ಚಾಮುಂಡಿ ಬೆಟ್ಟದಲ್ಲಿ ರೋಪ್ವೇ ಯೋಜನೆ: ಸರ್ಕಾರದ ನಿರ್ಧಾರ ಸರಿ ಇದೆ ಎಂದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್
ಆಷಾಢ ಮಾಸದ ಎರಡನೇ ಶುಕ್ರವಾರದ ಪ್ರಯಕ್ತ ಚಾಮುಂಡಿಬೆಟ್ಟಕ್ಕೆ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ರಿಂದ ವಿಶೇಷ ಪೂಜೆ ಸಲ್ಲಿಸಿ, ನಾಡದೇವತೆ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದರು.
ಮೈಸೂರು: ಚಾಮುಂಡಿ ಬೆಟ್ಟ (Chamundi Hill) ದಲ್ಲಿ ರೋಪ್ವೇ (Rope Way) ಯೋಜನೆ ಜಿಲ್ಲಾಡಳಿತ ಕೈಬಿಟ್ಟ ವಿಚಾರವಾಗಿ ಸರ್ಕಾರದ ನಿರ್ಧಾರ ಸರಿ ಇದೆ. ಪರಿಸರ ಸಂರಕ್ಷಣೆಯ ಜೊತೆಗೆ ಚಾಮುಂಡಿ ಬೆಟ್ಟದ ಅಭಿವೃದ್ಧಿಯಾಗಬೇಕು. ಇದು ಪ್ರವಾಸಿ ತಾಣವಲ್ಲ ಧಾರ್ಮಿಕ ಸ್ಥಳ. ಇದನ್ನ ಹಾಗೇಯೇ ಸರ್ಕಾರ ಕಾಪಾಡಿ ಕೊಳ್ಳಬೇಕು. ಈ ನಿಟ್ಟಿನಲ್ಲಿ ಸರ್ಕಾರದ ನಿರ್ಣಯಗಳು ಸರಿ ಇದೆ ಎಂದು ಚಾಮುಂಡಿ ಬೆಟ್ಟದಲ್ಲಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿಕೆ ನೀಡಿದರು. ಚಾಮುಂಡಿ ಬೆಟ್ಟದಲ್ಲಿ ಎರಡನೇ ಆಷಾಢ ಮಾಸದ ಸಂಭ್ರಮ ನಡೆಯುತ್ತಿದ್ದು, ಮುಂಜಾನೆಯಿಂದಲೇ ನಾಡಿನ ಅಧಿದೇವತೆಗೆ ವಿಶೇಷ ಪೂಜೆ ಸಲ್ಲಿಸಲಾಗಿದೆ. ನಾಗಲಕ್ಷ್ಮಿ ಅಲಂಕಾರದಲ್ಲಿ ತಾಯಿ ಚಾಮುಂಡೇಶ್ವರಿ ಕಂಗೊಳಿಸುತ್ತಿದ್ದು, ತಾಯಿಗೆ ರುದ್ರಾಭಿಷೇಕ, ಪಂಚಾಮೃತ ಅಭಿಷೇಕ, ಕುಂಕುಮಾರ್ಚನೆ ಮಾಡಲಾಗಿದೆ. ಇಂದು ಬೆಳಗ್ಗೆಯಿಂದ ರಾತ್ರಿ 9.30ರವರೆಗೆ ಚಾಮುಂಡಿ ತಾಯಿ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಎಂದಿನಂತೆ ಖಾಸಗಿ ವಾಹನಗಳಿಗೆ ಬೆಟ್ಟಕ್ಕೆ ಪ್ರವೇಶ ನಿಷೇಧಿಸಲಾಗಿದ್ದು, ಮುಂಜಾಗೃತ ಕ್ರಮವಾಗಿ ಬೆಟ್ಟದಲ್ಲಿ ಬಿಗಿ ಪೊಲೀಸ್ ಬಂದೂಬಸ್ತ ಒದಗಿಸಲಾಗಿದೆ.
ಇದನ್ನೂ ಓದಿ: Chamundi Hills Ropeway: ಚಾಮುಂಡಿಬೆಟ್ಟಕ್ಕೆ ರೋಪ್ವೇ ಬೇಕಿತ್ತು, ಯೋಜನೆ ಕೈಬಿಟ್ಟಿದ್ದಕ್ಕೆ ಉದ್ಯಮಿಗಳು ಗರಂ
ಆಷಾಢ ಮಾಸದ ಎರಡನೇ ಶುಕ್ರವಾರದ ಪ್ರಯಕ್ತ ಚಾಮುಂಡಿಬೆಟ್ಟಕ್ಕೆ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ರಿಂದ ವಿಶೇಷ ಪೂಜೆ ಸಲ್ಲಿಸಿ, ನಾಡದೇವತೆ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದರು. ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜು, ಸಚಿವರಿಗೆ ಪಾಲಿಕೆ ಆಯುಕ್ತ ಲಕ್ಷ್ಮೀಕಾಂತರೆಡ್ಡಿ, ಮೇಯರ್ ಸುನಂದಾ ಪಾಲನೇತ್ರ ಸಾಥ್ ನೀಡಿದರು.
ಚಾಮುಂಡಿಬೆಟ್ಟಕ್ಕೆ ರೋಪ್ವೇ ಬೇಕಿತ್ತು, ಯೋಜನೆ ಕೈಬಿಟ್ಟಿದ್ದಕ್ಕೆ ಉದ್ಯಮಿಗಳು ಗರಂ
ಚಾಮುಂಡಿ ಬೆಟ್ಟಕ್ಕೆ ರೋಪ್ವೇ ನಿರ್ಮಿಸುವ ಪ್ರಸ್ತಾವಕ್ಕೆ ಜನರಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಈ ವಿಚಾರವನ್ನೇ ಕೈಬಿಟ್ಟಿತ್ತು. ಆದರೆ ಈಗ ಈ ಯೋಜನೆ ಕೈ ಬಿಟ್ಟಿದ್ದಕ್ಕೆ ಪ್ರವಾಸೋದ್ಯಮಿಗಳ ತೀವ್ರ ವಿರೋಧ ವ್ಯಕ್ತವಾಗಿದೆ. ರೋಪ್ವೇ ನಿರ್ಮಾಣದಿಂದಾಗಿ ಪರಿಸರ ನಾಶವಾಗುವುದಿಲ್ಲ. ಆದರೂ ರಾಜ್ಯಸರ್ಕಾರ ಹಲವರ ಒತ್ತಡಕ್ಕೆ ಮಣಿದು ಕೈಬಿಟ್ಟಿದ್ದು, ಪ್ರವಾಸೋದ್ಯಮಿಗಳಿಗೆ ಬೇಸರ ತರಿಸಿದೆ. ರೋಪ್ವೇದಿಂದ ಪ್ರವಾಸೋದ್ಯಮ ಅಭಿವೃದ್ಧಿಯಾಗುತ್ತಿತ್ತು. ಬೆಟ್ಟದ ಮೇಲೆ ವಾಹನ ಸಂಚಾರ, ಮಾಲಿನ್ಯ ಕಡಿಮೆಯಾಗುತಿತ್ತು. ತಜ್ಞರ ಅಭಿಪ್ರಾಯ ಪಡೆದು ನಿರ್ಧಾರ ಮರುಪರಿಶೀಲಿಸಲು ರಾಜ್ಯ ಸರ್ಕಾರಕ್ಕೆ ಪ್ರವಾಸೋದ್ಯಮಿಗಳು ಪತ್ರವನ್ನು ಬರೆಯಲಾಗಿದೆ.
ಇದನ್ನೂ ಓದಿ: Chamundi Hills Ropeway: ಚಾಮುಂಡಿ ಬೆಟ್ಟಕ್ಕೆ ರೋಪ್ವೇ ಪ್ರಸ್ತಾವ ಕೈಬಿಟ್ಟ ಮೈಸೂರು ಜಿಲ್ಲಾಡಳಿತ
ಈ ಸಂಬಂಧ ನಡೆದ ಸಭೆಯ ಬಳಿಕ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಮೈಸೂರಿನ ಚಾಮುಂಡಿ ಬೆಟ್ಟ ಧಾರ್ಮಿಕ ಸ್ಥಳ ಆಗಬೇಕು. ಪ್ರವಾಸಿ ಸ್ಥಳ ಆಗುವುದಕ್ಕಿಂತ ಅದು ಬಹಳ ಮುಖ್ಯವಾಗುತ್ತದೆ ಎಂದು ಹೇಳಿದ್ದಾರೆ. ಚಾಮುಂಡಿ ಬೆಟ್ಟಕ್ಕೆ ಪ್ರವಾಸಿಗರು, ಧಾರ್ಮಿಕ ಭಾವನೆಯಿಂದ ಬರುತ್ತಾರೆ. ಜನಾಭಿಪ್ರಾಯಕ್ಕೆ ಮನ್ನಣೆ ನೀಡಿ ರೋಪ್ ವೇ ಕೈ ಬಿಟ್ಟಿದ್ದೇವೆ. ಬೆಟ್ಟಕ್ಕೆ ಹೋಗಲು ರಸ್ತೆ ಮಾರ್ಗ, ಮೆಟ್ಟಿಲುಗಳೇ ಸಾಕು. ರೋಪ್ವೇ ಬೇಡ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಹೀಗಾಗಿ ರೋಪ್ವೇ ಯೋಜನೆ ಕೈಬಿಟ್ಟಿದ್ದೇವೆ ಎಂದು ತಿಳಿಸಿದ್ದಾರೆ.