ಭ್ರೂಣಲಿಂಗ ಪತ್ತೆ ಹಾಗೂ ಹತ್ಯೆ ಪ್ರಕರಣ: ಆರೋಪ ಕೇಳಿಬರುತ್ತಿದ್ದಂತೆಯೇ ಮಾತಾ ಆಸ್ಪತ್ರೆಯ ಕರೆಂಟ್ ಕಟ್

ಮೈಸೂರು ಜಿಲ್ಲೆಯಲ್ಲಿ ಭ್ರೂಣಲಿಂಗ ಪತ್ತೆ ಹಾಗೂ ಹತ್ಯೆ ಪ್ರಕರಣವನ್ನು ಎದುರಿಸುತ್ತಿರುವ ಮೈಸೂರಿನ ಮಾತಾ ಆಸ್ಪತ್ರೆಯ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿದೆ. ಭ್ರೂಣಲಿಂಗ ಪತ್ತೆ ಹಾಗೂ ಹತ್ಯೆ ಪ್ರಕರಣ ಕೇಳಿಬಂದ ಹಿನ್ನೆಲೆಯಲ್ಲಿ ಮಾತಾ ಆಸ್ಪತ್ರೆ ಪರಿಶೀಲನೆ ಮಾಡಲಾಗಿದ್ದು, ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿದೆ. ಹೀಗಾಗಿ ಚೆಸ್ಕಾಂ ಕರೆಂಟ್ ಕಟ್ ಮಾಡಿದೆ.

ಭ್ರೂಣಲಿಂಗ ಪತ್ತೆ ಹಾಗೂ ಹತ್ಯೆ ಪ್ರಕರಣ: ಆರೋಪ ಕೇಳಿಬರುತ್ತಿದ್ದಂತೆಯೇ ಮಾತಾ ಆಸ್ಪತ್ರೆಯ ಕರೆಂಟ್ ಕಟ್
ಮಾತಾ ಆಸ್ಪತ್ರೆ
Edited By:

Updated on: Nov 30, 2023 | 11:32 AM

ಮೈಸೂರು, (ನವೆಂಬರ್ 30): ಭ್ರೂಣಲಿಂಗ ಪತ್ತೆ ಹಾಗೂ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನ ಮಾತಾ ಆಸ್ಪತ್ರೆಯ (matha hospital )ವಿದ್ಯುತ್​ ಸಂಪರ್ಕವನ್ನು ಕಡಿತಗೊಳಿಸಿದ್ದಾರೆ. ಕಳೆದ 4 ತಿಂಗಳಿಂದ ಮಾತಾ ಆಸ್ಪತ್ರೆ ವಿದ್ಯುತ್ ಬಿಲ್ ಪಾವತಿಸಿರಲಿಲ್ಲ. ಬರೋಬ್ಬರಿ 20 ಸಾವಿರ ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿದೆ. ಹೀಗಾಗಿ ಚೆಸ್ಕಾಂ(chescom) ಸಿಬ್ಬಂದಿ ಮಾತಾ ಆಸ್ಪತ್ರೆ ಕರೆಂಟ್​ ಕಟ್ ಮಾಡಿದೆ.

ಮಂಡ್ಯದ ಆಲೆಮನೆಯಲ್ಲಿ ಗರ್ಭದ ಸ್ಕ್ಯಾನಿಂಗ್‌ ಮಾಡಿ ಲಿಂಗಪತ್ತೆ ಮಾಡುತ್ತಿದ್ದ ಕಿರಾತಕರು, ಮೈಸೂರಿನ ಮಾತಾ ಆಸ್ಪತ್ರೆಯಲ್ಲಿ ಭ್ರೂಣಹತ್ಯೆ ಮಾಡುತ್ತಿದ್ದರು. ಇದು ದೊಡ್ಡ ಮಟ್ಟದಲ್ಲಿ ದಂಧೆಯಾಗಿದೆ. ಇದೀಗ ಆಸ್ಪತ್ರೆ ವಿರುದ್ಧ ದೂರುಗಳು ಕೇಳಿಬರುತ್ತಿದ್ದಂತೆಯೇ ಚೆಸ್ಕಾಂ ವಿದ್ಯುತ್ ಸಂಪರ್ಕ ಕಡಿತಗೊಳಿಸಿದೆ.

ಇದನ್ನೂ ಓದಿ: ಹೆಣ್ಣು ಭ್ರೂಣ ಹತ್ಯೆ ಪ್ರಕರಣ: ರಾತ್ರೋ ರಾತ್ರಿ ಮಾತಾ ಆಸ್ಪತ್ರೆ ಗೋಡೆ ಮೇಲೆ 5 ತಿಂಗಳ ಹಳೆ ನೋಟಿಸ್; ಅನುಮಾನಕ್ಕೆ ಕಾರಣವಾದ ಅಧಿಕಾರಿಗಳ ನಡೆ

ಮಂಡ್ಯದ ಆಲೆಮನೆಯಲ್ಲಿ ಗರ್ಭದ ಸ್ಕ್ಯಾನಿಂಗ್‌ ಮಾಡಿ ಲಿಂಗಪತ್ತೆ ಮಾಡ್ತಿದ್ದ ಕಿರಾತಕರು, ಮೈಸೂರಿನ ಮಾತಾ ಆಸ್ಪತ್ರೆಯಲ್ಲಿ ಭ್ರೂಣಹತ್ಯೆ ಮಾಡ್ತಿದ್ರು. ಮೂರು ತಿಂಗಳ ಹಿಂದೆಯೇ ಈ ಆಸ್ಪತ್ರೆ ಕ್ಲೋಸ್ ಆಗಿದೆ. ಆದ್ರೆ ಆರೋಗ್ಯ ಇಲಾಖೆ ಅಧಿಕಾರಿಗಳು ಮಾತ್ರ ಮಂಗಳವಾರ ರಾತ್ರಿ ಆಸ್ಪತ್ರೆ ಗೋಡೆಗೆ ನೋಟಿಸ್ ಅಂಟಿಸಿದ್ದಾರೆ. ನೋಟಿಸ್‌ನಲ್ಲಿ ಐದು ತಿಂಗಳ ಹಿಂದಿನ ದಿನಾಂಕ ನಮೂದು ಮಾಡಲಾಗಿದ್ದು, ಮೈಸೂರು ತಾಲೂಕು ಆರೋಗ್ಯಧಿಕಾರಿ ಸಹಿ ಕೂಡಾ ಇದೆ. ಇಷ್ಟಾದ್ರೂ ನೋಟಿಸ್ ಯಾರು ಕೊಟ್ಟಿದ್ದಾರೆ ಗೊತ್ತಿಲ್ಲ ಎಂದು ಡಿಹೆಚ್‌ಒ ಹೇಳುತ್ತಿದ್ದಾರೆ. ಇದನ್ನೆಲ್ಲಾ ನೋಡುತ್ತಿದ್ದರೆ ಆರೋಗ್ಯ ಅಧಿಕಾರಿಗಳೇ ಈ ಕೇಸ್‌ನಲ್ಲಿ ಭಾಗಿಯಾಗಿದ್ದಾರಾ ಎನ್ನುವ ಅನುಮಾನಗಳು ವ್ಯಕ್ತವಾಗಿವೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದಿಲೀಪ್​, ಚೌಡಹಳ್ಳಿ

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.‌ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸಿದ್ದೇನೆ. ಸಧ್ಯ ಮಂಡ್ಯ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಕೃಷಿ, ಸಾಹಿತ್ಯ ಆಸಕ್ತಿ ಇದೆ.

Read More
Loading...
Unable to load recommendations.
Follow Us