಲ್ಲಿ ಯಾವುದೇ ಕಾಮಗಾರಿ ಬೇಕಿಲ್ಲ ಎಂದು ಸಾಹಿತಿ ಎಸ್.ಎಲ್.ಭೈರಪ್ಪ ಸಹ ಹೇಳಿದ್ದರು.

ಇದನ್ನೂ ಓದಿ: ಮಂಗಳೂರು: ಭಾರೀ ಮಳೆಯಿಂದ ಮನೆ ಮೇಲೆ ಗುಡ್ಡ ಕುಸಿತ ಪ್ರಕರಣ: ಮೃತಪಟ್ಟವರ ಸಂಖ್ಯೆ 3 ಕ್ಕೇರಿಕೆ

ಮೋದಿ ಉದ್ಘಾಟಿಸಿದ ತೂತುಕುಡಿ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ವೈಭವ ನೋಡಿ!
ಮೋದಿ ಉದ್ಘಾಟಿಸಿದ ತೂತುಕುಡಿ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ವೈಭವ ನೋಡಿ!
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರಕ್ ಪಲ್ಟಿ, ಓರ್ವ ಸಾವು
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರಕ್ ಪಲ್ಟಿ, ಓರ್ವ ಸಾವು
ವಿಜಯ್ ದೇವರಕೊಂಡ ‘ಕಿಂಗ್ಡಮ್’ ಸಿನಿಮಾ ಟ್ರೈಲರ್ ಬಿಡುಗಡೆ: LIVE
ವಿಜಯ್ ದೇವರಕೊಂಡ ‘ಕಿಂಗ್ಡಮ್’ ಸಿನಿಮಾ ಟ್ರೈಲರ್ ಬಿಡುಗಡೆ: LIVE
ಡಿಸಿಎಂ ಹೇಳಿದ್ದನ್ನು ಗಂಭೀರ ಮುಖಮುದ್ರೆಯೊಂದಿಗೆ ಕೇಳಿಸಿಕೊಂಡ ಸಿಎಂ
ಡಿಸಿಎಂ ಹೇಳಿದ್ದನ್ನು ಗಂಭೀರ ಮುಖಮುದ್ರೆಯೊಂದಿಗೆ ಕೇಳಿಸಿಕೊಂಡ ಸಿಎಂ
ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ಗೆ ಜೈ: ಮತ್ತೆ ಮೊಳಗಿತು ಘೋಷಣೆ
ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ಗೆ ಜೈ: ಮತ್ತೆ ಮೊಳಗಿತು ಘೋಷಣೆ
ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವುದು ಸತ್ಯ: ಸತೀಶ್ ಜಾರಕಿಹೊಳಿ
ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವುದು ಸತ್ಯ: ಸತೀಶ್ ಜಾರಕಿಹೊಳಿ
ಮಾಲ್ಡೀವ್ಸ್​ನ​ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
ಮಾಲ್ಡೀವ್ಸ್​ನ​ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
‘ಸು ಫ್ರಮ್ ಸೋ’ ಅರ್ಥ ಏನು? ಕತೆಯ ಒಳಗುಟ್ಟಗಳೇನು?
‘ಸು ಫ್ರಮ್ ಸೋ’ ಅರ್ಥ ಏನು? ಕತೆಯ ಒಳಗುಟ್ಟಗಳೇನು?
ಮಂತ್ರಿಯಾಗುವ ಆಸೆಯನ್ನು ಪದೇಪದೆ ಹೇಳಿಕೊಳ್ಳುತ್ತಿರುವ ಅರಸೀಕೆರೆ ಶಾಸಕ
ಮಂತ್ರಿಯಾಗುವ ಆಸೆಯನ್ನು ಪದೇಪದೆ ಹೇಳಿಕೊಳ್ಳುತ್ತಿರುವ ಅರಸೀಕೆರೆ ಶಾಸಕ
ನೆಲಮಂಗಲ: ಗನ್​ ತೋರಿಸಿ ಹೆದರಿಸಿ, ಚಿನ್ನದ ದೋಚಿದ ಆರೋಪಿಗಳು, ವಿಡಿಯೋ ವೈರಲ್
ನೆಲಮಂಗಲ: ಗನ್​ ತೋರಿಸಿ ಹೆದರಿಸಿ, ಚಿನ್ನದ ದೋಚಿದ ಆರೋಪಿಗಳು, ವಿಡಿಯೋ ವೈರಲ್